Breaking News

BigTv News

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಬೆಳಗಾವಿಯ ನಂತರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇದು ಪಕ್ಷದ್ದಲ್ಲ, ಜನರ ಕಾರ್ಯಕ್ರಮವಾಗಿದೆ. ಎಲ್ಲ ವರ್ಗದವರ ಭಾಗವಹಿಸುವಿಕೆಗಾಗಿ ಸರ್ಕಾರವೇ ಕಾರ್ಯಕ್ರಮ ಆಯೋಜಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಡಿಸಿಎಂ, ಬೆಳಗಾವಿಯಲ್ಲಿ ಯಶಸ್ವಿಯಾದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶವನ್ನು ಇಡೀ ವರ್ಷ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ …

Read More »

ಜನಾರ್ದನ ರೆಡ್ಡಿ, ಶ್ರೀರಾಮಲು ಕಾಂಗ್ರೆಸ್ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ: ಸಚಿವ ಜಮೀರ್

ಕೊಪ್ಪಳ : ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರವಾಗಿದ್ದು, ಅವರು ಕಾಂಗ್ರೆಸ್ ಬರುವ ಹಾಗೆ ಕಾಣುತ್ತಿಲ್ಲ. ಕಾಂಗ್ರೆಸ್ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದು, ನಾಟಕ ಮಾಡುತ್ತಿದ್ದಾರೆ ಎಂದು ನನಗೆ ಅನಿಸುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ರವಿವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ನಾವು ಯಾರು ಅವರನ್ನು ಪಕ್ಷಕ್ಕೆ ಕರೆದಿಲ್ಲ. ನಮ್ಮ ಪಕ್ಷಕ್ಕೆ ತಗೋಬೇಕಾದ್ರೆ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. …

Read More »

ಕಲಬುರಗಿ: ಲುಂಬಿನಿ ಉದ್ಯಾನವನ್ನು ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮದ ಬಳಿ ಜನಾಕರ್ಷಕ ಲುಂಬಿನಿ ಉದ್ಯಾನವನವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸುಮಾರು 10 ಎಕರೆ ವಿಸ್ತಾರ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಡಿಎಂಎಫ್ ಅನುದಾನ ಅಂದಾಜು 1.50 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನವನ ವಿವಿಧ ಬಗೆಯ ಸೌಲಭ್ಯಗಳಿಂದ ಜನರನ್ನು ಆಕರ್ಷಿಸುತ್ತದೆ. ಮಿಯಾವಾಕಿ ಅರಣ್ಯ, ಚಿಟ್ಟೆ ಪಾರ್ಕ್, ಮರದ ಸೇತುವೆ, ಕಾರಂಜಿ, …

Read More »

ಕುಸುಮ್-ಬಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು: ಸಚಿವ ಜಾರ್ಜ್

ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ರೈತರ ಕೃಷಿ ಪಪ್ ಸೆಟ್ ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಸುಮ್- ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ …

Read More »

ರಾಜ್ಯದ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ವಸೂಲಾತಿಗಾಗಿ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿ: ಸಚಿವ ರಹಿಂಖಾನ್

ಬಳ್ಳಾರಿ : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಇದಕ್ಕಾಗಿ ಜಿಯೋ ಟ್ಯಾಗ್ ವ್ಯವಸ್ಥೆ ಬರಲಿದೆ. ಶೀಘ್ರದಲ್ಲಿ ರಾಜ್ಯದಾದ್ಯಂತ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಬಿಮ್ಸ್ ಮೈದಾನದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 76ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು …

Read More »

ಕಲಬುರಗಿ ಜಿಲ್ಲೆ ಸರ್ವರ ಅಭಿವೃದ್ದಿಯತ್ತ ಸಾಗುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯ ಸರಕಾರದ ವಿವಿಧ ಇಲಾಖೆಗಳ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ದಾಖಲೆಯ ಪ್ರಮಾಣದಲ್ಲಿ 5,000 ಕೋಟಿಯ ಅನುದಾನದಡಿಯಲ್ಲಿ ಕಲಬುರಗಿ ಜಿಲ್ಲೆ ಸರ್ವರ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಲ್ಲಿನ ಡಿ. ಎ.ಆರ್.ಪೊಲೀಸ್ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು. ಈ ಸಾಲಿನಲ್ಲಿ ಕೆಕೆ ಆರ್ ಡಿಬಿ ಮಂಡಳಿಯಿಂದ ಜಿಲ್ಲೆಗೆ 956.58 …

Read More »

ದೇಶದಲ್ಲೇ ಮೊದಲ ಬಾರಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮ ಜಾರಿ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ಕಾರ್ಯಕ್ರಮವನ್ನು ಜಾರಿಗೆ ತರುವುದಾಗಿ ಹಿಂದಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ ಉತ್ಸಾಹಿ ಹಾಗೂ ಪ್ರತಿಭಾವಂತ ಯುವ ಸಮುದಾಯಕ್ಕೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ …

Read More »

ಬೆಂಬಲ ಬೆಲೆ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳು ಆರಂಭ: ಜಿಲ್ಲಾಧಿಕಾರಿ

ರಾಯಚೂರು: 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಖರೀದಿಸಲು ರಾಯಚೂರು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಮದ ಕಡಲೇಕಾಳು ಉತ್ಪನ್ನವನ್ನು ಪ್ರತಿ ಎಕರೆಗೆ 4.00 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 …

Read More »

ಏಪ್ರಿಲ್‌ ಮೊದಲ ವಾರದಲ್ಲಿಯೇ ಇಲಾಖಾವಾರು ಹೊಸ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ : ಏಪ್ರಿಲ್ ಮೊದಲ ವಾರದಲ್ಲಿಯೇ ಇಲಾಖಾವಾರು ಹೊಸ ಪ್ರಸ್ತಾವನೆ ಸಲ್ಲಿಸುವಂತೆ ಚಿತ್ತಾಪೂರ ತಾಲೂಕುಮಟ್ಟದ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಾಕೀತು ಮಾಡಿದ್ದಾರೆ. ಚಿತ್ತಾಪೂರ ಪಟ್ಟಣದ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜನರ ಆಶೀರ್ವಾದದೊಂದಿಗೆ ನಾನು ಶಾಸಕನಾಗಿ ಆಯ್ಕೆಯಾಗಿ ಸಚಿವನಾಗಿದ್ದೇನೆ, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕು. ಆದರೆ ನನ್ನ ನಿರೀಕ್ಷೆಗೆ …

Read More »

ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ರೋಸ್ಟರ್ ಬಿಂದುವನ್ನು ಗುರುತಿಸಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ. …

Read More »