Breaking News

BigTv News

ಕೊಪ್ಪಳ: ಹುಲಿಗೆಮ್ಮ ದೇವಿ ದೇವಸ್ಥಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ 100 ಕೋಟಿ ಅನುದಾನ

ಕೊಪ್ಪಳ: ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್‌ಪ್ಲಾನ್‌ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು. ಸಂಸದ ರಾಜಶೇಖರ ಹಿಟ್ನಾಳ ಅವರು ಕೇಂದ್ರಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ತಕ್ಷಣ ಡಿಪಿಆರ್‌ ಕಳುಹಿಸಿಕೊಟ್ಟರೆ ನೀಡುವುದಾಗಿ ಹೇಳಿದೆ. ಹೀಗಾಗಿ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. …

Read More »

ಇಂದು ಕೇಂದ್ರ ಬಜೆಟ್‌ ಮಂಡನೆ: ರಾಜ್ಯದ ಬೇಡಿಕೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ವಿಶೇಷವಾಗಿ, …

Read More »

ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು: ಸಿಎಂ ಸಿದ್ಧರಾಮಯ್ಯ ಮನವಿ

ಬೆಂಗಳೂರು : ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ. ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ …

Read More »

ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುವ ಮೈಕ್ರೋ ಫೈನಾನ್ಸ್ ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ: ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ …

Read More »

ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪ್ರಶಂಸನೀಯ ಕ್ರೀಡಾಪಟುಗಳ ನೇಮಕಾತಿ ಶೇ.2 ರಿಂದ 3 ಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್‌ಟೇಬಲ್‌ ಹುದ್ದೆಯಿಂದ ಡಿವೈಎಸ್‌ಪಿ ಹುದ್ದೆವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ ಶೇ. 3ಕ್ಕೆ ಹೆಚ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು‌ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Read More »

ಬಜೆಟ್ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳ ಮಂಡನೆ: ಪ್ರಧಾನಿ ಮೋದಿ

ನವದೆಹಲಿ :ಬಜೆಟ್ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳನ್ನು ಮಂಡಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “ದೇಶದ ಜನರು ನನಗೆ ಮೂರನೇ ಬಾರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ, ಮತ್ತು ಇದು ನನ್ನ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್. 2047 ರಲ್ಲಿ ಭಾರತವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿರುವಾಗ… ಈ ಬಜೆಟ್ ಹೊಸ ವಿಶ್ವಾಸ, ಹೊಸ ಶಕ್ತಿಯನ್ನು ನೀಡುತ್ತದೆ ಎಂದು ನಾನು ಪೂರ್ಣ ನಂಬಿಕೆಯಿಂದ …

Read More »

ಕಲಬುರಗಿ: ರಮಾಬಾಯಿ ಅಂಬೇಡ್ಕರ್ ಅರಿವಿನ ರಥಯಾತ್ರೆ

ಕಲಬುರಗಿ : ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮದಲ್ಲಿ “ಮಾತೋಶ್ರೀ ರಮಾಬಾಯಿ ಅಂಬೇಡ್ಕರ್” ಅವರ ಜನ್ಮದಿನದ ಪ್ರಯುಕ್ತ “ರಮಾಬಾಯಿ ಅಂಬೇಡ್ಕರ್ ಅರಿವಿನ ರಥಯಾತ್ರೆ” ಕಾರ್ಯಕ್ರಮಕ್ಕೆ ಖ್ಯಾತ ಉದ್ಯಮಿ ಮಲ್ಲಿಕಾರ್ಜುನ್ ಗಾಯಕವಾಡ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದ ಸಂಚಾಲಕಿ ಹಾಗೂ ನಾರಿಶಕ್ತಿ ಕರ್ನಾಟಕ ಮಹಿಳಾ ಸಂಘಟನೆಯ ಸಂಸ್ಥಾಪಕರಾದ ಅಶ್ವಿನಿ ಮದನಕರ್ ಮಾತನಾಡಿ, ಈ ದೇಶಕ್ಕೆ ರಮಾಬಾಯಿ ಅಂಬೇಡ್ಕರ್ ಅವರು ಕೊಟ್ಟ ಕೊಡುಗೆ ಅಪಾರವಾದದ್ದು, ರಮಾಬಾಯಿ ಅಂಬೇಡ್ಕರ್ ಅವರು ತಮ್ಮ ಅನಾರೋಗ್ಯದ ನಿಮಿತ್ತ ಕರ್ನಾಟಕದ …

Read More »

ಸ್ವಪಕ್ಷದ ವಿರುದ್ಧ ಗುಡುಗಿರುವ ಶ್ರೀರಾಮಲು: ಹೈಕಮಾಂಡ್‌ ಬುಲಾವ್

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಅಸಮಾಧಾನ ಭುಗಿಲೆದ್ದಿರುವ ಭಿನ್ನಮತ ಯಾವುದೇ ಕಾರಣಕ್ಕೂ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಬಂಡೆದ್ದಿದೆ. ಅದರಲ್ಲೂ ವಿಜಯೇಂದ್ರ ವಿರುದ್ಧ ವಿವಿಧ ಸಮಾಜದ ಪ್ರಮುಖ ನಾಯಕರೇ ಬಂಡಾಯದ ಕಹಳೆಯನ್ನು ಊದಿರುವುದು ಬಿಜೆಪಿ ವರಿಷ್ಠರಿಗೆ ತಲೆನೋವು ತಂದಿದೆ. ಇತ್ತ ಶ್ರೀರಾಮುಲು ಪಕ್ಷ ಬಿಡುವ ಬಗ್ಗೆ ಮಾತ್ನಾಡಿರುವುದು ಬಿಜೆಪಿ ದೊಡ್ಡ …

Read More »

ಮಂಡ್ಯ; ಕೃಷಿ, ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರದಿಂದ ಅನುಮೋದನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ- 42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಘೋಷಣೆ ಮಾಡಿದ ಒಂದು ವರ್ಷದೊಳಗೆ ವಿವಿ …

Read More »

ಬಡವರು ಮತ್ತು ಮಧ್ಯಮ ವರ್ಗದವರಿಗೆ ಅಸಾಮಾನ್ಯವಾದ ಬಜೆಟ್‌: ಪ್ರಧಾನಿ ಮೋದಿ

ನವದೆಹಲಿ : ಬಡವರು ಮತ್ತು ಮಧ್ಯಮ ವರ್ಗದವರಿಗೆ ಉದಾರ ಬಜೆಟ್ ನೀಡುವ ಸಾಧ್ಯತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸುಳಿವು ನೀಡಿದ್ದಾರೆ. ಬಡವರು ಮತ್ತು ಮಧ್ಯಮ ವರ್ಗದವರ ಬಗ್ಗೆ ಲಕ್ಷ್ಮಿ ವಿಶೇಷವಾಗಿ ಉದಾರವಾಗಿರಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಮೋದಿ ಹೇಳಿದರು. ಖಚಿತವಾಗಿ ಹೇಳುವುದಾದರೆ, ಅವರು ವಿವೇಕ ಮತ್ತು ಸಾಧನೆಯ ಅಗತ್ಯತೆಯ ಬಗ್ಗೆಯೂ ಮಾತನಾಡಿದರು. ಮೂರನೇ ಅವಧಿಯಲ್ಲಿ ಮೋದಿ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಅನ್ನು ಮಂಡಿಸುವ ಒಂದು ದಿನದ …

Read More »