ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಮಾಹಿತಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.
Read More »ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಿಗೆ ಬಿ ಖಾತಾ ನೀಡುವಂತೆ ಸಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಉಳಿದ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರದೇಶ ವ್ಯಾಪ್ತಿಯಲ್ಲಿ ಯಾವುದೇ ದಾಖಲೆಗಳಿಲ್ಲದ ನಿವೇಶನಗಳಿಗೆ ‘ಬಿ’ ಖಾತಾ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಒಂದು ಬಾರಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಿ, ಎಲ್ಲ ಅಕ್ರಮ ನಿವೇಶನಗಳನ್ನು ಸಕ್ರಮಗೊಳಿಸಿ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಅನಧಿಕೃತ ಬಡಾವಣೆ ತಲೆ ಎತ್ತದಂತೆ ನೋಡಿಕೊಳ್ಳಿ ಎಂದು ಮುಖ್ಯಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ …
Read More »ರೈತರಿಗೆ ಗುಡ್ ನ್ಯೂಸ್: ಸ್ಪ್ರಿಂಕ್ಲರ್ ಗೆ ಶೇ.90 ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಮಡಿಕೇರಿ: 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, …
Read More »ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಭಾಗಿಯಾಗಿದ್ದಾರೆ.
Read More »ಅಲೆಮಾರಿ ಸಮುದಾಯಗಳಿಗೆ ಒಳಮೀಸಲಲ್ಲಿ ಪ್ರತ್ಯೇಕ ವರ್ಗ ಸೃಷ್ಟಿಸುವಂತೆ ಬೇಡಿಕೆ
ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಕೊರಮ, ಕೊರಚ, ಕುರುವನ್, ಕೇಪ್ಮಾರಿಸ್ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿಯ ನಿಯೋಗವು ಬುಧವಾರ ಒಳ ಮೀಸಲು ವಿಚಾರದಲ್ಲಿ ಸರ್ಕಾರ ರಚಿಸಿರುವ ನ್ಯಾ.ನಾಗಮೋಹನದಾಸ್ ನೇತೃತ್ವದ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಯನ್ನು ಪ್ರಸ್ತಾಪಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿರುವ ಅಧಿಸೂಚಿತ ಸಮುದಾಯ (ಡಿಎನ್ಟಿಎಸ್) ವಿಮುಕ್ತ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ವರ್ಗವನ್ನು ಸೃಷ್ಟಿಸಬೇಕು. ಆ ವರ್ಗದಲ್ಲಿ ಕೊರಚ, ಕೊರಮ, ಕುರವನ್ …
Read More »ಮಧ್ಯಂತರ ವರದಿ ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹ
ಹಾಸನ: ಒಳಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಕೂಡಲೇ ಈಗಾಗಲೇ ಸಂಗ್ರಹಿಸಿರುವ ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಆದರೂ …
Read More »ಪ್ರಸಕ್ತ ವರ್ಷದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ 1,468 ಕೋಟಿ ರೂ. ವೆಚ್ಚ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ಸಣ್ಣ ನೀರಾವರಿ ಇಲಾಖೆಗೆ 1,577 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 1,468 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವರ್ಷ ಸಣ್ಣ ನೀರಾವರಿ ಇಲಾಖೆಯ 9,449 ಹೆಕ್ಟೇರ್ ಹೊಸ ಅಚ್ಚುಕಟ್ಟು ಸೃಷ್ಟಿಸಲಾಗಿದೆ ಎಂದರು. ರಾಜ್ಯದಲ್ಲಿ ಸಣ್ಣ ನೀರಾವರಿ …
Read More »ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸುವ ಜತೆಗೆ ಶಿಕ್ಷೆಯ ಪ್ರಮಾಣ ಹೆಚ್ಚಳವಾಗುವಂತೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜಾಗೃತ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕರಣಗಳಿಗೆ ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಿ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ …
Read More »ಕೆಎಎಸ್ ಪರೀಕ್ಷೆ ರದ್ದು: ಪ್ರಶ್ನೆ ಪತ್ರಿಕೆ ದೋಷದ ಕುರಿತು ಕಾನೂನು ಹೋರಾಟ ಆರಂಭ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆ ದೋಷದ ಕುರಿತು ಕಾನೂನು ಹೋರಾಟ ಆರಂಭವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಗೆ ನಡೆದ ಮರು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಹಲವು ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದಾರೆ. ಕೆಪಿಎಸ್ಸಿ 2024 ಆಗಸ್ಟ್ ಮತ್ತು ಡಿಸೆಂಬರ್ 29ರಂದು ಎರಡು ಬಾರಿ ಈ ಪರೀಕ್ಷೆಗಳನ್ನು ನಡೆಸಿದೆ. ಆದರೆ ಎರಡು ಬಾರಿಯೂ …
Read More »ಕಲ್ಯಾಣ ಕರ್ನಾಟಕ ಭಾಗಕ್ಕೆ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ಅನುದಾನಕ್ಕೆ ಕ್ರಮವಹಿಸಲು ನಿರ್ಮಲಾ ಸೀತಾರಾಮನ್ ಗೆ ಮಲ್ಲಿಕಾರ್ಜುನ್ ಖರ್ಗೆ ಪತ್ರ
ಬೆಂಗಳೂರು: ಹೈದರಾಬಾದ್ ಕರ್ನಾಟಕ(ಈಗಿನ ಕಲ್ಯಾಣ ಕರ್ನಾಟಕ) ಪ್ರದೇಶದ ಅಭಿವೃದ್ದಿಗಾಗಿ ಈ ಸಲ ಕೇಂದ್ರದ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಪತ್ರ ಬರೆದಿದ್ದಾರೆ. ಪತ್ರದ ಸಾರಾಂಶ: ಕಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕ, ಆರೋಗ್ಯ, ಮೂಲಭೂತ ಸೌಲಭ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು ಈ ಎಲ್ಲ ಕ್ಷೇತ್ರಗಳ ಅಭಿವೃದ್ದಿ ಪಡಿಸಲು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





