Breaking News

BigTv News

ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ: ರೌಡಿಶೀಟರ್ ಶಬ್ಬೀರ್ ಕೊಲೆಯ ಪ್ರತಿಕಾರವೇ?

ಬೆಂಗಳೂರಿನ ಮಡಿವಾಳದ ಮುಖ್ಯರಸ್ತೆಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಸುಹೇಲ್ ಅವರನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶನಿವಾರ ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಿಗ್ನಲ್ ಬಳಿ ಟ್ರಾಫಿಕ್‌ನಲ್ಲಿ ನಿಂತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ಆರೋಪಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸುಹೇಲ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇರಲಿಲ್ಲ. ಆದರೆ, ಜನವರಿ 13ರಂದು ನಡೆದ ರೌಡಿಶೀಟರ್ ಶಬ್ಬೀರ್ ಹತ್ಯೆ ಪ್ರಕರಣದಲ್ಲಿ ಅವರ ಸಹೋದರರು ಆರೋಪಿಗಳಾಗಿದ್ದರು. ಸಹೋದರರ ಮೇಲಿನ ಸೇಡಿಗಾಗಿ …

Read More »

ಪಾಕಿಸ್ತಾನ ಸೇನೆ ಗುರಿಯಾಗಿಸಿ ದಾಳಿ ನಡೆಸಲು ಸಂಚು ಆರೋಪ: ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಬಂಧನ

ಬೆಂಗಳೂರು: ಪಾಕಿಸ್ತಾನ ಸೇನೆ ಮೇಲೆ ದಾಳಿ ನಡೆಸಲು ಅಫ್ಘಾನಿಸ್ತಾನಕ್ಕೆ ತೆರಳಿ TTP ಸಂಘಟನೆ ಸೇರಲು ಸಂಚು ರೂಪಿಸಿದ ಆರೋಪದ ಮೇಲೆ 25 ವರ್ಷದ ಭದ್ರತಾ ಸಿಬ್ಬಂದಿ ಆಸಾಫುಲ್ ಮಲಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 11ರಂದು ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಬಂಧಿಸಲಾಗಿದ್ದು, NIA ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿವೆ. ಪಶ್ಚಿಮ ಬಂಗಾಳ ಮೂಲದ ಮಲಿಕ್ ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದು, ಬೊಮ್ಮಸಂದ್ರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. …

Read More »

ಜ್ಯುವೆಲ್ಲರಿ ಶಾಪ್ ಕಳ್ಳತನ ಕೇಸ್, ಅಂತರರಾಜ್ಯ ಖದೀಮರ ಹೆಡೆಮುರಿ ಕಟ್ಟಿದ ಖಾಕಿ!

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಮಾನಜ್ಜ ಜ್ಯುವೆಲ್ಲರಿ ಅಂಗಡಿಯಲ್ಲಿ ಆಗಸ್ಟ್ 12ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ರಾಜಸ್ಥಾನದ ನಾಲ್ವರು ಹಾಗೂ ಮಧ್ಯಪ್ರದೇಶದ ಓರ್ವ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆರೋಪಿಗಳು ಅಂಗಡಿಯ ಶಟರ್ ಬೀಗ ಮುರಿದು 7 ಕೆ.ಜಿ. ಬೆಳ್ಳಿ ಆಭರಣಗಳನ್ನು ದೋಚಿದ್ದರು. ಬಂಧಿತರಿಂದ ₹17 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ₹5 ಲಕ್ಷ ಮೌಲ್ಯದ ಐ20 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ …

Read More »

ದಾಂಡೇಲಿಯಲ್ಲಿ ಖಾಕಿ ಆಪರೇಷನ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಅರೆಸ್ಟ್

ದಾಂಡೇಲಿಯ ಮಾರುತಿ ನಗರದ ಅಂಬೇಡ್ಕರ್ ಶಾಲೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೆ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಸುಮಾರು ₹10 ಸಾವಿರ ಮೌಲ್ಯದ 241 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಾರುತಿ ನಗರದ ಅಕ್ಷಯ ವಾಡೇಕರ (27), ಹಳಿಯಾಳ ತಾಲೂಕಿನ ತೌಸೀಫ್ ನಜೀರ ಅಹಮ್ಮದ್ …

Read More »

ಮುಂಜಾನೆ 3ರ ಹೊತ್ತು ಮೆಜೆಸ್ಟಿಕ್‌ನಲ್ಲಿ ಬಿತ್ತು ಮಂಗಳಮುಖಿಯ ಹೆಣ! ಬೆಚ್ಚಿ ಬೀಳಿಸುತ್ತೆ ದರೋಡೆಕೋರನ ಕೃತ್ಯ!

ಬೆಂಗಳೂರು: ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದ ಸಮೀಪ ಮಂಗಳಮುಖಿಯೊಬ್ಬರನ್ನು ಕೇವಲ ₹200 ಹಣಕ್ಕಾಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ದೇವಿ ಎಂಬ ಮಂಗಳಮುಖಿ ಕೊಲೆಯಾದವರು. ರಾಮಮೂರ್ತಿನಗರದ ಗೌತಮ್ (29) ಎಂಬಾತ ಕೊಲೆ ಆರೋಪಿಯಾಗಿದ್ದು, ರಾತ್ರಿ ವೇಳೆ ದರೋಡೆ ಮಾಡುತ್ತಿದ್ದ ಎನ್ನಲಾಗಿದೆ. ದೇವಿ ಬಳಿ ₹200 ಹಣ ಕೇಳಿದ್ದ ಗೌತಮ್, ಹಣ ನೀಡಲು ನಿರಾಕರಿಸಿದಾಗ ಡ್ರ್ಯಾಗರ್‌ನಿಂದ ತಲೆಗೆ ಹೊಡೆದು, ಬಳಿಕ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ನಂತರ ಬ್ಯಾಗ್ ಮತ್ತು ಮೊಬೈಲ್ …

Read More »

ಪಾಕ್‌ ಟೆರರಿಸ್ಟ್‌ ಜೊತೆ ಸಂಪರ್ಕ – ದೊಡ್ಡಬಳ್ಳಾಪುರದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್‌!

ದೊಡ್ಡಬಳ್ಳಾಪುರ: ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ ಅಂತರರಾಷ್ಟ್ರೀಯ ಅಪರಾಧ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸೈಯದ್ ಅಬೂಬಕರ್ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಹಲವು ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಹಾಗೂ ಅನುಮಾನಾಸ್ಪದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಪಾಕಿಸ್ತಾನದಲ್ಲಿರುವ ಗ್ಯಾಂಗ್‌ಸ್ಟರ್‌ಗಳೊಂದಿಗೆ ಡಿಜಿಟಲ್ ಮಾಧ್ಯಮಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಸ್ಥಳೀಯ ಜಾಲ ಬಳಸಿಕೊಂಡು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡಲು ಅಥವಾ ಹಣಕಾಸಿನ ವಹಿವಾಟು ನಡೆಸಲು …

Read More »

20 ವರ್ಷದ ದಾಂಪತ್ಯದಲ್ಲೂ ಪತ್ನಿ ಮೇಲೆ ಅನುಮಾನ! ಹೆಂಡತಿ-ಮಕ್ಕಳ ಮೇಲೆ ಲಾಂಗ್‌ನಿಂದ ಹಲ್ಲೆಗೈದ ಪಾಪಿ ಗಂಡ

ಮೈಸೂರು: ಪತ್ನಿಯ ಮೇಲೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ ಲಾಂಗ್‌ನಿಂದ ಪತ್ನಿ ಹಾಗೂ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಣಸೂರು ನಗರದ ರಜಾಕ್ ಮೊಹಲ್ಲಾದಲ್ಲಿ ನಡೆದಿದೆ. ಸಮಿವುಲ್ಲಾ ಎಂಬಾತ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ತಡರಾತ್ರಿ ಎಲ್ಲರೂ ಮಲಗಿದ್ದ ವೇಳೆ ಮುಂಬಾಗಿಲಿಗೆ ಚಿಲಕ ಹಾಕಿ ಪತ್ನಿ ಸಮೀನಾಬಾನು ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತಾಯಿಯ ಕೂಗಾಟ ಕೇಳಿ ರಕ್ಷಣೆಗೆ ಬಂದ 10 ವರ್ಷದ ಪುತ್ರ ಅಬ್ನಾನ್ ಶರೀಫ್ ಹಾಗೂ …

Read More »

ಪೋರ್ಟರ್ ಅಪ್ಲಿಕೇಶನ್ ಬಳಸಿ ನಕಲಿ ಔಷಧಿ ರವಾನೆ – ಎಸ್‌ಐಡಿ ತನಿಖೆಯಲ್ಲಿ ಪತ್ತೆ!

ರಾಮನಗರ: ಬಿಡದಿ ಸಮೀಪದ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ತಯಾರಿಕೆ ಹಾಗೂ ಮರುಪ್ಯಾಕಿಂಗ್ ಜಾಲವನ್ನು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಪ್ರಕರಣದ ಸಂಪೂರ್ಣ ಜಾಲ ಭೇದಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದ್ದು, ತನಿಖೆ ತೀವ್ರಗೊಂಡಿದೆ. ದಾಳಿ ವೇಳೆ ಸುಮಾರು ₹5ರಿಂದ ₹6 ಕೋಟಿ ಮೌಲ್ಯದ ನಕಲಿ ಮಾತ್ರೆಗಳು, ಪ್ರಸಿದ್ಧ ಔಷಧ ಕಂಪನಿಗಳ ನಕಲಿ ಲೇಬಲ್‌ಗಳು ಹಾಗೂ ಪ್ಯಾಕಿಂಗ್ ಯಂತ್ರೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ಅವಧಿ …

Read More »

ತಾರಕಕ್ಕೇರಿದ ಹಳೇ ಹುಬ್ಬಳ್ಳಿ ಆಸಾರ ಓಣಿಯ ಪುಷ್ಕರಣಿ ವಿವಾದ: ಇಂದು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ನಿಷೇಧಾಜ್ಞೆ ಜಾರಿ

ಹುಬ್ಬಳ್ಳಿ: ಹುಬ್ಬಳ್ಳಿಯ ಆಸರ ಓಣಿಯಲ್ಲಿ ಪುರಾತನ ಭವಾನಿ ಶಂಕರ ದೇವಾಲಯದ ಪುಷ್ಕರಣಿ ಮೇಲೆ ರಸ್ತೆ ನಿರ್ಮಾಣ ಮಾಡುತ್ತಿರುವ ವಿಚಾರ ತೀವ್ರ ವಿವಾದಕ್ಕೆ ಕಾರಣವಾಗಿದೆ. ರಸ್ತೆ ನಿರ್ಮಾಣ ವಿರೋಧಿಸಿ ಹಿಂದೂಪರ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 1500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ರಸ್ತೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಪುರಾತನ ಪುಷ್ಕರಣಿ ಇದ್ದು, ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದು …

Read More »

ಉರುಳಿಗೆ ಸಿಲುಕಿಬಿದ್ದ ಚಿರತೆ – ಸುಟ್ಟು ಹಾಕಿದ್ದ ಮೂವರು ಅರೆಸ್ಟ್!

ತುಮಕೂರು: ಜಮೀನಿನಲ್ಲಿ ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿದ್ದ ಚಿರತೆಯನ್ನು ಜೀವಂತವಾಗಿಯೇ ಸುಟ್ಟು ಹಾಕಿದ ಆರೋಪದ ಮೇಲೆ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಿವಾಸಿಗಳಾದ ನಾರಾಯಣಪ್ಪ, ಶಿವಕುಮಾರ್ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳು. ಉರುಳಿಗೆ ಚಿರತೆ ಸಿಲುಕಿರುವ ವಿಷಯ ಬಹಿರಂಗವಾದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಆರೋಪಿಗಳು ಚಿರತೆಯನ್ನು ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ …

Read More »