Breaking News

BigTv News

ಚಿನ್ನಸ್ವಾಮಿಯಲ್ಲಿ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು!!

ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ದಾಖಲಿಸಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ಆಗಿದೆ.ಈ ನಿಟ್ಟಿನಲ್ಲಿ ನಗರದಲ್ಲಿಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿಜಯಯಾತ್ರೆ ಆಯೋಜಿಸಲಾಗಿತ್ತು.ಆರ್‌ಸಿಬಿ ತಂಡ ಚಿನ್ನಸ್ವಾಮಿಯತ್ತ ತೆರಳಿತು. ಈ ವೇಳೆ ಚಿನ್ನಸ್ವಾಮಿ ಪ್ರವೇಶಿಸಲು ಏಕಾಏಕಿ ಗೇಟ್‌ ತೆಗೆಯಲಾಗಿದ್ದು, ಅಭಿಮಾನಿಗಳು ಒಳನುಗ್ಗುವ ಭರದಲ್ಲಿ ಕಾಲ್ತುಳಿತ ಉಂಟಾಗಿ 10 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.ಇನ್ನೂ 21 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, 7 ಮಂದಿ ಸ್ಥಿತಿ ಗಂಭೀರ ಎನ್ನಲಾಗುತ್ತಿದೆ. ಹೀಗೆ ಕಾಲ್ತುಳಿತ ಉಂಟಾಗುವುದಕ್ಕೂ …

Read More »

ಮದ್ಯ ಸೇವನೆಗಾಗಿ ಬಸ್ ಇಳಿದ ವ್ಯಕ್ತಿ ದುರ್ಗದ ಇಬ್ಬರು ಅಪರಿಚಿತರಿಂದ ಹತ್ಯೆ!!

ಜೂನ್ 1ರ ರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ನಡೆದುಹೋಗಿತ್ತು. ಮೈಮೇಲೆ ಬಟ್ಟೆಗಳು ಸಹ ಇಲ್ಲದ ಸ್ಥಿತಿಯಲ್ಲಿ ಶವ ಪತ್ತೆ ಆಗಿತ್ತು. ಮೃತ ದೇಹದ ಗುರುತು ಹಚ್ಚುವುದೇ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಶವದ ಆಸುಪಾಸಿನಲ್ಲಿ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿಯ ಐಡಿ ಪತ್ತೆ ಆಗಿತ್ತು. ಬಳಿಕ ಮೃತ ವ್ಯಕ್ತಿ ಬೆಂಗಳೂರಿನಲ್ಲಿ ಜಿಯೋ ಕಂಪನಿ ಉದ್ಯೋಗಿ, ಬಾಗಲಕೋಟೆಯ ಇಳಕಲ್ ಮೂಲದ ಬಸವರಾಜ ಎಂಬುವುದು ಗೊತ್ತಾಗಿತ್ತು.ಬಸವರಾಜನಿಗೆ ಕುಡಿಯುವ ಚಟವಿತ್ತು ಎಂಬಂಶ ತಿಳಿದಾಗಲೇ ಪೊಲೀಸರಿಗೆ ಕೊಲೆ …

Read More »

ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಬರೆದ ಕೆಎಂಎಫ್​!!

ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್​ಗೆ ಸಾಧ್ಯವಾಗಿದೆ ಎನ್ನಲಾಗಿದೆ.ಕೆಎಂಎಫ್ ಮತ್ತು ಅದರ ಅಂಗಸಂಸ್ಥೆಗಳಾದ ಹಾಲು ಒಕ್ಕೂಟಗಳು ಈಗಾಗಲೇ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, …

Read More »

ವ್ಯಾನ್ ಮೇಲೆ ಉರುಳಿಬಿದ್ದ ಸಿಮೆಂಟ್ ಟ್ರಕ್, 9 ಜನರು ಸ್ಥಳದಲ್ಲೇ ಸಾವು!!

ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ ನ ಸಂಜೇಲಿ ರೈಲ್ವೆ ಕ್ರಾಸಿಂಗ್ ಬಳಿ ಈ ಅಪಘಾತ ಸಂಭವಿಸಿದೆ. ರೈಲ್ವೆ ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಬಿದ್ದಿದೆ. ವ್ಯಾನ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, 9 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More »

ಹೊಸಪೇಟೆ:ನಕಲಿ ಪ್ರಮಾಣಪತ್ರ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ!

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಯನ್ನು ಸೃಷ್ಟಿಸಿ ವಿವಿಗೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುವಂತೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಎಸ್‍ಎಫ್‍ಐ ವಿಜಯನಗರ ಜಿಲ್ಲಾ ಸಮಿತಿಯಿಂದ ಮಂಗಳವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಮನವಿ ಪತ್ರ ಕಳುಹಿಸಿದರು.ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ವಿದ್ಯಾರ್ಥಿಗಳಿಂದ ಕನಿಷ್ಠ ₹8 ಸಾವಿರ ಸಂಗ್ರಹಣೆ ಮಾಡಿದ್ದಾರೆ’ ಎಂದು ಆರೋಪಿಸಿದರು.

Read More »

ಕನಕಪುರ: ಡಿಕೆ ಸಹೋದರರ ನಿಂದನೆ, ಆರೋಪಿ ವಿರುದ್ಧ FIR!

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಕೋಡಿಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ತಾಲ್ಲೂಕಿನ ಕೋಡಿಹಳ್ಳಿಯ ಬೆಟ್ಟದ ಹಲಸೂರು ಗ್ರಾಮದ ರವೀಂದ್ರ (44) ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Read More »

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ, 12 ಮಂದಿಯ‌ ಬಂಧನ!

ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Read More »

ವ್ಯಕ್ತಿ ಕೊಲೆ ಮಾಡಿ ಸುಟ್ಟು ಹಾಕಿದ ಅರೆಬೆಂದ ದೇಹ ಪತ್ತೆ!!

ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟು ಹಾಕಿರುವ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಸಮೀಪದ ಹಾಡ್ಲಿ ಗ್ರಾಮದ ಬಳಿ ಜರುಗಿದೆ.ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡರ ನೀಲಿಗಿರಿ ಜಮೀನಿನ ಆಜು-ಬಾಜಿನಲ್ಲಿ ಕುರಿ ಮೇಯಿಸುತ್ತಿದ್ದವರಿಗೆ ಸುಟ್ಟು ಹಾಕಿರುವ ಅರ್ಧ ಬೆಂದ ಮೃತದೇಹ ಇರುವುದನ್ನು ನೋಡಿ ತಕ್ಷಣ ಹಲಗೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ …

Read More »

ಸ್ಕೂಟರ್‌ನಲ್ಲಿ ಒಣ ಗಾಂಜಾ ಸಾಗಟ: ಮಾಲು ಸಮೇತ ಸಿಕ್ಕಿಬಿದ್ದ ಆರೋಪಿ!!

ಸ್ಕೂಟರ್‌ನಲ್ಲಿ ಅಕ್ರಮವಾಗಿ ಒಣ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಮಾಲು ಸಮೇತ ಸೋಮವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಪಟ್ಟಣದ ವಿ.ಸಿ.ಕಾಲನಿ ನಿವಾಸಿ ರಂಗಸ್ವಾಮಿ ಅವರ ಪುತ್ರ ಆರ್.ಪ್ರಕಾಶ್ (29) ಬಂಧಿತ ಆರೋಪಿ.

Read More »

ಆರ್‌ಸಿಬಿ ತಂಡಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ…

ಆರ್‌ಸಿಬಿ ತಂಡದ ಬಹುನಿರೀಕ್ಷಿತ ಗೆಲುವಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು ಸಲ್ಲಿಸಿದ್ದಾರೆ. ಕೊನೆಗೂ ಕಪ್ ಗೆಲುವ ಕನಸು ನನಸಾಗಿದೆ. ಈ ಸಲಾ ಕಪ್ ನಮ್ದೆ! ಎಂದು ಸಾಮಾಜಿಕ ಜಾಲತಾಣದಲ್ಲಿ ಶುಭ ಆರೈಸಿದ್ದಾರೆ.ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು …

Read More »