ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈತ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಖಾಸಗಿ ಫಾರ್ಮಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸುದೀಪ್ ಮದ್ಯದ ಅಮಲಿನಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು, ಮನೆಯ ಮುಂದಿನ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುದೀಪ್ ಕುಮಾರ್ (21) ಆತ್ಮಹತ್ಯೆಗೆ ಶರಣಾದವ.
Read More »ಬೆಳಗಾವಿ: ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ, ಒಂದೇ ಕುಟುಂಬದ ಮೂವರು ಸಾವು!!
ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.ಅಲ್ಟೋ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ಸೈನಿಕರಿಂದ ತಪ್ಪಿಸಿಕೊಳ್ಳಲು ಹೋಗಿ ನದಿಗೆ ಜಿಗಿದ ಆರೋಪಿ, ಸಾವು!!
ಪಹಲ್ಗಾಮ್ ದಾಳಿಕೋರರಿಗಾಗಿ ಕಾಶ್ಮೀರ ಕಣಿವೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆ, ಜಂಟಿ ಕಾರ್ಯಾಚರಣೆ ತಂಡವು ಭಯೋತ್ಪಾದಕರಿಗೆ ಆಹಾರ ಮತ್ತು ವಸತಿಗಾಗಿ ಸಹಾಯ ಮಾಡಿದ ಆರೋಪದ ಮೇಲೆ ಇಮ್ತಿಯಾಜ್ ಎಂಬ ಪ್ರಮುಖ ಶಂಕಿತನನ್ನು ಬಂಧಿಸಿದೆ.ಪಹಲ್ಗಾಮ್ ದಾಳಿಕೋರರನ್ನು ಪತ್ತೆಹಚ್ಚುವಲ್ಲಿ ಜಂಟಿ ಪಡೆಗಳಿಗೆ ಸಹಾಯ ಮಾಡಲು ಒಪ್ಪಿಕೊಂಡ ಇಮ್ತಿಯಾಜ್ ಕಾಡಿನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಇಮ್ತಿಯಾಜ್ ನದಿಗೆ ಹಾರಿ ಬಲವಾದ ಪ್ರವಾಹಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ.ಜಂಟಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಮ್ಯಾಗ್ರೆ ತಪ್ಪಿಸಿಕೊಳ್ಳಲು …
Read More »ಧಾರವಾಡ :ಚಿಗರಿ ಮಾರ್ಗದಲ್ಲಿ ಕಾರುಗಳ ಅಪಘಾತ, ಓರ್ವ ಸಾವು, ಮೂವರಿಗೆ ಗಾಯ!!
ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹುಬ್ಬಳ್ಳಿ-ಧಾರವಾಡ ಬಿಆರ್ಟಿಎಸ್ ಕಾರಿಡಾರ್ನ ಪಿಬಿ ರಸ್ತೆಯಲ್ಲಿ ರವಿವಾರ ನಡೆದಿದೆ. ಶಿವಾನಂದ ಹಾಗೂ ಮಂಜುನಾಥ ಹುಬ್ಬಳ್ಳಿಯಿಂದ ಧಾರವಾಡದತ್ತ ಕಾರಿನಲ್ಲಿ ಬಿಆರ್ಟಿಎಸ್ ಕಾರಿಡಾರ್ನಲ್ಲಿ ಪ್ರಯಾಣಿಸುತ್ತಿದ್ದರು. ಧಾರವಾಡದ ಮಾರ್ಡನ್ ಹಾಲ್ ಎದುರು ಬರುತ್ತಿದ್ದಂತೆ ಧಾರವಾಡದಿಂದ ಹುಬ್ಬಳ್ಳಿ ಮಾರ್ಗವಾಗಿ ಗದಗಕ್ಕೆ ಹೊರಟಿದ್ದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶಿವಾನಂದ ಸ್ಥಳದಲ್ಲಿಯೇ ಮೃ*ತಪಟ್ಟಿದ್ದಾರೆ. ಕಾರು …
Read More »ಮೀನು ಹೆಸರಲ್ಲಿ ಅಕ್ರಮ ಸಾಗಾಟ; ಧಾರವಾಡ ಸಮೀಪ ಬರೋಬ್ಬರಿ 1 ಟನ್ ಗೋಮಾಂಸ ವಶ,ಪತ್ತೆ ಹಚ್ಚಿದ ಬಜರಂಗದಳ!
ಶನಿವಾರ ರಾತ್ರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಮೂಲಕ ಗೂಡ್ಸ್ ವಾಹನದಲ್ಲಿ ಈ ಗೋಮಾಂಸ ಸಾಗಿಸಲಾಗುತ್ತಿತ್ತು.ಬೆಳಗಾವಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್ ಗೋಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇಡೀ ವಾಹನದಲ್ಲಿ ಅಕ್ರಮ ಗೋಮಾಂಸ ತುಂಬಿಸಲಾಗಿತ್ತು. ತಪಾಸಣೆ ಸಮಯದಲ್ಲಿ ಗೊತ್ತಾಗದಿರಲಿ ಎಂಬ ಕಾರಣಕ್ಕೆ ಮುಂದಿನ ಒಂದೆರಡು ಸಾಲಿನಲ್ಲಿ ಮೀನುಗಳನ್ನು ಇಡಲಾಗಿತ್ತು. ತಕ್ಷಣವೇ ಈ ಬಗ್ಗೆ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು …
Read More »ಮಧ್ಯಪ್ರದೇಶ : ಪ್ರೀತಿಗಾಗಿ ಇಸ್ಲಾಂ ಧರ್ಮವನ್ನು ತೊರೆದು ಸನಾತನ ಧರ್ಮಕ್ಕೆ ಸೇರಿದ ಪ್ರಿಯಕರ!
ಮಧ್ಯಪ್ರದೇಶದ ಜಬಲ್ಪುರದಲ್ಲಿ, ಒಬ್ಬ ಮುಸ್ಲಿಂ ಯುವಕ ತನ್ನ ಗೆಳತಿಗಾಗಿ ಸನಾತನ ಧರ್ಮಕ್ಕೆ ಸೇರಿದನು. ಅವರು ಇಸ್ಲಾಂ ಧರ್ಮವನ್ನು ತ್ಯಜಿಸಿ ಹಿಂದೂ ಧರ್ಮವನ್ನು ಸ್ವೀಕರಿಸಿದರು. ಅದಾದ ನಂತರ ಅವನು ತನ್ನ ಹಿಂದೂ ಗೆಳತಿಯನ್ನು ಮದುವೆಯಾಗಿದ್ದಾನೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಮೊಹಮ್ಮದ್ ದುಃಖಿತನಾಗಿದ್ದನು. ಇತ್ತೀಚೆಗೆ, ಭಯೋತ್ಪಾದಕ ದಾಳಿಯ ನಂತರ, ಆನ್ ಮೊಹಮ್ಮದ್ ಅವರು ಧರ್ಮವನ್ನು ತ್ಯಜಿಸುವ ನಿರ್ಧಾರದ ಬಗ್ಗೆ ಸೃಷ್ಟಿಗೆ ತಿಳಿಸಿದರು. ಆನ ಮೊಹಮ್ಮದ್ ತನ್ನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲು ಸಿದ್ಧನಿದ್ದಾನೆ …
Read More »ದೆಹಲಿ : ಕುಡಿದ ಮತ್ತಿನಲ್ಲಿ ಗಗನಸಖಿಗೆ ಟಾರ್ಚರ್ ನೀಡಿದ ಕಾಮುಕ ಅರೆಸ್ಟ್!!
ದೆಹಲಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿ ಪುರುಷ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿತ್ತು.ಅವರು ವಿಮಾನವು ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ ಮೇರೆಗೆ ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದಾರೆ.ಅವರನ್ನು ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು ಅಲ್ಲಿ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅವರು ಮದ್ಯ …
Read More »ಮಡಿಕೇರಿ: ಹುಬ್ಬಳ್ಳಿಗೆ ತೆರಳುತ್ತಿದ್ದ ಮಾರುತಿ ಓಮ್ನಿ ಮೇಲೆ ಕಾಡಾನೆ ದಾಳಿ!!
ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಅರಣ್ಯ ಡಿಪೋ ಬಳಿ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿದ್ದುದನ್ನು ಕಂಡ ಷರೀಫ್ ತಮ್ಮ ವಾಹನವನ್ನು ನಿಲ್ಲಿಸಿದರಾದರೂ, ರಸ್ತೆ ದಾಟುತ್ತಿದ್ದ ಕಾಡಾನೆಗಳ ಹಿಂಡಿನಲ್ಲಿದ್ದ ಹೆಣ್ಣಾನೆಯೊಂದು ಇವರಿದ್ದ ವ್ಯಾನ್ ಮೇಲೆ ಎರಗಿದೆ.ಆನೆಯ ಆಕ್ರೋಶಕ್ಕೆ ವ್ಯಾನ್ ನಜ್ಜುಗುಜ್ಜಾಗಿದ್ದು, ಒಳಗಿದ್ದವರ ಪೈಕಿ ಷರೀಫ್ ಗಂಭೀರವಾಗಿ ಗಾಯಗೊಂಡರೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಅವರ ಬಾವನವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆ ನಡೆದ ಸಂದರ್ಭ ಆ ಮಾರ್ಗವಾಗಿ ಕುಶಣಾಲನಗರದಿಂದ …
Read More »ಹೊನ್ನಾವರ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು!!
ತೆಂಗಿನಕಾಯಿ ಕೀಳಲು ಉಮೇಶ ತನ್ನ ಮನೆಯ ಹಿಂದಿರುವ ತೆಂಗಿನ ಮರ ಹತ್ತಿದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಮೂಲೆಗದ್ದೆಯ ಕೂಲಿಕಾರ ಉಮೇಶ ಹನಮಂತ ಗೌಡ(42) ಮೃತರು. ಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬಳ್ಳಾರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನಾಪತ್ತೆ, ಕಣ್ಣೀರಾದ ಪೋಷಕರು…
ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ 3 ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ನಡೆದಿದೆ. ಸುಶಾಂತ್ ವಡ್ಡು ಗ್ರಾಮದ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ. ಮೇ 2ರಂದು ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಷಯದಲ್ಲಿ ಫೇಲ್ ಆಗಿದ್ದ. ಇದರಿಂದ ಮನನೊಂದು ಮನೆ ಬಿಟ್ಟು ಹೋಗಿದ್ದಾನೆ. ಕಳೆದು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಪೋಷಕರು ಹುಡುಕಾಟ ನಡೆಸಿದ್ದಾರೆ. ಪೋಷಕರು ಕಣ್ಣೀರಿಡುತ್ತಿದ್ದು, ಮಗನ ಬಗ್ಗೆ ಯಾವುದೇ ಮಾಹಿತಿ ಸಿಕ್ಕರೂ ನೀಡಿ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





