ಉದ್ಯಾನದಂಚಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗಷ್ಟೆ ಆದಿವಾಸಿ ಯುವಕನನ್ನು ಬಲಿ ಪಡೆದಿದ್ದ ಹುಲಿ ಮತ್ತೆ ಕಾಣಿಸಿಕೊಂಡಿದ್ದು, ಮಮೇಯಲು ಬಿಟ್ಟಿದ್ದ ತೆನೆ ಹಸುವನ್ನು ಬಲಿ ಪಡೆದಿದೆ.ಈ ಭಾಗದಲ್ಲಿ ಹುಲಿ ಸೆರೆಗೆ ಹಲವೆಡೆ ಬೋನ್‌ಗಳನ್ನು ಇಡಲಾಗಿದೆ. ಹುಲಿಯೂ ಮೇಯಲು ಹಸುವನ್ನು ಬಿಟ್ಟಿದ್ದಾಗ ಹಗಲು ವೇಳೆಯೇ ದಾಳಿ ನಡೆಸಿ ಕೊಂದು ಹಾಕಿದೆ. ಇದರಿಂದ ರೈತ ಕಂಗಾಲಾಗಿದ್ದಾರೆ. ಹುಲಿಯನ್ನು ಸೆರೆ ಹಿಡಿದು ಜನರ ಆತಂಕವನ್ನು ದೂರ ಮಾಡುವಂತೆ ಅರಣ್ಯ ಇಲಾಖೆಯನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Read More »ಅಕ್ರಮವಾಗಿ ಪಡಿತರ ಅಕ್ಕಿಯನ್ನು ಮನೆಯಲ್ಲಿ ದಾಸ್ತಾನು ಮಾಡಿಟ್ಟಿದ್ದ ಮಹಿಳೆ ಬಂಧನ!
ಅಕ್ಕಪಕ್ಕದ ಮನೆಗಳಲ್ಲಿ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ದಾಸ್ತಾನು ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ವರ್ಷಾ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.ವಹೀದಾ (39) ಬಂಧಿತ ಆರೋಪಿ. ಈಕೆಯಿಂದ 5 ಚೀಲದಲ್ಲಿ 196 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಶಂಕರರಾಜು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »ಗಂಡನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ!
ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಕವಿತಾಳನ್ನು ಹುಡುಕುತ್ತಿದ್ದರು ಮತ್ತು ಜೂನ್ 13, 2025 ರಂದು ತಿರುಪತಿಯಲ್ಲಿ ಅವರನ್ನು ಬಂಧಿಸಲಾಯಿತು. ಇದರ ನಂತರ, ಪೊಲೀಸರ ವಿಚಾರಣೆಯ …
Read More »ಹೊಸಕೋಟೆ : ಗೊಟ್ಟಿಪುರ ಗೇಟ್ ಬಳಿ ಭೀಕರ ಅಪಘಾತ, ನಾಲ್ವರು ಸಾವು!
ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಸಾರಿಗೆ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಅಪಘಾತ ನಡೆದಿದೆ.ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44ವ), ತುಳಸಿ (21ವ), ಪ್ರಣತಿ (4ವ) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ. 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
Read More »ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ!
ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »ಧಾರವಾಡ :ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿ, ಗಂಭೀರ ಗಾಯ!!
ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ್ ಲಾಡ್ ಜೊತೆ ಹೆಚ್ಚುವರಿ ಡಿಸಿ ಗೀತಾ ತೆರಳಿದ್ದರು. ಹೆಚ್ಚುವರಿ ಡಿಸಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕಿ ಹೊಡೆದಿದೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಸಮೀಪ ಈ ಅಪಘಾತ ಸಂಭವಿಸಿದೆ.ಮಳೆ ಹಾನಿ ವೀಕ್ಷಿಸಿ ವಾಪಾಸ್ ಆಗುತ್ತಿದ್ದಾಗ ಹೆಬಸೂರು ಬಳಿ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »UP :ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆ!
ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದು, ಗಂಡ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಿದ್ದಾಳೆ. ಆದರೆ ಈ ಪ್ರಕರಣ ಬೇಧಿಸಿದ ಪೊಲೀಸರು ಮಹಿಳೆಯ ಹೀನ ಕೃತ್ಯವನ್ನ ಪತ್ತೆ ಹಚ್ಚಿದ್ದು, ಪತ್ತಿಯನ್ನ ಕೊಂದ ಆರೋಪದ ಮೇಲೆ ಮಹಿಳೆಯನ್ನ ಬಂಧಿಸಿದ್ದಾರೆ. ಆರೋಪಿ ಮಹಿಳೆ ಸಂಗೀತಾ ದೇವಿ (35) ಮತ್ತು ಆಕೆಯ ಸಹಚರ ಅನಿಲ್ ಶುಕ್ಲಾ ಅಲಿಯಾಸ್ ವಿವೇಕ್ (27) ಈಗ ಪೊಲೀಸ್ ವಶದಲ್ಲಿದ್ದು, ಸಂಗೀತ ಪತಿ ಕಣ್ಣನ್ ಕುಮಾರ್ (48) ಅವರ ಹತ್ಯೆಗೈದು …
Read More »ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ!!
ಪಣಜಿ :ಎಂಟು ವರ್ಷಗಳ ಹಿಂದೆ ಬ್ರಿಟಿಷ್ ಪ್ರಜೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 31 ವರ್ಷದ ವ್ಯಕ್ತಿಗೆ ಗೋವಾದ ನ್ಯಾಯಾಲಯವು ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾರ್ಚ್ 14, 2017 ರಂದು ದಕ್ಷಿಣ ಗೋವಾದ ಕೆನಕೋನಾ ಗ್ರಾಮದ ಅರಣ್ಯ ಪ್ರದೇಶದಲ್ಲಿ 28 ವರ್ಷದ ಬ್ರಿಟಿಷ್ ಯುವತಿಯ ಮೇಲೆ ಸ್ಥಳೀಯ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದ.
Read More »ಅತ್ಯಾಚಾರ ಎಸಗೋಕೆ ಹೆತ್ತ ತಾಯಿಯೇ ಸಪೋರ್ಟ್- ಬಿಜೆಪಿ ಮಾಜಿ ನಾಯಕಿ ಅರೆಸ್ಟ್!
ಹರಿದ್ವಾರ, ಆಗ್ರಾ, ಮತ್ತು ಬೃಂದಾವನದಲ್ಲಿ ಅನಾಮಿಕಾ ಶರ್ಮಾ ಅವರ 30ರ ವಯಸ್ಸಿನ ಪ್ರಿಯಕರ ಸುಮಿತ್ ಪಟ್ವಾಲ್ ಮತ್ತು ಅವನ ಸಹಾಯಕ ಶುಭಂ ಎಂಬಾತನಿಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಅಪರಾಧವು ತಾಯಿಯ ಸಮ್ಮತಿಯೊಂದಿಗೆ ಮತ್ತು ಆಕೆಯ ಸಮ್ಮುಖದಲ್ಲಿ ನಡೆದಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆರೋಪಿಗಳು ಬಾಲಕಿಯ ತಂದೆಯನ್ನು ಕೊಲ್ಲುವ ಬೆದರಿಕೆ ಹಾಕಿದ್ದರಿಂದ ಆಕೆ ಯಾರಿಗೂ ತಿಳಿಸಿರಲಿಲ್ಲ. ಬುಧವಾರ, ಉತ್ತರಾಖಂಡ ಪೊಲೀಸರು ಅನಾಮಿಕಾ ಶರ್ಮಾ ಮತ್ತು ಸುಮಿತ್ ಪಟ್ವಾಲ್‌ರನ್ನು …
Read More »ಹಾವೇರಿ :ಬಾಲಕಿ ಮೇಲೆ ಗ್ಯಾಂಗ್‌ರೇಪ್!!
ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರು ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ. ಇವರನ್ನು ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





