Breaking News

BigTv News

ಕಾಲೇಜಿಗೆ ಹೋಗು ಎಂದು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!!!

ಕಾಲೇಜಿಗೆ ಹೋಗು ಎಂದು ಬೈದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಂಡು ಸಾಗರ್ ತುಕಾರಾಮ ಕುರಾಡೆ(19) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಗರ್ ಚಿಕ್ಕೋಡಿಯಲ್ಲಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ. ಕಾಲೇಜಿಗೆ ಹೋಗು ಎಂದು ಬೈಯ್ದು ಬುದ್ಧಿವಾದ ಹೇಳಿದ್ದಕ್ಕೆ ಈ ನಿರ್ಧಾರ ಕೈಗೊಂಡಿದ್ದಾನೆ.

Read More »

ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು:

ಮುದ್ದೇನಹಳ್ಳಿಯ ಸತ್ಯಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್​​ ಓದುತ್ತಿದ್ದ ಹೇಮಂತ್, ತಾಯಿ ವೈದ್ಯೆಯ ಜೊತೆ ಪ್ರವಾಸ ಮುಗಿಸಿ ಮನೆಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ಸಂಜೆ ಸ್ನಾನ ಮುಗಿಸಿ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಹೇಮಂತ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಹೇಮಂತ್ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Read More »

ಕಾಣಹೋಸ್ಸಳ್ಳಿ: ಕಾರು – ದ್ವಿಚಕ್ರ ವಾಹನ ಡಿಕ್ಕಿ , ಸವಾರ ಸ್ಥಳದಲ್ಲೇ ಸಾವು!!

ಕಾರು ಮತ್ತು ದ್ವಿಚಕ್ರ ವಾಹನ ಸಾವರ ಚಿತ್ರದುರ್ಗಕೆಕ ಹೋಗುತ್ತಿದ್ದು, ಕಾರಿನ ಚಾಲಕನು ಓವರ್‍ಟೇಕ್ ಮಾಡುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪಿಎಸ್‍ಐ ಸಿದ್ದರಾಂ ಬಿದ್ರಾಣಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಕಾರಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪತಿಯೊಬ್ಬ ಪತ್ನಿಯನ್ನು ಬೀದಿಯಲ್ಲೇ ಚಾಕುವಿನಿಂದ ಇರಿದು ಭೀಕರ ಕೊಲೆ!!!

ತಿರುಪಾಳ್ಯ ಮೂಲದ ಗಂಗಾ ಕೊಲೆಯಾದ ಪತ್ನಿ. ಮೋಹನ್ ರಾಜ್ ಕೊಲೆ ಮಾಡಿದ ಪತಿ. ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಮಾತಿನ ಭರಾಟೆ ಜೋರಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇರಿತಕ್ಕೊಳಗಾದ ಗಂಗಾಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿಲಾಗಿತ್ತು. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬಗೋಡಿ ಪೊಲೀಸರು, ಪರಿಶೀಲನೆ ನಡೆಸಿ ಆರೋಪಿ ಮೋಹನ್ ರಾಜ್​ನನ್ನು ವಶಕ್ಕೆ ಪಡೆದಿದ್ದಾರೆ.

Read More »

ಲಾಖ್ನೋ : ಕೊಳೆತ ಶವಗಳು ಕಂಬಳಿಯಲ್ಲಿ ಸುತ್ತಿ ಪತ್ತೆ.!!

ಮನೆಯಿಂದ ಬರುತ್ತಿದ್ದ ದುರ್ವಾಸನೆಯನ್ನು ಗಮನಿಸಿ ನೆರೆಹೊರೆಯವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ನೋಡಿದಾಗ, ಕೋಣೆಯೊಳಗೆ ಶಬೀನಾ ಮತ್ತು ಅವರ ಮಗಳು ಇನಾಯಾ ಅವರ ಶವಗಳು ಪತ್ತೆಯಾಗಿವೆ. ರಾತ್ರಿ ಪತ್ತೆಯಾಗಿರುವ ಮೃತದೇಹಗಳು ಸುಮಾರು ನಾಲ್ಕರಿಂದ ಐದು ದಿನಗಳಷ್ಟು ಹಳೆಯದಾಗಿರಬಹುದು ಎಂದು ಊಹಿಸಲಾಗಿದೆ.ಪ್ರಾಥಮಿಕ ತನಿಖೆಯಲ್ಲಿ ಶಬೀನಾ ರಶೀದ್ ಅವರನ್ನು ಮದುವೆಯಾಗಿದ್ದು, ಪ್ರಸ್ತುತ ಆತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. “ರಶೀದ್ ಪರಾರಿಯಾಗುವ ಮೊದಲು ತನ್ನ ಪತ್ನಿ ಮತ್ತು …

Read More »

ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ಸೊಂದು ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿ!!

ಬಸ್ಸು ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿದ್ದು ಈ ವೇಳೆ ಬಸ್ಸಿನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು ಕೊಪ್ಪ ತಾಲೂಕಿನ ಜಲದುರ್ಗ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾಗಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು ಅವರನ್ನು ಜಯಪುರ, ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಗರ್ಭಿಣಿ ಮಹಿಳೆಯೊಬ್ಬರ ಮೇಲೆ ಆಕೆಯ ಪತಿಯೇ ಸಿಮೆಂಟ್ ಇಟ್ಟಿಗೆಗಳಿಂದ ಮಾರಣಾಂತಿಕವಾಗಿ ಹಲ್ಲೆ!!!

ಶಬಾನಾ, ದೌರ್ಬಲ್ಯ ಮತ್ತು ವಾಂತಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಪತಿ ತನ್ನನ್ನು ನಿಂದಿಸುತ್ತಿದ್ದನೆಂದು ಸಿಬ್ಬಂದಿಗೆ ತಿಳಿಸಿದ್ದಳು.ನಂತರ, ಏಪ್ರಿಲ್ 1 ರಂದು ರಾತ್ರಿ ಸುಮಾರು 10 ಗಂಟೆಗೆ, ಆರೋಪಿ ಬಷಾರತ್ ಆಕೆಯನ್ನು ಮನೆಗೆ ಕರೆದೊಯ್ಯಲು ಆಸ್ಪತ್ರೆಗೆ ಬಂದಿದ್ದನು. ಆದರೆ, ಶಬಾನಾ ಆತನೊಂದಿಗೆ ಹೋಗಲು ನಿರಾಕರಿಸಿದ್ದಳು. ಕೋಪಗೊಂಡ ಬಷಾರತ್, ಶಬಾನಾಳನ್ನು ಬಲವಂತವಾಗಿ ಹೊರಗೆ ಎಳೆದು ಆಸ್ಪತ್ರೆಯ ಬಳಿಯ ರಸ್ತೆಗೆ ತಳ್ಳಿ, ಎರಡು ಸಿಮೆಂಟ್ ಇಟ್ಟಿಗೆಗಳಿಂದ ಆಕೆಯ ಎದೆ ಮತ್ತು ತಲೆಗೆ …

Read More »

ಸಂಸಾರ ಬಿಟ್ಟು Instagram ಲವರ್ ಜೊತೆ ಜೂಟ್!

ಮಹಿಳೆಗೆ ಮದುವೆಯಾಗಿ, ಮಕ್ಕಳಿದ್ದು, ಸುಂದರ ಸಂಸಾರವಿದ್ದರೂ ಎಲ್ಲವನ್ನೂ ತೊರೆದು ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಕೇವಲ ಒಂದು ವಾರದಲ್ಲಿ ಪ್ರೀತಿ ಮಾಡಿ, ಮದುವೆಯನ್ನೂ ಮಾಡಿಕೊಂಡಿದ್ದಾಳೆ. ಇದೀಗ ಗಂಡನೂ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಹೆಂಡತಿಯ 2ನೇ ಮದುವೆಯನ್ನು ನೋಡಿ ಶಾಕ್ ಆಗಿದ್ದು, ಪತಿ ಹಾಗೂ ಆತನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಹೊದ ಮಹಿಳೆಯ ವಿರುದ್ಧ ದೂರು ನೀಡಿದ್ದರು.ಇದೀಗ ಮೊದಲ ಗಂಡ ರಮೇಶ್ ಮನೆಗೆ ತನ್ನ ಬಟ್ಟೆಗಳು ಹಾಗೂ …

Read More »

ಯಾದಗಿರಿ : ಪೊಲೀಸಪ್ಪನಿಂದ ಲವ್, ಸೆಕ್ಸ್ ದೋಖಾ ಆರೋಪ!!

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆ ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.ಪ್ರೀಟಿ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ. 18ವರ್ಷ ತುಂಬುತಿದ್ದಂತೆ 2024ರಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. …

Read More »

ಅಗತ್ಯ ವಸ್ತುಗಳ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ!!

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮಾತನಾಡಿ, ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಾಕುವ ಕೋಮುವಾದಿ ರಾಜಕಾರಣವನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ಸಿನ ಜನವಿರೋಧಿ, ಬೆಲೆ ಏರಿಕೆ, ಭ್ರಷ್ಟಾಚಾರದ ನೀತಿ ವಿರುದ್ಧ ಈ ಹೋರಾಟ ನಡೆಯುತ್ತಿದೆ ಎಂದರು. ಕೇಂದ್ರ ಸರಕಾರವು ಗ್ಯಾಸ್ ಸಿಲಿಂಡರ್‍ಗೆ 50 ರೂ. ಹೆಚ್ಚಿಸಿದೆ. ಬಿಜೆಪಿಯವರು ಕೇಂದ್ರದ ವಿರುದ್ಧ ಹೋರಾಟ ಮಾಡಲಿ ಎಂದು ಮುಖ್ಯಮಂತ್ರಿಗಳು ಹೇಳಿದ್ದನ್ನು ಪ್ರಸ್ತಾಪಿಸಿದ ಅವರು, ಮುಖ್ಯಮಂತ್ರಿಗಳೇ ಒಂದೂವರೆ …

Read More »