ನೆಲಮಂಗಲ: ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದು ಮುಖ್ಯೋಪಾಧ್ಯಾಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 53 ವರ್ಷದ ಲಕ್ಷ್ಮೀಪ್ರಸಾದ್ ಎಂದು ಗುರುತಿಸಲಾಗಿದ್ದು, ಮಧುಗಿರಿ ಬಳಿಯ ಶಾಲೆಯೊಂದರಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಲಕ್ಷ್ಮೀಪ್ರಸಾದ್ ಡೆತ್ನೋಟ್ ಬರೆದಿಟ್ಟಿದ್ದು, ತಮ್ಮ ಸಾವಿಗೆ ಪತ್ನಿಯ ಅನೈತಿಕ ಸಂಬಂಧವೇ ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್ನೋಟ್ನಲ್ಲಿನ ಆರೋಪಗಳ ಆಧಾರದಲ್ಲಿ ಪೊಲೀಸರು …
Read More »‘ನಾವು ಅಕ್ಕ-ತಮ್ಮ, ನಮ್ಮ ಸಂಬಂಧಕ್ಕೆ ಕಳಂಕ ಹಚ್ಚಬೇಡಿ’; ರೈಲಿಗೆ ತಲೆಕೊಟ್ಟ ಯುವಕ-ಯುವತಿ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ಬಳಿ ಯುವಕ-ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕುಣಿಗಲ್ ಮೂಲದ ರೋಹಿಣಿ ಹಾಗೂ ಬೆಂಗಳೂರು ಮೂಲದ ನವೀನ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇಬ್ಬರೂ ಡೆತ್ನೋಟ್ ಬರೆದಿಟ್ಟಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಡೆತ್ನೋಟ್ನಲ್ಲಿ ತಮ್ಮ ಸಂಬಂಧಕ್ಕೆ ಕಳಂಕ ಹಚ್ಚಬಾರದು ಎಂದು ಮನವಿ ಮಾಡಿದ್ದಾರೆ. ತಾವು ರಕ್ತ ಸಂಬಂಧಿಕರಲ್ಲದಿದ್ದರೂ ಸಹೋದರ-ಸಹೋದರಿಯಂತೆ ಅನ್ಯೋನ್ಯವಾಗಿದ್ದೆವು. ಆದರೆ ಸಂಬಂಧಿಕರು ತಮ್ಮ ಸಂಬಂಧಕ್ಕೆ ಪ್ರೀತಿಯ ಬಣ್ಣ ನೀಡಿದ್ದರಿಂದ …
Read More »ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಡೂಪ್ಲಿಕೇಟ್ ಕೀ ಬಳಸಿ ಕೋಟಿ ಮೌಲ್ಯದ ಐಷಾರಾಮಿ ಕಾರುಗಳ ಕಳ್ಳತನ ಮಾಡ್ತಿದ್ದ ಮಹಿಳೆ ಸೇರಿ ಇಬ್ಬರು ಖದೀಮರ ಬಂಧನ!
ಬೆಂಗಳೂರು: ನಕಲಿ ಕೀ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಐಷಾರಾಮಿ ಕಾರುಗಳನ್ನು ಕದ್ದು ರಾಜಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ₹35 ಲಕ್ಷ ಮೌಲ್ಯದ ಟೊಯೋಟಾ ಫಾರ್ಚೂನರ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕಾರಿನ ಸಿಸ್ಟಮ್ ಡಿಕೋಡ್ ಮಾಡಿ ನಕಲಿ ಕೀ ತಯಾರಿಸಿ ಕಳ್ಳತನ ಮಾಡುತ್ತಿದ್ದರು. ಬಳಿಕ ರಾಜಸ್ಥಾನದ ಬಾರ್ಮರ್, ಬಾಲೋತ್ರಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದ್ದರು ಎಂದು …
Read More »ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಭಸ್ಮ |
ಮಂಡ್ಯ: ಮದ್ದೂರು ನಗರದ ಮಳವಳ್ಳಿ ರಸ್ತೆಯಲ್ಲಿರುವ ಗಿಲ್ ವುಡ್ ಫ್ಯಾಷನ್ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಗುರುವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು ₹5ರಿಂದ ₹6 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಸೋಮನಹಳ್ಳಿಯಿಂದ ಇತ್ತೀಚೆಗೆ ಮದ್ದೂರು ನಗರಕ್ಕೆ ಸ್ಥಳಾಂತರಗೊಂಡಿದ್ದ ಕಾರ್ಖಾನೆಯಲ್ಲಿ ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆ ಬಂದಾಗ ಬೆಂಕಿ ಹೊತ್ತಿಕೊಂಡಿರುವುದು ಗಮನಕ್ಕೆ ಬಂದಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ …
Read More »ಪ್ರೀತಿ, ಮದುವೆ, ಮೋಸ – ಪತಿಯ ಮನೆ ಮುಂದೆ ಪತ್ನಿಯ ಅಹೋರಾತ್ರಿ ಧರಣಿ!
ರಾಯಚೂರು: ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಮಕ್ಕಳಾದ ಬಳಿಕ ಪತಿ ತಮ್ಮನ್ನು ಹಾಗೂ ಮಕ್ಕಳನ್ನು ದೂರ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿ ಮನೆ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿರುವ ಘಟನೆ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಅಮೃತಾ ಹಾಗೂ ದರ್ಶನ್ ಮೆಹ್ತಾ ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜಾತಿ ವಿಚಾರ ಮುಂದಿಟ್ಟು ಪತಿಯ ಕುಟುಂಬದವರು ತಮ್ಮನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ ಎಂದು ಅಮೃತಾ …
Read More »ರಾಣೇಬೆನ್ನೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆಯ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಕಶ್ವಶ್ರೀ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ …
Read More »ಲೋಕಾಯುಕ್ತ ದಾಳಿ: ಭೂಸ್ವಾಧೀನಾಧಿಕಾರಿ ಬಳಿಯೇ 100 ಎಕರೆ ಕೃಷಿ ಜಮೀನು ಪತ್ತೆ!
ಬೆಂಗಳೂರು: ಆದಾಯಕ್ಕಿಂತ ಅಧಿಕ ಮೌಲ್ಯದ ಆಸ್ತಿ ಗಳಿಸಿರುವ ಆರೋಪದ ಮೇಲೆ ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಒಟ್ಟು ₹18.33 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ ಸುಮಾರು ₹12.95 ಕೋಟಿ ಅಕ್ರಮ ಆಸ್ತಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಯು 100 ಎಕರೆ 5 ಗುಂಟೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದ್ದು, ಇದರ …
Read More »ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ವರ್ಕಾಡಿಯ ಮೊಹಮ್ಮದ್ ಇರ್ಷಾದ್ (30) ಹಾಗೂ ಕಣ್ಣೂರಿನ ನಿತಿನ್ ಕೃಷ್ಣನ್ (27) ಬಂಧಿತರು. ಆರೋಪಿಗಳಿಂದ ₹1.36 ಲಕ್ಷ ಮೌಲ್ಯದ 13.69 ಗ್ರಾಂ ಎಂಡಿಎಂಎ ಹಾಗೂ ₹60 ಸಾವಿರ ಮೌಲ್ಯದ 1.206 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪಂಪ್ವೆಲ್–ನಂತೂರು ಸರ್ವಿಸ್ ರಸ್ತೆಯಲ್ಲಿ ಆಟೋರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇರ್ಷಾದ್ನನ್ನು ಪೊಲೀಸರು ಬಂಧಿಸಿದ್ದಾರೆ. …
Read More »ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ ಅಡುಗೆ ಕೊಠಡಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಶಿಮಠ ಗುಡ್ಡೆಯ ಡಿ.ಯೋಗೀಶ್ ಪ್ರಭು ಅವರ ಪತ್ನಿ ಸಾವಿತ್ರಿ ಪ್ರಭು (65) ಮೃತರು. ಮಂಗಳವಾರ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದರು. ಬುಧವಾರ ಎದ್ದು ನೋಡಿದಾಗ ಅಡುಗೆ ಮನೆಯಲ್ಲಿ ಸಾವಿತ್ರಿ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಡುಗೆ ಮನೆಯಲ್ಲಿದ್ದ ಫೈಬರ್ ಕುರ್ಚಿ ಮೇಲೆ ಕುಳಿತುಕೊಂಡು ಸೀಮೆ ಎಣ್ಣೆ ಸುರಿದು ಬೆಂಕಿ …
Read More »ತಾಯಿಗೆ ಕಿರುಕುಳ ನೀಡುತ್ತಿದ್ದ, ತಂದೆಯನ್ನೇ ಕೊಲೆ ಮಾಡಿದ ಮಗ ಪೊಲೀಸರ ವಶಕ್ಕೆ!
ಬೆಂಗಳೂರು: ನಿತ್ಯ ಮದ್ಯಪಾನ ಮಾಡಿ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಹತ್ಯೆ ಮಾಡಿದ ಘಟನೆ ಶಿವಪುರದಲ್ಲಿ ನಡೆದಿದೆ. ಶ್ರೀಧರ್ ಮೂರ್ತಿ ಅವರು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಮದ್ಯದ ಅಮಲಿನಲ್ಲಿ ಪತ್ನಿಯೊಂದಿಗೆ ಗಲಾಟೆ ಮಾಡಿ ಕತ್ತರಿಯಿಂದ ಹಲ್ಲೆ ಮಾಡಲು ಮುಂದಾಗಿದ್ದ ವೇಳೆ, ತಾಯಿಯ ರಕ್ಷಣೆಗೆ ಬಂದ ಎರಡನೇ ಮಗ ಉದಯ್ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಶ್ರೀಧರ್ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





