ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
Read More »ಗೋವಾ: ದೇವಸ್ಥಾನದಲ್ಲಿ ಕಾಲ್ತುಳಿತ, ಏಳು ಜನರ ಸಾವು!!
ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ೭ ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ನಡೆದಿದೆ. ತಕ್ಷಣ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಕಲಿಸಲಾಗಿದೆ. ಪೊಲೀಸರು ಘಟನೆಯನ್ನು ಹತೋಟಿ ತೆಗೆದುಕೊಳ್ಳಲು ಕಾರ್ಯಾಚರಣೆ ನಡೆಸಿದ್ದಾರೆ.
Read More »ಹಾವೇರಿ : ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕನ ಕಾಲು ಕಟ್!
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿದ್ದು, 7 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಈ ಅವಘಡದಲ್ಲಿ ಓರ್ವ ಪ್ರಯಾಣಿಕನ ಕಾಲು ಕಟ್ ಆಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ್ಟಿತ್ತು. ಚಾಲಕನ ನಿದ್ರೆಯ ಮಂಪರಿನಲ್ಲಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನೂ ಗಾಯಾಳುಗಳನ್ನು ರಾಣೇಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ನಲ್ಲಿದ್ದ 23 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read More »ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾ*ಚಾರ ಪ್ರಕರಣ: ಸಂತ್ರಸ್ತೆ ಕೋರ್ಟ್ಗೆ ಹಾಜರು..
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತೆಯು ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಕೂಡ ವಿಚಾರಣೆಗೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ. ಪ್ರಜ್ವಲ್ ರೇವಣ್ಣ ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ …
Read More »ಹಳೇಬೀಡು: ಬಸ್ ಡಿಕ್ಕಿ, ಬೈಕ್ ಸವಾರ ಸಾವು!
ಹಗರೆ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ಗುರುವಾರ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಾಸನದಿಂದ ಹಗರೆ ಮಾರ್ಗವಾಗಿ ಬೇಲೂರಿಗೆ ತೆರಳುತ್ತಿದ್ದ ಬಸ್ ಎದುರಿನಿಂದ ಬಂದ ಬೈಕಿಗೆ ಡಿಕ್ಕಿ ಹೊಡೆದಿದೆ.ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಹಳೇಬೀಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈರೇಗೌಡನ ಕೊಪ್ಪಲು ಗ್ರಾಮದ ಮಂಜುನಾಥ(42) ಮೃತರು. ಮಂಜುನಾಥ ಬೇಲೂರಿನಿಂದ ಹಗರೆ ಕಡೆಗೆ ತೆರಳುತ್ತಿದ್ದರು.
Read More »ಹನೂರು: ಅಪರಿಚಿತ ವಾಹನ ಡಿಕ್ಕಿ, ಜಿಂಕೆ ಸಾವು!
ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಶುಕ್ರವಾರ ಜಿಂಕೆಯೊಂದು ಮೃತಪಟ್ಟಿದೆ. ಹನೂರು ಪಟ್ಟಣದ ಹೊರವಲಯದ ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿ ಜಿಂಕೆ ಗಾಯಗೊಂಡು ನರಳಾಡಿದೆ. ಈ ವಿಷಯವನ್ನು ಪ್ರಯಾಣಿಕರು ಅದೇ ಮಾರ್ಗದಲ್ಲಿದ್ದ ತುರ್ತುವಾಹನ 112 ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಜಿಂಕೆಗೆ ನೀರುಣಿಸಿ ಹಾರೈಕೆ ಮಾಡಿದ್ದಾರೆ. ಅರಣ್ಯ ಇಲಾಖೆಯವರು …
Read More »ಮಧ್ಯಪ್ರದೇಶ:ಮದುವೆಗೆ ಹೊರಟಿದ್ದ ವಾಹನ ಪಲ್ಟಿಯಾಗಿ ನಾಲ್ವರು ಸಾವು, 13 ಮಂದಿಗೆ ಗಾಯ!
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮದುವೆ ತಂಡವನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ನಂತರ, ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಥಳೀಯ ಬಿಜೆಪಿ ಶಾಸಕ ಉಮಾಕಾಂತ್ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿ ರಕ್ಷಣಾ ಪ್ರಯತ್ನಗಳಿಗೆ ಸಹಾಯ ಮಾಡಿದರು. ಘಟನೆಯ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ದುಃಖ …
Read More »ಬಾಗಲಕೋಟ : ಪಲ್ಯ-ಸಾಂಬಾರ್ ಚೆನ್ನಾಗಿಲ್ಲವೆಂದು ಪತ್ನಿಯ ಹತ್ಯೆ!
ಮದುವೆಯಾದ ಬಳಿಕ ಆಗಾಗ್ಗೆ ಸಣ್ಣಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳುತ್ತಿದ್ದ ಗಂಡ ಹೆಂಡತಿಯೊಂದಿಗೆ ಜಗಳ ಮಾಡುತ್ತಿದ್ದನು. ಇನ್ನು ಹೆಂಡತಿ ಮನೆಯಲ್ಲಿ ಚೆನ್ನಾಗಿ ಅಡುಗೆ ಮಾಡುತ್ತಿಲ್ಲ ಎಂಬ ಕಾರಣಕ್ಕೂ ಜಗಳ ಮಾಡುತ್ತಿದ್ದನು. ಇದೀಗ ನಿನ್ನೆ ಹೆಂಡತಿ ಸಾಂಬರ್, ಪಲ್ಯ ಚೆನ್ನಾಗಿ ಮಾಡಿಲ್ಲವೆಂದು ಜಗಳ ಮಾಡಿದ್ದಾನೆ. ಈ ಜಗಳ ಅತಿರೇಕಕ್ಕೆ ತಿರುಗಿದ್ದು, ಪತ್ನಿಯನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಹಿರಿಯರು ಕೇಳಿದಾಗ ಪತ್ನಿ ಸಾಕ್ಷಿತಾ ಸಾಂಬಾರ್ ಪಲ್ಯ ಸರಿಯಾಗಿ …
Read More »ಕನಕಪುರ: ಪತ್ರ ಬರೆದು ಮನೆ ಬಿಟ್ಟು ಹೋದ ವಿದ್ಯಾರ್ಥಿ!
ವಿದ್ಯಾರ್ಥಿಯೊಬ್ಬ ‘ತಾನು ಎಂಟು ವರ್ಷಗಳ ನಂತರ ಮನೆಗೆ ಬರುತ್ತೇನೆ’ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ.ಶಾಲೆಗೆ ರಜೆ ಇರುವುದರಿಂದ ಮನೆಯಲ್ಲೇ ಇದ್ದ ಬಾಲಕ, ‘ಎಂಟು ವರ್ಷಗಳ ನಂತರ ನಾನೇ ಮನೆಗೆ ಬರುತ್ತೇನೆ. ನನ್ನನ್ನು ಹುಡುಕಬೇಡಿ. ನೀವು ಹುಡುಕುವ ಪ್ರಯತ್ನ ಮಾಡಿದರೆ ನಾನು ಸತ್ತ ಹಾಗೆ ಎಂದು ಭಾವಿಸಿ ಎಂದು ಪತ್ರ ಬರೆದಿಟ್ಟು ಬುಧವಾರ ಮನೆ ಬಿಟ್ಟು ಹೋಗಿದ್ದಾನೆ.ಮಗನನ್ನು ಹುಡುಕಿಕೊಡಿ ಎಂದು ಬಾಲಕನ ತಂದೆ ಪುರ …
Read More »ಮುಂಬೈ :ಹಾಡಹಗಲೇ ಅಣ್ಣನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಂದ ತಮ್ಮ!!
ಮಹಾರಾಷ್ಟ್ರದ ಪಿಂಪಲ್ಗಾಂವ್ನಲ್ಲಿ ಭಯಾನಕವಾದ ಘಟನೆಯೊಂದು ನಡೆದಿದ್ದು, ಯವತ್ಮಾಲ್ ಪಟ್ಟಣದ ರಸ್ತೆಯ ಮಧ್ಯದಲ್ಲಿ ಹಾಡಹಗಲೇ ಸಹೋದರನೊಬ್ಬ ತನ್ನ ಹಿರಿಯ ಸಹೋದರನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕ್ರೂರವಾಗಿ ಕೊಂದಿದ್ದಾನೆ. ಆದರೆ ರಸ್ತೆಯಲ್ಲಿ ಹೋಗುತ್ತಿದ್ದವರು ಯಾರೂ ಕೂಡ ಈ ಕೃತ್ಯವನ್ನು ತಡೆಯಲು ಮುಂದೆ ಬರಲಿಲ್ಲವಂತೆ. ವರದಿ ಪ್ರಕಾರ ಮೃತನನ್ನು 35 ವರ್ಷದ ಪ್ರಮೋದ್ ಪೆಂಡೋರ್ ಹಾಗೂ ಆರೋಪಿಯನ್ನು 34 ವರ್ಷದ ಕವಿವರ್ ಎಂದು ಗುರುತಿಸಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ನಗರ ಪೊಲೀಸರು ಆರೋಪಿಗಳನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





