ಬೆಂಗಳೂರು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರ್ಜುನ್ ಎಂಬ ವ್ಯಕ್ತಿಯನ್ನು ತಲೆಗೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಪಳನಿ ಎಂಬಾತನ ಮೇಲೆ ಕೊಲೆ ಆರೋಪದ ಶಂಕೆ ವ್ಯಕ್ತವಾಗಿದ್ದು, ಇಬ್ಬರ ನಡುವಿನ ದೀರ್ಘಕಾಲದ ವೈಷಮ್ಯವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಅರ್ಜುನ್ ಹಾಗೂ ಪಳನಿ ಇಬ್ಬರ ವಿರುದ್ಧವೂ ಕೆಜಿ ಹಳ್ಳಿ ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಕಳೆದ ವರ್ಷ ಹಾಗೂ 7–8 ತಿಂಗಳ …
Read More »ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಕೊಲೆ ಆರೋಪ, ಅಪ್ರಾಪ್ತ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 45 ವರ್ಷದ ಮಹಿಳೆಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಅಪ್ರಾಪ್ತನೊಬ್ಬ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ಪ್ರತಿರೋಧಿಸಿದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಲಾಟೆ ವೇಳೆ ಮಹಿಳೆ ತನ್ನ ಪುತ್ರನಿಗೆ ಕರೆ ಮಾಡಿದ್ದು, ಆರೋಪಿಯು ತನ್ನ ತಂದೆ ಹಾಗೂ ಚಿಕ್ಕಪ್ಪಂದಿರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ …
Read More »ದಾವಣಗೆರೆಯಲ್ಲಿ 2 ಗುಂಪುಗಳ ನಡುವೆ ತಲ್ವಾರ್, ದೊಣ್ಣೆಗಳಿಂದ ಹೊಡೆದಾಟ: ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ
ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಲಾಗಿದೆ. ಮೈನು, ಜುನೈದ್, ಇರ್ಫಾನ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮೊಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ದಾಳಿ ನಡೆಸಿದೆ ಎನ್ನಲಾಗಿದೆ. ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಜಾದ್ ನಗರ …
Read More »ಬೆಚ್ಚಿಬಿದ್ದ ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್‌ನ ಮುಗಿಸಿದ ದುಷ್ಟರು
ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ, ರೌಡಿಶೀಟರ್ ಕುಳ್ಳಿ ಕಿರಣ್ (32) ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದೆ. ರಾಮಿನಕೊಪ್ಪದ ಬಳಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ವೇಳೆ 2–3 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಿರಣ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಖಾಸಗಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆಯೇ ಕೊಲೆಗೆ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಳೆಯ ದ್ವೇಷವೇ ಅಥವಾ ಜೂಜಾಟದ ವೇಳೆ ನಡೆದ ಜಗಳವೇ …
Read More »ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಯುವಕ: ಮುಂದೆ ನಿಂತು ಇಬ್ಬರಿಗೂ ಮದುವೆ ಮಾಡಿಸಿದ ಪೊಲೀಸರು
ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ಮಗು ಜನಿಸಿದ ಬಳಿಕ ಕೈಕೊಟ್ಟ ಘಟನೆ ನಡೆದಿದೆ. ಬೀರಕನಹಳ್ಳಿ ಗ್ರಾಮದ ರಾಜು ಹಾಗೂ ನಿಲುವಾಗಿಲು ಗ್ರಾಮದ ಅನ್ನಪೂರ್ಣ ಪರಸ್ಪರ ಪ್ರೀತಿಸುತ್ತಿದ್ದು, ಒಂದು ವರ್ಷ ಒಟ್ಟಿಗಿದ್ದರು. ಮದುವೆಯಾಗುವುದಾಗಿ ರಾಜು ಭರವಸೆ ನೀಡಿದ್ದ ಎನ್ನಲಾಗಿದೆ. ಅನ್ನಪೂರ್ಣ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ರಾಜು ಮದುವೆಯಾಗದೆ ಪರಾರಿಯಾಗಿದ್ದ. ಮನನೊಂದ ಅನ್ನಪೂರ್ಣ ಪೊಲೀಸರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿದ್ದ ರಾಜುವನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ …
Read More »ಮಕ್ಕಳಾಗದ ಕಾರಣಕ್ಕೆ ಪತಿ ದೌರ್ಜನ್ಯ: ಪತ್ನಿ ಆತ್ಮಹತ್ಯೆ
ಬೆಂಗಳೂರು: ಮಕ್ಕಳಾಗದ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 27 ವರ್ಷದ ಕಾವ್ಯಾ ಎಂಬ ಗೃಹಿಣಿ ಆವಲಹಳ್ಳಿಯ ಹುಸ್ಕೂರುಕೋಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಪತಿ ನವೀನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮದುವೆಯಾಗಿ 9 ವರ್ಷಗಳಾದರೂ ಮಕ್ಕಳಾಗದ ವಿಚಾರಕ್ಕೆ ನವೀನ್ ಪದೇಪದೇ ಜಗಳ ಮಾಡಿ ಹಲ್ಲೆ ನಡೆಸುತ್ತಿದ್ದ ಎಂದು ಕಾವ್ಯಾ ಕುಟುಂಬ ಆರೋಪಿಸಿದೆ. ವರಮಹಾಲಕ್ಷ್ಮೀ ಹಬ್ಬದಂದೂ ಹಲ್ಲೆ ನಡೆಸಿದ್ದು, ಹಿರಿಯರು ರಾಜಿ ಪಂಚಾಯಿತಿ …
Read More »ರಾಜ್ಯಾಧ್ಯಂತ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ!
ಬೆಂಗಳೂರು: ವೈದ್ಯಕೀಯ ಪದವಿ ಹಾಗೂ ನೋಂದಣಿ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಠಿಣ ಕಾರ್ಯಾಚರಣೆ ನಡೆಸಿದೆ. 2024ರಿಂದ ರಾಜ್ಯಾದ್ಯಂತ 583ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪತ್ತೆಯಾದವರಲ್ಲಿ ಹಲವರು ಲ್ಯಾಬ್ ಅಸಿಸ್ಟೆಂಟ್, ನರ್ಸ್, ಕಂಪೌಂಡರ್ ಹಾಗೂ ಕ್ಲಿನಿಕ್ ಸಹಾಯಕರಾಗಿ ಕೆಲಸ ಮಾಡಿದ್ದವರು ಎನ್ನಲಾಗಿದೆ. ಕಲಬುರಗಿ, ರಾಯಚೂರು, ಧಾರವಾಡ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಕೆಲವರು ‘ಮೊಬೈಲ್ …
Read More »ಪತ್ನಿಯನ್ನು ಹತ್ಯೆ ಮಾಡಿ ಬೆರಳುಗಳನ್ನು ಕತ್ತರಿಸಿ, ರುಂಡ ಫ್ರಿಡ್ಜ್‌ನಲ್ಲಿಟ್ಟ ಪಾಪಿ ಪತಿ; ಮನೆಯೊಳಗೆ ಹೋದವರಿಗೆ ಕಾದಿತ್ತು ಶಾಕ್!
ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾದ ಕೆಲವೇ ತಿಂಗಳಲ್ಲಿ 25 ವರ್ಷದ ರಿಯಾ ತಾಲ್ಲೂಕುದಾರ್ ಅಪಾರ್ಟ್‌ಮೆಂಟ್‌ನಲ್ಲಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೆರೆಹೊರೆಯವರ ದೂರಿನ ಮೇರೆಗೆ ಬೀಗ ಮುರಿದು ಪರಿಶೀಲಿಸಿದ ಪೊಲೀಸರಿಗೆ ದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ಬೆರಳುಗಳು ಕತ್ತರಿಸಲ್ಪಟ್ಟಿದ್ದವು. ಬಳಿಕ ಫ್ರಿಡ್ಜ್‌ನಲ್ಲಿದ್ದ ಪಾಲಿಥಿನ್ ಚೀಲದಲ್ಲಿ ಆಕೆಯ ತಲೆ ಪತ್ತೆಯಾಗಿದೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಪತಿ ರಾಮಾನುಜನ್ ಗೋಸ್ವಾಮಿ ಭಾನುವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವೇನು ಎಂಬುದು ಇನ್ನೂ …
Read More »ತಿರುಪತಿ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಕಾರು ಪಲ್ಟಿ: ಒಂದೇ ಕುಟುಂಬದ ನಾಲ್ವರು ಸಾವು
ತಿರುಪತಿ ದರ್ಶನ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕೆಜಿಎಫ್‌ನ ಬೇತಮಂಗಲ ಸಮೀಪದ ದೊಡ್ಡಕಾರಿ ಬಳಿ ನಡೆದಿದೆ. ಮೃತರನ್ನು ಶಾರದಾಬಾಯಿ (70), ದೀಕ್ಷಿತಾ (20), ದೇವೇಂದ್ರ (45) ಹಾಗೂ ವಿಷ್ಣು (12) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳ ಎಂಟು ಮಂದಿ ತಿರುಪತಿಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಬೆಳಗ್ಗೆ 6.50ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ನಿಯಂತ್ರಣ …
Read More »ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ರೇಪ್ ಮಾಡಿದ ಡಾಕ್ಟರ್! ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ʼಮೇಲ್
ಬೆಂಗಳೂರು: ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರದ ಬಳಿಕ ವಿಡಿಯೋ ಮಾಡಿಕೊಂಡು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಕಳೆದೊಂದು ವರ್ಷದಿಂದ ಹಲವು ಬಾರಿ ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಯುವರಾಜ್ ಮನೋಹರ್ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವತಿ ನೀಡಿರುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





