Breaking News

BigTv News

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ವಿಚಾರಣ ನ್ಯಾಯಾಲಯದಲ್ಲಿ ಜಾಮೀನು ಕೋರಲು ಸೂಚನೆ!

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.ಪ್ರಜ್ವಲ್‌ ರೇವಣ್ಣ ಪರ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಚಾರಣ ನ್ಯಾಯಾಲಯದಲ್ಲಿ ಜಾಮೀನು ಕೋರದೆಯೇ ಹೈಕೋರ್ಟ್‌ಗೆ ಬರಬಹುದಾಗಿದೆ ಎಂದು ವಾದಿಸಿದರು. ಇದನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.

Read More »

ಜಾತಿ ನಿಂದನೆ’ಗೆ ಹೆದರಿ ಆತ್ಮಹತ್ಯೆಗೆ ಶರಣಾದ ಯುವಕ!

ಜಮೀನಿನ ದಾರಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳವಾಗಿ ಹಿರಿಯರು ನ್ಯಾಯಪಂಚಾಯಿತಿ ಮಾಡಿ ಬಗೆಹರಿಸಿದ್ದರು.ಆದರೆ ಯುವಕನ ವಿರುದ್ಧ ಕೆಲವರು ಜಾತಿ ನಿಂದನೆ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸಿದ್ದರು. ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತೆ ಎಂದು ಭಯಗೊಂಡು ಯುವಕ ಮೆಹಬೂಬ್ (22) ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗ ಆತ್ಮಹತ್ಯೆ ಮಾಡಿಕೊಂಡ ವಿಷಯ ಕೇಳಿ ಆಘಾತಗೊಂಡ ಆತನ ತಂದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಒಂದೇ ಮನೆಯಲ್ಲಿ ಒಂದೇ ದಿನ ಎರಡು ಸಾವಾಗಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Read More »

ಬೆಂಗಳೂರು! ಪತಿಯಿಂದಲೇ ಪತ್ನಿ ಮರ್ಡರ್!

ದಂಪತಿಗಳು ಕೋಲಾರದ ಶ್ರೀನಿವಾಸಪುರ ಮೂಲದವರು ಎಂದು ತಿಳಿದು ಬಂದಿದೆ. ಶಾಪಿಂಗ್ ಗೆ ಹೋಗಿ ಬಂದ ಹೆಂಡತಿ ಜೊತೆ ಪತಿ ಹರೀಶ್ ಕಿರಿಕ್ ತೆಗೆದಿದ್ದಾನೆ. ಗಲಾಟೆ ತಾರಕಕ್ಕೇರಿ ಹೆಂಡತಿ ಮೇಲೆ ಗಂಡ ಹಲ್ಲೆ ನಡೆಸಿದ್ದಾನೆ. ಹೆಂಡತಿ ಕೆಳಗೆ ಬೀಳುತ್ತಿದ್ದಂತೆ ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಕೊಲೆ ಮಾಡಿದ್ದಾನೆ. ಪತಿ ಹರೀಶ್ ಕೆಲವು ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿದ್ದನು ಎನ್ನಲಾಗಿದೆ. ಪತ್ನಿ ಜೊತೆ ಹರೀಶ್ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು .

Read More »

ಬೆಂಗಳೂರಲ್ಲಿ ಭೀಕರ ಮರ್ಡರ್ – 14 ವರ್ಷದ ಬಾಲಕಿಯ ಕಗ್ಗೊಲೆ!!

ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿಯ ಭೀಕರ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ,14 ವರ್ಷದ ಅರುಣ ಎಂಬ ಬಾಲಕಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.ಮೃತ ಬಾಲಕಿ ಅರುಣ ಅವರ ತಂದೆ ಮತ್ತು ತಾಯಿ ಕೆಲಸಕ್ಕೆ ತೆರಳಿದ್ದರು.ಈ ವೇಳೆ ಶಾಲೆಗೆ ತೆರಳಬೇಕಿದ್ದ ಬಾಲಕಿ ಕಾರಣಾಂತರಗಳಿಂದ ಶಾಲೆಗೆ ಹೋಗದೇ ಮನೆಯಲ್ಲಿ ಏಕಾಂಗಿಯಾಗಿ ಉಳಿದಿದ್ದಳು ಎನ್ನಲಾಗಿದೆ.ಈ ವೇಳೆ ಮನೆಯಲ್ಲಿಯೇ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯ ಮಾಹಿತಿ ತಿಳಿದ ಕೂಡಲೇ …

Read More »

ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ!

ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂತಹ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎನ್‌ಐಎ ವಶಕ್ಕೆ ನೀಡಿ ಆದೇಶಿಸಿದೆ.ಇಂದು ಸಿಟಿ ಸಿವಿಲ್ ಕೋರ್ಟ್ ಗೆ ಶಂಕಿತ ಮೂವರು ಉಗ್ರರನ್ನು ಹಾಜರುಪಡಿಸಲಾಗಿತ್ತು. ಈ ಮೂವರನ್ನು 6 ದಿನಗಳ ಕಾಲ ಎನ್‌ಐಎ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.

Read More »

ರಾಜ್ಯದಲ್ಲಿ ‘ದ್ವಿಭಾಷಾ ಸೂತ್ರ’ ಜಾರಿಗೊಳಿಸಲು ಸರ್ಕಾರ ಸಿದ್ಧತೆ: ‘ಕರಡು’ ಸಿದ್ಧಪಡಿಸಲು ಸೂಚನೆ!

ತಮಿಳುನಾಡು ಹಾಗೂ ಮಹಾರಾಷ್ಟ್ರ ಮಾದರಿಯಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ತಂಡ ಕೂಡ ರಚನೆಯಾಗುವಂತ ಸಾಧ್ಯತೆ ಇದೆ.ಈ ಸಂಬಂಧ ಕಾನೂನು ಇಲಾಖೆಯ ಜೊತೆಗೆ ಸಮಾಲೋಚನೆಯನ್ನು ನಡೆಸು ಸಾಧ್ಯತೆ ಇದೆ.ಕರಡು ಪ್ರತಿ ಸಿದ್ಧಪಡಿಸಿ, ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಲು ತಯಾರಿ ನಡೆಸುತ್ತಿದೆ ಎನ್ನಲಾಗುತ್ತಿದೆ.

Read More »

ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’!

ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತ ಘಟನೆ ನಡೆದಿದೆ.ಅತ್ಯಾಚಾರದ ಬಳಿಕ ಮಹಿಳೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಮಹಿಳೆಯಿಂದ ಹಣ ಪಡೆದು, ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Read More »

ಬೆಳಗಾವಿ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಸಂತೋಷ್ ಹಾಗೂ ಕುಟುಂಬದವರು ಡೆತ್​ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಇದರ ಪ್ರಕಾರ, ಚೀಟಿ ವ್ಯಹಾರ ಮತ್ತು ರಾಜು ಎಂಬಾತ ಚಿನ್ನ ತೆಗೆದುಕೊಂಡು ಹೋಗಿ ವಾಪಸ್ ಕೊಡದೆ ವಂಚಿಸಿದ್ದೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ತಾಯಿ ಮತ್ತು ತಂಗಿಯರಿಗೆ ಎರಡು ಗಂಟೆಗಳ ಕಾಲ ಸಂತೋಷ್ ಮನವೊಲಿಕೆ ಮಾಡಿದ್ದರು. ಸಾವೇ ತಮಗೆ ಕೊನೆ ದಾರಿ ಅನ್ನೋದನ್ನ ಕುಟುಂಬಸ್ಥರಿಗೆ ಮನವರಿಕೆ ಮಾಡಲು ಯತ್ನಿಸಿದ್ದರು. ಬಳಿಕ ತಂದಿದ್ದ ವಿಷವನ್ನು ಕುಟುಂಬಸ್ಥರಿಗೆ ನೀಡಿ …

Read More »

Lulu Mall ಸೂಪರ್ ವೈಸರ್ Faraz ಬಂಧನ!

ಮಹಿಳಾ ಉದ್ಯೋಗಿಯ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡು ಇಸ್ಲಾಂಗೆ ಮತಾಂತರವಾಗದಿದ್ದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಹಿಂದೂ ಮಹಿಳೆಗೆ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ಲುಲು ಮಾಲ್ ಸೂಪರ್ ವೈಸರ್ ಫರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇನ್ನು ಲುಲು ಮಾಲ್ ನಲ್ಲಿ ಕೆಲಸದಲ್ಲಿ ಮುಂದುವರೆಯಲು ನೀನು ಇಸ್ಲಾಂಗೆ ಮತಾಂತರವಾಗಬೇಕು. ಇಲ್ಲದಿದ್ದಲ್ಲಿ ಕೆಲಸದಿಂದ ಕಿತ್ತೊಗೆಯುತ್ತೇನೆ. ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದ. ಮಾಲ್‌ನಲ್ಲಿ ತನ್ನ ಕೆಲಸವನ್ನು ಉಳಿಸಿಕೊಳ್ಳಲು ಅವಳು ಇಸ್ಲಾಂ …

Read More »

ಬಾಹ್ಯಾಕಾಶದಲ್ಲಿ ರೈತನಾದ ಗಗನಯಾತ್ರಿ ; ಮೆಂತ್ಯ, ಹೆಸರುಕಾಳು ಬೆಳೆಯುತ್ತಿರುವ ‘ಶುಭಾಂಶು ಶುಕ್ಲಾ’,!

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ರೈತನಾಗಿ ಬದಲಾದರು, ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಆರಂಭಿಕ ಸಸ್ಯ ಬೆಳವಣಿಗೆಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಕುರಿತು ಅಧ್ಯಯನದ ಭಾಗವಾಗಿ, ಪೆಟ್ರಿ ಭಕ್ಷ್ಯಗಳಲ್ಲಿ ಮೊಳಕೆಯೊಡೆಯುತ್ತಿರುವ ಹೆಸರುಕಾಳು ಮತ್ತು ಮೆಂತ್ಯ ಬೀಜಗಳ ಫೋಟೋಗಳನ್ನ ತೆಗೆದುಕೊಂಡು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ (ISS) ಶೇಖರಣಾ ಫ್ರೀಜರ್‌’ಗೆ ಸೇರಿಸಿದರು.ಇನ್ನು ಈ ಮೊಳಕೆ ಪ್ರಯೋಗವನ್ನ ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ರವಿಕುಮಾರ್ ಹೊಸಮನಿ ಮತ್ತು ಧಾರವಾಡದ ಭಾರತೀಯ ತಂತ್ರಜ್ಞಾನ …

Read More »