Breaking News

BigTv News

ಮರಂ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ವರದಿ ಸಲ್ಲಿಸಲು ಸೂಚನೆ

ಕಡೇಚೂರು ಗ್ರಾಮದ ಸರ್ವೆ ನಂ.421, 423/4, 425 ಮತ್ತು 418/2/3ರ ಜಮೀನುಗಳಲ್ಲಿನ ಮರಂ ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಹಿರಿಯ ಭೂವಿಜ್ಞಾನಿ ಪೂರ್ಣಿಮಾ, ತಹಶೀಲ್ದಾರ್ ಸುರೇಶ ಅಂಕಲಗಿ ಸೇರಿದಂತೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ.

ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು. ಇದೀಗ ಮತ್ತೆ ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮವಾಗಿದೆ.ಸೇತುವೆಯ ಎರಡೂ ಬದಿಗಳಲ್ಲಿರುವ ಸಂಪರ್ಕ ರಸ್ತೆಗಳಲ್ಲಿ ಈಗ ಇಂಟರ್‌ಲಾಕಿಂಗ್ ಟೈಲ್ಸ್ ಅಳವಡಿಸಲಾಗಿದೆ. ಆದರೆ, ಸೇತುವೆಯಲ್ಲಿ ಇನ್ನೂ ಹಲವಾರು ಗುಂಡಿಗಳಿದ್ದು, ಅದನ್ನು ಇನ್ನು ಮಳೆಗಾಲ ಮುಗಿದ ನಂತರವೇ ಸೇತುವೆಯ ಮೇಲ್ಮೈಯನ್ನು ದುರಸ್ತಿ ಮಾಡಲಾಗುವುದು …

Read More »

ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ!

ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ …

Read More »

WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ!

ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.ಹೋಗನ್ ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಗುರುವಾರ ಬೆಳಿಗ್ಗೆ 9.51 ರ ಸುಮಾರಿಗೆ, ಹಲ್ಕ್ ಹೋಗನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ವೈದ್ಯಕೀಯ ತಂಡವನ್ನು ಮನೆಗೆ ಕರೆಸಿ, ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

Read More »

ಚಿಂಚೋಳಿಯಲ್ಲಿ ಭಾರೀ ಮಳೆ: ಮುಲ್ಲಾ ಮಾರಿ ಜಲಾಶಯದಿಂದ 1200 ಕ್ಯೂಸೆಕ್ ನೀರು ಹೊರಕ್ಕೆ!

ಚಿಂಚೋಳಿ ತಾಲೂಕಿನಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಯಿಂದ ಕೆಳದಂಡೆ ಮುಲ್ಲಾ ಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಜೋರಾದ ಮಳೆ ಬೀಳುತ್ತಿದ್ದರಿಂದ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗುತ್ತಿದ್ದು ಜಲಾಶಯ ಸುರಕ್ಷತೆ ಕಾಪಾಡುವುದಕ್ಕಾಗಿ ಎರಡು ಗೇಟಿನಿಂದ ನದಿಗೆ ನೀರು ಹರಿ ಬಿಡಲಾಗುತ್ತಿದೆ ಎಂದು ಯೋಜನೆಯ ಸಹಾಯಕ ಎಂಜಿನಿಯರ್ ವಿನಾಯಕ ಚೌಹಾಣ್ ತಿಳಿಸಿದ್ದಾರೆ.ಕೆಳದಂಡೆ ಮುಲ್ಲಾ ಮಾರಿ ಯೋಜನೆಯ ಜಲಾಶಯದಲ್ಲಿ ಒಳಹರಿವು 280 ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಗುರುವಾರ 2 ಗೇಟನ್ನು ತಲಾ ಒಂದು ಅಡಿ ಮೇಲೆತ್ತಿ …

Read More »

ಪತಿ ಜತೆ ಜಗಳ: 5 ವರ್ಷದ ಪುತ್ರಿಯ ಕೊಂದ ತಾಯಿ!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ 5 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಹಾದೇವಿ(28) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಅದಕ್ಕೂ ಮೊದಲು ತನ್ನ 5 ವರ್ಷದ ಪುತ್ರಿ ಸಿರಿಯನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾಳೆ

Read More »

ಲೈಂಗಿಕವಾಗಿ ತೃಪ್ತಿ ಪಡಿಸಲಿಲ್ಲವೆಂದು ಗಂಡನನ್ನು ಕೊಂದ ಹೆಂಡತಿ!

ಗಂಡನ ನಿರ್ಲಕ್ಷ್ಯ, ಲೈಂಗಿಕ ಕ್ರಿಯೆಯಲ್ಲಿನ ನಿರಾಸಕ್ತಿಯಿಂದ ಬೇಸತ್ತ ಆ ಮಹಿಳೆ ತನ್ನ ಕಸಿನ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಕೊನೆಗೆ ತನ್ನ ಸಂಬಂಧಕ್ಕೆ ಅಡ್ಡ ಬರುತ್ತಾನೆಂದು ಆಕೆ ಗಂಡನನ್ನು ಕೊಲೆ ಮಾಡಿ, ಆತ್ಮಹತ್ಯೆಯ ಕತೆ ಕಟ್ಟಿದ್ದಾಳೆ.ಪೊಲೀಸರ ಪ್ರಕಾರ, ಜುಲೈ 20ರ ಸಂಜೆ 4.15ರ ಸುಮಾರಿಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಗೆ ಸ್ಥಳೀಯ ಆಸ್ಪತ್ರೆಯಿಂದ ಕರೆ ಬಂದಿದ್ದು, ಮಹಿಳೆಯೊಬ್ಬರು ಮೊಹಮ್ಮದ್ ಶಾಹಿದ್ ಎಂಬ ಗುರುತಿಸಲಾದ ತನ್ನ ಪತಿಯನ್ನು ಹಲವಾರು ಇರಿತದ ಗಾಯಗಳೊಂದಿಗೆ …

Read More »

ಬೆಂಕಿ ಹಚ್ಕೊಂಡು ಸಾವಿಗೆ ಶರಣಾದ ಗೃಹಿಣಿ!

ವರದಕ್ಷಿಣೆ ಕಿರುಕುಳವೂ ಸೇರಿದಂತೆ ಗಂಡನ ಅಪ್ಪನೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 32 ಹರೆಯದ ಗೃಹಿಣಿಯೊಬ್ಬಳು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ 32 ವರ್ಷದ ಮಹಿಳೆ ರಂಜಿತಾ ಬೆಂಕಿ ಹಚ್ಚಿಕೊಂಡಿದ್ದು, ಕೂಡಲೇ ಆಕೆಯನ್ನು ಮಧುರೈನ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರು 70 ಶೇಕಡಾ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

Read More »

ವಿಜಯಪುರ | ಎರಡು ಬಿ.ಇಡಿ ಕಾಲೇಜುಗಳ ಮಾನ್ಯತೆ ರದ್ದು: ₹ 60 ಲಕ್ಷ ದಂಡ!

ವಿದ್ಯಾರ್ಥಿಗಳಿಂದ ಮನಸ್ಸಿಗೆ ಬಂದಂತೆ ಡೊನೇಶನ್ ಹೆಸರಿನಲ್ಲಿ ದುಡ್ಡು ವಸೂಲಿ ಮಾಡುತ್ತಿದ್ದ ಜಿಲ್ಲೆಯ ಎರಡು ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 3 ವರ್ಷ ರದ್ದು ಮಾಡಿದೆ. ಜೊತೆಗೆ ₹30 ಲಕ್ಷ ದಂಡ ವಿಧಿಸಿದೆ’ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ತಿಳಿಸಿದರು.ದಲಿತ ವಿದ್ಯಾರ್ಥಿ ಪರಿಷತ್ ಈ ಖಾಸಗಿ ಶಿಕ್ಷಣ ಸಂಸ್ಥೆಗಳ ಡೋನೆಷನ್ ಹಾವಳಿ ವಿರುದ್ಧ ನಿರಂತರವಾಗಿ ಹೋರಾಟ ಮಾಡುತ್ತ ಬರುತ್ತಿದೆ. ದಲಿತ ವಿದ್ಯಾರ್ಥಿ ಪರಿಷತ್ …

Read More »

ಅವಳಿ ನಗರದಲ್ಲಿ ಹೆಚ್ಚಾದ ಹೃದಯಾಘಾತ ಕೇಸ್: 32 ವರ್ಷದ ಶಂಕ್ರಯ್ಯ ಸಾವು!

ಹುಬ್ಬಳ್ಳಿ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ 32 ವರ್ಷದ ಶಂಕ್ರಯ್ಯ ಗುರಯ್ಯನವರ ಎಂಬ ಯುವಕ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.ನಿನ್ನೆ ಸಂಜೆ ಮನೆದಲ್ಲಿ ಊಟ ಮಾಡಿ ಮಲಗಿದ್ದ ಶಂಕ್ರಯ್ಯ ಅವರಿಗೆ ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಯುವಕನ …

Read More »