Breaking News

BigTv News

ಹಸು ಕಟ್ಟುವ ವಿಚಾರಕ್ಕೆ ಅಪ್ಪನ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ದುಷ್ಟರು.. ಹೆದರಿದ ಅಪ್ರಾಪ್ತ ಪುತ್ರ, ದುರಂತ ಅಂತ್ಯ

ಮೈಸೂರು: ಮನೆ ಮುಂದೆ ಹಸು ಕಟ್ಟುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳ ವಿಕೋಪಕ್ಕೆ ತಿರುಗಿ, ನಂಜನಗೂಡು ತಾಲ್ಲೂಕಿನ ಸಿಂಗಾರಿಪುರದಲ್ಲಿ ದಾರುಣ ಘಟನೆ ನಡೆದಿದೆ. ಶಂಕರ್ (49) ಎಂಬವರ ಮೇಲೆ ಒಂಬತ್ತು ಮಂದಿ ಕಲ್ಲು ಹಾಗೂ ದೊಣ್ಣೆಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ವೇಳೆ ಶಂಕರ್ ಅವರ ಅಪ್ರಾಪ್ತ ಪುತ್ರ ನಾಗೇಂದ್ರನಿಗೂ ಆರೋಪಿಗಳು ಅವಾಚ್ಯವಾಗಿ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ತಂದೆಯ …

Read More »

ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ

ದಕ್ಷಿಣ ಕನ್ನಡ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ತಲವಾರು ತೋರಿಸಿ ಬೆದರಿಸಿ ₹8.35 ಲಕ್ಷ ನಗದು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ಮಯ್ಯದಿ (61) ಅವರು ಮಂಗಳೂರಿನ ಕಣ್ಣೂರಿನ ಸಿಮೆಂಟ್ ಹಾಗೂ ಕಬ್ಬಿಣದ ಸಗಟು ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಿಕೊಂಡು …

Read More »

ಚಿನ್ನಾಭರಣ ಕಳವು ಮಾಡಿದ್ದ ಅಪ್ರಾಪ್ತರಿಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿ ತಾಲೂಕಿನ ತಡಸ ಗ್ರಾಮದಲ್ಲಿ ಮನೆಯ ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ನುಗ್ಗಿ ₹6.39 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರಿಂದ ಒಟ್ಟು ₹6,89,965 ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಆ.17ರಂದು ಕಲೀಂ ಉಲ್ಲಾ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. 18 ಗ್ರಾಂ ಕಿವಿಯೋಲೆ, 22 ಗ್ರಾಂ ಚಿನ್ನದ ನಕ್ಲೇಸ್ ಹಾಗೂ 20 ಗ್ರಾಂ ಮಾಂಗಲ್ಯ …

Read More »

ಅರೆನಗ್ನ ಸ್ಥಿತಿಯಲ್ಲಿ ದಲಿತ ಯುವತಿಯ ಮೃತದೇಹ ಪತ್ತೆ; ಅತ್ಯಾಚಾರ ಶಂಕೆ

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಬಳಿ ದಲಿತ ಸಮುದಾಯದ ಯುವತಿ ಅಶ್ವಿನಿ ಛಲವಾದಿ (22) ಅವರ ಮೃತದೇಹ ಬಾವಿಯ ಮೆಟ್ಟಿಲ ಬಳಿ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರು ಆರೋಪಿಸಿದ್ದಾರೆ. ಬುಧವಾರ ರಾತ್ರಿ 7 ಗಂಟೆಗೆ ಬಯಲು ಬಹಿರ್ದೆಸೆಗೆ ತೆರಳಿದ್ದ ಅಶ್ವಿನಿ ಮನೆಗೆ ಮರಳಿರಲಿಲ್ಲ. ರಾತ್ರಿಯಿಡೀ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಬಾವಿಯ ಬಳಿ ಆಕೆಯ ಬಟ್ಟೆ, ಚಪ್ಪಲಿ ಹಾಗೂ ಕೆಲವು …

Read More »

ಬಸವರಾಜರೆಡ್ಡಿ ಆತ್ಮಹತ್ಯೆ ಪ್ರಕರಣ: ಇಬ್ಬರು ಪೊಲೀಸರು ಅಮಾನತು

ಕೊಪ್ಪಳ: ನಿವೇಶನ ವಿವಾದದಿಂದ ಬೇಸತ್ತು ಬಸವರಾಜರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ವಿ. ನಾರಾಯಣ ಹಾಗೂ ಹೆಡ್ ಕಾನ್‌ಸ್ಟೆಬಲ್ ಲಕ್ಷ್ಮಣ ಅವರನ್ನು ಅಮಾನತು ಮಾಡಲಾಗಿದೆ. ನಿವೇಶನ ವಿವಾದದ ಕುರಿತು ಬಸವರಾಜರೆಡ್ಡಿ ಠಾಣೆಗೆ ದೂರು ನೀಡಿದ್ದರೂ, ಆರೋಪಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಆ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೆಡ್ಡಿ, ಚಿಕಿತ್ಸೆ ಫಲಿಸದೆ ಮರುದಿನ ಮೃತಪಟ್ಟಿದ್ದರು. ಬಳಿಕ ಕುಟುಂಬಸ್ಥರು ಠಾಣೆಗೆ ಮುತ್ತಿಗೆ ಹಾಕಿ …

Read More »

ರ್‍ಯಾಪಿಡೋದಿಂದ ಸಿಕ್ಕಿದ್ದು ಕೇವಲ ಸುಳ್ಳು ಭರವಸೆ, ಬೈಕ್ ಟ್ಯಾಕ್ಸಿ ಕಂಪನಿಯ ಬಣ್ಣ ಬಯಲು ಮಾಡಿದ ಸಂತ್ರಸ್ತೆ-

ಬೆಂಗಳೂರು: ರ್‍ಯಾಪಿಡೋ ಬೈಕ್ ಟ್ಯಾಕ್ಸಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಂಟೀರಿಯರ್ ಡಿಸೈನರ್ ಸನಿ ಕೃಷ್ಣ (32), ಸಂಸ್ಥೆ ವೈದ್ಯಕೀಯ ವೆಚ್ಚ ಭರಿಸುವುದಾಗಿ ಹೇಳಿದ್ದರೂ ಈವರೆಗೆ ಯಾವುದೇ ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಜೂನ್ 17ರಂದು ನಡೆದ ಅಪಘಾತದಲ್ಲಿ ರ್‍ಯಾಪಿಡೋ ಚಾಲಕನ ನಿರ್ಲಕ್ಷ್ಯದಿಂದ ಟ್ರಾಕ್ಟರ್‌ಗೆ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದಾಗಿ ಅವರು ತಿಳಿಸಿದ್ದಾರೆ. ಅಪಘಾತದಲ್ಲಿ ಸನಿ ಅವರ 7 ಪಕ್ಕೆಲುಬುಗಳು ಮುರಿದಿದ್ದು, ಗುಲ್ಮವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲಾಗಿದೆ. ಮುಖದ ಮೂಳೆಗಳು ಜಜ್ಜಿದ್ದರಿಂದ ಪ್ಲಾಸ್ಟಿಕ್ …

Read More »

ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್: ಇದರ ಹಿಂದಿನ ಸೂತ್ರಧಾರಿಗಳ ಹೆಸರು ಬಹಿರಂಗ

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯಲ್ಲಿ ಮುಜುಗರಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಮಾಡಿದ ಆರೋಪದಡಿ ರೌಡಿಶೀಟರ್‌ಗಳಾದ ಧರ್ಮ ಹಾಗೂ ಸಾಯಿಕುಮಾರ್ ವಿರುದ್ಧ ಮಹಿಳಾ ಅಧಿಕಾರಿ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ. ವಿಡಿಯೋ ಕಾಲ್ ವೇಳೆ ಧರ್ಮ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡು ಬಳಿಕ ಸಾಯಿಕುಮಾರ್ ಮೂಲಕ ವೈರಲ್ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಡಿಯೋ …

Read More »

ಧಾರವಾಡದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕತ್ತು ಸೀಳಿ ಯುವಕನ ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನತೆ!

ಧಾರವಾಡ: ನಗರದ ಐನಾಕ್ಸ್ ಚಿತ್ರಮಂದಿರದ ಬಳಿ ಬೆಳ್ಳಂಬೆಳಿಗ್ಗೆ ಯುವಕನೋರ್ವನನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಲಕ್ಷ್ಮಿ ಸಿಂಗನಕೇರಿ ಬಡಾವಣೆಯ ನಿವಾಸಿ ಹನುಮಂತ ಅಣ್ಣಿಗೇರಿ (25) ಎಂದು ಗುರುತಿಸಲಾಗಿದೆ. ಹಂತಕರು ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿದು ವಿದ್ಯಾಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಏಳು ಪ್ರಯಾಣಿಕರು ಜಸ್ಟ್ ಮಿಸ್!

ಉಡುಪಿ: ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಸಂಚರಿಸುತ್ತಿದ್ದ ವೇಳೆ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ ಹಿನ್ನೆಲೆಯಲ್ಲಿ ನಿರ್ವಾಹಕ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ …

Read More »

ಜೈಲಲ್ಲಿ ಪೊಲೀಸರಿಂದಲೇ ವೇಶ್ಯಾವಾಟಿಕೆ ದಂಧೆ : ಆರೋಪಿಯಿಂದ ಸ್ಪೋಟಕ ವಿಡಿಯೋ ವೈರಲ್!

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಅಧಿಕಾರಿಗಳೇ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ರೌಡಿಶೀಟರ್ ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲಿನೊಳಗೆ ಹಣ ನೀಡಿದರೆ ಕೈದಿಗಳಿಗೆ ಮೊಬೈಲ್, ಮದ್ಯ ಸೇರಿದಂತೆ ವಿವಿಧ ವಸ್ತುಗಳು ಲಭ್ಯವಾಗುತ್ತವೆ ಎಂದು ಅವರು ಆರೋಪಿಸಿದ್ದಾರೆ. ಜೈಲಾಧಿಕಾರಿಗಳ ಕುಮ್ಮಕ್ಕಿನಿಂದಲೇ ಜೈಲಿನೊಳಗೆ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸುರೇಶ್ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳು ತಮ್ಮ ಬಳಿ …

Read More »