ರಸ್ತೆ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆಯಿಂದಲೇ ಮುಷ್ಕರ ಅರಂಭಿಸಿದ ಪರಿಣಾಮ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್ ಗಳಿಲ್ಲದೇ ಪರದಾಡಿದರು.ಹುಣಸಗಿ ಬಸ್ ನಿಲ್ದಾಣದಿಂದ ಒಂದು ಬಸ್ ಕೂಡ ರಸ್ತೆಗಳಿದಿಲ್ಲ. ಭಾನುವಾರ ರಾತ್ರಿ ಬಸ್ಗಳನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಮಹಾಂತಸ್ವಾಮಿ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಬಿಆರ್ ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನಗರ ಸಾರಿಗೆ ಮತ್ತು ರಸ್ತೆ ಸಾರಿಗೆ …
Read More »ಧಾರವಾಡ: ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಹುಬ್ಬಳ್ಳಿ-ಧಾರವಾಡ ಅವಳಿನಗರ ಸಂಪರ್ಕದ ಬಿಆರ್ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.ವಿದ್ಯಾರ್ಥಿಗಳು ಮತ್ತು ಕಚೇರಿಗಳಿಗೆ ತೆರಳುವ ನೌಕರರು, ಪ್ರಯಾಣಿಕರು ಬಸ್ಗಾಗಿ ಕಾಯುತ್ತಿದ್ದಾರೆ.
Read More »ಸರ್ಕಾರ, ಸಾರಿಗೆ ನೌಕರರ ಚೆಲ್ಲಾಟ – ಸಾರ್ವಜನಿಕರಿಗೆ ಪರದಾಟ!
ಕೋರ್ಟ್ ತಡೆಯಾಜ್ಞೆಯ ನಡುವೆಯೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದು ಮುಂಜಾನೆಯಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಬಸ್ ಸಂಚಾರವಿಲ್ಲದೆ ಕೆಲಸಕ್ಕೆ ಹೋಗಬೇಕಾದ ಪ್ರಯಾಣಿಕರು ಪರದಾಡುತ್ತಿದ್ದಾರೆ.ಇಂದು ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ಆರಂಭವಾಗಿದ್ದು, ಸಾರಿಗೆ ನೌಕರರ ಮುಷ್ಕರ ವಿಷಯ ತಿಳಿಯದೆ ಬೆಳ್ಳಂಬೆಳಗ್ಗೆ ರಾಜ್ಯದ ವಿವಿದೆಡೆ ಬಸ್ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಬಸ್ಗಾಗಿ ಕಾಯುತ್ತಾ ಕುಳಿತಿದ್ದಾರೆ. ಅದರಲ್ಲೂ ಬೆಂಗಳೂರು, ಮಂಡ್ಯ, ಹಾಸನ್ ನಂತಹ ನಗರದಲ್ಲಿ ಬೆಳಗ್ಗೆಯಿಂದಲೇ ಬಂದ್ ಬಿಸಿ ತಟ್ಟಿದ್ದು, …
Read More »ಸ್ಯಾಂಡಲ್ವುಡ್ನ ಯುವ ನಟ ಸಂತೋಷ್ ಬಾಲರಾಜ್ ನಿಧನ!
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.ಜಾಂಡೀಸ್ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.
Read More »ಕುಂದಾಪುರ: ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ಸಾವು!
ಶೇಡಿಮನೆ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ.ತೋಟದಲ್ಲಿ ವಿಷಪೂರಿತ ಹಾವು ಅವಳನ್ನು ಕಚ್ಚಿತು. ನೋವಿನಿಂದ ಕಿರುಚುತ್ತಾ, ಹುಡುಗಿ ಮನೆಗೆ ಓಡಿಹೋದಳು.ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದುರದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದ ಬಾಲಕಿ ಅದೇ ದಿನ ನಿಧನರಾದರು.
Read More »ಸಾರಿಗೆ ಇಲಾಖೆ ನೌಕರರ ಮುಷ್ಕರ : ಉಡುಪಿ ಕೆಎಸ್ಆರ್ಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ
ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಆಗಸ್ಟ್ 5 ರಂದು ಉಡುಪಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆಗಳಲ್ಲಿ ಮಂಗಳವಾರ ವ್ಯತ್ಯಯ ಕಂಡುಬಂತು.ಉಡುಪಿ ಡಿಪೋದಿಂದ ಬಸ್ಸುಗಳು ಹೊರಟಿವೆಯಾದರೂ ಇತರ ಭಾಗದಿಂದ ಉಡುಪಿಗೆ ಬರುವ ಬಸ್ ಗಳಲ್ಲಿ ವ್ಯತ್ಯಯವಾಗಿದೆ.ಸಮಯಕ್ಕೆ ಸರಿಯಾಗಿ ಬಸ್ ಗಳು ಇಲ್ಲದ ಕಾರಣ ವಾಪಾಸು ಹಿಂತಿರುಗಿದ ಘಟನೆ ನಡೆಯಿತು.
Read More »ಮಂಗಳೂರು: ಪರಿಣಾಮ ಬೀರದ ಸಾರಿಗೆ ನೌಕರರ ಮುಷ್ಕರ
ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಮಂಗಳೂರು ವಿಭಾಗದಲ್ಲಿ ಯಾವುದೇ ಪರಿಣಾಮ ಬೀರಿಲ್ಲ.ನಿತ್ಯ ಸಂಚರಿಸುತ್ತಿದ್ದ ಎಲ್ಲ ಬಸ್ಗಳು ಇಂದೂ ಸಹ ಸಂಚರಿಸುತ್ತಿವೆ. ಬಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
Read More »ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
ವೇತನ ಹೆಚ್ಚಳ ಹಿಂಬಾಕಿ, ವೇತನ ಪರಿಷ್ಕರಣೆ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರ ಸಂಘಟನೆಗಳು ಮತ್ತು ಸರ್ಕಾರದ ನಡುವೆ ಸೋಮವಾರ ನಡೆದ ಮಾತುಕತೆ ವಿಫಲವಾಗಿದೆ. ‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ.ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿಗಮಗಳ ಆರ್ಥಿಕ ಪರಿಸ್ಥಿತಿ, ವೇತನ …
Read More »ಕೆಆರ್ಎಸ್ | ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ: ಆರ್.ಅಶೋಕ್
ಕೆಆರ್ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಗೌರವ ಉಳಿಯಬೇಕಾದರೆ ಕೂಡಲೇ ರಾಜ್ಯದ ಜನತೆ, ನಾಲ್ವಡಿ ಕುಟುಂಬಕ್ಕೆ ಕ್ಷಮಾಪಣೆ ಕೇಳಿ. ಹೀಗೆ ಮಾತನಾಡಿದರೆ ಜನರು ನಿಮ್ಮ ಪಕ್ಷವನ್ನು ಧೂಳೀಪಟ ಮಾಡುತ್ತಾರೆ. ತಕ್ಷಣವೇ ರಾಜಮನೆತನಕ್ಕೆ ಕ್ಷಮೆಯಾಚಿಸಿ ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, …
Read More »ಗಂಡ ಬೇಡ ಆತನ ಸ್ನೇಹಿತನೇ ಬೇಕೆಂದು ಪಟ್ಟು ಹಿಡಿದ ಮಹಿಳೆ, ಮನೆಯವರೆಲ್ಲರೂ ಆತ್ಮಹತ್ಯೆಗೆ ಶರಣು!
ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಜುಲೈ 25ರ ರಾತ್ರಿ ಮನೋಹರ್ ಲೋಧಿ (45), ಅವರ ತಾಯಿ ಫೂಲ್ರಾಣಿ (70), ಮಗಳು ಶಿವಾನಿ (18) ಮತ್ತು ಅವರ 16 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆಯ ಸಮಯದಲ್ಲಿ ಮನೋಹರ್ ಲೋಧಿಯ ಪತ್ನಿ ದ್ರೌಪದಿ, ಮನೋಹರ್ ಅವರ ಬಾಲ್ಯದ ಸ್ನೇಹಿತನೂ ಆಗಿದ್ದ ಸುರೇಂದ್ರ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





