Breaking News

BigTv News

ಕುಷ್ಟಗಿ ಮಿನಿಬಸ್‌ ಅಪಘಾತದಲ್ಲಿ 19 ಮಕ್ಕಳು ಸೇರಿ 20 ಜನರಿಗೆ ಗಾಯ

ಕುಷ್ಟಗಿ: ತಾಲ್ಲೂಕಿನ ಮದಲಗಟ್ಟಿ ಬಳಿ ಮಿನಿಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ತಗ್ಗಿಗೆ ಉರುಳಿದೆ. ಅಪಘಾತದಲ್ಲಿ 19 ಮಕ್ಕಳು ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಬೆಳಗಾವಿಯ ರಾಮದುರ್ಗದಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 30 ಮಂದಿ ಇದ್ದರು. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಕೆಲ ಮಕ್ಕಳು ಹಾಗೂ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ …

Read More »

ಮದುವೆಯಾಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯ ಕೊಲೆ: ಮೂರು ತಿಂಗಳ ಬಳಿಕ ಆರೋಪಿ ಅರೆಸ್ಟ್

ಬೆಳಗಾವಿ: ನಾಲ್ಕು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಪ್ರೇಯಸಿ ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪದ ಮೇಲೆ ದಿಲೀಪ್‌ನನ್ನು ಕುಲಗೋಡ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣಳನ್ನು ಕೌಜಲಗಿಯ ಜಮೀನಿಗೆ ಕರೆದೊಯ್ದು ಕೊಲೆ ಮಾಡಿದ ಬಳಿಕ, ಆಕೆಯ 37 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್‌ ತೆಗೆದುಕೊಂಡು ದಿಲೀಪ್ ಪರಾರಿಯಾಗಿದ್ದ ಎನ್ನಲಾಗಿದೆ. ನಂತರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿದ್ದ. ಅನ್ನಪೂರ್ಣಳ ಮೊಬೈಲ್ ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, …

Read More »

ಚಿತ್ತಾಪುರ | ಕೈಗಡ ಹಣ ವಾಪಸ್‌ ಕೇಳಿದಕ್ಕೆ ಹಲ್ಲೆ: ಇಬ್ಬರ ವಿರುದ್ಧ ಎಫ್‌ಐಆರ್

ಚಿತ್ತಾಪುರ: ಕೈಗಡವಾಗಿ ನೀಡಿದ್ದ ₹2 ಲಕ್ಷ ಹಣವನ್ನು ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಘಟನೆ ಭಾಗೋಡಿ ಗ್ರಾಮದಲ್ಲಿ ನಡೆದಿದೆ. ಸೂರ್ಯಕಾಂತ ಜಮಾದಾರ ಅವರು ಆ.26ರಂದು ಹಣ ವಾಪಸ್ ಕೇಳಲು ತೆರಳುತ್ತಿದ್ದಾಗ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಹುಣಚಪ್ಪ ಮರತೂರ ಎದುರಾಗಿದ್ದಾರೆ. ಈ ವೇಳೆ ಹಣದ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಹುಣಚಪ್ಪ ಮಲ್ಲಪ್ಪ ಮರತೂರ ಹಾಗೂ …

Read More »

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 ಲಕ್ಷ ಎಂದು ಅಂದಾಜಿಸಲಾಗಿದೆ. ಆಗಸ್ಟ್ 16ರಂದು ಗೃಹಪ್ರವೇಶ ನಡೆದಿದ್ದು, ಎರಡು ದಿನಗಳ ಬಳಿಕ ಕಳ್ಳತನ ಬೆಳಕಿಗೆ ಬಂದಿದೆ. ಮನೆಗೆ ಬಂದಿದ್ದ ಅಲಂಕಾರಿಕರು ಹಾಗೂ ಕೆಲಸದವರ ಮೇಲೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಬಲವಂತವಾಗಿ ಮನೆಗೆ ನುಗ್ಗಿದ ಕುರುಹುಗಳಿಲ್ಲ. ದೂರು ನೀಡಲು ವರ್ತೂರು ಪೊಲೀಸರು ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಟೆಕ್ಕಿ …

Read More »

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ ಹಾಗೂ ಕ್ರಷರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಲ್ಯಾ ಗ್ರಾಮದ ಕುಂಟಾಡಿಯಲ್ಲಿ ಸ್ಪೋಟಕ ಬಳಸಿ ಕಲ್ಲು ಪುಡಿಮಾಡಿ ಸಾಗಿಸುತ್ತಿದ್ದ ಆರೋಪದಡಿ ಹರೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಸಿಎಂಎಸ್ ಕ್ರಷರ್‌ನಿಂದ ಮೊಹಮ್ಮದ್ ಶಫಿ ಹಾಗೂ ರಂಜಿತ್ ಅವರನ್ನು ಬಂಧಿಸಲಾಗಿದೆ. ಪಡುಬಿದ್ರಿಯ ಸಾಂತೂರು ಬಳಿಯ ಕ್ರಷರ್ ಮೇಲೂ ದಾಳಿ ನಡೆಸಿ 40 ಯುನಿಟ್ ಜೆಲ್ಲಿ, ಎರಡು …

Read More »

ಮಾನ್ವಿಯಲ್ಲಿ ಅಮಾವಾಸ್ಯೆ ದಿನವೇ ಭೀಕರ ಕೊಲೆ; Instagram ಪೋಸ್ಟ್ ಬಳಿಕ ವ್ಯಕ್ತಿ ಹತ್ಯೆ!

ರಾಯಚೂರು: ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಮನೆಯಲ್ಲಿ ಊಟ ಮಾಡುತ್ತಿದ್ದ ಹನುಮೇಶ್ (32) ಎಂಬಾತನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಾನ್ವಿಯಲ್ಲಿ ನಡೆದಿದೆ. ಹನುಮೇಶ್ ಮನೆಗೆ ನುಗ್ಗಿದ ಆರೋಪಿ ಶಂಕರ್, ಹಿಂಬದಿಯಿಂದ ದಾಳಿ ಮಾಡಿ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಶಂಕರ್‌ನ ಸಹೋದರಿಯೊಂದಿಗೆ ಹನುಮೇಶ್ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೂ ಮುನ್ನ ಶಂಕರ್ ಮಚ್ಚು ಹಿಡಿದಿರುವ ಫೋಟೋವನ್ನು …

Read More »

ನಕಲಿ ಮೆಡಿಸಿನ್ ದಂಧೆ ಪ್ರಕರಣ: ಕೃಪಾ ಹೆಲ್ತ್ ಕೇರ್ ಮಾಲೀಕನಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ನಕಲಿ ಮೆಡಿಸಿನ್ ದಂಧೆ ಪ್ರಕರಣದಲ್ಲಿ ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೇಶ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ವೀರೇಶ್‌ನನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಗಳವಾರ ವೀರೇಶ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ಮುಂದಾಗಿದೆ. ನಕಲಿ ಔಷಧಿ ಜಾಲ ಹಾಗೂ ದಂಧೆಯಲ್ಲಿ ವೀರೇಶ್‌ನ ಪಾತ್ರದ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿಸಿದೆ.

Read More »

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. ಮಸೀದಿ ಮುಂದೆ ಮೆರವಣಿಗೆ ಹಾಗೂ ಪಟಾಕಿ ಸಿಡಿಸದಂತೆ ಯುವಕರಿಗೆ ಅವರು ಸೂಚಿಸಿದ್ದಾರೆ. ಪೊಲೀಸರು ಸೂಚಿಸುವ ಮಾರ್ಗದಲ್ಲೇ ಮೆರವಣಿಗೆ ನಡೆಸಬೇಕು ಹಾಗೂ ನಿಗದಿತ ಮಾರ್ಗಕ್ಕೆ ಅನುಗುಣವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇನ್ಸ್‌ಪೆಕ್ಟರ್ ಮಾತನಾಡಿರುವ ವಿಡಿಯೋ ಸಾಮಾಜಿಕ …

Read More »

ಪೌರಕಾರ್ಮಿಕಗೆ ಕೇರಳ ಯುವತಿಯಿಂದ ಕಲ್ಲೇಟು

ಬೆಂಗಳೂರು: ರಸ್ತೆಬದಿ ಚಹಾ ಕಪ್ ಎಸೆಯದಂತೆ ಸಲಹೆ ನೀಡಿದ ಪೌರಕಾರ್ಮಿಕನ ಮೇಲೆ ಕೇರಳ ಮೂಲದ ಮಹಿಳೆ ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ವೈದೇಹಿ ಹಾಗೂ ಆಕೆಯ ಸ್ನೇಹಿತನನ್ನು ವೈಟ್‌ಫೀಲ್ಡ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪಟ್ಟಂದೂರು ಅಗ್ರಹಾರದ ಕುವೆಂಪು ರಸ್ತೆಯಲ್ಲಿ ಚಹಾ ಕುಡಿದ ಬಳಿಕ ವೈದೇಹಿ ಕಪ್‌ ಅನ್ನು ರಸ್ತೆಬದಿ ಎಸೆದಿದ್ದಳು. ಇದನ್ನು ಗಮನಿಸಿದ ಪೌರಕಾರ್ಮಿಕ ಕಪ್‌ ಅನ್ನು ಕಸದ ಡಬ್ಬಿಗೆ ಹಾಕುವಂತೆ ಸೂಚಿಸಿದ್ದರಿಂದ ಮಹಿಳೆ ಆಕ್ರೋಶಗೊಂಡು …

Read More »

21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!

ಕಲಬುರಗಿ: ಕುಟುಂಬಸ್ಥರ ವಿರೋಧಕ್ಕೆ ಬೇಸತ್ತು ಪ್ರೀತಿಸುತ್ತಿದ್ದ ಜೋಡಿ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶರಣಮ್ಮ (32) ಹಾಗೂ ಬಸವರಾಜ್ (21) ಮೃತರು. ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗುಡ್ಡದ ಪ್ರದೇಶದಲ್ಲಿ ಇಬ್ಬರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಚಿತ್ತಾಪುರ ಠಾಣೆಯಲ್ಲಿ …

Read More »