ಕಳೆದ 13 ವರ್ಷಗಳಿಂದ ಬಷೀರ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮೊದಲು ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದರು ಎನ್ನಲಾಗಿದೆ.ಬಷೀರ್, ತನ್ನ ನಿವಾಸದ ಬಳಿ ತನ್ನ ಟ್ಯಾಕ್ಸಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಬಿಶಾದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ರಸ್ತೆಯಲ್ಲಿ ರವಿವಾರ ಮಧ್ಯರಾತ್ರಿಯ ಸುಮಾರಿಗೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಕೋರರು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.ಗುಂಡಿನ ದಾಳಿ ಕೇಳಿ ಸುತ್ತಮುತ್ತಲಿನ ಪ್ರದೇಶದ …
Read More »ಚಿಕ್ಕಬಳ್ಳಾಪುರ : ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ!
ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ. ಜಂಗಮಕೋಟೆ ಮೂಲದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ …
Read More »ರಾಜ್ಯದಲ್ಲಿಂದು ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು!!
238 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇಂದು 53 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 238ಕ್ಕೆ ತಲುಪಿದೆ. ಹೋಂ ಐಸೋಲೇಷನ್ ನಲ್ಲಿ 225 ಸೋಂಕಿತರಿದ್ದರೇ, 6 ಮಂದಿ ಖಾಸಗಿ, 6 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.ಕೊರೋನಾ ಸೋಂಕಿಗೆ ಒಳಗಾಗಿದ್ದಂತ ಬೆಂಗಳೂರಿನ 63 ವರ್ಷದ ವ್ಯಕ್ತಿಯೊಬ್ಬರು …
Read More »BDA ಆಯುಕ್ತರಾಗಿ ಮಣಿವಣ್ಣನ್ ಪಿ ಅಧಿಕಾರ ಸ್ವೀಕಾರ!!
ಶನಿವಾರ ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಣಿವಣ್ಣನ್ ಅವರಿಗೆ ಡಿಸಿಎಂ ಶುಭ ಹಾರೈಸಿದರು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್ಗೆ ಬಿಡಿಎ ಆಯುಕ್ತ ಹುದ್ದೆಯನ್ನು ಸಮಪ್ರಭಾರ ಜವಾಬ್ದಾರಿವಹಿಸಿ ಸರ್ಕಾರ ಆದೇಶಿಸಿದ್ದು, ಇದರಂತೆ ಬಿಡಿಎ ಆಯುಕ್ತರಾಗಿ ಅವರು ಶನಿವಾರ ಅಧಿಕಾರ ಸ್ವೀಕಾರ ಮಾಡಿದರು.
Read More »ಶಿಕಾರಿಪುರ: ಕಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶ!!
ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
Read More »ಜೀವನದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆಗೆ ಶರಣಾದ ಸೋದರರು!!
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ.ಮದ್ಯದ ಅಮಲಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಇವರಿಬ್ಬರನ್ನು ಕೂಡಲೇ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »ತಾವರೆಗೇರ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ!
ಹಳೆ ದ್ವೇಷ ಹಿನ್ನೆಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಘಟನೆ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ನಡೆದಿದೆ.ಚೆನ್ನಪ್ಪ ಹರಿಜನ್ ಅವರನ್ನು ಮಚ್ಚಿನಿಂದ ಕೊಲೆ ಮಾಡಿದ್ದು, ಈ ಘಟನೆಯ ಪರಿಣಾಮ ಪಟ್ಟಣದ ಜನರಲ್ಲಿ ಆತಂಕ ಮೂಡುವಂತಾಗಿದೆ.ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Read More »ರಷ್ಯಾದಲ್ಲಿ ಸೇತುವೆ ಕುಸಿದು ಹಳಿ ತಪ್ಪಿದ ರೈಲು: 7 ಮಂದಿ ಸಾವು!!
ರಷ್ಯಾದ ಫೆಡರಲ್ ರಸ್ತೆ ಸಾರಿಗೆ ಸಂಸ್ಥೆ ರೊಸಾವ್ಟೊಡೋರ್, ಕುಸಿದ ಸೇತುವೆಯು ಈ ಸಮಯದಲ್ಲಿ ರೈಲು ಹಾದುಹೋಗುತ್ತಿದ್ದ ರೈಲ್ವೆ ಹಳಿಗಳ ಮೇಲೆ ಹಾದುಹೋಗಿದೆ ಎಂದು ಹೇಳಿದೆ. ಸಾರಿಗೆ ಕಾರ್ಯಾಚರಣೆಯಲ್ಲಿ ಕಾನೂನುಬಾಹಿರ ಹಸ್ತಕ್ಷೇಪದ ಪರಿಣಾಮವಾಗಿ ಸೇತುವೆ ಕುಸಿದಿದೆ ಎಂದು ಮಾಸ್ಕೋ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬ್ರಿಯಾನ್ಸ್ಕ್ ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಬೊಗೊಮಾಜ್ ಹೇಳಿದ್ದಾರೆ. ಮೃತಪಟ್ಟವರಲ್ಲಿ ಲೋಕೋವೋಟಿವ್ ಚಾಲಕರು ಸೇರಿದ್ದಾರೆ …
Read More »ಥೈಲ್ಯಾಂಡ್ನ ಓಪ್ಲಾ ಸುಚಾತಾ ಚುಂಗಸಿರಿಗೆ 2025ರ ವಿಶ್ವ ಸುಂದರಿ ಕಿರೀಟ…
ವಿಶ್ವ ಸುಂದರಿ 2025 ಗ್ರ್ಯಾಂಡ್ ಫಿನಾಲೆ ಶನಿವಾರ ಸಂಜೆ ಹೈದರಾಬಾದ್ನಲ್ಲಿರುವ ಹೈಟೆಕ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ಅದ್ಧೂರಿಯಾಗಿ ನಡೆದಿದ್ದು, ಥೈಲ್ಯಾಂಡ್ನ ಓಪಲ್ ಸುಚಾತಾ ಚುವಾಂಗ್ಸ್ರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ಅದ್ಧೂರಿಯಾಗಿ ನಡೆದ ಸಮಾರಂಭದಲ್ಲಿ ಹಾಲಿ ವಿಶ್ವ ಸುಂದರಿ ಕ್ರಿಸ್ಟಿನಾ ಪಿಸ್ಟೋ ಅವರು ಓಪ್ಲಾ ಸುಚಾತಾ ಚುಂಗಸಿರಿ ಅವರಿಗೆ ಕಿರೀಟ ಧಾರಣೆ ಮಾಡಿದರು.ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ.ಈ …
Read More »ಸೊರಬ: ವಿದ್ಯುತ್ ಸ್ಪರ್ಶಿಸಿ ನವವಿವಾಹಿತ ಸಾವು!!
ಗ್ರಾಮದ ದೇವರಾಜ ಮೃತ ವ್ಯಕ್ತಿ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶಸಿ ಅಸ್ವಸ್ಥರಾಗಿದ್ದರು.ಸ್ಥಳೀಯರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ದೇವರಾಜ್ ಮೃತಪಟ್ಟಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





