Breaking News

BigTv News

ವಸತಿ ಶಾಲೆ ವಿದ್ಯಾರ್ಥಿ ಸಾವು: ಮುಖ್ಯಶಿಕ್ಷಕ ಸೇರಿ ಮೂವರು ಅಮಾನತು!

ತಾಲ್ಲೂಕಿನ ತುರ್ವಿಹಾಳ ಪಟ್ಟಣದ ಸಿಂಧನೂರು ಮುಖ್ಯರಸ್ತೆಯಲ್ಲಿ ಆ.13 ರಂದು ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿ ವಾಪಸ್ ಬರುತ್ತಿದ್ದಾಗ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಬಿ.ಆರ್‌.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ ಮೋತಿಲಾಲ್ ದೇಸಾಯಿ ಭೋಗಾಪುರ ಶುಕ್ರವಾರ ನಿಧನರಾಗಿದ್ದಾರೆ ಎಂದು ತುರ್ವಿಹಾಳ ಪೊಲೀಸರು ಖಚಿತಪಡಿಸಿದ್ದಾರೆ.ಅಪಘಾತಕ್ಕೀಡಾಗಿದ್ದ ನಾಲ್ವರ ಪೈಕಿ ವಿದ್ಯಾರ್ಥಿ ವೆಂಕಟೇಶಗೆ ಕಾಲು ಮುರಿದಿದ್ದು ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರಿಗೆ …

Read More »

ಯಾದಗಿರಿ: ವಿದ್ಯಾರ್ಥಿನಿಯ ಜಾತಿ ತಿದ್ದಿದ್ದ ಪ್ರಭಾರ ಮುಖ್ಯಶಿಕ್ಷಕ ಅಮಾನತು!

ವಿದ್ಯಾರ್ಥಿನಿಯ ಶಾಲಾ ದಾಖಲಾತಿ ಜಾತಿ ಕಾಲಂ ತಿದ್ದಿದ್ದ ಆರೋಪದಡಿ ಸುರಪುರ ತಾಲ್ಲೂಕಿನ ಕರಡಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಮನೋಹರ ಪತ್ತಾರ ಅವರನ್ನು ಡಿಡಿಪಿಐ ಅಮಾನತುಗೊಳಿಸಿದ್ದಾರೆ.ವಿದ್ಯಾರ್ಥಿನಿ ಪೋಷಕರಿಂದ ಹಣ ಪಡೆದ ಮನೋಹರ, ಜಾತಿ ಕಾಲಂ ವೈಟ್‌ನರ್ ಹಚ್ಚಿದ್ದು, ಮೂಲಜಾತಿ ಬದಲಿಗೆ ‘ತಳವಾರ’ ಎಂದು ಬರೆದಿದ್ದರು ಎಂದು ದೂರು ದಾಖಲಾಗಿತ್ತು.ಈ ಬಗ್ಗೆ ಸುರಪುರ ಬಿಇಒ ಅವರ ವರದಿ ಆಧರಿಸಿ ಕ್ರಮವಹಿಸಲಾಗಿದೆ ಎಂದು ಡಿಡಿಪಿಐ ಚನ್ನಬಸಪ್ಪ ಮುಧೋಳ ಹೇಳಿದ್ದಾರೆ.

Read More »

ಬೆಂಗಳೂರು: ತಿನ್ನಲು ಯೋಗ್ಯವಲ್ಲ ಎಂದು ನಾಟಿ ಹಸುಗಳ ಕತ್ತು ಕೊಯ್ದ ದುಷ್ಕರ್ಮಿಗಳು!

ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Read More »

ಬೆಳಗಾವಿ: ಹೂವಿನ ಅಂಗಡಿ ಮಾಲೀಕನನ್ನು ಕೊಂದ ಬಿರಿಯಾನಿ ಶಾಪ್​ ಓನರ್!

ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಹೂವಿನ ವ್ಯಾಪಾರಿ ಶಶಿಕಾಂತ ಎಂಬುವರ ಶವ ಪತ್ತೆಯಾಗಿತ್ತು. ಶಶಿಕಾಂತ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ನಿವಾಸಿಯಾಗಿದ್ದರು.ಶಶಿಕಾಂತ ಹೂವಿನ ವ್ಯಾಪಾರದ ಜೊತೆಗೆ ಗ್ರಾಮದಲ್ಲಿ ಬಡ್ಡಿ ವ್ಯವಹಾರವನ್ನು ಕೂಡ ಮಾಡುತ್ತಿದ್ದರು. ಅವಶ್ಯಕತೆ ಇದ್ದವರಿಗೆ ಮತ್ತು ತಮಗೆ ಬೇಕಾದವರಿಗೆ ಮಾತ್ರ ಬಡ್ಡಿ ರೂಪದಲ್ಲಿ ಶಶಿಕಾಂತ ಹಣ ನೀಡುತ್ತಿದ್ದರು. ತಾನಾಯ್ತು ತನ್ನ ಕೆಲಸ ಆಯ್ತು ಅಂತ ಇದ್ದ ಶಶಿಕಾಂತ ಕಳೆದ ರವಿವಾರ ಕಬ್ಬಿನ ಗದ್ದೆಯಲ್ಲಿ ಶವವಾಗಿ …

Read More »

ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು 9 ಬಾರಿ ಇರಿದು ಕೊಂದ ಗೆಳೆಯ!

ಅಕ್ರಮ ಸಂಬಂಧಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು 9 ಬಾರಿ ಇರಿದು ಕೊಲೆ ಮಾಡಿ, ಬಳಿಕ ತಾನೂ ಅದೇ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.ಆನಂದ ಸುತಾರ್ (31 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ತಿರವಿರ (30 ವರ್ಷ) ಕೊಲೆಯಾದವರು.

Read More »

ಹೆಂಡತಿಯನ್ನು ವಶೀಕರಣ ಮಾಡಿ ಡಿವೋರ್ಸ್ ಕೊಡಿಸಿದ ಸ್ವಾಮೀಜಿಯನ್ನ ಶಿವನಪಾದ ಸೇರಿಸಿದ ಗಂಡ!

ಹೆಂಡತಿಯನ್ನು ಈ ಸ್ವಾಮೀಜಿ ತನ್ನ ಕಡೆಗೆ ವಶೀಕರಣ ಮಾಡಿಕೊಂಡು, ನನಗೆ ಡಿವೋರ್ಸ್ ಕೊಡುವಂತೆ ಮಾಡಿದ್ದಾನೆ. ತನ್ನ ಕುಟುಂಬ ಹಾಳಾಗಲು ಈ ಸ್ವಯಂ ಘೋಷಿತ ದೇವಮಾನವನೇ ಕಾರಣವೆಂದು ಆತನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.ಪೊಲೀಸರು ಹೆದ್ದಾರಿ ಬಳಿ ನಿಂತುಕೊಂಡಿದ್ದಾಗ ಅತಿವೇಗದಲ್ಲಿ ಬಂದ ಸ್ವಿಫ್ಟ್ ಡಿಸೈರ್ ಕಾರನ್ನು ಪೊಲೀಸರು ನಿಲ್ಲಿಸಲು ಹೇಳಿದ್ದಾರೆ. ಆದರೆ, ತುಂಬಾ ವೇಗವಾಗಿ ಹೋಗುತ್ತಿದ್ದ ಕಾರನ್ನು ಪೊಲೀಸರು ಬೆನ್ನಟ್ಟಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿದ್ದವರ ಮೇಲೆ ಗುಂಡು …

Read More »

ದಾಬಸ್‌ಪೇಟೆ | ಪಂಚರ್ ಆಗಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: ಮೂವರು ಸಾವು

ಮೇಕೆ ಮತ್ತು ಕುರಿಗಳನ್ನು ತುಂಬಿದ್ದ ಲಾರಿ ಹಾಗೂ ಕೆಎಸ್​ಆರ್​ಟಿಸಿ ಬಸ್ ನಡುವೆ ರಾಷ್ಟ್ರೀಯ ಹೆದ್ದಾರಿ 48ರ ಗುಂಡೇನಹಳ್ಳಿ ಬಳಿ ಶನಿವಾರ ಬೆಳಗ್ಗಿನ ಜಾವ 3:30 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಲಾರಿಯಲ್ಲಿದ್ದ ಸೀನಪ್ಪ (50), ನಜೀರ್ ಅಹ್ಮದ್ (36) ಮತ್ತು ಆನಂದ್ (42) ಮೃತರು.ಲಾರಿಯು ಮೇಕೆ ಮತ್ತು ಕುರಿಗಳನ್ನು ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ …

Read More »

ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ.ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಪತ್ತೆ ಆಗಿಲ್ಲ) ಮೃತರು. ಇನ್ನು ಗಾಯಗೊಂಡ 7 ಜನರು …

Read More »

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ!

ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ.

Read More »

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ​: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!

ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. …

Read More »