ಮಂಗಳವಾರ ಬೆಳಿಗ್ಗೆ ನಗರದಲ್ಲಿ ಮತ್ತೊಂದು ಕೊಲೆ ನಡೆದಿದೆ. ಸೋಮವಾರವಷ್ಟೇ ನಗರದ ಕೇಂದ್ರೀಯ ಬಸ್ ನಿಲ್ದಾಣ ಎದುರಿನ ಶಾಂತಿ ನಗರದಲ್ಲಿ ಕೊಲೆ ನಡೆದಿತ್ತು. ಮಂಗಳವಾರ ಬೆಳಿಗ್ಗೆ ರೌಡಿಶೀಟರ್ ವಿರೇಶ್ ಅಲಿಯಾಸ್ ಸಾರಥಿ (40) ಎಂಬಾತನ ಕಗ್ಗೊಲೆಯಾಗಿದೆ. ಕಲಬುರಗಿ ನಗರದ ಭವಾನಿ ನಗರದ ನಿವಾಸಿ ವಿರೇಶ್ ನನ್ನು. ಕಾಕಡೆ ಚೌಕ್ ನ ಲಂಗರ್ ಹನುಮಾನ್ ದೇವಸ್ಥಾನದ ಬಳಿ ಕರೆಯಿಸಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್..
ಬೆಂಗಳೂರಿನಲ್ಲಿ ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕ್ ನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ನಯಾಜ್ ಪಷಾ ಅಲಿಯಾಸ್ ನಾಜುದ್ದೀನ್, ರಿಜ್ವಾನ್, ಸದ್ದಾಂ, ಮತೀನ್, ದರ್ಶನ್, ರಾಹಿದ್, ವಸೀಂ ಬಂಧಿತ ಆರೋಪಿಗಳು.. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೈದರ್ ಅಲಿಯನ್ನು ಹತ್ಯೆ ಮಾಡಿದ್ದರು.ಬಂಧಿತ ಸದ್ದಾಂ, ರಾಹಿದ್, ವಾಸಿಂ, ರಿಜ್ವಾನ್ ವಿರುದ್ಧ ಶಿವಮೊಗ್ಗ ಜಿಲೆಯ ವಿವಿಧ ಠಾಣೆಗಳಲ್ಲಿ ರೌಡಿಶೀಟ್ ಇದೆ. ಕೊಲೆಯಾದ ಹೈದರ್ ಹಾಗೂ ಆರೋಪಿ ನಯಾಜ್ …
Read More »ಕಾಂಗ್ರೆಸ್ ಮುಖಂಡ ಹೈದರ್ ಕೊಲೆ ಕೇಸ್: ಹತ್ಯೆ ಹಿಂದಿದೆ ಕೈ ನಾಯಕರ ಕೈವಾಡ..!?
ಬೆಂಗಳೂರು,ಫೆ.25- ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ರೌಡಿ ಹೈದರಾಲಿ ಕೊಲೆಯಾಗಿದೆ ಎಂದು ಶಂಕಿಸಿರುವ ಆಶೋಕನಗರ ಠಾಣೆ ಪೊಲೀಸರು ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಆನೇಪಾಳ್ಯ ನಿವಾಸಿ ಹೈದರಾಲಿ(32) ಅಶೋಕನಗರ ರೌಡಿಶೀಟರ್. ಈತ ಶನಿವಾರ ರಾತ್ರಿ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಸ್ನೇಹಿತನ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದಾಗ ಮಧ್ಯರಾತ್ರಿ 1.15ರ ಸುಮಾರಿನಲ್ಲಿ ಫುಟ್ಬಾಲ್ ಸ್ಟೇಡಿಯಂ ಬಳಿ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಇವರ ಬೈಕ್ಗೆ ಕಾರಿನಿಂದ …
Read More »ರಾಜೀನಾಮೆ ಕೊಡಲು ಸಿದ್ಧ ಎಂದ ಪರಮೇಶ್ವರ್! ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಹೋಂ ಮಿನಿಸ್ಟರ್ ಹೇಳಿಕೆ
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ, ಮತ್ತೊಂದೆಡೆ ಸಚಿವ ಸಂಪುಟಕ್ಕೆ ಮೇಸರ್ ಸರ್ಜರಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡಲು ಸಿದ್ದ ಎನ್ನುವ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.ರಾಜೀನಾಮೆ ಕೊಡೋಕೆ ರೆಡಿ ಇದ್ದೀನಿತುಮಕೂರಿನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, “ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ …
Read More »ರಾಜ್ಯ ಸರ್ಕಾರ ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರಿಸಬೇಕು: ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ: ಸವಿತಾ ಸಮಾಜ ಬಾಂಧವರು ಶ್ರಮ ಹಾಗೂ ಕಾಯಕ ಜೀವಿಗಳಾಗಿದ್ದಾರೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಸುಂದರವಾಗಿ ಕಾಣುತ್ತಿದ್ದಾರೆ ಎಂದರೆ, ಇದರ ಹಿಂದೆ ಸವಿತಾ ಸಮಾಜದವರ ಶ್ರಮ ಅಡಿಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ, ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ …
Read More »ಉಡುಪಿ: ಪಶುಪಾಲನಾ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆ ಖಾಲಿ
ಉಡುಪಿ: ಜಿಲ್ಲಾ ಪಶುಪಾಲನಾ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆಗಳು ವರ್ಷಕ್ಕೂ ಅಧಿಕ ಕಾಲದಿಂದ ಖಾಲಿ ಬಿದ್ದಿದ್ದು, ಇನ್ನು ಕೂಡ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ನಡೆದಿಲ್ಲ. ಜಿಲ್ಲಾದ್ಯಂತ ಬೀದಿ ನಾಯಿಗಳ ಹಾವಳಿ ಸಹಿತ ಪಶುಗಳು ವಿವಿಧ ರೋಗಗಳಿಗೆ ತುತ್ತಾಗುವ ಬಗ್ಗೆ ಸ್ಥಳೀಯಾ ಡಳಿತ ನಡೆಸುವ ಸಭೆಗಳಲ್ಲಿ ಚರ್ಚೆಗಳು ಆಗುತ್ತಿದ್ದು, ಸಿಬ್ಬಂದಿಯ ಸಂಖ್ಯೆ ಇಲ್ಲದ ಹೊರತು ಯಾವುದೇ ಪರಿಹಾರ ಸಿಗುವಂತಹ ಸಾಧ್ಯತೆಗಳಿಲ್ಲ. ಜಿಲ್ಲಾ ಪಾಲಿಕ್ಲಿನಿಕ್, 7 ತಾಲೂಕು ಆಸ್ಪತ್ರೆಗಳು ಸೇರಿದಂತೆ ಜಿಲ್ಲೆಯಲ್ಲಿ 86 …
Read More »ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ: ನಿರ್ಮಲಾ ಸೀತಾರಾಮನ್ ಭೇಟಿಯಾದ ರಾಜ್ಯದ ಕಾಂಗ್ರೆಸ್ ಸಂಸದರು
ನವದೆಹಲಿ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಆಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆಯನ್ನು ರಾಜ್ಯದ ಕಾಂಗ್ರೆಸ್ ಸಂಸದರು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಂಸದರು,ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ, ಕೊಡುಗೆಯನ್ನ ನೀಡಿಲ್ಲವೆಂಬುದನ್ನ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಈ ಹಿಂದೆ ರಾಜ್ಯಕ್ಕೆ ನಿಗದಿಯಾದ ನಬಾರ್ಡ್ ರೀ ಫೈನಾನ್ಸ್ ನ್ನು ಕಡಿಮೆಗೊಳಿಸಿದ ಕುರಿತು ಹಾಗೂ ಎಲ್ಐಸಿ ಪ್ರತಿನಿಧಿಗಳ …
Read More »ಕೇರಳ; ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್ ಫ್ರೈ ನೀಡುವಂತೆ ಬಾಲಕನ ಮನವಿ: ಒಪ್ಪಿಗೆ ಸೂಚಿಸಿದ ಸಚಿವರು
ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು, ರೈಸ್ ಕೊಡುವ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒಪ್ಪಿಗೆ ಸೂಚಿಸಿದ್ದಾರೆ. ಅನ್ನದ ಬದಲು ಬಿರಿಯಾನಿ ಮತ್ತು ಫ್ರೈಡ್ ಚಿಕನ್ ಕೇಳುತ್ತಿರುವ ಬಾಲಕನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈಗ ಇದಕ್ಕೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಶಂಕು ಅವರ ಮನವಿಯನ್ನು ಪರಿಗಣಿಸುವುದಾಗಿ ಮತ್ತು ಅಂಗನವಾಡಿಯಲ್ಲಿ ಆಹಾರ ಮೆನುವನ್ನು …
Read More »ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ
ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ‘ಯುವ ಸ್ಪಂದನ ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ’ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸಂಸ್ಕೃತಿ ಅರಿವು ಮೂಡಿಸುವ ದೃಷ್ಟಿಯಿಂದ ‘ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ, ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ. ಆದುದರಿಂದ …
Read More »ಬಜೆಟ್ನಲ್ಲಿ ಕರ್ನಾಟಕದ ರೈಲ್ವೇ ಯೋಜನೆಗಳಿಗೆ 7564 ಕೋಟಿ ರೂ.ಅನುದಾನ ಹಂಚಿಕೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಬೆಂಗಳೂರು : 2025-26ನೇ ಸಾಲಿನ ಕೇಂದ್ರ ಸರಕಾರದ ಬಜೆಟ್ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7564 ಕೋಟಿ ರೂ.ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ದಕ್ಷಿಣ ಭಾರತದ ರಾಜ್ಯಗಳ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ನಲ್ಲಿ ಹಂಚಿಕೆಯಾಗಿರುವ ಅನುದಾನದ ಕುರಿತು ಹೊಸದಿಲ್ಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಯುಪಿಎ ಸರಕಾರದ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಹಂಚಿಕೆಯಾಗುತ್ತಿದ್ದ ಅನುದಾನಕ್ಕಿಂತ 9 ಪಟ್ಟು ಹೆಚ್ಚು ಇದಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





