ಪಹಾಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ಪೆಟ್ಟಿನ ಮೇಲೆ ಪೆಟ್ಟು ಕೊಡುತ್ತಿರುವ ಬೆನ್ನಲ್ಲೇ, ಮ್ಟೆ ವಾಂಟೆಂಡ್ ಪಾತಾಕಿ ದಾವೂದ್ ಇಬ್ರಾಹಿಂ ತನ್ನ ಸ್ವಸ್ಥಾನದಿಂದ ಸುರಕ್ಷಿತ ಸ್ಥಳಕ್ಕೆ ಕಾಲ್ಕಿತ್ತಿದ್ದಾನೆ.ಸದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಭೀತಿ ಉಂಟಾಗಿದ್ದು, ಭಾರತದ ಮ್ಟೆ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಿಂದ ಪಲಾಯನ ಮಾಡಿದ್ದಾನೆ. ಅನೇಕ ವರ್ಷಗಳಿಂದ ಪಾಕಿಸ್ತಾನದ ಕರಾಚಿ ನಗರದಲ್ಲಿ ದಾವೂದ್ ಇಬ್ರಾಹಿಂ, ಅವನ ವಿಶೇಷ …
Read More »ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನದಿಯಲ್ಲಿ ಶವವಾಗಿ ಪತ್ತೆ!
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಮಂಡ್ಯದ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ …
Read More »ಬೈಂದುರು : ಅಕ್ರಮ ಮರಳು ಸಾಗಾಟ ಆರೋಪ, ಟಿಪ್ಪರ್ ವಶ!!
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೈಂದೂರು ಪೊಲೀಸರು ತೂದಳ್ಳಿ ಎಂಬಲ್ಲಿ ಮೇ 9ರಂದು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳಾದ ಮಹೇಶ ಹಾಗೂ ಯತಿನ್ ಎಂಬವರು ಇತರರೊಂದಿಗೆ ಸೇರಿ ಅಕ್ರಮವಾಗಿ ಭಟ್ಕಳ ಶಿರಾಲಿಯಿಂದ ಮರಳನ್ನು ಕಳವು ಮಾಡಿ ಬೈಂದೂರು ಕಡೆಗೆ ಸಾಗಿಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಯಂತೆ ಪೊಲೀಸರು ದಾಳಿ ನಡೆಸಿ ಎರಡೂವರೆ ಟನ್ ಮರಳು ಸಹಿತಿ ಟಿಪ್ಪರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹುಟ್ಟೂರು ತಲುಪಿದ ಮುರಳಿ ನಾಯಕ್ ಪಾರ್ಥಿವ ಶರೀರ: ಹುತಾತ್ಮ ಯೋಧನಿಗೆ ಅಂತಿಮ ನಮನ
ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ.ಆಂಧ್ರ ಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ್ಲ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿರವರ ಏಕೈಕ ಪುತ್ರ ಯೋಧ ಮುರಳಿ ನಾಯಕ್ ವೀರ ಮರಣ ಹೊಂದಿದ್ದಾರೆ.ಅಂತಿಮ ನಮನ ಸಲ್ಲಿಸಿದ ಬಳಿಕ ರಸ್ತೆ ಮೂಲಕ ಸೇನಾ ವಾಹನದಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ಸದ್ಯಕ್ಕೆ ಮುರಳಿ ನಾಯಕ್ ಹುಟ್ಟೂರು ಕಲ್ಲಿತಾಂಡಾ ಗ್ರಾಮದಲ್ಲಿ ನೀರವ ಮೌನ …
Read More »ಸಕಲೇಶಪುರ: ವಿದ್ಯುತ್ ಆಘಾತ, ಕಾಡಾನೆ ಸಾವು!!
ವಿದ್ಯುತ್ ಕಂಬದಿಂದ ಎರಡು ಅಡಿ ದೂರದಲ್ಲಿ ಆನೆ ಮೃತಪಟ್ಟಿದೆ. ರಸ್ತೆಯಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಆನೆ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.ಆದರೆ, ಮರದಲ್ಲಿ ತುಂಡಾಗಿದ್ದ ವಿದ್ಯುತ್ ತಂತಿ, ಆನೆಯ ಸೊಂಡಿಲಿಗೆ ತಾಗಿದ್ದು, ಇದರಿಂದ ವಿದ್ಯುತ್ ಆಘಾತಕ್ಕೆ ಒಳಗಾಗಿ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.18-20 ವರ್ಷದ ಆನೆ ಇದಾಗಿದ್ದು, ಎರಡೂ ದಂತಗಳಿವೆ. ಆನೆ ಸಾವಿನ ಸುದ್ದಿ ಕೇಳಿ ಮಹಿಳೆಯರು, ಮಕ್ಕಳು ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿದರು.ಸ್ಥಳಕ್ಕೆ ಎಸಿಎಫ್ ಮಧುಸೂದನ್, …
Read More »ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಳವಳ್ಳಿಯ ಜಾವೀದ್ ಸೆರೆ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್ಗೆ ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು …
Read More »ವಿಜಯಪುರ :ಆಟವಾಡುತ್ತಿದ್ದ ವೇಳೆ ತೆರೆದ ಬಾವಿಗೆ ಬಿದ್ದು 3 ವರ್ಷದ ಮಗು ಸಾವು!!
ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮೂರು ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಮೃತಪಟ್ಟ ಮಗು.ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ.ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ವಿಟ್ಲ : ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ ಆರೋಪ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿರುದ್ಧ ಪ್ರಕರಣ ದಾಖಲು!
ವ್ಯಕ್ತಿಯೊರ್ವ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ.ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ.ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದ ಹಿನ್ನಲೆ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Read More »ಸಿದ್ದಾಪುರ: ಕಾಡುಕೋಣ ಭೇಟೆ, ಇಬ್ಬರ ಬಂಧನ!
ಕುಶಾಲನಗರ ವಲಯ ಅರಣ್ಯ ವ್ಯಾಪ್ತಿ ವರೆಗುಂದ ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳನ್ನು ಗುಂಡಿಟ್ಟು ಕೊಂದ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಅಸ್ಕರ್ (26) ಹಾಗೂ ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿ ವಿನೋದ್ ಕುಮಾರ್ (34)ಎಂಬುವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಕೂಡುಗದ್ದೆ ನಿವಾಸಿ ಸೂರಿ ಸುಬ್ರಮಣ್ಯ ಸೇರಿದಂತೆ ನಾಲ್ಕು ಮಂದಿ ಪರಾರಿಯಾಗಿದ್ದು, ಅಧಿಕಾರಿಗಳು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಕಾಡುಕೋಣ …
Read More »ಯೋಧನ ಕೈ ಹಿಡಿದ ಸಂಗಾತಿ ನನಗೆ ದೇಶ ಸೇವೆ ಮುಖ್ಯ. ನನ್ನ ಕುಂಕುಮವನ್ನು ಗಡಿಗೆ ಕಳಿಸುತ್ತಿರುವುದು ನನಗೆ ಹೆಮ್ಮೆ ಇದೆ ಎಂದು ಬೀಳ್ಕೊಡುಗೆ…!
ಚಿಕ್ಕೋಡಿ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಲ್ಲಿ ಮದುವೆಯಾದ ಮೂರೇ ದಿನಕ್ಕೆ ಸೈನಿಕರೊಬ್ಬರು ದೇಶ ಸೇವೆಗೆ ವಾಪಸ್ ತೆರಳಿದ್ದಾರೆ. ಹೌದು, ಮಹಾರಾಷ್ಟ್ರದ ಜಳಗಾಂವ್ನ ಪಾಚೋರಾದ ಯೋಧ ಮನೋಜ್ ಪಾಟೀಲ್ ಮದುವೆ ಇದೇ ಮೇಲೆ 5ರಂದು ಅದ್ದೂರಿಯಾಗಿ ನೆರವೇರಿತು. ಇತ್ತ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದ್ರೆ, ಅತ್ತ ಭಾರತ-ಪಾಕ್ ಗಡಿಯಲ್ಲಿ ಆಕ್ರಮಣಕಾರಿ ದಾಳಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಕುಮಾರ್ಗೆ ತುರ್ತಾಗಿ ಸೇನೆಯಿಂದ ಕರೆ ಬಂದಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





