ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಕೆಗೆ ಕಾಲೇಜೊಂದರಲ್ಲಿ ವಸತಿನಿಯಲಯದ ವ್ಯವಸ್ಥೆ ಮಾಡಿದ್ದಾರೆ.
Read More »ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!
ಅರ್ಚನಾ ತಿವಾರಿ ಎಂಬ ತರಬೇತಿ ವಕೀಲೆ ರಕ್ಷಾ ಬಂಧನ ಹಬ್ಬಕ್ಕಾಗಿ ಆಗಸ್ಟ್ ೭ರಂದು ರಾತ್ರಿ ಇಂದೋರ್ ನ ಕಟ್ನೆಗೆ ರೈಲಿನಲ್ಲಿ ಹೊರಟಿದ್ದರು.ರಕ್ಷಾ ಬಂಧನ ಹಬ್ಬಕ್ಕಾಗಿ ಕಟ್ನಾಗೆ ನರ್ಮಾದಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹೊರಟಿದ್ದ ಅರ್ಚನಾ ಕೊನೆಯದಗಿ ಇಟಾರ್ಸಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರೈಲ್ವೆ ಪೊಲೀಸರು ತೀವ್ರ ಹುಡುಕಾಟದ ಬಳಿಕ ಇದೀಗ ಅರ್ಚನಾರನ್ನು ನೇಪಾಳ ಗಡಿಯಲ್ಲಿ ಪತ್ತೆ ಮಾಡಿದ್ದಾರೆ.ಸದ್ಯ ಅವರನ್ನು ಭೋಪಾಲ್ …
Read More »ರಾಷ್ಟ್ರೀಯ ಹೆದ್ದಾರಿ 48ರ ಪಕ್ಕ ವಿದ್ಯಾರ್ಥಿನಿ ಶವ ಪತ್ತೆ, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ!
ಕಾಲೇಜು ವಿದ್ಯಾರ್ಥಿನಿಯ ಶವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕ ಪತ್ತೆಯಾಗಿದ್ದು , ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಕೊಲೆಯಾದ ಯುವತಿಯನ್ನ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ.ಮೃತ ಯುವತಿ ಕಾಲೇಜು ವಿದ್ಯಾರ್ಥಿನಿ ವರ್ಷಿತಾ ಎಂದು ಗೊತ್ತಾಗುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದಾವಿಸಿದ್ದಾರೆ.ಯುವತಿ ಸಂಪರ್ಕದಲ್ಲಿದ್ದ ಯುವಕ ಚೇತನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Read More »ರಾಜಸ್ಥಾನಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವು!!
ಪ್ರಕರಣವೊಂದರಲ್ಲಿ ಬಂಧನ ವಾರಂಟ್ನೊಂದಿಗೆ ಹಾಲಪ್ಪ ಅವರು ಹೆಡ್ಕಾನ್ಸ್ಟೆಬಲ್ ಮತ್ತು ಕಾನ್ಸ್ಟೆಬಲ್ ಜತೆಯಲ್ಲಿ ಇದೇ 17ರಂದು ರಾಜಸ್ಥಾನಕ್ಕೆ ತರಳಿದ್ದರು.ಜೋಧಪುರದಲ್ಲಿ ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿಯವರಾದ ಹಾಲಪ್ಪ ಅವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಅವರ ಮೃತದೇಹವನ್ನು ಗುರುವಾರ ಇಲ್ಲಿಗೆ ತರುವ ನಿರೀಕ್ಷೆ ಇದ್ದು, ಸ್ವಗ್ರಾಮ ಹಿರೇಹಡಗಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »ವಿಜಯನಗರ: ಟಿಪ್ಪರ್ಗೆ ಬಸ್ ಡಿಕ್ಕಿ; ನಿರ್ವಾಹಕ ಸಾವು, ಚಾಲಕನಿಗೆ ಗಾಯ!
ಟಿಪ್ಪರ್ ಲಾರಿಗೆ ಹಿಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ಬಸ್ ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ತೀವ್ರ ಗಾಯಗೊಂಡ ಘಟನೆ ಸಮೀಪದ ಹಾರುವನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ರಾತ್ರಿ ನೆಡೆದಿದೆ.ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಭಟಪನಹಳ್ಳಿ ಗ್ರಾಮದ ನಿರ್ವಾಹಕ ಉಮೇಶ್ ಮರಿಯಪ್ಪ ಹಾದಿಮನಿ (41) ಮೃತರು. ಅದೇ ತಾಲ್ಲೂಕಿನ ಅಡೂರು ಗ್ರಾಮದ ಚಾಲಕ ಮಬೂಸಾಬ್ ತೀವ್ರವಾಗಿ ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ …
Read More »ಕಳೆ ಕತ್ತರಿಸುವ ಯಂತ್ರಗಳಿಗೆ ಕೃಷಿಕರ ಬೇಡಿಕೆ: ಒಂದು ಯಂತ್ರ, ಬಹುಪಯೋಗಿ ಕೆಲಸ
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಶ್ರಮಿಕರ ಕೊರತೆ ಹೆಚ್ಚಾಗಿದ್ದು ಸಾಗುವಳಿದಾರರು ಮಾನವ ಶ್ರಮದ ಬದಲು ಕೃಷಿ ಯಂತ್ರಗಳತ್ತ ಚಿತ್ತ ಹರಿಸಿದ್ದಾರೆ.ಹೊಲ, ಗದ್ದೆ, ತೋಟ, ತಿಟ್ಟುಗಳನ್ನು ಹಸನು ಮಾಡಲು, ಕಳೆ ಕೀಳಲು, ಬಂಡು ಎತ್ತರಿಸಲು ಯಂತ್ರಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ.ಸರ್ಕಾರ ಕಾರ್ಮಿಕರ ಸಮಸ್ಯೆ ನೀಗಿಸಿ, ಕೃಷಿ ಚಟುವಟಿಕೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆ ಜಾರಿಗೆ ತಂದಿದ್ದು 2025-26ನೇ ಸಾಲಿನಲ್ಲಿ ಉಳುಮೆಯಿಂದ ಕೊಯ್ಲಿನವರೆಗೂ ಹಲವು ಮಾದರಿಯ ಕೃಷಿ ಯಂತ್ರಗಳನ್ನು ನೀಡುತ್ತಿದೆ.ಸಾಮಾನ್ಯ ರೈತರಿಗೆ …
Read More »ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಸಾವು!
ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕಳೆದ 6 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತನಿಖೆಯ ವರದಿಯಲ್ಲಿ ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಮಗು ಮೃತಪಟ್ಟಿದೆ ಎಂಬುದು ವರದಿಯಾಗಿದೆ.ಶ್ವಾಸಕೋಶ ಹಾಗೂ ಮೆದುರಳಿನಲ್ಲಿ ರಕ್ತ ಹೆಪ್ಪು ಗಟ್ಟಿದ್ದು, ಮಗು ಮೃತಪಟ್ಟಿದೆ ಎಂಬುದು ಧೃಡವಾಗಿದೆ. ನಮ್ಮ ಮಗುವಿನ ಸಾವಿಗೆ ನ್ಯಾಯ ಬೇಕು ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಅನಸ್ತೇಷಿಯಾ …
Read More »ಚಾಮರಾಜನಗರ ಶಾಲೆಯಲ್ಲಿ ಕುಸಿದುಬಿದ್ದು 1ನೇ ತರಗತಿ ವಿದ್ಯಾರ್ಥಿ ಸಾವು!
ಜಿಲ್ಲೆಯಲ್ಲಿ ಇಂದು ಎರಡು ವಿಭಿನ್ನ ಘಟನೆಗಳು ನಡೆದಿವೆ. ಒಂದು ಕಡೆ ಹೃದಯ ಸಂಬಂಧಿ ಸಮಸ್ಯೆಯಿಂದ ಶಾಲಾ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟರೆ, ಮತ್ತೊಂದು ಕಡೆ ಸರ್ಕಾರಿ ಶಾಲೆಗೆ ಬಂದ ಮರಿಯಾನೆಯನ್ನು ರಕ್ಷಿಸಲಾಗಿದೆ. ತಿಳಿದ ಕೂಡಲೇ ಕೇರಳ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಮರಿಯಾನೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸದ್ಯ, ಅರಣ್ಯ ಇಲಾಖೆ ಸಿಬ್ಬಂದಿ ಮರಿಯಾನೆಯನ್ನು ಅದರ ತಾಯಿಯೊಂದಿಗೆ ಮತ್ತೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ. ಈ ಘಟನೆ ಮಕ್ಕಳಲ್ಲಿ ಅಚ್ಚರಿ ಮತ್ತು ಸಂತಸ ತಂದರೆ, …
Read More »ಧಾರವಾಡ :ಥಿನ್ನರ್ ಬಾಟಲಿ ಜಾರಿ ಬಿದ್ದು ಮಗು ಸಾವನ್ನಪ್ಪಿದ ಮರುದಿನವೇ ರಕ್ಷಿಸಲು ತಂದೆ ಕೂಡ ಸಾವು
ಥಿನ್ನರ್ ಬಾಟಲಿ ಜಾರಿ ಬಿದ್ದು ಮಗು ಸಾವನ್ನಪ್ಪಿದ ಮರುದಿನವೇ ರಕ್ಷಿಸಲು ಮುಂದಾಗಿ ಗಂಭೀರ ಗಾಯಗೊಂಡಿದ್ದ ತಂದೆಯೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಮೃತಪಟ್ಟಿರುವ ಘಟನೆ ಧಾರವಾಡದ ಸಂತೋಷ್ ನಗರದಲ್ಲಿ ನಡೆದಿದೆ.ಥಿನ್ನರ್ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಬಾಲಕನ ದೇಹ ಸುಟ್ಟು ಹೋಗಿತ್ತು.ಮಗನನ್ನು ಕಾಪಾಡಲು ಹೋಗಿದ್ದ ಚಂದ್ರಕಾಂತ್ಗೆ ಸಹ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಕೂಡಲೆ ಮನೆಯವರು ತಂದೆ, ಮಗನನ್ನು ಕಿಮ್ಸೌಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಾಗಲೇ ಬಾಲಕ ಅಗಸ್ತ್ಯ ಮೃತಪಟ್ಟಿದ್ದ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ …
Read More »ತಿಪಟೂರು: ಯೂರಿಯಾಗೆ ರೈತರ ಸಾಲು!
ನಗರ ಹಾಗೂ ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ ಯೂರಿಯಾ ದೊರೆಯದ ಕಾರಣ ರೈತರು ಪರದಾಡುತ್ತಿದ್ದು, ಸರ್ಕಾರಿ ಸಂಘಗಳಲ್ಲೇ ಗೊಬ್ಬರ ಕೊರತೆಯಿಂದ ರೈತರು ಖಾಸಗಿ ಕೃಷಿ ಕೇಂದ್ರಗಳಿಗೆ ಮುಗಿಬಿದ್ದರು.ರೈತನ ಹೊಲ ಹಸಿರಾಗಬೇಕಾದರೆ ಮೊದಲು ಸರ್ಕಾರದ ಮನಸ್ಸು ಹಸಿರಾಗಬೇಕು. ಮುಂಗಾರು ಪ್ರಾರಂಭವಾಗುತ್ತಿದ್ದಂತೆ ಪ್ರತಿ ವರ್ಷವೂ ರೈತರು ರಸಗೊಬ್ಬರಕ್ಕೆ ಅಲೆದಾಡಬೇಕಿದೆ. ಸಹಕಾರ ಸಂಘಗಳು ಹೆಸರಿಗಷ್ಟೇ ರೈತರ ಬೆಂಬಲಕ್ಕಿದೆ ಎಂದು ಹೇಳುತ್ತಾರೆ. ಕೃಷಿ ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡಿದರೆ ಯಾವುದೇ ಅನಾಹುತಗಳು ಇರುವುದಿಲ್ಲ’ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





