ರಾಚೇನಹಳ್ಳಿ ಕೆರೆ ಬಳಿ ಅಪರಿಚಿತ ವ್ಯಕ್ತಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿ ಫರ್ವೇಜ್ನನ್ನು ಬಂಧಿಸಲಾಗಿದೆ. ಈತ ನೀಡಿದ ಮಾಹಿತಿ ಮೇರೆಗೆ ಮತ್ತೂಬ್ಬ ಆರೋಪಿ ಸದಾಲತುಲ್ಲಾ ಅಬ್ದುಲ್ ರಜಾಕ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಆರೋಪಿ ಫರ್ವೇಜ್ ಮತ್ತೂಬ್ಬ ಆರೋಪಿ ಅಬ್ದುಲ್ ರಜಾಕ್ನಿಂದ ಕಡಿಮೆ ಬೆಲೆ ಎಂಡಿಎಂಎ ಕ್ರಿಸ್ಟೆಲ್ ಖರೀದಿಸಿ ನಗರಕ್ಕೆ ತಂದು ಪರಿಚಿತ ಗಿರಾಕಿಗಳಿಗೆ ದುಬಾರಿ ದರಕ್ಕೆ ಮಾರಾಟ …
Read More »ತುಮಕೂರು :ಫೈನಾನ್ಸ್ ಸಿಬ್ಬಂದಿಯಿಂದ ಅಪ್ರಾಪ್ತಳ ಮೇಲೆ ಅತ್ಯಾಚಾರಕ್ಕೆ ಯತ್ನ!
ಚಿಕ್ಕನಾಯಕನಹಳ್ಳಿ ಹಂದನಕೆರೆಯಲ್ಲಿ ಈ ಘಟನೆ ನಡೆದಿದೆ. ಈತ ಐಐಎಫ್ ಎಲ್ ಕಂಪನಿಯ ಸಮಸ್ತ ಹೆಸರಿನ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಾಗಿದ್ದು, ಸಾಲ ವಸೂಲಿಗೆ ಹೋದ ವೇಳೆ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದದ್ದನ್ನ ಕಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.ಬಾಲಕಿ ಕಿರುಚಾಡುತ್ತಿದ್ದಂತೆ ಓಡಿ ಹೋಗಿದ್ದಾನೆ ಎನ್ನಲಾಗಿದೆ. ಕೀಚಕ ಬಾಲಕಿಯ ಕುತ್ತಿಗೆ ಬುಜ ಸೇರಿದಂತೆ ವಿವಿಧ ಕಡೆ ಗಾಯಗೊಳಿಸಿದ್ದಾನೆ. ಹಂದನಕರೆ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು ಎರಡೇ ದಿನಗಳಲ್ಲಿ ಆರೋಪಿಯನ್ನು ಪತ್ತೆ …
Read More »ಆಂದ್ರಪ್ರದೇಶ :ವರಾಹ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ಗೋಡೆ ಕುಸಿತ ; 8 ಭಕ್ತರು ಸಾವು!
ಆಂಧ್ರಪ್ರದೇಶದ ಸಿಂಹಾಚಲದ ಶ್ರೀ ವರಾಹ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ವಾರ್ಷಿಕ ಚಂದನೋತ್ಸವಂ ಹಬ್ಬದ ವೇಳೆ ಹೊಸದಾಗಿ ನಿರ್ಮಿತ 20 ಅಡಿ ಉದ್ದದ ಗೋಡೆ ಕುಸಿದು ಎಂಟು ಭಕ್ತರು ಮೃತಪಟ್ಟಿದ್ದಾರೆ. ಸಾವಿರಾರು ಭಕ್ತರು ಪೂಜೆಗೆ ಸರತಿ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ 2:30ಕ್ಕೆ ಈ ದುರ್ಘಟನೆ ಸಂಭವಿಸಿದೆ. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ …
Read More »ಬಿಹಾರ: ಕೋಚಿಂಗ್ ಸೆಂಟರ್ನಲ್ಲಿ ಬಾಂಬ್ ಸ್ಪೋಟ; ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕ!!
ಸಮ್ಸೇರ್ಗಂಜ್ನಲ್ಲಿ ಇರುವ ಕೋಚಿಂಗ್ ಸೆಂಟರ್ವೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಪೊಲೀಸರ ಪ್ರಕಾರ, ಸ್ಫೋಟದ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದರೆ ಇದು ಉಗ್ರರ ಕೃತ್ಯವಾಗಿರಬಹುದು ಎಂದು ಶಂಕಿಸಲಾಗಿದೆ.ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಯಿಂದ ಕೋಚಿಂಗ್ ಸೆಂಟರ್ನ ಕಿಟಕಿಗಳು ಒಡೆದುಹೋಗಿದ್ದು, ಸುತ್ತಮುತ್ತಲಿನ …
Read More »ಪುತ್ತೂರು: ಬಸ್-ಬೈಕ್ ಢಿಕ್ಕಿ; ಸವಾರ ಸಾವು!!
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29ರಂದು ಸಂಭವಿಸಿದೆ.ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿ ವಾಸವಾಗಿರುವ ಮೊಯ್ದಿನ್ ಕುಂಞ ಅವರ ಪುತ್ರ ಅಶ್ರಫ್ ಮೃತರು ಎಂದು ತಿಳಿದು ಬಂದಿದೆ.ಸಂಪ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Read More »ಪುತ್ತೂರು : ಕಾಡಾನೆ ದಾಳಿ, ಮಹಿಳೆ ಸಾವು!!
ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ನಿವೃತ್ತ ಕಾರ್ಮಿಕರಾಗಿರುವ ಮಹಿಳೆ ತಾಲ್ಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರುಮಲೆ ರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಅಂಚಿನಲ್ಲಿರುವ ಕೆಎಫ್ಡಿಸಿ ರಬ್ಬರ್ ತೋಟದಲ್ಲಿ ಕಾಡಾನೆ ದಾಳಿಯಿಂದ ಗಾಯಗೊಂಡು ಮಂಗಳವಾರ ಬೆಳಿಗ್ಗೆ ಮೃತಪಟ್ಟರು.ಕಾಡಾನೆ ಹಾವಳಿ ತಡೆಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ಕುಮಾರ್ ರೈ ಅವರಲ್ಲಿ ಮನವಿ ಮಾಡಿದರು.ಸೆಲ್ಲಮ್ಮ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಅರಣ್ಯ ಇಲಾಖೆ …
Read More »ಕೋಲ್ಕತ:ಹೋಟೆಲ್ನಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ಸಜೀವ ದಹನ, ಹಲವರ ಸ್ಥಿತಿ ಗಂಭೀರ!
ಬುರ್ರಬಜಾರ್ ಪ್ರದೇಶದ ಫಲ್ಪಟ್ಟಿ ಮಚುವಾ ಹಣ್ಣಿನ ಮಾರುಕಟ್ಟೆಯ ಬಳಿ ಇರುವ ರುತುರಾಜ್ ಹೋಟೆಲ್ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸಜೀವ ದಹನವಾಗಿದ್ದಾರೆ. ಅಲ್ಲದೆ, ಹಲವರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೋಲ್ಕತ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರಕ್ಕೆ …
Read More »ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಸಹೋದ್ಯೋಗಿ ಕೊಂದ ಕಾರ್ಮಿಕ!!
ಜಾರ್ಖಂಡ್ ಮೂಲದ ಪವನ್ ಯಾದವ್ ಮತ್ತು ಗಣೇಶ್ಧಾರ್ ಎರಡು ವರ್ಷಗಳಿಂದ ನಗರದಲ್ಲಿ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಸೀಗೇ ಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ವೊಂದರ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದು, ಪಕ್ಕದಲ್ಲಿರುವ ಶೆಡ್ನಲ್ಲಿ ವಾಸವಾಗಿದ್ದರು. ಸೋಮವಾರ ಮದ್ಯ ಸೇವಿಸಿದ್ದಾಗ ಇಬ್ಬರ ನಡುವೆ ಕುಟುಂಬಗಳ ವಿಚಾರ ಪ್ರಸ್ತಾಪ ಮಾಡುತ್ತ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ.ಕೋಪಗೊಂಡ ಗಣೇಶ್, ಚಾಕುವಿನಿಂದ ಪವನ್ನ ಎದೆ ಮತ್ತು ಪಕ್ಕೆಲುಬಿಗೆ ಚುಚ್ಚಿ ಪರಾರಿ ಯಾ …
Read More »ದಾವಣಗೆರೆ:ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವು.!
ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎಂಬಿಎ ಓದುತ್ತಿದ್ದ ಬಳ್ಳಾರಿ ಮೂಲದ ಶ್ರಾವಣಿ ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು.ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ವಿದ್ಯಾರ್ಥಿನಿ ಶ್ರಾವಣಿ (23) ಮೃತ ದುರ್ದೈವಿ. ಬಳ್ಳಾರಿ ಮೂಲದ ಶ್ರಾವಣಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದರು. ಶುಭ ಕಾರ್ಯಕ್ಕೆಂದು ಶ್ರಾವಣಿ ಹರಿಹರದಲ್ಲಿನ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು.ಮಂಗಳವಾರ ರಾತ್ರಿ …
Read More »ತುಮಕೂರು : ವಿದ್ಯುತ್ ಅವಘಡ, ಬಾಲಕ ಸೇರಿ ಇಬ್ಬರು ಸಾವು
ತಿಪಟೂರು ತಾಲ್ಲೂಕಿನ ಕಲ್ಲಯ್ಯನಪಾಳ್ಯದಲ್ಲಿ ಮಂಗಳವಾರ ಬೆಳಿಗ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಹಾಗೂ ಎರಡು ಸೀಮೆ ಹಸುಗಳು ಮೃತಪಟ್ಟಿವೆ.ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಸೋಮನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಕಲ್ಲಯ್ಯನಪಾಳ್ಯದ ನಿವಾಸಿ ಯೋಗೀಶ್ (50) ಮೃತರು.ಹಳೆಯ ವಿದ್ಯುತ್ ತಂತಿ ಬದಲಾಯಿಸದ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡದಲ್ಲಿ ಬಾಲಕ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ..
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





