Breaking News

BigTv News

ಬೆಂಗಳೂರು: ಬಸ್‌ ಪಲ್ಟಿ, 9 ಮಂದಿಗೆ ಗಾಯ!!

ಕಾರ್ಮಿಕರನ್ನು ಊಟಕ್ಕೆ ಕರೆದೊಯ್ಯುತ್ತಿದ್ದ ಬಸ್‌ ಬೇಗೂರು ಜಂಕ್ಷನ್‌ ಬಳಿ ಪಲ್ಟಿಯಾಗಿ 9 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಒಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ರಸ್ತೆ ವಿಭಜಕಕ್ಕೆ ಬಸ್‌ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕ್ರೇನ್‌ ತರಿಸಿ ಬಸ್‌ ಅನ್ನು ಮೇಲಕ್ಕೆ ಎತ್ತಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಗದಗ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಬೈಕ್‌ ಸವಾರ!

ಗದಗ ಜಿಲ್ಲೆಯಲ್ಲೂ ಸಹ ಮಳೆ ಆರ್ಭಟ ಜೋರಾಗಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿದ್ದಾರೆ. ಗದಗ ತಾಲೂಕಿನ ಬೆನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 39 ವರ್ಷದ ಶರಣಪ್ಪ ಹಡಗಲಿ ಎಂಬುವವರು ಬೈಕ್‌ನಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ನೀರು ಪಾಲಾಗಿದ್ದಾರೆ.ಬೆನಕೊಪ್ಪ ಗ್ರಾಮದಲ್ಲೇ ಇದ್ದ ತನ್ನ ಪತ್ನಿಯ ಮನೆಗೆ ತೆರಳುತ್ತಿದ್ದ ಶರಣಪ್ಪ ಹಡಗಲಿ ನೀರಿನಿಲ್ಲಿ ಕೊಚ್ಚಿ ಹೋದ ಬಳಿಕ ಸ್ಥಳಕ್ಕಾಗಮಿಸಿದ ಶೋಧ ಆರಂಭಿಸಿದ್ದರು. ಗದಗ ಗ್ರಾಮಾಂತರ ಠಾಣೆಯಲ್ಲಿ …

Read More »

ಬೆಳಗಾವಿ:ಮಳೆ ಅಬ್ಬರಕ್ಕೆ ಚರಂಡಿಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ!!

ಅಂಬೇಡ್ಕರ್‌ ನಗರದ ನಿವಾಸಿ ಕಾಟೆಪ್ಪ ದುರಗಪ್ಪ ಶಿರಹಟ್ಟಿ (52) ಅವರು ಮಂಗಳವಾರ ಸಂಜೆ ಚರಂಡಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.ಧಾರಾಕಾರ ಮಳೆಯಿಂದಾಗಿ ಬೃಹತ್ ಚರಂಡಿಯಲ್ಲಿ ನೀರು ಹರಿಯುತ್ತಿತ್ತು. ಕಾಟೆ‍ಪ್ಪ ಅವರು ಚರಂಡಿ ಮೇಲೆ ನಡೆದುಕೊಂಡು ಹೊರಟಾಗ ಆಯತಪ್ಪಿ ಬಿದ್ದರು.ಹತ್ತಿರದಲ್ಲಿದ್ದವರು ಅವರನ್ನು ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಲವೇ ನಿಮಿಷಗಳಲ್ಲಿ ಕಾಟೆ‍ಪ್ಪ ದೂರ ತೇಲಿಕೊಂಡು ಹೋದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರು. ಮಳೆಯ ಕಾರಣ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, …

Read More »

ಹಾನಗಲ್ : ಸಿಡಿಲು ಬಡಿದು ಮಹಿಳೆ ಸಾವು!!

ಕೊಂಡೋಜಿ ಗ್ರಾಮದ ಮಾವಿನ ತೋಟದಲ್ಲಿ ಕೆಲಸಕ್ಕಿದ್ದ ಗದಗ ಜಿಲ್ಲೆಯ ಬಸಾಪುರ ಗ್ರಾಮದ ಮರಿಯವ್ವ ನಾಯ್ಕರ (60) ಸೋಮವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೋಮವಾರ ಸಂಜೆ ತಾಲ್ಲೂಕಿನ ಅಲ್ಲಲ್ಲಿ ಗಾಳಿ, ಗುಡುಗು ಸಮೇತ ಬಿರುಸಿನ ಮಳೆಯಾಗಿತ್ತು. ಮಂಗಳವಾರ ಮಧ್ಯಾಹ್ನ ಹಾನಗಲ್ ಪಟ್ಟಣದಲ್ಲಿ ಉತ್ತಮ ಮಳೆಯಾಗಿದೆ. ಒಂದು ತಾಸು ಸುರಿದ ಮಳೆಗೆ ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿದವು.

Read More »

ಹಾನಗಲ್: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಸಾವು!!

ತಾಲ್ಲೂಕಿನ ಚಿಕ್ಕಾಂಶಿ ಗ್ರಾಮದ ಕೆರೆಯಲ್ಲಿ ಮುಳುಗಿ ಗ್ರಾಮದ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಬಸವರಾಜ ಬಡಕಣ್ಣನವರ (38) ಮತ್ತು ಮಾಲತೇಶ ಕುರುಬರ (19) ಮೃತಪಟ್ಟವರು. ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮೃತ ದೇಹಗಳ ಶೋಧ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಮಾಲತೇಶ ಕುರುಬರ ಮೃತ ದೇಹ ಮಾತ್ರ ಸಿಕ್ಕಿದೆ. ಸಂಜೆಯ ತನಕ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಂದು ಮೃತ ದೇಹದ …

Read More »

ಬೆಂಗಳೂರು: ಭೀಕರ ರಸ್ತೆ ಅಪಘಾತ, ಟೆಂಪೋ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.!

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸದ್ದು, ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹೊಸಕೋಟೆಯ ಚಿಕ್ಕಹುಲ್ಲೂಅರಿನಲ್ಲಿ ಟೆಂಪೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ನಂಜನಗೂಡು: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಲಾರಿ; ಚಾಲಕ ಸ್ಥಳದಲ್ಲೇ ಸಾವು, ಆರು ಮಂದಿಗೆ ಗಂಭೀರ ಗಾಯ!

ಮೈಸೂರಿನಿಂದ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತಿದ್ದ ಕಾರಿನ ಮೇಲೆ ಟ್ಯಾಂಕರ್ ಲಾರಿ ಉರುಳಿ ಬಿದ್ದು ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.ಮೃತಪಟ್ಟಿರುವ ಕಾರಿನ ಚಾಲಕನ ಮೃತದೇಹವನ್ನು ನಂಜನಗೂಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ನಂಜನಗೂಡಿನ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಜು, ಮಾದೇಶ್ …

Read More »

ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್!

ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ ನಾಲ್ವರು ಉಗ್ರರ ಪೈಕಿ ಮೂವರನ್ನು ಭಾರತೀಯ ಸೇನೆ ಕೊಂದು ಹಾಕಿದೆ. ಇದನ್ನು ಸ್ವತಃ ಭಾರತೀಯ ಸೇನೆ ಖಚಿತಪಡಿಸಿದೆ.ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಉಗ್ರರನ್ನು ಭಾರತೀಯ ಸೇನೆ ಹುಡುಕಿ ನುಗ್ಗಿ ಕೊಂದಿದೆ.ಇಬ್ಬರ ಹೆಸರುಗಳನ್ನು ಸೇನೆ ಬಹಿರಂಗಪಡಿಸಿದೆ.ಹತರಾದ ಉಗ್ರರ ಪೈಕಿ ಶಾಹಿದ್, ಅದ್ನಾನ್ ಶಫಿ ಎಂಬ ಇಬ್ಬರು ಉಗ್ರರ ಹೆಸರು ಬಹಿರಂಗವಾಗಿದೆ. ಇನ್ನೊಬ್ಬಾತನ ವಿವರ ಕಲೆ ಹಾಕಲಾಗುತ್ತಿದೆ. ಇದೀಗ ನಾಲ್ಕನೇ ಉಗ್ರನ ಮಾಹಿತಿಯನ್ನು ಸೇನೆ ಕಲೆ ಹಾಕಿದ್ದು …

Read More »

9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ!!

ಹುಬ್ಬಳ್ಳಿ  ಹದಿಮೂರು ವರ್ಷದ ಅಪ್ರಾಪ್ತ ಬಾಲಕ , ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ ಹದಿನೈದು ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.. ಸಂಜೆ ಏಳು ಗಂಟೆ ಸಮಯದಲ್ಲಿ ಮನೆಯಿಂದ ಚಾಕುತಂದು, ಚೇತನ್ ನ ಹೊಟ್ಟೆಯ ಎಡಬಾಗದಲ್ಲಿ ಇರದಿದ್ದಾನೆ. ಚಾಕು ಇರಿಯುತ್ತಿದ್ದಂತೆ ಚೇತನ್ ಕುಸಿದು ಬಿದ್ದಿದ್ದಾನೆ. ಮಕ್ಕಳೆಲ್ಲರು ಚೀರುತ್ತಿದ್ದಂತೆ, ಕೊಲೆ ಮಾಡಿದ ಬಾಲಕನ ತಾಯಿ ಓಡಿ ಬಂದು, ಚೇತನ ನೆರವಿಗೆ ಬಂದಿದ್ದಾರೆ. ಕೂಡಲೇ ಚೇತನ್ ನನ್ನು, ಕೊಲೆ …

Read More »

ಕೊಡಗು: ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮ!

ಕೊಡಗಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಯೋಧ ಹುತಾತ್ಮರಾಗಿದ್ದಾರೆ. ರಜೆ ನಿಮಿತ್ತ ಮನೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ವಿವಾಹ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುವಾಗ ಯೋಧ ಬಿಪಿನ್ ಭೀಮಯ್ಯ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡಿದ್ದ ಯೋಧ ಬಿಪಿನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »