ಚಿಕ್ಕಮಗಳೂರು: ನಾಟಿ ತುಪ್ಪದ ಹೆಸರಿನಲ್ಲಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಾರ್ಕೆಟ್ ರಸ್ತೆಯ ಪಾಳುಬಿದ್ದ ಮನೆಯೊಂದರಲ್ಲಿ ಡಾಲ್ಡಾ, ವನಸ್ಪತಿ, ಪಾಮ್ ಆಯಿಲ್ ಸೇರಿದಂತೆ ವಿವಿಧ ಪದಾರ್ಥಗಳು ಪತ್ತೆಯಾಗಿವೆ. ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಪೊಲೀಸರ ನೆರವಿನಿಂದ ಬೀಗ ಮುರಿದು ಮನೆಗೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ಬಳ್ಳಾರಿಯಿಂದ ಬಂದವರಾಗಿದ್ದು, …
Read More »ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಠದಲ್ಲಿ ಸ್ವಾಮೀಜಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಅಣ್ಣಪ್ಪ ಸ್ವಾಮಿ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಭಾಗ್ಯವಂತಿ ದೇವರ ಹೆಸರಲ್ಲಿ ಮಠ ಮಾಡಿಕೊಂಡಿದ್ದಾನೆ. ಕಳೆದ ಆರೇಳು ವರ್ಷಗಳಿಂದ ಮಠ ಮಾಡಿಕೊಂಡು ಸಾವಿರಾರು ಭಕ್ತರಿಗೆ ತನ್ನಲ್ಲಿ ದೈವ ಶಕ್ತಿಯಿದೆ ಅಂತ ಸೆಳೆದಿದ್ದಾನೆ. ಇದೆ ಕಾರಣಕ್ಕೆ ಮಠಕ್ಕೆ ಮಂಗಳವಾರ ಹಾಗೂ ಶುಕ್ರವಾರ ನೂರಾರು ಜನ ಭಕ್ತರು ಬಂದು ಹೋಗ್ತಾಯಿದ್ರು. ಆದ್ರೆ …
Read More »ಬಿಡದಿ ಬಳಿ ಪತ್ತೆಯಾದ ನಕಲಿ ಔಷಧಿ ಜಾಲ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಐದು ರಾಜ್ಯಗಳ ನಂಟು!
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಫಾರ್ಮ್ಹೌಸ್ನಲ್ಲಿ ₹5 ಕೋಟಿ ಮೌಲ್ಯದ ಶಂಕಿತ ನಕಲಿ ಔಷಧಿಗಳನ್ನು ವಶಪಡಿಸಿಕೊಂಡ ಪ್ರಕರಣದ ತನಿಖೆ ವಿಸ್ತರಿಸಿದ್ದು, ಅಂತಾರಾಜ್ಯ ನಂಟಿನ ಶಂಕೆ ವ್ಯಕ್ತವಾಗಿದೆ. ಔಷಧಿಗಳನ್ನು ಮರುಪ್ಯಾಕ್ ಮಾಡಿ ಪ್ರತಿಷ್ಠಿತ ಕಂಪನಿಗಳ ಹೆಸರಿನ ಲೇಬಲ್ ಅಂಟಿಸಿ ಮಾರುಕಟ್ಟೆ ಹಾಗೂ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಸಂಪರ್ಕದ ಬಗ್ಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದ್ದು, ಈ ರಾಜ್ಯಗಳ ಡ್ರಗ್ …
Read More »ಬೆಂಗಳೂರಲ್ಲಿ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಹಣ ಜಪ್ತಿ
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಸುಮಾರು ₹9 ಕೋಟಿ ನಗದು ಪತ್ತೆಯಾಗಿದ್ದು, ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಕಾರಿನಲ್ಲಿ ಭಾರೀ ಪ್ರಮಾಣದ ಹಣ ಸಾಗಿಸಲಾಗುತ್ತಿದೆ ಎಂಬ ಐಟಿ ಅಧಿಕಾರಿಗಳ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಪತ್ತೆಯಾದ ಹಣ ತಮಿಳುನಾಡಿನ ತೂತುಕುಡಿಗೆ ಸೇರಿದ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ. ಹಣದ ಮೂಲ ಹಾಗೂ ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿತ್ತು ಎಂಬುದರ ಕುರಿತು ಪೊಲೀಸರು ಮತ್ತು …
Read More »ಸಾಲಗಾರರ ಕಾಟಕ್ಕೆ ಸಾವಿನ ಪ್ಲಾನ್ – 11 ವರ್ಷದ ಹಿಂದೆ ಸತ್ತವನು ಸಿಕ್ಕಿಬಿದ್ದ!
ಕೋಲಾರ: ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ತನ್ನದೇ ಸಾವಿನ ನಾಟಕವಾಡಿ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅರುಣ್ ಕುಮಾರ್ ರೆಡ್ಡಿಯನ್ನು ಕ್ಯಾಸಂಬಳ್ಳಿ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. 2015ರಲ್ಲಿ ಕ್ಯಾಸಂಬಳ್ಳಿ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ತನ್ನದೇ ಶವವೆಂದು ನಂಬಿಸುವಂತೆ ಮಾಡಿ ಆತ ಪರಾರಿಯಾಗಿದ್ದ. ಸಾಲಗಾರರಿಂದ ತಪ್ಪಿಸಿಕೊಳ್ಳುವುದರ ಜೊತೆಗೆ ವಿಮೆ ಹಣ ಪಡೆಯುವ ಉದ್ದೇಶದಿಂದ ಸ್ಮಶಾನದಿಂದ ಮತ್ತೊಂದು ಮೃತದೇಹ ತಂದು ಸುಟ್ಟು, ತನ್ನ ಬೈಕ್ ಹಾಗೂ ಗುರುತಿನ ಚೀಟಿ ಸ್ಥಳದಲ್ಲಿಟ್ಟು ನಾಪತ್ತೆಯಾಗಿದ್ದ …
Read More »ನಾಲ್ವರು ನಾಪತ್ತೆ ಕೇಸ್ಗೆ ತಿರುವು: ಕೋಟ್ಯಂತರ ರೂ ವಂಚಿಸಿ ನಾಪತ್ತೆಯಾಗಿರುವ ಸ್ನೇಹಿತನ ಹಾದಿ ಹಿಡಿದ್ರಾ ದಂಪತಿ?
ದಾವಣಗೆರೆ: ನಗರದ ಬನಶಂಕರಿ ಬಡಾವಣೆಯ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಮೇಶಕುಮಾರ್–ಜಯಶೀಲಾ ದಂಪತಿ ಇಬ್ಬರು ಮಕ್ಕಳೊಂದಿಗೆ ಆ.14ರಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದು, ಕೋಟ್ಯಂತರ ರೂ. ಹಣದ ಅವ್ಯವಹಾರದ ಹಿನ್ನೆಲೆಯಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ರಮೇಶಕುಮಾರ್ ಅವರ ಸ್ನೇಹಿತ ರಮೇಶ್ ‘ಈಶ್ವರಿ ಎಂಟರ್ಪ್ರೈಸಸ್’ ಹೆಸರಿನಲ್ಲಿ ಹೂಡಿಕೆದಾರರಿಗೆ ಶೇ.4ರಿಂದ 6ರಷ್ಟು ಲಾಭ ನೀಡುವುದಾಗಿ ನಂಬಿಸಿ 100ಕ್ಕೂ ಹೆಚ್ಚು ಜನರಿಂದ ₹7.27 ಕೋಟಿ ಸಂಗ್ರಹಿಸಿ 2023ರಲ್ಲಿ ನಾಪತ್ತೆಯಾಗಿದ್ದ. …
Read More »ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಯುವಕ
ಹಾವೇರಿ: ಶಿಗ್ಗಾವಿ ಪಟ್ಟಣದ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಆರೋಪ ಕೇಳಿಬಂದಿದೆ. ಜಾಫರ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಕೃತ್ಯ ಗಮನಿಸಿದ ಸ್ಥಳೀಯರು ಯುವಕನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಆತ ಸ್ಥಳೀಯರೊಂದಿಗೆ ಅವಾಚ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಜನರು ಆತನ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ …
Read More »ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವು, 20 ಮಂದಿಗೆ ಗಾಯ
ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್ವೊಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ರಸ್ತೆ ಬದಿಯ ಟ್ರೆಂಚ್ಗೆ ಬಿದ್ದ ಪರಿಣಾಮ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ನಲ್ಲಿ ಒಟ್ಟು 53 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 20 ಮಂದಿಯನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ …
Read More »ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ
ಬೆಂಗಳೂರಿನ ಇಂದಿರಾನಗರದ ಲಕ್ಷ್ಮಿಪುರಂ ಬಡಾವಣೆಯಲ್ಲಿ ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು 21 ವರ್ಷದ ಕವಿತಾ ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಗಸ್ಟ್ 6ರಂದು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ವೇಳೆ ಕಿರಣ್ ಎಂಬಾತನ ಕಿರುಕುಳ ಬೆಳಕಿಗೆ ಬಂದಿದೆ. 2024ರ ಮೇ ತಿಂಗಳಲ್ಲಿ ಸಂಬಂಧಿಕ ರಾಜು ಅವರನ್ನು ಕವಿತಾ ವಿವಾಹವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಮೂರು ವರ್ಷಗಳಿಂದ ಕವಿತಾ ಹಿಂದೆ ಬಿದ್ದಿದ್ದ ಕಿರಣ್, ಮದುವೆಯ …
Read More »ಸಿರವಾರ | ಅತ್ಯಾಚಾರವೆಸಗಿ ಯುವತಿ ಕೊಲೆ: ಮೂವರ ಬಂಧನ
ರಾಯಚೂರು: ಸಿರವಾರ ತಾಲ್ಲೂಕಿನ ಹೊಕ್ರಾಣಿಯಲ್ಲಿ ಅಶ್ವಿನಿ ತಿಮ್ಮಾರೆಡ್ಡಿ (22) ಎಂಬ ಯುವತಿಯನ್ನು ಕೊಲೆ ಮಾಡಲಾಗಿದ್ದು, ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರವಾರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬುಧವಾರ ಸಂಜೆ ಶೌಚಕ್ಕೆಂದು ಮನೆಯಿಂದ ಹೊರಗೆ ಹೋದ ಅಶ್ವಿನಿ ರಾತ್ರಿಯಾದರೂ ವಾಪಸ್ ಬಂದಿರಲಿಲ್ಲ. ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಗುರುವಾರ ಬೆಳಿಗ್ಗೆ ಬಾವಿಯಲ್ಲಿ ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





