Breaking News

BigTv News

ಆಸ್ಪತ್ರೆಯಲ್ಲಿ ಯುವತಿ ಎದೆಗೆ ಒದ್ದು ಜುಟ್ಟು ಹಿಡಿದೆಳೆದ ರಾಕ್ಷಸ!

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿ ಒಂದು ಕ್ರೂರ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಯುವಕನೊಬ್ಬ ಹೊಟ್ಟೆಗೆ ಒದ್ದು, ಕೂದಲು ಹಿಡಿದು ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ಈ ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದರು.ಕಲ್ಯಾಣ್ನ ನಂದಿವಲಿ ಪ್ರದೇಶದಲ್ಲಿ, ಡಾ. ಅನಿಕೇತ್ ಪಲಾಂಡೆ ಅವರಿಗೆ ಸೇರಿದ ಶ್ರೀ ಬಾಲಚಿಕಿತ್ಸಾಲಯ ಕ್ಲಿನಿಕ್ ಇದೆ. ಸೋನಾಲಿ ಕಲಾಸರೆ (25) ಎಂಬ …

Read More »

ಗಂಡನ ಪರಲೋಕಕ್ಕೆ ಕಳುಹಿಸಿದ ಯುವಕ!!

ವಿವಾಹಿತೆಯನ್ನು ಪ್ರೀತಿಸುತ್ತಿದ್ದ 21ರ ಹರೆಯದ ಯುವಕನೋರ್ವ ಆಕೆಯ 35 ವರ್ಷದ ಗಂಡನ ಪರಲೋಕಕ್ಕೆ ಕಳುಹಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ನವಿ ಮುಂಬೈನ ಯುವಕನೋರ್ವ 25ರ ಹರೆಯದ ವಿವಾಹಿತ ಮಹಿಳೆಯ ಹಿಂದೆ ಬಿದ್ದು, ವಿವಾಹವಾಗುವಂತೆ ಪೀಡಿಸಲು ಶುರು ಮಾಡಿದ್ದ.ಆದರೆ ಆಕೆ ಈ 21ರ ತರುಣನ ಪ್ರೇಮಕ್ಕೆ ಒಲ್ಲೆ ಎಂದಿದ್ದು, ಇದರಿಂದ ಕುಪಿತಗೊಂಡ ಆತ ತಾನು ಪ್ರೀತಿಸುತ್ತಿದ್ದ ಮಹಿಳೆಯ ಗಂಡನನ್ನೇ ಹತ್ಯೆ ಮಾಡಿದ್ದಾನೆ.

Read More »

ಚಿಕ್ಕಮಗಳೂರು: ಮೂರು ದಿನದಲ್ಲಿ 35ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳ ದಾಳಿ

ಚಿಕ್ಕಮಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ‌ ಮಿತಿ ಮೀರಿದೆ. 3 ದಿನದಲ್ಲಿ ಮಕ್ಕಳು ಸೇರಿದಂತೆ 35ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿವೆ. ಎಂ.ಜಿ.ರಸ್ತೆ ಮತ್ತು ಮಾರ್ಕೆಟ್ ರಸ್ತೆಯಲ್ಲಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಲಾಗಿದ್ದು, ಗಾಯಗೊಂಡವರನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Read More »

ವರನಟ ಡಾ| ರಾಜ್‌ಕುಮಾರ್‌ ಅಪಹರಣ: ಇಂದಿಗೆ 25 ವರ್ಷ

ವರನಟ ಡಾ| ರಾಜ್‌ಕುಮಾರ್‌ ಅವರನ್ನು ಕಾಡುಗಳ್ಳ ವೀರಪ್ಪನ್‌ ಜಿಲ್ಲೆಯ ಗಡಿಭಾಗ ತಮಿಳುನಾಡಿನ ಗಾಜನೂರಿನ ಅವರ ತೋಟದ ಮನೆಯಿಂದ ಅಪಹರಿಸಿದ ಕರಾಳ ಘಟನೆಗೆ ಈ ಭೀಮನ ಅಮಾವಾಸ್ಯೆಗೆ ಬರೋಬ್ಬರಿ 25.ರಾಜ್‌ಕುಮಾರ್‌ ಅವರೊಂದಿಗೆ ಅವರ ಅಳಿಯ ಎಸ್‌.ಎ. ಗೋವಿಂದರಾಜ್‌, ಸಹ ನಿರ್ದೇಶಕ ನಾಗಪ್ಪ ಮಾರಡಗಿ, ಸಂಬಂಧಿ ನಾಗೇಶ್‌ ಅವರನ್ನೂ ವೀರಪ್ಪನ್‌ ಅಪಹರಿಸಿದ್ದ. ಇಂದಿಗೂ ಡಾ| ರಾಜ್‌ಕುಮಾರ್‌ ಅಭಿಮಾನಿಗಳಿಗೆ 25 ವರ್ಷಗಳ ಹಿಂದೆ ನಡೆದ ಘಟನೆ ನೆನೆದು ಭೀಮನ ಅಮಾವಾಸ್ಯೆ’ ಎಂದರೆ ಬೆಚ್ಚಿ ಬೀಳುವಂತಾಗುತ್ತದೆ.

Read More »

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ , ಕೊಲೆ ಶಂಕೆ : ಕುಟುಂಬಸ್ಥರಿಂದ ದೂರು!

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32) ಮೃತ ದುರ್ದೈವಿಯಾಗಿದ್ದಾರೆ.

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ, ದರ್ಶನ್ ಸೇರಿ 7 ಜನರ ಬೇಲ್ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ರೆಣುಕಾಸ್ವಾಮಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಸೇರಿ 7 ಮಂದಿಯ ಜಾಮೀನು ಅರ್ಜಿ ಆದೇಶವನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ . ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ಮುಂದಿನ ವಿಚಾರಣೆಯಲ್ಲಿ ತೀರ್ಮಾನವಾಗಲಿದೆ.ಮೂರು ಪೇಜು ಮೀರದಂತೆ ನಿಮ್ಮ ಲಿಖಿತ ವಾದ ಸಲ್ಲಿಸಿ ಎಂದು ಇತರೆ ಆರೋಪಿಗಳಿಗೆ ಹೇಳಿ, ಒಂದು ವಾರದೊಳಗೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

Read More »

ಮುಂಬೈ ರೈಲು ಸರಣಿ ಸ್ಫೋಟ ಪ್ರಕರಣ: 12 ಆರೋಪಿಗಳ ಖುಲಾಸೆಗೊಳಿಸಿದ್ದ ಬಾಂಬೆ ಹೈಕೋರ್ಟ್​ ತೀರ್ಪಿಗೆ ‘ಸುಪ್ರೀಂ’ ತಡೆ

2006ರ ಜುಲೈ 11ರಂದು ಮುಂಬೈನ ಲೋಕಲ್ ರೈಲುಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.12 ಜನರನ್ನು ಮತ್ತೆ ಜೈಲಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದ ನ್ಯಾಯಾಲಯ, ಭವಿಷ್ಯದ ಪ್ರಕರಣಗಳಲ್ಲಿ ಹೈಕೋರ್ಟ್ ತೀರ್ಪನ್ನು ಪೂರ್ವನಿದರ್ಶನವಾಗಿ ಪರಿಗಣಿಸಬಾರದು ಎಂದು ಒತ್ತಿ ಹೇಳಿದೆ.

Read More »

ಧರ್ಮಸ್ಥಳದಲ್ಲಿ ಹೂತಿಟ್ಟ ಶವ ಹೊರತೆಗೆಯಲು ಸ್ವಯಂ ಪ್ರೇರಿತ ನೆರವಿಗೆ ಬಂದ ವಿಜ್ಞಾನಿಗಳು, ಇಂಜಿನಿಯರ್‌ಗಳು!

ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ.ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ ಜ್ಞಾನ ಹಾಗೂ ಅನುಭವವನ್ನು ಹಂಚಿಕೊಳ್ಳಲು ನಮ್ಮನ್ನು ಸಂಪರ್ಕಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿರುವ ಸ್ಥಳವನ್ನು ಅನಾವರಣಗೊಳಿಸಲು ಮತ್ತು ಡಿಎನ್‌ಎ ಮ್ಯಾಚಿಂಗ್ …

Read More »

ಅಲ್-ಖೈದಾ ಜಾಲ ಭೇದಿಸಿದ ಗುಜರಾತ್ ಪೊಲೀಸ್: ನಾಲ್ವರು ಉಗ್ರರ ಬಂಧನ!

‘ಅಲ್-ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿದ್ದೇವೆ. ಅಲ್-ಖೈದಾ ಜತೆಗೆ ನಿರಂತರವಾಗಿ ಸಂಪರ್ಕ ಹೊಂದಿದ್ದ ನಾಲ್ವರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ’ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More »

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

2024-25 ನೇ ಆರ್ಥಿಕ ವರ್ಷದಲ್ಲಿ ಅತೀ ಹೆಚ್ಚು ತಲಾ ಆದಾಯ ಹೊಂದಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಂಬರ್ 1 ಆಗಿದ್ದು ಇದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೊಗಳಿದ್ದಾರೆ. ಹಣಕಾಸು ಸಚಿವಾಲಯ ಸಲ್ಲಿಸಿದ ದತ್ತಾಂಶದಲ್ಲಿ ಕರ್ನಾಟಕದಲ್ಲಿ ತಲಾ ಆದಾಯ ಕಳೆದ 10 ವರ್ಷಗಳಲ್ಲಿ ದ್ವಿಗುಣವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.ಜನ ಸಾಮಾನ್ಯರನ್ನು ಸಬಲೀಕರಣಗೊಳಿಸಲು ಗ್ಯಾರಂಟಿ ಯೋಜನೆಗಳು ಸಹಾಯ ಮಾಡಿವೆ. ಗ್ಯಾರಂಟಿ ಯೋಜನೆಗಳು ದಿವಾಳಿ …

Read More »