Breaking News

BigTv News

ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್​​ ರೈಡ್​ ಮಾಡುತ್ತಿದ್ದ ಬೈಕ್​ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.ಮೃತರನ್ನು ಗುಂಡಮಗೆರೆ ಗ್ರಾಮದ ವೆಂಕಟೇಶ್ (45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳು. ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಒಂದೇ ಬೈಕಿನಲ್ಲಿ ಮೂವರು ಗುಂಡಮಗೆರೆ ಕ್ರಾಸ್​ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯತಪ್ಪಿ …

Read More »

ಶಿವಮೊಗ್ಗ: ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ!!

ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೇಮಣ್ಣ(68) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಅವರನ್ನು ಕೊಲೆ ಮಾಡಲಾಗಿದೆ.

Read More »

ಉತ್ತರಪ್ರದೇಶ : ಪಾಕಿಸ್ತಾನ್‌ ಮುರ್ದಾಬಾದ್‌ ಎಂದಿದ್ದಕ್ಕೆ ಬಾಲಕನಿಗೆ ಚೂರಿ ಇರಿತ

ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಪಾಕ್‌ ಉಗ್ರರ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಇಲ್ಲೊಂದು ಹಳ್ಳಿಯಲ್ಲಿ ಭಾರತದ ಸಾಧನೆಯನ್ನು ಸಂಭ್ರಮಿಸಿದ್ದಕ್ಕೆ ಬಾಲಕನಿಗೆ ಚೂರಿ ಇರಿಯಲಾಗಿದೆ.14 ವರ್ಷದ ಸುರ್ಜಿತ್ ಎಂಬ ಬಾಲಕ ಹಿಂದುಸ್ತಾನ್ ಜಿಂದಾಬಾದ್ ಪಾಕಿಸ್ತಾನ್‌ ಮುರ್ದಾಬಾದ್ ಇಂದು ಘೋಷಣೆ ಕೂಗಲಾರಂಭಿಸಿದ್ದಾನೆ. ಹೀಗೆ ಕೂಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಮೋಹಿದ್ ಖಾನ್ ಮತ್ತು ಆತನ ಸಹಚರ ವಾಸಿಮ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು …

Read More »

ಕಲಬುರಗಿ :ಜೈಲಿಂದ ಪರಾರಿಯಾದ ಅಪರಾಧಿಗೆ ಜೈಲು ಶಿಕ್ಷೆ!

ಜಿಲ್ಲಾ ಕೇಂದ್ರ ಕಾರಾಗೃಹದ ಹೊರ ಭಾಗದ ತೋಟದಿಂದ ಪರಾರಿಯಾಗಿದ್ದ ಅಪರಾಧಿಗೆ 2ನೇ ಜೆಎಂಎಫ್‌ಸಿ ನ್ಯಾಯಾಲಯವು ಒಂದು ವರ್ಷ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿದ್ದ ರಮೇಶ ಶಿಕ್ಷೆಗೆ ಒಳಗಾದ ಅಪರಾಧಿ. 2021ರ ಜನವರಿ 4ರಂದು ಜೈಲಿನ ಹೊರಗಿನ ತೋಟದಲ್ಲಿ ತೊಗರಿ ಬಡಿಯಲು ರಮೇಶನನ್ನು ಕರೆದೊಯ್ಯಲಾಗಿತ್ತು.ರಮೇಶ್, ಅಲ್ಲಿಂದ ಓಡಿ ಹೋಗಿ ಪರಾರಿಯಾಗಿದ್ದ.ಈ ಬಗ್ಗೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಎಸ್‌ಐ ಥಾವರು ಚವ್ಹಾಣ್ ಅವರು ತನಿಖೆ …

Read More »

ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು!!

ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಸಹ ಪಾಕಿಸ್ತಾನ ಗಡಿಯಲ್ಲಿ ಮತ್ತೆ ಮತ್ತೆ ಬಾಲ ಬಿತ್ತುತ್ತಿದೆ. ಇದೀಗ ಕರ್ನಾಟಕದಲ್ಲಿ ಕೂಡ ಹಲವು ಪಾಕಿಸ್ತಾನಿ ಪ್ರೇಮಿಗಳು ಬಾಲ ಬಿಚ್ಚಿದ್ದು, ವಿಜಯಪುರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಪಾಕಿಸ್ತಾನದ ಪರವಾಗಿ ಪೋಸ್ಟ್ ಮಾಡಿದ್ದು ಆಕೆಯ ವಿರುದ್ಧ ಇದೀಗ ದೇಶದ್ರೋಹದ ಅಡಿ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ …

Read More »

ರದ್ದಾದ ಧರ್ಮಶಾಲಾ IPL ಪಂದ್ಯ: ವಿಮಾನ ನಿಲ್ದಾಣ ಮುಚ್ಚಿದ ಕಾರಣ ಬಿಗಿಭದ್ರತೆಯೊಂದಿಗೆ ವಿಶೇಷ ರೈಲಿನಲ್ಲಿ ಪಂಜಾಬ್, ದೆಹಲಿ ತಂಡಗಳು ಶಿಫ್ಟ್

ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಮತ್ತು ದೆಹಲಿ ತಂಡಗಳ ಐಪಿಎಲ್ ಪಂದ್ಯವನ್ನು ಪಾಕಿಸ್ತಾನ ದಾಳಿ ಕಾರಣಕ್ಕೆ ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಸ್ಟೇಡಿಯಂ ಅನ್ನು ಬ್ಲಾಕ್ ಔಟ್ ಮಾಡಿ, ಕ್ರೀಡಾಂಗಣದಿಂದ ಹೊರಹೋಗುವಂತೆ ಪ್ರೇಕ್ಷಕರಿಗೆ ಆಯೋಜಕರು ಸೂಚನೆ ನೀಡಿದ್ದಾರೆ.ಇನ್ನು ವಿಮಾನ ನಿಲ್ದಾಣ ಬಂದ್ ಮಾಡಿರುವುದರಿಂದ ಆಟಗಾರರು ಮತ್ತು ಅಧಿಕಾರಿಗಳನ್ನು ರಾಷ್ಟ್ರ ರಾಜಧಾನಿಗೆ ಕಳುಹಿಸಲು ಇಂದು ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುವುದು.ಪ್ರಯಾಣದ ಸುತ್ತಲಿನ ಹೆಚ್ಚಿನ ಭದ್ರತಾ ಕ್ರಮಗಳನ್ನು ತಿಳಿಸುವ ಮೂಲಕ ಉತ್ತರ ರೈಲ್ವೆ ಈ ವ್ಯವಸ್ಥೆಯನ್ನು ದೃಢಪಡಿಸಿದೆ. …

Read More »

ಉತ್ತರಖಂಡ : ಹೆಲಿಕಾಪ್ಟರ್ ಪತನ, ಐವರು ಪ್ರವಾಸಿಗರ ಸಾವು!!

ಉತ್ತರಾಖಂಡದ ಉತ್ತರಕಾಶಿಯಲ್ಲಿ ಗುರುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಗಂಗೋತ್ರಿ ಕಡೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಪತನಗೊಂಡಿದೆ. ಈ ಅಪಘಾತದಲ್ಲಿ ಐವರು ಪ್ರವಾಸಿಗರು ಪ್ರಾಣ ಕಳೆದುಕೊಂಡರು.ಹೆಲಿಕಾಪ್ಟರ್‌ನಲ್ಲಿ ಒಟ್ಟು ಏಳು ಜನರಿದ್ದರು. ಅವರಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರು ಗಾಯಗೊಂಡರು. ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸ್ಥಳೀಯರು, ಪೊಲೀಸರು ಮತ್ತು ರಕ್ಷಣಾ ಕಾರ್ಯಕರ್ತರು ತಕ್ಷಣ ಸ್ಥಳಕ್ಕೆ …

Read More »

ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಜಮೀರ್ ಅಹಮದ್ ಖಾನ್

ಪೆಹಲ್ಗಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ …

Read More »

ದೆಹಲಿ :ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಪ್ರಧಾನಿ ಮೋದಿ ಸೂಚನೆ!!

ಆಪರೇಷನ್‌ ಸಿಂದೂರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ‘ಸದಾ ಎಚ್ಚರದಿಂದಿದ್ದು, ಸ್ಪಷ್ಟ ಸಂವಹನವನ್ನು ಮುಂದುವರೆಸಿ’ ಎಂದು ಸೂಚಿಸಿದ್ದಾರೆ.ದೇಶವು ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ಈ ಸಮಯದಲ್ಲಿ ಜಾಗರೂಕತೆ, ಸಂಸ್ಥೆಗಳ ನಡುವಿನ ಸಮನ್ವಯ ಮತ್ತು ಸ್ಪಷ್ಟ ಸಂವಹನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ರಾಷ್ಟ್ರೀಯ ಭದ್ರತೆ, ಕಾರ್ಯಾಚರಣೆಯ ಸನ್ನದ್ಧತೆ ಮತ್ತು ನಾಗರಿಕ ಸುರಕ್ಷತೆಗೆ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಪಹಲ್ಗಾಂ ನರಮೇಧಕ್ಕೆ …

Read More »

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ : ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಕವಿಯುತ್ತಿದ್ದಂತೆ, ಇತ್ತ ಕೇಂದ್ರ ಸರ್ಕಾರ ಅಲರ್ಟ್ ಆಗಿ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ಜಲಾಶಯಗಳು, ಅಣೆಕಟ್ಟುಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಸೂಚನೆಯಂತೆ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು …

Read More »