Breaking News

BigTv News

ಮಂಜೇಶ್ವರ: ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ಕಾರ್ಮಿಕನ ಕೊಲೆ

ಮಂಜೇಶ್ವರ: ಕರ್ನಾಟಕ ಮೂಲದ ಕಾರ್ಮಿಕ ರಮೇಶ್ ಯಾನೆ ಸತೀಶ್ (38) ಎಂಬಾತನನ್ನು ತಲೆಗೆ ರುಬ್ಬುವ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಾಸರಗೋಡು ಜಿಲ್ಲೆಯ ಹೊಸಂಗಡಿ ಸಮೀಪದ ಅಂಗಡಿಪದವಿನಲ್ಲಿ ನಡೆದಿದೆ. ಹಳೆಯ ಮನೆಯ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಶವ ಪತ್ತೆಯಾಗಿದೆ. ಸ್ಥಳದಲ್ಲಿದ್ದ ರುಬ್ಬುವ ಕಲ್ಲಿನಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಅದರಿಂದಲೇ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ದಿನ ರಮೇಶ್‌ನನ್ನು ಮನೆಗೆ ಕರೆದುಕೊಂಡು ಬಂದಿದ್ದ …

Read More »

ಗಾಂಜಾ ಸೇವನೆ, ಮಾರಾಟ: ಸೆರೆ

ಉಪ್ಪಿನಂಗಡಿ: ಕಡವಿನಬಾಗಿಲು ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಡವಿನಬಾಗಿಲು ನಿವಾಸಿ ಮೊಹಮ್ಮದ್ ಝಿಯಾದ್ (24) ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ಕುವೆಟ್ಟು ಗ್ರಾಮದ ಮಹಮ್ಮದ್ ನೌಶಾದ್ ಎಂಬಾತನಿಂದ ಗಾಂಜಾವನ್ನು ಖರೀದಿಸಿರುವುದಾಗಿ ಆತ ತಿಳಿಸಿದ್ದರಿಂದ ಆತನನ್ನು ಶೋಧನೆಗೆ ಒಳಪಡಿಸಿದಾಗ ಆತನಲ್ಲಿ ಗಾಂಜಾ ಪತ್ತೆಯಾಗಿದೆ. ಈ ಕಾರಣಕ್ಕೆ ಗಾಂಜಾ ಸೇವನೆ, ಸಾಗಣೆ ಮತ್ತು ಮಾರಾಟ ಆರೋಪದಡಿ ಇಬ್ಬರ ಮೇಲೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Read More »

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್‌ ಗಳು ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ದಾಬಸ್‌ಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್‌ಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟಕಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ಶಿವಶಂಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ದಾಬಸ್‌ಪೇಟೆ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಚಟುವಟಿಕೆಗಳಿಗೆ ಈ ಸ್ಫೋಟಕಗಳನ್ನು ಬಳಸಲು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ …

Read More »

ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ್ತು ಹಿಸುಕಿ ಕೊಲೆಯತ್ನ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃತ್ಯ

ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣದ ಐವರು ವಿಚಾರಣಾಧೀನ ಕೈದಿಗಳು ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳಲು ಅಡ್ಡಿಪಡಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಸೆ.2ರಂದು ವಾರ್ಡನ್ ಮಂಜುನಾಥ್ ಹವೇಲಿ ಕರ್ತವ್ಯದಲ್ಲಿದ್ದಾಗ ಐವರು ಆರೋಪಿಗಳು ಅವರನ್ನು ಬಲವಂತವಾಗಿ ನಾಲ್ಕನೇ ಕೊಠಡಿಗೆ ಎಳೆದೊಯ್ದು ಮುಖ ಹಾಗೂ ಮೂಗಿಗೆ ಗುದ್ದಿದ್ದಾರೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ …

Read More »

ಮಂಡ್ಯ ಹಲಗೂರಿನಲ್ಲಿ ಯುವಕನ ಕುತ್ತಿಗೆಗೆ ಚಾಕು ಇರಿತ

ಹಲಗೂರು: ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನೊಬ್ಬನ ಕುತ್ತಿಗೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗುರುವಾರ ಸಂಜೆ ಹಾಡ್ಲಿ-ಮೇಗಳಪುರ ಸರ್ಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಕಸಬಾ ಹೋಬಳಿಯ ಲಿಂಗಾಣಪುರ ದೊಡ್ಡಿ ಗ್ರಾಮದ ಸ್ವಾಮಿ ಎಂದು ಗುರುತಿಸಲಾಗಿದೆ. ಶರತ್, ಮುತ್ತುರಾಜು, ರಾಜು ಸೇರಿದಂತೆ ಕೆಲವರು ಬೇಕರಿ ಮುಂಭಾಗ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆಸಿ, ಬಳಿಕ ಸ್ವಾಮಿ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸ್ವಾಮಿ …

Read More »

ರಾಮನಗರ ನಕಲಿ ನೋಟು ಪ್ರಕರಣ; ಮತ್ತೆ ಮೂವರ ಬಂಧನ, 10ಕ್ಕೇರಿದ ಸಂಖ್ಯೆ

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ ಮನೆಯಲ್ಲಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಟಾಫ್ ನರ್ಸ್ ಜಿ.ಬಿ. ಸುನಿತಾ ಅವರನ್ನು ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ. ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಪೆರೇಸಂದ್ರದಲ್ಲಿನ ತಮ್ಮ ಮನೆಯಲ್ಲಿ ಪರವಾನಗಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ. ಅಕ್ರಮ ಕ್ಲಿನಿಕ್ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ಬಳಿಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಸುಮಾರು 15 ದಿನಗಳ ಬಳಿಕ ಜಿಲ್ಲಾ …

Read More »

ಶರಾವತಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ, ಮೂವರು ಅರೆಸ್ಟ್!

ಮನೆಯಲ್ಲೇ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಸ್ಟಾಫ್ ನರ್ಸ್ ಸಸ್ಪೆಂಡ್!

ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ ಮನೆಯಲ್ಲಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಟಾಫ್ ನರ್ಸ್ ಜಿ.ಬಿ. ಸುನಿತಾ ಅವರನ್ನು ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ. ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಪೆರೇಸಂದ್ರದಲ್ಲಿನ ತಮ್ಮ ಮನೆಯಲ್ಲಿ ಪರವಾನಗಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ. ಅಕ್ರಮ ಕ್ಲಿನಿಕ್ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ಬಳಿಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಸುಮಾರು 15 ದಿನಗಳ ಬಳಿಕ ಜಿಲ್ಲಾ …

Read More »

ರಾಜ್ಯದಲ್ಲೊಂದು ಮಹಿಳಾ ಪೇದೆಯಿಂದ ಅಮಾನವೀಯ ಕೃತ್ಯ: ದೂರು ನೀಡಲು ಬಂದವರ ಮೇಲೆ ಹಲ್ಲೆ

ಹಾಸನ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತೆರಳಿದ್ದ ಪ್ರಕಾಶ್ ಎಂಬ ವ್ಯಕ್ತಿಯ ಮೇಲೆ ಮಹಿಳಾ ಕಾನ್‌ಸ್ಟೆಬಲ್ ಲಾವಣ್ಯ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ದಾಖಲಿಸುವಂತೆ ಒತ್ತಾಯಿಸಿದ ವೇಳೆ ಹಲ್ಲೆ ನಡೆಸಲಾಗಿದ್ದು, ತೀವ್ರ ಏಟಿನಿಂದ ಪ್ರಕಾಶ್ ಠಾಣೆಯಲ್ಲೇ ಕುಸಿದುಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ಪ್ರಕಾಶ್ ಆರ್‌ಟಿಐ ಮೂಲಕ ಪ್ರಯತ್ನಿಸಿದರೂ ಪೊಲೀಸರು ನೀಡಿರಲಿಲ್ಲ. ಬಳಿಕ ನ್ಯಾಯಾಲಯದ ಮೊರೆ ಹೋದ ನಂತರ ಕೋರ್ಟ್ …

Read More »

ಬಡ್ಡಿ ಹಣ ಕೊಡಲಿಲ್ಲ ಅಂತ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ? ಮಿಸ್ಸಿಂಗ್ ಕಂಪ್ಲೇಂಟ್​​ನಿಂದ ಬಯಲಾಯ್ತು ಅಸಲಿ ಸತ್ಯ!

ಬೆಂಗಳೂರು: ಬಡ್ಡಿ ಹಣ ನೀಡದಿದ್ದಕ್ಕೆ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಬಂಧಿತರು. ಸಂತ್ರಸ್ತೆ ಸುಮಾರು ಎರಡು ವರ್ಷಗಳ ಹಿಂದೆ ರೇಷ್ಮಾ ಬಳಿ ₹1 ಲಕ್ಷ ಹಾಗೂ ನಝತ್ ಬಳಿ ₹50 ಸಾವಿರ ಸಾಲ ಪಡೆದಿದ್ದರು ಎನ್ನಲಾಗಿದೆ. ಬಡ್ಡಿ ಹಾಗೂ ಕಂತು ಪಾವತಿಸದ ಹಿನ್ನೆಲೆಯಲ್ಲಿ …

Read More »