Breaking News

BigTv News

ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಆತ್ಮಹತ್ಯೆ!!

ನಗರದಲ್ಲಿ ಆಘಾತಕಾರಿ ಸುದ್ದಿ – ಯುವ ಉದ್ಯಮಿ ಹಾಗೂ ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣವಾಗಿ ಆರ್ಥಿಕ ಸಂಕಷ್ಟವನ್ನೇ ಶಂಕಿಸಲಾಗಿದೆ. ವಿಷ ಸೇವಿಸಿದ ನಿತಿನ್, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ರೂ ಚಿಕಿತ್ಸೆ ಫಲಕಾರಿಯಾಗದೆ ನಸುಕಿನಲ್ಲಿ ಮೃತಪಟ್ಟರು.ಮಂಗಳೂರು ಕದ್ರಿ ಕಂಬ ಬಳಿ “ಕೊಡಕ್ಕೆನೆ” ಹೆಸರಿನ ಹೋಟೆಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದರು.

Read More »

ಬ್ರೇಕ್‌ ಫೈಲ್ಯೂರ್‌ : ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌!

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಬ್ರೇಕ್‌ ಪೈಲ್ಯೂರ್‌ ಆಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಈ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರಾಬಕೋವಿ ಹಾಲು ಒಕ್ಕೂಟದ ಅಧಿಕಾರೇತರ ಸದಸ್ಯರಾಗಿ, ರಾಘವೇಂದ್ರ ಹಿಟ್ನಾಳ ನೇಮಕ ಮಾಡಿದ ರಾಜ್ಯ ಸರ್ಕಾರ!

ರಾಬಕೋವಿ ಹಾಲು ಒಕ್ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಮೇಲುಗೈ ಸಾಧಿಸಿದ್ದು, ರಾಘವೇಂದ್ರ ಹಿಟ್ನಾಳರನ್ನು ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ. ರಾಬಕೋವಿ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆ ಜಿದ್ದಾಜಿದ್ದಿ ನಡೆದಿತ್ತು.ಮಾಜಿ ಶಾಸಕ ಭೀಮಾ ನಾಯಕ ವಿರುದ್ಧ ರಾಘವೇಂದ್ರ ಹಿಟ್ನಾಳ್ ಅಖಾಡಕ್ಕೆ ಇಳಿದಿದ್ದರು. ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮಾ ನಾಯ್ಕ್ ಸಹ ಸಿಎಂ ಸಿದ್ದರಾಮಯ್ಯ ಆಪ್ತ ಎನ್ನಲಾಗಿದೆ. ಕಳೆದ ವಾರವಷ್ಟೇ ನಡೆದಿದ್ದ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಯಲ್ಲಿ …

Read More »

ಕೋರ್ಟ್ ಆವರಣದಲ್ಲೇ ಪತ್ನಿ, ಅತ್ತೆಯ ಮೇಲೆ ಮಚ್ಚಿನಿಂದ ಅಟ್ಯಾಕ್ ಮಾಡಿದ ಪತಿ!

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದೆ.ತಕ್ಷಣವೇ ಪೊಲೀಸರು ಆರೋಪಿಯನ್ನು ಅಶಕ್ಕೆ ಪಡೆದಿದ್ದಾರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ವಿಚ್ಛೇದನ ಹಿನ್ನೆಲೆಯಲ್ಲಿ ಪತಿ ಮತ್ತು ಪತ್ನಿ ಕೋರ್ಟಿಗೆ ಹಾಜರಾಗಿದ್ದರು. ಆರೋಪಿ ಮುತ್ತಪ್ಪ ಬೈಲಹೊಂಗಲ …

Read More »

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪಾರಿ ಪಡೆದಿದ್ದ ನಾಲ್ವರು ಅರೆಸ್ಟ್

ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

Read More »

ಮಂಡ್ಯದಲ್ಲಿ 15,000 ಲಂಚ ಪಡೆಯುತ್ತಿದ್ದಾಗಲೇ ಮೂವರು ನೌಕರರು ಲೋಕಾಯುಕ್ತ ಬಲೆಗೆ!

ಜಿಲ್ಲೆಯಲ್ಲಿ ಟೌನ್ ಪ್ಲಾನಿಂಗ್ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ.ಮಂಡ್ಯ ನಗರ ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳಾದಂತ ಅನನ್ಯ, ಸೌಮ್ಯ ಹಾಗೂ ಹರೀಶ್ ಎಂಬುವರನ್ನು ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದು, ತಮ್ಮ ವಶಕ್ಕೆ ಪಡೆದಿದ್ದಾರೆ.ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಇನ್ಸ್ ಪೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

Read More »

ಧರ್ಮಸ್ಥಳಕ್ಕೆ ಹೋಗಿದ್ದ ಶಿಕ್ಷಕ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ!!

ನಾಲ್ಕು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದ ಕುಷ್ಟಗಿ ತಾಲೂಕಿನ ಜುಮಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಪೊಲೀಸ್ ಪಾಟೀಲ(35) ಜುಲೈ 20ರಂದು ಧರ್ಮಸ್ಥಳದ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.

Read More »

ಉತ್ತರ ಪ್ರದೇಶ: ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿಗೆ ವಿಷ ಬೆರೆಸಿದ್ದ ಮಹಿಳೆ.

ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ ಸೇರಿ ಈ ಕೃತ್ಯವೆಸಗಿದ್ದಳು.ಕೂಡಲೇ ಕುಟುಂಬದ ಎಲ್ಲಾ ಸದಸ್ಯರಿಗೂ ಮಾಹಿತಿ ನೀಡಲಾಗಿತ್ತು. ವಿಚಾರಣೆ ಸಮಯದಲ್ಲಿ ಆಕೆ ಸಲ್ಫೋಸ್ ಮಿಶ್ರಣ ಮಾಡಿರುವುದು ಹೌದೆಂದು ಒಪ್ಪಿಕೊಂಡಿದ್ದಾಳೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಮಾಲತಿ ದೇವಿ ಮತ್ತು ಆಕೆಯ …

Read More »

ಮುಂಬೈ ಬಾಂಬ್ ಸ್ಫೋಟ ಪ್ರಕರಣ: 12 ಮಂದಿ ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ಸರಕಾರ.

ಜುಲೈ 21ರಂದು 2006ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ 12 ಮಂದಿಯನ್ನು ಖುಲಾಸೆಗೊಳಿಸಿರುವ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಮಂಗಳವಾರ ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಮೇಲ್ಮನವಿಯನ್ನು ವಿಚಾರಣೆಗೆ ತುರ್ತಾಗಿ ಪಟ್ಟಿ ಮಾಡಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದರು.

Read More »

ನಟ ದರ್ಶನ್ ಕೇಸ್ ನಿಂದ ಹಿಂದೆ ಸರಿದ ಹಿರಿಯ ವಕೀಲ ಕಪಿಲ್ ಸಿಬಲ್.!

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಕೇಸ್ನಿಂದ ಹಿರಿಯ ವಕೀಲ ಕಪಿಲ್ ಸಿಬಲ್ ಹಿಂದೆ ಸರಿದಿದ್ದಾರೆ. ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ , ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು …

Read More »