Breaking News

BigTv News

ಹುಣಸಗಿ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಾವನಿಂದಲೇ ಕೊಡಲಿಯಿಂದ ಕೊಚ್ಚಿ ಅಳಿಯನ ಕೊಲೆ!

ಮಾವನಿಂದಲೇ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ನಡೆದ ಘಟನೆ ಹುಣಸಗಿ ತಾಲೂಕಿನ ಶಖಾಪುರ ಎಸ್.ಕೆ.ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಆರೋಪಿ ಮಾನಪ್ಪ ಹಳ್ಳೆಪ್ಪ ವಡಗೇರಿ ಅವರನ್ನು ಪೊಲೀಸ್‌ರು ವಶಕ್ಕೆ ತೆಗೆದುಕೊಂಡು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ.ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್‌ಶಂಕರ್, ಡಿವೈಎಸ್ಪಿ ಜಾವೀದ್ ಇನಾಮದಾರ್, ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್, ಪಿಎಸ್‌ಐ ಅಮೋಜ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರಿನನ್ವಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಕ್ಷ್ಮಣ್ಣ …

Read More »

ನೆಲಮಂಗಲ: ಟ್ಯಾಂಕರ್-ಬೈಕ್ ನಡುವೆ ಭೀಕರ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾಕಳಿಯ ಎಪಿಎಂಸಿ ರಸ್ತೆ ತಿರುವಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು, ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸಂಚಾರವನ್ನು ಸರಾಗಗೊಳಿಸಲು ಕ್ರಮ ಕೈಗೊಂಡರು. ಘಟನೆಯ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹುಬ್ಬಳ್ಳಿ : ಜಾತಿಗಣತಿಯಲ್ಲಿ ತಾರತಮ್ಯ, ಜಾತಿ ಗಣತಿಗೆ ಹೆಚ್ಚಿನ ಕಾಲಾವಕಾಶ ನೀಡಲು ಪಾಂಡುರಂಗ ಪಮ್ಮಾರ ಆಗ್ರಹ…

ಹುಬ್ಬಳ್ಳಿ ತಾಂಡಾಗಳಲ್ಲಿ ನಡೆಯುತ್ತಿರುವ ಪರಿಶಿಷ್ಠ ಜಾತಿಯ ಒಳಮೀಸಲಾತಿ ಸಮೀಕ್ಷೆ ಹಾಗು ಜಾತಿಗಣತಿಯಲ್ಲಿ ನಡೆದಿರುವ ತಾರತಮ್ಯ ದೊರಣೇಯನ್ನೂ ಹಾಗು ಗೊಂದಲಗಳನ್ನು ಬಗೆಹರಿಸುವ ಕುರಿತು ಮತ್ತು ಜಾತಿ ಗಣತಿಗೆ ಇನ್ನೂ ಹೆಚ್ಚಿನ ಕಾಲಾವಕಾಶ ನೀಡುವ ಕುರಿತು.ನ್ಯಾಯಮೂರ್ತಿಗಳು ನಾಗಮೋಹನದಾಸ ಇವರ ವರದಿ ಆದರಿಸಿ ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಉಪವರ್ಗೀಕರಣ (ಒಳಮಿಸಲಾತಿ) ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯಾಧ್ಯಂತ ಪರಿಶಿಷ್ಟ ಜಾತಿಯಲ್ಲಿರುವ ಕುಟುಂಬಗಳ ಜಾತಿ ಜನಗಣತಿ ಹಾಗು ಸದರಿ ಜಾತಿಯ ಕುಟುಂಬಗಳು ಈವರೆಗೆ ಮೀಸಲಾತಿಯಡಿಯಲ್ಲಿ …

Read More »

ಉಡುಪಿ :ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..!

ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನ.ಹೌದು, ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಸ್ಟಮ್ಸ್ ವತಿಯಿಂದ ಜಂಟಿಯಾಗಿ …

Read More »

ಮಂಗಳೂರು :ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ, ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ!

ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು.

Read More »

ದಾವಣಗೆರೆ :ಬ್ಯಾಂಕಲ್ಲಿ ಚಿನ್ನ ಕದ್ದು ಸಿಕ್ಕಿಬಿದ್ದ ಅಧಿಕಾರಿ!

ಕೆಲಸ ಮಾಡುತ್ತಿದ್ದ ಬ್ಯಾಂಕಿನ ಚಿನ್ನಾಭರಣವನ್ನು ಕದ್ದು ಬೇರೆಡೆ ಅಡವಿಟ್ಟು ₹ 2 ಕೋಟಿಗೂ ಅಧಿಕ ಸಾಲ ಪಡೆದು ‘ಲಕ್ಕಿ ಭಾಸ್ಕರ’ ಸಿನಿಮಾ ನಾಯಕನಂತೆ ದಿಢೀರ್‌ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್‌ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.ನಕಲಿ ಚಿನ್ನವನ್ನು ಅಡವಿಟ್ಟುಕೊಂಡು ತಾನೇ ಸಾಲ ಪಡೆದಿದ್ದ ಸಂಗತಿ ತನಿಖೆಯ ವೇಳೆ ಪತ್ತೆಯಾಗಿದೆ.’ಸ್ನೇಹಿತರು ಹಾಗೂ ಸಂಬಂಧಿಕರ ಹೆಸರಿನಲ್ಲಿ ಹಂತ-ಹಂತವಾಗಿ ನಕಲಿ ಚಿನ್ನಾಭರಣಗಳನ್ನು ತನ್ನದೇ ಬ್ಯಾಂಕಿನಲ್ಲಿ ಅಡವಿಟ್ಟುಕೊಂಡಿದ್ದ. ಚಿನ್ನಾರಭರಣ ಪರಿಶೀಲನೆ, ದಾಖಲೆಗಳ ಸೃಷ್ಟಿಯ ಕೆಲಸವನ್ನು ತಾನೇ ನಿರ್ವಹಿಸಿದ್ದ. …

Read More »

ಲಕ್ನೋ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ, ಇಬ್ಬರು ಮಕ್ಕಳು ಸೇರಿದಂತೆ ಐವರು ಸಜೀವ ದಹನ.!

ಚಲಿಸುತ್ತಿದ್ದ ಬಸ್‌ನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.ಬೆಂಕಿಯ ಸುದ್ದಿ ತಿಳಿದ ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ …

Read More »

ಮೆಕ್ಸಿಕೋ : ಭೀಕರ ರಸ್ತೆ ಅಪಘಾತ ; 21 ಮಂದಿ ಸಾವು !

ಒಕ್ಸಾಕಾ ಮತ್ತು ಪ್ಯೂಬ್ಲಾ ರಾಜ್ಯಗಳನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ಭೀಕರ ಮೂರು ವಾಹನಗಳ ಅಪಘಾತದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಪಘಾತದಲ್ಲಿ ಟ್ಯಾಂಕರ್ ಟ್ರಕ್, ಬಸ್ ಮತ್ತು ವ್ಯಾನ್ ಸೇರಿವೆ. ಮೆಕ್ಸಿಕನ್ ಪತ್ರಿಕೆ ‘ಲಾ ಜೋರ್ನಾಡ’ ವರದಿ ಮಾಡಿದಂತೆ, ಸಿಮೆಂಟ್ ಟ್ರಕ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಎದುರಿನ ಲೇನ್‌ಗೆ ನುಗ್ಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ನಂತರ, ಅದು ಸಾರಿಗೆ ವ್ಯಾನ್‌ಗೆ ನೇರವಾಗಿ …

Read More »

ಪುಲ್ವಾಮಾ: ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಸಿಕ್ಕಿಬಿದ್ದ ಮೂರು ಉಗ್ರರು!!

ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡರಿಂದ ಮೂರು ಜನ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.ಕಳೆದ 48 ಗಂಟೆಗಳ ಒಳಗೆ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದ್ದು, ಈ ಹಿಂದೆ ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು.ಇದಕ್ಕೆ ಭದ್ರತಾ ಪಡೆಗಳು ಕೂಡ ಪ್ರತ್ಯುತ್ತರ ನೀಡುತ್ತಿದ್ದಾರೆ …

Read More »

ಮದ್ದೂರು :ವ್ಯಕ್ತಿ ನಾಪತ್ತೆ ದೂರು ದಾಖಲು!

ಭೀಮನಕೆರೆ ಗ್ರಾಮದ ಕೆಂಪಣ್ಣ ನಾಪತ್ತೆಯಾಗಿರುವುದಾಗಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಕಳೆದ ಫೆಬ್ರವರಿ 2ರಂದು ಹೋಗಿದ್ದ ಕೆಂಪಣ್ಣ ಅಂದಿನಿಂದ ನಾಪತ್ತೆಯಾಗಿದ್ದಾರೆ ದೂರು ನೀಡಲಾಗಿದೆ. 47 ವರ್ಷದ ಕೆಂಪಣ್ಣ 5.4 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಮನೆಯಿಂದ ಹೊರಡುವಾಗ ನೀಲಿ ಮಿಶ್ರಿತ ಬಣ್ಣದ ಲುಂಗಿ ಮತ್ತು ಶರ್ಟು ಧರಿಸಿದ್ದಾನೆ. ಈತನ ಬಗ್ಗೆ ಮಾಹಿತಿ ಉಳ್ಳವರು ಮದ್ದೂರು ಪೊಲೀಸರು …

Read More »