Breaking News

BigTv News

ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರದಿಂದ ವಾರ್ಷಿಕ 60 ಸಾವಿರ ಕೋಟಿ ಖರ್ಚು: ಸಚಿವ ಡಿ.ಸುಧಾಕರ್

ಚಿತ್ರದುರ್ಗ : ಗ್ಯಾರಂಟಿ ಯೋಜನೆಗಳ ಪ್ರಚಾರ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಆದರೆ ರಾಜ್ಯದ ಜನತೆ ನಮ್ಮ ಪಕ್ಷವನ್ನು ನಂಬಿ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರು. ಅಧಿಕಾರಕ್ಕೆ ಬಂದ 3 ತಿಂಗಳ ಒಳಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. 19 ತಿಂಗಳಿಂದ ನಿರಾಂತಕವಾಗಿ ಯೋಜನೆಗಳು ಮುಂದುವರೆದಿವೆ. ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಮಾತುಗಳು ಕೇಳಿ ಬರುತ್ತಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. …

Read More »

ಸಿಎಚ್ಒಗಳಿಗೆ ವೇತನ ಹೆಚ್ಚಳ, ಸೇವಾವಧಿ ಪೂರ್ಣಗೊಳಿಸಿದವರಿಗೆ ಬೋನಸ್: ಸಿಎಂ ಭರವಸೆ

ಮೈಸೂರು: ಸಮುದಾಯ ಆರೋಗ್ಯ ಅಧಿಕಾರಿ(ಸಿಎಚ್‌ಒ)ಗಳಿಗೆ ಬಾಕಿ ಉಳಿದಿರುವ 2022-23ನೇ ಸಾಲಿನ ಶೇ 5ರಷ್ಟು ವೇತನ ಹೆಚ್ಚಿಸಲಾಗುವುದು. 3 ಹಾಗೂ 5 ವರ್ಷ ಸೇವಾವಧಿ ಪೂರ್ಣಗೊಳಿಸಿದವರಿಗೆ ಮಾರ್ಗಸೂಚಿ ಅನ್ವಯ ಬೋನಸ್‌ ನೀಡಲಾಗುವುದು ಮತ್ತು ಅಂತರಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಆರು ವರ್ಷ ಸೇವೆ ಪೂರೈಸಿದವರ ಕೆಲಸ ಕಾಯಂಗೊಳಿಸಬೇಕು’ ಎಂಬ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ (ಎನ್‌ಎಚ್‌ಎಂ) ಗುತ್ತಿಗೆ ನೌಕರರ ಸಂಘದಿಂದ …

Read More »

ಮೈಕ್ರೋ ಫೈನಾನ್ಸ್ ಸಾಲ ಕಡ್ಡಾಯವಾಗಿ ತುಂಬಬೇಕು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಸಾಲ ವಸೂಲಿ ಕಾನೂನಿನ ಚೌಕಟ್ಟಿನ ಮೂಲಕ ನೋಟಿಸ್ ನೀಡಿ ಪ್ರಕ್ರಿಯೆ ನಡೆಸಬೇಕು. ಹೊರತು ಯಾವುದೇ ಕಾರಣಕ್ಕೂ ಕಿರುಕುಳಕ್ಕೆ ಮುಂದಾಗಬಾರದು. ಸರ್ಕಾರದಿಂದ ಸಾಲಗಾರರ ಕಿರುಕುಳ ತಪ್ಪಿಸುಬಹದು ಹೊರತು‌ ಸಾಲ ಮನ್ನಾ ಅಸಾಧ್ಯ, ಸಾಲವನ್ನುಕಡ್ಡಾಯವಾಗಿ ತುಂಬಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಯಾವ ಉದ್ದೇಶ ಸಾಲ ನೀಡಲಾಗುತ್ತಿದೆ ಅದನ್ನು ಸರಿಯಾಗಿ ಪರಿಶೀಲನೆ ಮಾಡುವ ಅಗತ್ಯವಿದೆ. ಮೈಕ್ರೋ ಫೈನಾನ್ಸ್ …

Read More »

ಕಲ್ಯಾಣ ಕರ್ನಾಟಕ ಭಾಗ ಸಂಪೂರ್ಣ ನಿರ್ಲಕ್ಷ್ಯ: ಸಂಘಟನೆಗಳ ಆರೋಪ

ಕಲಬುರಗಿ: ನಿನ್ನೆ ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್ ಕಲ್ಯಾಣ ಕರ್ನಾಟಕದ ರಾಜಕೀಯ ಪಕ್ಷಗಳು, ವಿಶೇಷವಾಗಿ ಕಲಬುರಗಿ ಜಿಲ್ಲೆಯ ಬಹುತೇಕ ಎಲ್ಲಾ ಸಂಘಟನೆಗಳನ್ನು ನಿರಾಶೆಗೊಳಿಸಿತು. ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ರಾಜ್ಯ ಸರ್ಕಾರದ 5,000 ಕೋಟಿ ರೂಪಾಯಿಗಳ ಅನುದಾನಕ್ಕೆ ಸಮನಾಗಿ ಕಲ್ಯಾಣ ಕರ್ನಾಟಕಕ್ಕೆ ಬಜೆಟ್‌ನಲ್ಲಿ 5,000 ಕೋಟಿ ರೂಪಾಯಿಗಳನ್ನು ಘೋಷಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು …

Read More »

ಕೇಂದ್ರ ಸರ್ಕಾರದಿಂದ ಗ್ರಾಮೀಣ ಜನತೆಗೆ ಉದ್ಯೋಗ ನೀಡುವ ಹೊಸ ಯೋಜನೆ ಘೋಷಣೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ದಾಖಲೆಯ 8 ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಗ್ರಾಮೀಣ ಜನತೆಗೆ ಉದ್ಯೋಗ ನೀಡುವ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಹೌದು, ಗ್ರಾಮೀಣ ಪ್ರದೇಶದ ಜನರಿಗೆ ಹಳ್ಳಿಗಳಲ್ಲೇ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರದಿಂದ ಯೋಜನೆ ಜಾರಿಗೆ ತರಲಾಗುವುದು. ಗ್ರಾಮಗಳ ಮಟ್ಟದಲ್ಲೇ ವಿಫುಲಉದ್ಯೋಗ ಅವಕಾಶ ಕಲ್ಪಿಸುವುದು. ವಲಸೆ ಎನ್ನುವುದು ಆಯ್ಕೆಯೇ ಹೊರತು ಅನಿವಾರ್ಯವಲ್ಲ ಎಂದು ಸಾರುವುದು ಉದ್ದೇಶವಾಗಿದೆ. ಇನ್ನು …

Read More »

ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ ಸಿದ್ಧರಾಮಯ್ಯ

ಮೈಸೂರು: ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಇಡ್ಲಿ, ಮಸಾಲೆ ದೋಸೆ ಸವಿದ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯ ಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಜೊತೆಯಲ್ಲಿದ್ದು ಉಪಹಾರ ಸೇವಿಸಿದರು. ಮುಖ್ಯಮಂತ್ರಿ ಉಪಹಾರಕ್ಕೆ ಆಗಮಿಸಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಕಿಕ್ಕಿರಿದು …

Read More »

ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ, ಅವರಿಂದ ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ: ಸಿಎಂ

ಕೊಡಗು: ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ. ಅವರಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ. ಅವರಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. …

Read More »

ಕೇಂದ್ರ ಬಜೆಟ್ ನಲ್ಲಿ ಮಿತ್ರ ಪಕ್ಷಗಳ ರಾಜ್ಯಗಳಿಗೆ ಬಂಪರ್ ಗಿಫ್ಟ್

ನವದೆಹಲಿ : 2025-26ನೇ ಸಾಲಿನ ಕೇಂದ್ರ ನರೇಂದ್ರ ಮೋದಿ ಸರ್ಕಾರವು ಬಜೆಟ್ ಮಾಡಿದೆ. ಈ ಬಾರಿಯೂ NDA ಮಿತ್ರ ಪಕ್ಷಗಳ ರಾಜ್ಯಗಳಿಗೆ ಮೋದಿ ಸರ್ಕಾರ ಬಜೆಟ್​​ನಲ್ಲಿ ಹೆಚ್ಚಿನ ಆದ್ಯತೆ ನೀಡಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ವಿಷೇಶವಾಗಿ ಎನ್​​​ಡಿಎ ಮಿತ್ರವಾಗಿರುವ ಜೆಡಿಯು ಪಕ್ಷದ ಬಿಹಾರಕ್ಕೆ ಹಾಗೂ ಟಿಡಿಪಿ ಇರುವ ಆಂಧ್ರಪ್ರದೇಶಕ್ಕೆ ಹೆಚ್ಚಿನ ಒತ್ತು ಬಜೆಟ್​​ನಲ್ಲಿ ನೀಡಲಾಗಿದೆ ಎಂದು ವಿಪಕ್ಷ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಬಜೆಟ್​​ನಲ್ಲಿ ಬಿಜೆಪಿ …

Read More »

ಕಾಂಗ್ರೆಸ್ ಗೆ ಬಿಗ್ ಶಾಕ್: ಸಿಎಂ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ನಡುವೆ ಕಾಂಗ್ರೆಸ್‌ ಬಿಗ್‌ ಶಾಕ್‌ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರ ಸಮರ ಮತ್ತೆ ಮುಂದುವರೆದಿದ್ದು, ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರ ಸಮರ ಮತ್ತೆ ಮುಂದುವರೆದಿದೆ. ರಾಜ್ಯ ಕಾಂಗ್ರೆಸ್‌ ವಿರುದ್ಧ ಈ ಹಿಂದೆ ಪತ್ರ ಬರೆಯುವ ಮೂಲಕ ಸಮರ ಸಾರಿದ್ದ ಕಲಬುರಗಿ ಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಅವರು …

Read More »

ಕಿಸಾನ್ ಕ್ರೆಡಿಟ್ ಕಾರ್ಡ್‌ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ: ಬಜೆಟ್​ನಲ್ಲಿ ಘೋಷಣೆ

ನವದೆಹಲಿ: ಈ ಬಾರಿಯ ಬಜೆಟ್‌ನಲ್ಲಿ ದೇಶದ ಅನ್ನದಾತ ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಘೋಷಿಸಿದ್ದಾರೆ. ಇದರಿಂದ ರೈತರಿಗೆ ದೊಡ್ಡ ಮಟ್ಟದಲ್ಲಿ ಲಾಭವಾಗಲಿದ್ದು, ತಮ ಸರ್ಕಾರ ರೈತರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಈ ಹಿಂದೆ ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಯೋಜನೆಯಡಿ ಮೂರು ಲಕ್ಷದವರೆಗೆ ಸಾಲ ನೀಡಲಾಗುತ್ತಿತ್ತು. ಇದೀಗ …

Read More »