Breaking News

BigTv News

ಶೇಷಾಗಿರಿ : ಗ್ಯಾಸ್ ಸಿಲಿಂಡರ್ ಸ್ಫೋಟ, ಸಂಪೂರ್ಣ ಹೊತ್ತಿ ಉರಿದ ಮನೆ.!

ಶೇಷಗಿರಿ ಗ್ರಾಮದ ಸಂತೋಷ ಭರಮಣ್ಣ ಹಿಳ್ಳಿ ಎಂಬುವವರಿಗೆ ಸೇರಿದ ಮನೆ ಸಂಪೂರ್ಣ ಸುಟ್ಟಿದ್ದು, ಅಪಾರ ಹಾನಿಯಾಗಿದೆ.ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ಆಹಾರ ಧಾನ್ಯ, ಬಟ್ಟೆ, 4 ಗ್ರಾಂ ಚಿನ್ನ ಸೇರಿದಂತೆ ಅಗತ್ಯ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅದೃಷ್ಟವಶಾತ್ ಸಿಲಿಂಡರ್ ಸ್ಪೋಟದ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

Read More »

ಪಶ್ಚಿಮ ಬಂಗಾಳ : ಗ್ಯಾಸ್ ಸಿಲಿಂಡರ್ ಸ್ಫೋಟ, ನಾಲ್ಕು ಮಕ್ಕಳು ಸೇರಿ 7 ಮಂದಿ ಸಾವು.!

ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿತು. ಮೊದಲು ಪಟಾಕಿ ಸ್ಫೋಟಗೊಂಡಿದ್ದು, ಅದರಿಂದಾಗಿ ಸಿಲಿಂಡರ್​ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿದ್ದರು.ಮನೆಯಿಂದ ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಕೋಟೇಶ್ವರ ರಾವ್ ಪಿಟಿಐಗೆ ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿರಬಹುದು ಎಂದೂ ಅವರು ಹೇಳಿದ್ದಾರೆ.

Read More »

ಕುಡಿದ ಅಮಲಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ, ಕೊಲೆಯಲ್ಲಿ ಅಂತ್ಯವಾದ ಘಟನೆ.!

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು ಘಟನೆ ನಡೆದಿದೆ.ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Read More »

ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಬಂಧನ.!

ಬೀದರ್ ಜಿಲ್ಲೆ ಬಸವಕಲ್ಯಾಣದ ಶಾ-ಹುಸೇನ್ ಬಡಾವಣೆಯಲ್ಲಿ ಮಹಿಳೆಯ ಭೀಕರವಾಗಿ ಹತ್ಯೆ ಮಾಡಿರುವ ಗಟನೆ ನಡೆದಿದೆ. ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಡ್ ರೂಮ್‌ನಲ್ಲಿ ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಕೂಡಾ ಪೌರ ಕಾರ್ಮಿಕನೇ ಆಗಿದ್ದನು. ಕೊಲೆಗೆ ಕಾರಣ ಏನೆಂಬುದು ನಿಖರವಾಗಿ ತಿಳಿದುಬಂದಿಲ್ಲ. ಈ ಕೊಲೆ ಅನೈತಿಕ ಸಂಬಂಧದ ಹಿನ್ನೆಲೆಯಿಂದ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

Read More »

ಕುಂಭಮೇಳದ ಸುಂದರಿಗೆ ಸಿನಿಮಾ ಅವಕಾಶ ನೀಡಿದ್ದ ನಿರ್ದೇಶಕನ ಮೇಲೆ ರೇಪ್‌ ಕೇಸ್!ನಿರ್ದೇಶಕ ಅರೆಸ್ಟ್.

ಮೊನಾಲಿಸಾಗೆ ಅವಕಾಶ ನೀಡುವುದಾಗಿ ಹೇಳಿ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.ಅತ್ಯಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.ಸನೋಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಹೀರೋಯಿನ್ ಆಗಬೇಕೆಂದು ಆಸೆಪಟ್ಟಿದ್ದ ಸಣ್ಣ ಪಟ್ಟಣದ ಹುಡುಗಿಯ ಮೇಲೆ ಸನೋಜ್ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ.

Read More »

ಗುಡಿಸಲಿಗೆ ಆಕಸ್ಮಿಕ ಬೆಂಕಿ,ಎರಡು ಹಸು, ಕರು ಸಜೀವ ದಹನ.!

ಹುಣಸೆಕಟ್ಟೆ ಗ್ರಾಮದ ರತ್ನಮ್ಮ ಅವರ ಗುಡಿಸಲಿಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ಬಿದ್ದು ಎರಡು ಹಸು, ಒಂದು ಕರು, ಎರಡು ಕುರಿ ಹಾಗೂ ನಾಲ್ಕು ಮೇಕೆ ಸಹಿತ ಗುಡಿಸಲಿನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ.ಬೆಂಕಿ ಆರಿಸಲು ನಡೆಸಿದ ಪ್ರಯತ್ನ ವಿಫಲಗೊಂಡಿದೆ. ಬಟ್ಟೆ, ಪಾತ್ರೆ, ದವಸಧಾನ್ಯ ಸಂಪೂರ್ಣವಾಗಿ ಭಸ್ಮವಾಗಿದೆ.

Read More »

ಕೃಷ್ಣ ನದಿಯಲ್ಲಿ ಭಾನುವಾರ ಮಧ್ಯಾಹ್ನ ಸ್ನಾನಕ್ಕೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು.!

ಬಾಗಲಕೋಟೆ ತಾಲೂಕಿನ‌ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿದ್ದಾರೆ.ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ.ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More »

ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವು.!

ಯುಗಾದಿ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದಿದೆ.ಕಳೆದ ವಾರ ಸಾವು ಸಂಭವಿಸಿದ್ದರೂ ಸಹ ಇಲ್ಲಿ ಯಾವುದೇ ಎಚ್ಚರಿಕೆ ಫಲಕವಾಗಲಿ ಅಥವಾ ಸೂಚನ ಫಲಕವನ್ನಾಗಲಿ ಹಾಕುವ ಕೆಲಸಕ್ಕೆ ಪಟ್ಟಣ ಪಂಚಾಯಿತಿ ಕೈಹಾಕಿಲ್ಲ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು ಹಾನಿ ಅಥವಾ ಸಂಪೂರ್ಣ ಧರೆಗುರುಳಿವೆ ಎಂದು ತಿಳಿಸಿದ್ದಾರೆ.ಮ್ಯಾನ್ಮರ್ ನಲ್ಲಿ ಸಂಭವಿಸಿದ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದರಲ್ಲಿ ಮಸೀದಿ ಕುಸಿದುಬಿದ್ದು ಮೃತಪಟ್ಟ 700 ಮಂದಿ ಮೃತಪಟ್ಟಿದ್ದಾರೆ.ಮ್ಯಾನ್ಮರ್ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ 1700 ಮಂದಿ ಮೃತಪಟ್ಟಿದ್ದು, 300 ಮಂದಿ ನಾಪತ್ತೆಯಾಗಿದ್ದಾರೆ. 3400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Read More »

ಹುಬ್ಬಳ್ಳಿ, ಧಾರವಾಡದಲ್ಲಿ ಗುಡುಗು ಸಹಿತ ಭಾರಿ ಮಳೆ.!

ಭಾನುವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಮೇಕೆ ಮೆಯಿಸಲು ಹೋಗಿದ್ದ ವೃದ್ಧರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಮುಗದ ಗ್ರಾಮದ ಬಳಿ ಹೊಲದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ರಸೂಲ್ ಸಾಬ್ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೇಕೆ ಮೇಯಿಸಿಕೊಂಡು ಗ್ರಾಮಕ್ಕೆ ಬರುವಾಗ ಸಿಡಿಲು ಬಡಿದಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »