Breaking News

BigTv News

ಭಾರೀ ಮಳೆಗೆ ಭೂಕುಸಿತ: ಸಂಚಾರಕ್ಕೆ ಅಡ್ಡಿ, ಜನಜೀವನ ಅಸ್ತವ್ಯಸ್ತ!

ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಲ್ಲಿನ ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಂತೂ ಮಳೆಯ ಅಬ್ಬರ ಹೇಳತೀರದಾಗಿದೆ.ಜೋರು ಗಾಳಿ ಮಳೆಗೆ ಜಿಲ್ಲೆಯ ಹಲವೆಡೆ ಭೂಕುಸಿತ, ಗುಡ್ಡ ಕುಸಿತದಂತ ಪ್ರಕರಣಗಳು ವರದಿಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದೆ.ಸತತ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಹೆಗ್ಗದ್ದೆ ಬಳಿ ನಿರಂತರವಾಗಿ ಭೂಕುಸಿತ ಉಂಟಾಗುತ್ತಿದೆ. ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದ್ದು ಸಂಚಾರಕ್ಕೆ ಅಡಿಪಡಿಸಿದೆ.

Read More »

ರೈಲ್ವೆ ಹಳಿ ಮಧ್ಯ ಸೌರವಿದ್ಯುತ್ ಉತ್ಪಾದನೆ! ದೇಶದಲ್ಲೇ ಮೊದಲ ಐತಿಹಾಸಿಕ ಹೆಜ್ಜೆ!

ಭಾರತೀಯ ರೈಲ್ವೆ ಮಟ್ಟಿಗೆ ಇದೊಂದು ಐತಿಹಾಸಿಕ ಹಾಗೂ ಮೊದಲ ಬಾರಿಗೆ ನಡೆಸುತ್ತಿರುವ ಪ್ರಯತ್ನವಾಗಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಭಾರತೀಯ ರೈಲ್ವೆಯ ಉತ್ಪಾದನಾ ಘಟಕವಾದ ‘ಬನಾರಸ್ ಲೋಕೋಮೋಟಿವ್ ವರ್ಕ್ಸ್’ ರೈಲ್ವೆ ಹಳಿಯಿಂದಲೇ ವಿದ್ಯುತ್ ಉತ್ಪಾದಿಸುವ ಪ್ರಯತ್ನಕ್ಕೆ ಮುಂದಾಗಿದೆ. ಇಂತಹ ಪ್ರಯತ್ನ ದೇಶದಲ್ಲೇ ಮೊದಲು ಎನ್ನಬಹುದು. ನೀರು, ಪವನ ಮೂಲಕ ಉತ್ಪಾದಿಸುವ ವಿದ್ಯುತ್ ಅನ್ನು ರೈಲು ಚಲನೆಗೆ ಬಳಸಲಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ರೈಲ್ವೆ ಟ್ರ್ಯಾಕ್ ಮೇಲಿನ ಸೋಲಾರ್ ಪ್ಲೇಟ್‌ಗಳಿಂದ ವಿದ್ಯುತ್‌ ಉತ್ಪಾದಿಸಿ ಅದನ್ನು …

Read More »

ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ಹಣ ಪೀಕಿದ ವೃದ್ಧ!

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಓರ್ವ ವೃದ್ಧ ಜನರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾನೆ. ನಿವೃತ್ತ ಲೋಕೋ ಪೈಲಟ್​ ಶಿವಕುಮಾರ್ (71 ವರ್ಷ) ವಂಚಿಸಿದ ಆರೋಪಿ.ಆರೋಪಿ ಶಿವಕುಮಾರ ರಾಮನಗರದ ಸಾವಿತ್ರಮ್ಮ ಎಂಬುವರ ಬಳಿ 8.65 ಲಕ್ಷ ನಗದು, 3 ಲಕ್ಷ ಮೌಲ್ಯದ 59 ಗ್ರಾಮ ಚಿನ್ನಭರಣ ಪಡೆದಿದ್ದಾನೆ. ಬಳಿಕ, ಶಿವಣ್ಣ ಎಂಬುವರಿಂದ 4 ಲಕ್ಷ 50 ಸಾವಿರ ರೂ. ಹಣ ಪಡೆದಿದ್ದಾನೆ. ನಂತರ, ಇವರಿಗೆಲ್ಲ ರೈಲ್ವೆ ಇಲಾಖೆಯ …

Read More »

BMTC’ ಗೆ ಮತ್ತೊಂದು ಬಲಿ : ಬೈಕ್ ಸವಾರ ಸಾವು.!

ಬೆಂಗಳೂರಿನ ಸಂಜಯನಗರದಲ್ಲಿ ಮಗುವಿಗೆ ಉಪಹಾರ ತರಲು ಬೈ‍ಕ್ ನಲ್ಲಿ ಹೋಗುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರೋಶನ್ ಎಂಬ ವ್ಯಕ್ತಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು , ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಸವಾರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

Read More »

ಹಾವೇರಿ: ಖಾಸಗಿ ಬಸ್‌ ಪಲ್ಟಿ; ಇಬ್ಬರು ಸಾವು, 6 ಜನರಿಗೆ ಗಾಯ!

ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ 6 ಜನ ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ನಡೆದಿದೆ.ಅರ್ನವಿ(11), ಯಶ್(20) ಸ್ಥಳದಲ್ಲೇ ಮೃತಪಟ್ಟಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಕೊಡಗಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ!

ಚಾಲಕನ ನಿಯಂತ್ರಣ ತಪ್ಪಿದ ಕೆ‌.ಎಸ್.ಆರ್.ಟಿ.ಸಿ ಬಸ್ಸು ರಸ್ತೆ ಪಕ್ಕದ ದಿಬ್ಬಕ್ಕೆ ಗುದ್ದಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಮುಟ್ಲು ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬಿ ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಸಮೀಪ ದಿಬ್ಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಸಣ್ಣ ಗಾಯಗಳಾಗಿದೆ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತಿದಿನ ಬಸ್ ನಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದರು. ಆದ್ರೆ ಇಂದು …

Read More »

ತುಮಕೂರಿನಲ್ಲಿ ಪಲ್ಟಿಯಾದ ಖಾಸಗಿ ಬಸ್!

ತುಮಕೂರಿನ ಶಿರಾ ತಾಲೂಕಿನ ಕೊಟ್ಟ ರಂಗಾಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಶಿರಾದಿಂದ ಪಟ್ಟನಾಯಕನಹಳ್ಳಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಎದುರಿನಲ್ಲಿ ಅತೀ ವೇಗವಾಗಿ ಬೈಕ್ ಆಗಮಿಸಿತ್ತು. ಬೈಕ್‌ಗೆ ಡಿಕ್ಕಿಯಾಗುವುದು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಇದರ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣ ಗಾಯವಾಗಿದೆ. ಗಾಯಾಳುಗಳನ್ನು ಶಿರಾ ಆಸ್ಪತ್ಪೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Read More »

ಓವರ್ ಟೇಕ್ ವೇಳೆ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಅಣ್ಣ ತಂಗಿ ಸ್ಥಳದಲ್ಲೇ ಸಾವು!

ರಾಜ್ಯದಲ್ಲಿ ಒಂದೆಡೆ ಭಾರಿ ಮಳೆ ಪರಿಣಾಮ ಹಲವು ಅವಾಂತರ ಸಂಭವಿಸಿದ್ದರೆ, ಮತ್ತೊಂದೆಡೆ ರಸ್ತೆ ಅಪಘಾತಗಳು ವರದಿಯಾಗಿದೆ. ಇದೀಗ ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಓವರ್ ಟೇಕ್ ವೇಳೆ ಇನ್ನೋವಾ ಕಾರಿಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅಣ್ಣ ಹಾಗೂ ತಂಗಿ ಇಬ್ಬರು ಮೃತಪಟ್ಟಿದ್ದಾರೆ. ಕೋಲಾರ ಗ್ರಾಮಾಂತರ ‌ಪೊಲೀಸ್ ಠಾಣ ವ್ಯಾಪ್ತಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Read More »

ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಎಂದ ಚಲುವರಾಯಸ್ವಾಮಿ

ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್‌‍ ಅಳವಡಿಕೆ ಹಾಗೂ ಸ್ಕ್ವಾಡ್‌ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್‌ನಲ್ಲಿ ತಿಳಿಸಿದರು.ಅಕ್ರಮ ಮರಳುಗಾರಿಕೆ ನಡೆಸುವವರ ಮೇಲೆ ದಿಢೀರ್‌ ದಾಳಿ ನಡೆಸಿದ ವೇಳೆ ಲಾರಿ, ಟ್ರ್ಯಾಕ್ಟರ್‌, ಎತ್ತಿನಗಾಡಿ ಮತ್ತಿತರ ವಾಹನಗಳನ್ನು ಬಿಟ್ಟು ಓಡಿಹೋಗುತ್ತಾರೆ. ಆದರೂ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಿ ಕಾನೂನು ಪ್ರಕಾರವೇ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. …

Read More »

ಅಮೆರಿಕವೇ ಗತಿ ಅಲ್ಲ. ಮೀನು ರಫ್ತಿಗೆ ಜಪಾನ್, ಚೀನಾ, ಬ್ರಿಟನ್ ಮಾರುಕಟ್ಟೆಗಳತ್ತ ಭಾರತ!

ಅಮೆರಿಕಕ್ಕೆ ಸಾಕಷ್ಟು ಸಮುದ್ರ ಆಹಾರ ವಸ್ತುಗಳನ್ನು ರಫ್ತು ಮಾಡುತ್ತಿದ್ದ ಭಾರತ ಈಗ ಶೇ. 50 ಟ್ಯಾರಿಫ್ ಕಾರಣಕ್ಕೆ ಪರ್ಯಾಯ ಮಾರ್ಗಗಳತ್ತ ಹೆಜ್ಜೆ ಹಾಕುತ್ತಿದೆ. ಜಪಾನ್, ಚೀನಾ, ಬ್ರಿಟನ್ ಮತ್ತು ಯೂರೋಪಿಯನ್ ಒಕ್ಕೂಟಗಳತ್ತ ಹೆಚ್ಚು ಗಮನ ಹರಿಸಲು ನಿರ್ಧರಿಸಿದೆ.ಭಾರತದಿಂದ ರಫ್ತಾಗುವ ಸೀಗಡಿ ಮೀನುಗಳಲ್ಲಿ ಶೇ. 40ರಷ್ಟವು ಅಮೆರಿಕಕ್ಕೆ ಹೋಗುತ್ತಿದ್ದುವು. ಈಗ ಶೇ. 50ರ ಟ್ಯಾರಿಫ್ ಕಾರಣದಿಂದ ಅಮೆರಿಕದ ಬಾಗಿಲು ಬಹುತೇಕ ಬಂದ್ ಆಗಿದೆ. ಈ ಕಾರಣಕ್ಕೆ ಜಪಾನ್, ಚೀನಾ ಮತ್ತು ಬ್ರಿಟನ್ …

Read More »