Breaking News

BigTv News

ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಇಬ್ಬರೂ ಕೆಲಕಾಲ ವಿವಾಹೇತರ ಸಂಬಂಧದಲ್ಲಿ ತೊಡಗಿದ್ದರು. ಆದರೆ, ಅಪ್ಸರ ಮದುವೆಯಾಗುವಂತೆ ಒತ್ತಾಯಿಸಿದಾಗ, ಸಾಯಿ ಕೃಷ್ಣ ಅವಳನ್ನು ಕೊಲೆ ಮಾಡಲು ಯೋಜನೆ ರೂಪಿಸಿದ. 2023ರ ಜೂನ್ 3 ರಂದು, ಅಪ್ಸರಳನ್ನು ಕೊಯಿಮತ್ತೂರು ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಮನವೊಲಿಸಿದ್ದ. ಆ ರಾತ್ರಿ ಅವರು ರಲ್ಲಗೂಡದಲ್ಲಿ ಊಟ ಮಾಡಿ, ಸುಲ್ತಾನ್‌ಪಲ್ಲಿ ಗೋಶಾಲೆಗೆ ಭೇಟಿ ನೀಡಿದರು. ಆದರೆ, ಜೂನ್ 4ರ ರಾತ್ರಿ ಅಪ್ಸರಳನ್ನು ಶಂಶಾಬಾದ್ ಬಳಿಯ ನರ್ಖೋಡ ಗ್ರಾಮದ ಒಂಟಿ ಪ್ರದೇಶಕ್ಕೆ ಕರೆದೊಯ್ದು, ಕಲ್ಲಿನಿಂದ ಹೊಡೆದು …

Read More »

ಪರೀಕ್ಷೆ ಬರೆಯಲು ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿ ಶಾಲೆಗೆ…ಬೆಚ್ಚಿಬಿದ್ದ ಶಿಕ್ಷಕರು.

ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‍ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿ ಶಾಲೆಗೆ ಬಂದ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಶಿಕ್ಷಕರು ವಿದ್ಯಾರ್ಥಿಯ ಬ್ಯಾಗ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ಮದ್ಯದ ಬಾಟಲಿ ಮತ್ತು ಸುಮಾರು 10,000 ರೂಪಾಯಿಗಳು ಇರುವುದು ಪತ್ತೆಯಾಗಿದೆ. ಕೌನ್ಸೆಲಿಂಗ್ ವೇಳೆ ಮನೆಯಿಂದ ಹಣವನ್ನು ಕದ್ದು ಮದ್ಯದ ಬಾಟಲಿಗಳನ್ನು ಪಡೆದಿದ್ದೇನೆ ಎಂದು ಬಾಲಕ ಒಪ್ಪಿಕೊಂಡಿದ್ದಾನೆ. ಹೀಗಾಗಿ ಶಾಲಾ ಆಡಳಿತ ಮಂಡಳಿಯು ಶಿಸ್ತು ಕ್ರಮವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರಗಳನ್ನು ನೀಡಿತ್ತು. ಅಪ್ರಾಪ್ತ ವಯಸ್ಕರಿಗೆ …

Read More »

ಹಿರಿಊರು : 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಘಟನೆ.

ಹಾಲುಮಾದೇನಹಳ್ಳಿ ಗ್ರಾಮದಲ್ಲಿ ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಹುಣಸೆ ಮರದಡಿಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅದೇ ಗ್ರಾಮದ ರಮೇಶ್ ಎಂಬಾತ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನ ವಿರುದ್ಧ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಗಂಡ ಹೆಂಡಿರ ಜಗಳ ಕೊರ್ಟ್​ ಮೆಟ್ಟಿಲೇರುವ ತನಕ, ಡಿವೋರ್ಸ್​ ಪಡೆಯುವ ತನಕ, ಈಗ ನಾಲಿಗೆ ಕಚ್ಚಿ ತುಂಡು ಮಾಡುವ ತನಕ…!

ಪತ್ನಿಯ ನಡುವೆ ನಡೆದಿರುವ ಜಗಳದಲ್ಲಿ ಗಂಡ ನಾಲಿಗೆಯನ್ನೇ ಕಳೆದುಕೊಳ್ಳಬೇಕಾಗಿ ಬಂದಿದೆ!.ಕೋಪದ ರಭಸದಲ್ಲಿ ಗಂಡನ ಮೇಲೆ ಇಷ್ಟು ವರ್ಷಗಳವರೆಗೆ ಇದ್ದ ಸೇಡನ್ನೆಲ್ಲಾ ಒಟ್ಟಿಗೇ ತೀರಿಸಿಕೊಂಡವಳಂತೆ ಹೆಂಡತಿ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿ ಹಾಕಿದ್ದಾಳೆ. ದಂಪತಿ ಯಾವುದೋ ವಿಷಯಕ್ಕೆ ಜಗಳವಾಡಿದ್ದರು. ಈ ಜಗಳ ತಾರಕಕ್ಕೇರಿ ಈ ಘಟನೆಯಾಗಿದೆ ಎಂದಿದ್ದಾರೆ. ಸದ್ಯ ಗಂಡನ ನಾಲಿಗೆ ಕಚ್ಚಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More »

ಅಪರಾಧ : ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ.

ಒಂದು ವರ್ಷದಿಂದ ಬೆಂಗಳೂರಿನ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿಗಳಿಬ್ಬರೂ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ವರ್ಕ್ ಫ್ರಂ ಹೋಂ ಆಯ್ಕೆ ಮಾಡಿಕೊಂಡಿದ್ದ ಇಬ್ಬರೂ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹುಳಿಮಾವು ಪೊಲೀಸರು ಇವರ ಮನೆಗೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ …

Read More »

ಯರಗೋಳ : ತಂದೆ ಸಾವಿನ ದುಃಖದ ಮಧ್ಯೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ.

ಶ್ರೀಶೈಲ ಅವರ ತಂದೆ, ಅಲ್ಲಿಪುರ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಪ್ಪ ಮಂಗಳವಾರ ತಡರಾತ್ರಿ 11 ಗಂಟೆಗೆ ಹೃದಯಾಘಾತದಿಂದ ಮೃತಪಟ್ಟಿದ್ದರು.ಯರಗೋಳ ಪರೀಕ್ಷೆ ಕೇಂದ್ರಕ್ಕೆ ಶ್ರೀಶೈಲ ಬುಧವಾರ ತೆರಳಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಮುಗಿದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

Read More »

ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್.

ನಟ ರಕ್ಷಕ್ ಬುಲೆಟ್ ಇದೀಗ ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದ ರಕ್ಷಕ್ ಬುಲೆಟ್ ಚಾಮುಂಡೇಶ್ವರಿ ತಾಯಿ ಬಗ್ಗೆ ಆಡಿದ್ದ ಮಾತೊಂದು ವಿವಾದಕ್ಕೆ ಕಾರಣವಾಗಿತ್ತು.ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್’ ಸೀಸನ್ 2ರ ಸ್ಪರ್ಧಿಯಾಗಿರುವ ರಕ್ಷಕ್, ಯುವತಿಯನ್ನು ಇಂಪ್ರೆಸ್ ಮಾಡುವ ವೇಳೆ ಚಾಮುಂಡಿದೇವಿ ಜೀನ್ಸ್ ಹಾಕಿ ಗೋವಾ ಟ್ರಿಪ್​ಗೆ ಹೋದಂತಿದೆ ಎಂದೆಲ್ಲ ಮಾತನಾಡಿದ್ದರು. ರಕ್ಷಕ್ ಈ ಹೇಳಿಕೆ ಹಿಂದೂಪರ ಸಂಘಟನೆಗಳು ಮತ್ತು ಚಾಮುಂಡೇಶ್ವರಿ ತಾಯಿ …

Read More »

ಬೈಂದುರು : ಕಾಲೇಜಿಗೆ ಹೋದ ವಿದ್ಯಾರ್ಥಿ ನಾಪತ್ತೆ

ಅಭಿನಂದನ್‌ ಬೈಂದೂರಿನ ಮನೆಯಿಂದ ಕಾಲೇಜಿಗೆ ಹೋಗುತ್ತೇನೆಂದು ಹೋಗಿದ್ದು, ಏತನ್ಮಧ್ಯೆ ಎರಡು ಬಾರಿ ಮನೆಗೆ ಫೋನ್‌ ಮಾಡಿದ್ದು, ನಂತರ ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.ನಂತರ ತಂದೆ ಮಹಾಬಲೇಶ್ವರ ಅವರು ನಿಟ್ಟೆ ಕಾಲೇಜಿಗೆ ಹೋಗಿ ಮಗನ ಕುರಿತು ವಿಚಾರಿಸಿದಾಗ, ಕಾಲೇಜಿಗೆ ರಜೆ ಹಾಕಿ ತೆರಳಿರುವುದಾಗಿ ತಿಳಿಸಿದ್ದರು. ಆತನ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಮಗ ಕಾಣೆಯಾಗಿರುವುದಾಗಿ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »

ಧಾರವಾಡ : ಆಟೋದಲ್ಲಿ ದನದ ಮಾಂಸ ಸಾಗಾಟ, ರೆಡ್‌ಹ್ಯಾಂಡಾಗಿ ಹಿಡಿದ ಬಜರಂಗದಳ ಕಾರ್ಯಕರ್ತರು!

ಚಾಲಕ ದನದ ಮಾಂಸವನ್ನು ಧಾರವಾಡದ ಟೋಲನಾಕಾದಿಂದ ಆಟೋದಲ್ಲಿ ಜನ್ನತನಗರಕ್ಕೆ ಸಾಗಿಸುತ್ತಿದ್ದ.ಟೋಲನಾಕಾದಲ್ಲಿ ಹೆಸರಿಗೆ ಮಾತ್ರ ಚಿಕನ್ ಸೆಂಟರ್ ಎಂದು ಬೋರ್ಡ್ ಹಾಕಿಕೊಂಡು ಒಳಗಡೆ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ. ಆ ಚಿಕನ್ ಸೆಂಟರ್ ಮೂಲಕವೇ ದನದ ಮಾಂಸ ಸಾಗಿಸಲಾಗುತ್ತಿತ್ತು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೇ ಪಾಲಿಕೆ ಆಯುಕ್ತರು ನಿರ್ಲಕ್ಷ್ಯಕ್ಕೆ ಇದು ಸಾಕ್ಷಿಯಾಗಿದೆ ಎಂದು ದೂರಿದ್ದಾರೆ.ಸದ್ಯ ವಿದ್ಯಾಗಿರಿ ಠಾಣೆ ಪೊಲೀಸರು ಆಟೋ ಚಾಲಕನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ

Read More »

ವಿಜಯಪುರ : ಯತ್ನಾಳ ಉಚ್ಚಾಟನೆ, ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ಮೊದಲೇ ಈ ಕೆಲಸ ಆಗಬೇಕಿತ್ತು. ಕಳೆದ 10 ವರ್ಷಗಳಿಂದ ಪಕ್ಷವನ್ನು, ನಾಯಕರನ್ನು ಸುಸ್ತು ಮಾಡಿ, ಮುಜುಗರನ್ನು ಈಡುಮಾಡಿದ್ದರು. ಅವರ ಉಚ್ಚಾಟನೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗದು’ ಎಂದು ಹೇಳಿದರು.ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆಯನ್ನು ಸ್ವಾಗತಿಸಿ, ಅವರ ಸ್ವಕ್ಷೇತ್ರ ವಿಜಯಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸಿದ್ದೇಶ್ವರ ಗುಡಿ ಸೇರಿದಂತೆ ವಿವಿಧೆಡೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ …

Read More »