Breaking News

BigTv News

ನಾನು ಯಾವಾಗಲೂ ನಿಮ್ಮ ಜೊತೆ ಇರುತ್ತೇನೆ: ಯತ್ನಾಳಗೆ ಶ್ರೀರಾಮಲು ಭರವಸೆ

ಬಳ್ಳಾರಿ: ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಶಾಸಕ ಜನಾರ್ದನ ರೆಡ್ಡಿ ನಡುವಿನ ಸಂಘರ್ಷದ ಬೆನ್ನಲ್ಲೇ ಶ್ರೀರಾಮುಲು ಅವರನ್ನು ತಮ್ಮ ಬಣದ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಭಿನ್ನ ಬಣದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಿಸುತ್ತಿದ್ದು, ಈ ಸಂಬಂಧ ಶ್ರೀರಾಮುಲು ಹಾಗೂ ಯತ್ನಾಳ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ಹೇಳಿವೆ. ಅವಕಾಶ ಒದಗಿ ಬಂದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗುವ ಅವಕಾಶವನ್ನು ಸಹ ನೀಡಲಾಗುವುದು ಎಂದು ಯತ್ನಾಳ್ ಅವರು ಶ್ರೀರಾಮುಲುಗೆ …

Read More »

ನಗರ ಪಟ್ಟಣ ಸ್ಥಳೀಯ ವ್ಯಾಪ್ತಿಯ ಅನಧಿಕೃತ ಮನೆ, ನಿವೇಶನಗಳಿಗೆ ಬಿ-ಖಾತಾ ನೀಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನಗರ-ಪಟ್ಟಣ ಸ್ಥಳೀಯ ವ್ಯಾಪ್ತಿಯಲ್ಲಿ ಅನಧಿಕೃತ ಮನೆ, ನಿವೇಶನಗಳ ಮಾಲೀಕರಿಗೆ ಬಿ-ಖಾತಾ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಒಂದು ಬಾರಿಗೆ ಅನ್ವಯಿಸಿ ಇ-ಖಾತಾಗೆ ಸಮಾನಾಂತರವಾದ ಬಿ-ಖಾತಾ ನೀಡಲಿದೆ. ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಈ ವಿಷಯ ತಿಳಿಸಿ, ಅನಧಿಕೃತ ಮನೆ/ನಿವೇಶನಗಳ ಮಾಲೀಕರು ಇದಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗಿಲ್ಲ, ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿಲ್ಲ. ಆನ್‌ಲೈನ್ ಮುಖೇನ ಬಿ-ಖಾತಾ (ಇ-ಆಸ್ತಿ) ತಲುಪಲಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಾಜ್ಯವ್ಯಾಪಿ ಅಭಿಯಾನ ನಡೆಯಲಿದೆ …

Read More »

ಮುಂದಿನ 5 ವರ್ಷಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯ ಎಲ್ಲ ಹುದ್ದೆಗಳು ಭರ್ತಿ: ಸಚಿವ ಎಂ.ಸಿ.ಸುಧಾಕರ್‌

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ ಮುಂದಿನ 5 ವರ್ಷಗಳಲ್ಲಿ ಭರ್ತಿ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯ ಜತೆಗೂ ಚರ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ತಿಳಿಸಿದರು. ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುಂದಿನ ಫೆಬ್ರವರಿ ತಿಂಗಳ ಅಂತ್ಯದ ವೇಳೆಗೆ 310 ಮಂದಿ ಪದವಿ ಕಾಲೇಜುಗಳ …

Read More »

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರವ್ಯಾಪಿ ಜನಗಣತಿ: ರಾಹುಲ್ ಗಾಂಧಿ

ಮಧ್ಯಪ್ರದೇಶ: ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವಮಾನಿಸುತ್ತಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮಧ್ಯ ಪ್ರದೇಶದಲ್ಲಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸಲಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಎಂದಿಗೂ ಮಾಡುವುದಿಲ್ಲ. ಏಕೆಂದರೆ ಅವರು …

Read More »

ರಾಜ್ಯಪಾಲರ ಭಾಷಣ ವೇಳೆ ಕುಸಿದು ಬಿದ್ದ ಪೊಲೀಸ್ ಕಮೀಷನರ್

ಕೇರಳ: ಹಲವಾರು ಸಂದರ್ಭಗಳಲ್ಲಿ ಪೊಲೀಸ್​​ ಇಲಾಖೆಯನ್ನು ಜನಸಾಮಾನ್ಯರು ಬಾಯಿಗೆ ಬಂದಂತೆ ಬೈಯುವುದು ಉಂಟು. ಪೊಲೀಸರನ್ನು ಕೂಡ ಮನಸೋ ಇಚ್ಛೆ ಬೈಯುತ್ತಾರೆ. ರಸ್ತೆ ಬದಿಗಳಲ್ಲಿ ಚಿಕ್ಕಪುಟ್ಟ ವ್ಯಾಪಾರ ಮಾಡಿ ಹೊಟ್ಟೆ ತುಂಬಿಸಿಕೊಳ್ಳುವವರಿಂದಲೂ 5-10 ರೂಪಾಯಿ ಚಂದಾ ವಸೂಲಿ ಮಾಡುವುದು, ಬೇಕಾಬಿಟ್ಟೆ ಅಂಗಡಿಗಳಿಗೆ ಹೋಗಿ ಪುಕ್ಕಟೆಯಾಗಿ ತಿನ್ನುವುದು. ಇಂಥ ಕೆಲವು ಕೆಲಸಗಳನ್ನು ಕೆಲವು ಪೊಲೀಸರು ಮಾಡುವ ಕಾರಣದಿಂದ ಇಡೀ ಪೊಲೀಸ್ ಇಲಾಖೆಯನ್ನೇ ಕೆಟ್ಟ ದೃಷ್ಟಿಯಿಂದ ನೋಡುವ ದೊಡ್ಡ ವರ್ಗವೇ ಇದೆ. ಆದರೆ ಹಲವು …

Read More »

ಕೊಪ್ಪಳ: ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದ ಜಿ.ಪಂ. ಸಿಇಒ

ಕೊಪ್ಪಳ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಶಾಲಾ ಶೌಚಾಲಯಗಳ ನಿರ್ಮಾಣ ಕಾಮಗಾರಿಗಳ ಗುಣಮಟ್ಟವನ್ನು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಇಂದು ಪರಿಶೀಲಿಸಿ, ಗುಣಮಟ್ಟ ಕಾಯ್ದುಕೊಳ್ಳಲು ಕರೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಹಾಲವರ್ತಿ, ಗಿಣಿಗೇರಾ ಹಾಗೂ ಚಿಕ್ಕಬೊಮ್ಮನಾಳ ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಂಡ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳನ್ನು ಸೋಮವಾರ ಪರಿಶೀಲಿಸಿದರು. ಶಾಲಾ ಶೌಚಾಲಯ ಹಾಗು ಸಂಜೀವಿನಿ ಸಂಘದ ಶೆಡ್ ಕಾಮಗಾರಿಗಳ ಪರಿಶೀಲನೆ: ಗ್ರಾಮ …

Read More »

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆದ್ಯತೆ ನೀಡಬೇಕು: ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹ

ಕಲಬುರಗಿ: ಕೇಂದ್ರ ಸರ್ಕಾರ 2025ನೇ ಸಾಲಿಗೆ ಮಂಡಿಸುವ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆದ್ಯತೆ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ, ‘ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಿರ್ಲಕ್ಷಿಸಿದೆ. ಇದನ್ನು ಸಮಿತಿ ಬಲವಾಗಿ ಖಂಡಿಸುತ್ತದೆ. ಫೆ.1ರ ಬಜೆಟ್‌ನಲ್ಲಿ ನಮ್ಮ ಪ್ರದೇಶವನ್ನು ಮತ್ತೆ ನಿರ್ಲಕ್ಷಿಸಿದರೆ ಸಮಿತಿ ಈಗಾಗಲೇ …

Read More »

ರಾಜ್ಯ ಸರ್ಕಾರದಿಂದ ಗ್ರಾಮ ಸಹಾಯಕರು, ಲೆಕ್ಕಿಗರಿಗೆ ಪ್ರೋತ್ಸಾಹಧನ ನೀಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು …

Read More »

ಕಂದಾಯ ಇಲಾಖೆಗಳ ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ:‌ ಕಂದಾಯ ದಾಖಲೆಗಳ ಡಿಜಟಲೀಕರಣದಿಂದ ಭವಿಷ್ಯದಲ್ಲಿ ಅಕ್ರಮ ತಡೆಯಲು ಸಾಧ್ಯವಾಗಲಿದೆ. ಜೊತೆಗೆ ಸಾರ್ವಜನಿಕರ ಕೈಗೂ ದಾಖಲೆಗಳು ಸರಳವಾಗಿ ಸಿಗುವಂತಾಗಲಿದೆ’ ಎಂದು ಐ.ಟಿ.-ಬಿ.ಟಿ. ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ದಾಖಲೆಗಳ ಡಿಜಿಟಲೀಕರಣಗೊಳಿಸುವ ‘ಭೂ ಸುರಕ್ಷಾ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಭೂ ಸುರಕ್ಷಾ ಯೋಜನೆಯ ಪ್ರಾಯೋಗಿಕ ಅನುಷ್ಠಾನಕ್ಕಾಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕು ಆಯ್ದುಕೊಳ್ಳಲಾಗಿತ್ತು. 2024ರ …

Read More »

ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಪಂಜಾಬ್ ಸಿಎಂ ಕಿಡಿ

ಚಂಡೀಗಢ: ಅಮೃತಸರದಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಧ್ವಂಸ ಮಾಡಿದ ದುಷ್ಕರ್ಮಿಗಳ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರವಾಗಿ ಖಂಡಿಸಿದ್ದಾರೆ. ಧ್ವಂಸ ಕೃತ್ಯದ ಹಿಂದೆ ಯಾರ ಕೈವಾಡವಿದೆ, ಆರೋಪಿಗಳು ಯಾರು ಎಂಬುದು ಸದ್ಯದ ಮಟ್ಟಿಗೆ ತಿಳಿಯದ ಹಿನ್ನೆಲೆ ಸಿಎಂ ಕೆರಳಿದ್ದಾರೆ. ಈ ವಿಷಯದಲ್ಲಿ ಯಾರನ್ನೂ ಕ್ಷಮಿಸುವುದಿಲ್ಲ ಎಂದು ಗುಡುಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಈ ಘಟನೆ ನಡೆದಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆ ಬಗ್ಗೆ …

Read More »