Breaking News

BigTv News

ರಾಜ್ಯದ ಅಭಿವೃದ್ದಿ ಪ್ರಗತಿಗೆ ಕೇಂದ್ರದ ಮೆಚ್ಚುಗೆ: 8 ಹೊಸ ಜಲಾನಯನ ಯೋಜನೆಗಳಿಗೆ ರೂ.99 ಕೋಟಿ ಬಿಡುಗಡೆ

ಬೆಂಗಳೂರು :ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ ರೂ.99 ಕೋಟಿಗಳು ಬಿಡುಗಡೆಗೆ ಮಂಜೂರಾತಿ ನೀಡಿದೆ. ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ ಸಿಂಗ್ ಚೌವ್ಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ …

Read More »

ಅಭಿವೃದ್ದಿ ಕೆಲಸಗಳಿಗಾಗಿ 48,000 ಕೋಟಿ ರೂ. ಸಾಲ ಮಾಡಲು ಯೋಜಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ತೆರಿಗೆ ಆದಾಯವನ್ನು ಪಂಚಗ್ಯಾರಂಟಿ, ಬದ್ಧ ವೆಚ್ಚಕ್ಕಾಗಿ ಬಳಕೆ ಮಾಡುತ್ತಿದೆ. ಇತ್ತ ಅಭಿವೃದ್ಧಿಗಾಗಿನ ಬಂಡವಾಳ ವೆಚ್ಚಕ್ಕಾಗಿ ಸಂಪೂರ್ಣ ಸಾಲವನ್ನೇ ನೆಚ್ಚಿಕೊಂಡಿದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ 48,000 ಕೋಟಿ ರೂ.ಸಾಲ ಮಾಡಲು ಯೋಜಿಸಿದೆ. ಆರ್ಥಿಕ ವರ್ಷದ ಮುಕ್ಕಾಲು ಭಾಗ ಪೂರ್ಣವಾಗಿದೆ. ಕೊನೆಯ ತ್ರೈಮಾಸಿಕ ಚಾಲ್ತಿಯಲ್ಲಿದೆ. ಕಾಂಗ್ರೆಸ್‌‍ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ ನಡೆಸುತ್ತಿದೆ. ತನ್ನ ಸ್ವಂತ ತೆರಿಗೆ ಆದಾಯದ ಬಹುಪಾಲನ್ನು …

Read More »

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಗಡದ ಸಮುದಾಯದವರಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು 5 ಲಕ್ಷ ರೂ. ಸಹಾಯಧನ

ಚಿತ್ರದುರ್ಗ: 2024-2025ನೇ ಸಾಲಿನಲ್ಲಿ ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ರೂ.5 ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ. ತರಬೇತಿ ಹಾಗೂ ಸಹಾಯಧನಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ-06 ಮತ್ತು ಪರಿಶಿಷ್ಟ …

Read More »

ದೇವದಾಸಿ ಪದ್ಧತಿ ನಡೆದದ್ದು ಎಲ್ಲಿಯಾದರೂ ಗಮನಕ್ಕೆ ಬಂದರೆ ಡಿಸಿ-ಎಸ್ಪಿ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ವರಿಸಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ವರಿಕೆ ನೀಡಿದ್ದು, ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು …

Read More »

ಮೈಕ್ರೋ ಫೈನಾನ್ಸ್ ಕಿರುಕುಳ ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಎಲ್ಲಾ ಡಿಸಿಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ.ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. …

Read More »

ಶೀಘ್ರವೇ 1200 ಪಿಎಸ್ಐ, 12 ಸಾವಿರ ಪೊಲೀಸರ ನೇಮಕಾತಿ: ಸಚಿವ ಪರಮೇಶ್ವರ್

ಕಲಬುರಗಿ: ರಾಜ್ಯದಲ್ಲಿ ಆರರಿಂದ ಏಳು ತಿಂಗಳಲ್ಲಿ 1200 ಪಿಎಸ್‌ಐ ಗಳ ನೇಮಕಾತಿ ಮಾಡಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಯ ಕೊರತೆ ಇದೆ. ರಾಜ್ಯದಲ್ಲಿ ಅದನ್ನು ಕೂಡ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. 6-7 ತಿಂಗಳಲ್ಲಿ 1200 ಪಿಎಸ್‌ಐಗಳ ನೇಮಕಾತಿ ನಡೆಸಲಿದ್ದು, ರಾಜ್ಯದಲ್ಲಿ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಯ ಕೊರತೆ …

Read More »

ಸಿಎಂ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಹಕಾರ ಸಚಿವ ರಾಜಣ್ಣ, ನಗರಾಭಿವೃದ್ಧಿ ಸಚಿವ ಸುರೇಶ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನರೇಂದ್ರಸ್ವಾಮಿ, ವಿಧಾನ …

Read More »

ಕಾಂಗ್ರೆಸ್ ಅವಧಿಯಲ್ಲಿ ಅತೀ ಹೆಚ್ಚು ಬಾರಿ ಸಂವಿಧಾನ ತಿದ್ದುಪಡಿ: ಸಂಸದ ಗೋವಿಂದ ಕಾರಜೋಳ ಆರೋಪ

ತುಮಕೂರು: ದೇಶಕ್ಕೆ ಸಂವಿಧಾನ ಅರ್ಪಣೆ ಮಾಡಿ 75 ವರ್ಷವಾಯಿತು. ಈ ಅವಧಿಯಲ್ಲಿ ಅತಿ ಹೆಚ್ಚು ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ‌ ಆರೋಪಿಸಿದರು. ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆಯಿಂದ ಸೋಮವಾರ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸನ್ಮಾನ ಹಾಗೂ ‘ಸಂವಿಧಾನ ಬದಲಾಯಿಸಿದ್ದು ಯಾರು’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನದ …

Read More »

ರೈತರಿಗೆ ಗುಡ್ ನ್ಯೂಸ್: ಫೆ.24 ರಂದು ಕಿಸಾನ್ ಸಮ್ಮಾನ್ ನಿಧಿಯ 2 ಸಾವಿರ ರೂ. ಖಾತೆಗೆ ಜಮಾ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19 ನೇ ಕಂತು ಫೆಬ್ರವರಿ 24ರಂದು ಬಿಡುಗಡೆಯಾಗಲಿದ್ದು, ಅದನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24ರಂದು ಬಿಹಾರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ನೇರ ಲಾಭ ವರ್ಗಾವಣೆ ವ್ಯವಸ್ಥೆಯಡಿಯಲ್ಲಿ ಈ ಮೊತ್ತವನ್ನು …

Read More »

ಜನರ ಪ್ರಾಣಕ್ಕೆ ಕಂಟಕವಾದ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಿ ನೆಪದಲ್ಲಿ ಸಾಲಗಾರರನ್ನು ಇನ್ನಿಲ್ಲದಂತೆ ಕಾಡಿ ಕಂಗೆಡಿಸಿವೆ. ಸಾಕಷ್ಟು ಜನರ ಪ್ರಾಣಕ್ಕೆ ಕಂಟಕವಾಗಿವೆ. ಜೀವ ಹಿಂಡುವ ಇಂತಹ ಪೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಕಾನೂನು ತಿದ್ದುಪಡಿಗೆ ತುರ್ತಾಗಿ ಸುಗ್ರೀವಾಜ್ಞೆ ರೂಪಿಸಲು ಸರ್ಕಾರ ಮುಂದಾಗಿದೆ. ಈ ನಡುವೆ ಪೊಲೀಸ್ ಇಲಾಖೆ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಮೂಗುದಾರ ಹಾಕುವ ನಿಟ್ಟಿನಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಿರಿಯ …

Read More »