Breaking News

BigTv News

ರಾಯಚೂರು ವಾರ್ತಾ ಇಲಾಖೆಯ ನೂತನ ಮಿನಿ ಬಸ್ ಗೆ ಚಾಲನೆ ನೀಡಿದ ಸಚಿವ ಶರಣಪ್ರಕಾಶ್ ಪಾಟೀಲ್

ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 2024-25ನೇ ಸಾಲಿನಲ್ಲಿ ರಾಯಚೂರಿನ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಮಂಜೂರಾದ ನೂತನ ಮಿನಿ ಬಸ್‌ಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹಸಿರು ನಿಶಾನೆ ತೋರಿದರು. ಜನವರಿ 24ರಂದು, ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಬಸ್ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಹೂವು, ತಳಿರು ತೋರಣಗಳಿಂದ ಸಿಂಗಾರಗೊಂಡಿದ್ದ ಬಸ್‌ನ ಪ್ರವೇಶ ದ್ವಾರದಲ್ಲಿ ರಿಬ್ಬನ್ …

Read More »

ಸರ್ಕಾರಿ ವಸತಿ ಯೋಜನೆಗಳಲ್ಲಿ ತೊಡಕುಗಳ ನಿವಾರಣೆಗಾಗಿ ಕೈಗೆಟಗುವ ವಸತಿ ನೀತಿ ರಚಿಸಲು ಸರ್ಕಾರ ಸಜ್ಜು

ಬೆಂಗಳೂರು: ಸರ್ಕಾರಿ ವಸತಿ ಯೋಜನೆಗಳಲ್ಲಿ ಹೊಸ ಹೊಸ ಆಕಾಂಕ್ಷೆ, ನವೀನ ಕಲ್ಪನೆ ಮತ್ತು ಪ್ರಸ್ತುತ ಎದುರಿಸುತ್ತಿರುವ ತೊಡಕುಗಳ ನಿವಾರಣೆಗಾಗಿ ‘ಕೈಗೆಟಕುವ ವಸತಿ ನೀತಿ’ ರಚಿಸಲು ಸರ್ಕಾರ ಮುಂದಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆ ಹ್ಯೂಮನ್ ಸೆಟಲ್‌ಮೆಂಟ್ ಸಂಸ್ಥೆಗೆ ಹೊಸ ನೀತಿಯನ್ನು ಸಿದ್ಧಪಡಿಸುವ ಜವಾಬ್ದಾರಿ ನೀಡಿರುವ ವಸತಿ ಇಲಾಖೆ, ಮುಂದೆ ವರದಿ ಸಲ್ಲಿಕೆಯಾದ ಬಳಿಕ ಸಂಪುಟದ ಮುಂದಿಟ್ಟು ಚರ್ಚೆ ನಡೆಸಿ ಅನುಷ್ಠಾನಕ್ಕೆ ತರಲಿದೆ. ವಸತಿ ಯೋಜನೆ ಅನುಷ್ಠಾನದಲ್ಲಿ ಅಡಿಗಡಿಗೂ ತೊಡಕುಗಳಿವೆ. ಕಾಲ ಬದಲಾದಂತೆ …

Read More »

ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು: ಸಚಿವ ಶರಣಪ್ರಕಾಶ್‌ ಪಾಟೀಲ್‌

ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಯಚೂರು ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿ ಮೂಲ ಸೌಕರ್ಯ, ಅಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿ ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜ.24ರಂದು ಮುಂದುವರೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ …

Read More »

ಬೆಳಗಾವಿ-ವಿಜಯನಗರ ಜಿಲ್ಲೆಗಳ ನಡುವೆ ವಿಶೇಷ ವಿಮಾನ ಸೇವೆ ಆರಂಭ

ಬೆಳಗಾವಿ: ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಸ್ಟಾರ್ ಏರ್ ಸಿಹಿಸುದ್ದಿಯನ್ನು ನೀಡಿದೆ. ಎರಡು ನಗರದ ನಡುವೆ ವಿಮಾನ ಸೇವೆಯನ್ನು ಸ್ಟಾರ್ ಏರ್ ಘೋಷಣೆ ಮಾಡಿದೆ. ಜನವರಿ 25 (ಇಂದಿನಿಂದ) ರಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ವಿಮಾನದ ದರ ಮತ್ತು ವೇಳಾಪಟ್ಟಿಯ ಮಾಹಿತಿ ನೀಡಲಾಗಿದೆ. ಸ್ಟಾರ್ ಏರ್ ವಿಮಾನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಮತ್ತು ವಿಜಯನಗರದಲ್ಲಿರುವ ವಿದ್ಯಾನಗರ ವಿಮಾನ ನಿಲ್ದಾಣ (ಜಿಂದಾಲ್‌) …

Read More »

ಬೆಂಗಳೂರು ಅರಮನೆ ಜಾಗಕ್ಕೆ ಸಂಬಂಧಪಟ್ಟ ದಾಖಲೆಗಳು ನನ್ನ ಬಳಿ ಇವೆ: ಪ್ರಮೋದಾದೇವಿ ಒಡೆಯರ್

ಮೈಸೂರು: ಬೆಂಗಳೂರು ಅರಮನೆ ಮೈದಾನ ಜಾಗಕ್ಕೆ ಈಗಾಗಲೇ ನ್ಯಾಯಾಲಯದ ತಡೆಯಾಜ್ಞೆ ಇದೆ. ಅಲ್ಲದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕೆಂದು ಸಹ ಹೇಳಲಾಗಿದೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳು ನನ್ನ ಬಳಿ ಇವೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತಿಳಿಸಿದರು. ಬೆಂಗಳೂರು ಅರಮನೆ ಮೈದಾನ ಜಾಗಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ನೋಡಿದ್ದೇನೆ. ಅರಮನೆ ಮೈದಾನದಲ್ಲಿ ಇಷ್ಟು ವರ್ಷ ನಡೆದ ಚಟುವಟಿಕೆಗಳು ಸರ್ಕಾರಕ್ಕೆ …

Read More »

ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ಕೊಠಡಿ ಸಂಖ್ಯೆ 122ರಲ್ಲಿಂದು ಸಂಜೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ …

Read More »

ರಾಯಚೂರು: ಮಹಾನಗರ ಪಾಲಿಕೆ ಆಯುಕ್ತರಾಗಿ ಜುಬಿನ್ ಮೋಹಪಾತ್ರ ನೇಮಕ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಜುಬಿನ್ ಮೋಹಪಾತ್ರ ಅವರನ್ನು ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 2021ನೇ ಸಾಲಿನ ಕರ್ನಾಟಕ ತಂಡದ ಐಎಎಸ್ ಅಧಿಕಾರಿ ಜುಬಿನ್ ಮೋಹಪಾತ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಈಗ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Read More »

ವಿಜಯಪುರ: ಹಲ್ಲೆಗೊಳಗಾದ ಇಟ್ಟಿಗೆ ಭಟ್ಟಿ ಕಾರ್ಮಿಕರಿಗೆ ಫೋನ್ ಮೂಲಕ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ವಿಜಯಪುರ: ನಗರದ ಇಟ್ಟಿಗೆ ಭಟ್ಟಿಯೊಂದರ ಮಾಲೀಕರಿಂದ ಹಲ್ಲೆಗೆ ಒಳಗಾದ ಕಾರ್ಮಿಕರೊಂದಿಗೆ ಶುಕ್ರವಾರ (ಜ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಫೋನ್ ಮೂಲಕ ಮಾತನಾಡಿದರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಮೂವರು ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವ ಎಚ್.ಆಂಜನೇಯ ಇಂದು ಮೂವರು ಕಾರ್ಮಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿದ ಆಂಜನೇಯ, ಕಾರ್ಮಿಕರೊಂದಿಗೆ ಫೋನ್ ನಲ್ಲಿ ಸಿಎಂ ಅವರಿಂದ ಮಾತನಾಡಿಸಿದರು. ಆಗ ಕಾರ್ಮಿಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ಎಲ್ಲ …

Read More »

ರಾಜ್ಯ ಸರ್ಕಾರದ ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳುಹಿಸಿದ ರಾಜ್ಯಪಾಲರು: ಗವರ್ನರ್ ನಡೆಗೆ ತೀವ್ರ ಖಂಡನೆ

ಬೆಂಗಳೂರು : ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಹಲವು ಮಸೂದೆಗಳನ್ನು ಕಳುಹಿಸಿಕೊಡಲಾಗಿತ್ತು ಆದರೆ ರಾಜ್ಯಪಾಲರು ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳಿಸಿದ್ದಾರೆ ಇದೀಗ ರಾಜಪಾಲರ ನಡೆಗೆ ರಾಜ ಸರ್ಕಾರ ತೀವ್ರವಾಗಿ ಖಂಡಿಸಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸಿದೆ. ಹೌದು ರಾಜ್ಯಪಾಲರು ನಡೆಯಿಂದ ರಾಜ್ಯ ಸರ್ಕಾರ ಆಕ್ರೋಶಗೊಂಡಿದ್ದು, ರಾಜ್ಯಪಾಲರು ವಿರುದ್ಧ ಕಾನೂನು ಹೋರಾಟಕ್ಕೆ ಇದೀಗ ಚಿಂತನೆ ನಡೆಸುತ್ತಿದೆ. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ ಮುಂದುವರೆದಿದ್ದು, ಮಸೂದೆಗಳನ್ನು …

Read More »

ವಾಣಿವಿಲಾಸ ಸಾಗರ ಜಲಾಶಯದ ನಾಲೆಗಳನ್ನು 1,274 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ನಾಲೆಗಳನ್ನು 1,274 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ ಮಾಡುವ ಯೋಜನೆ ರೂಪಿಸಲಾಗಿದ್ದು, ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಾಣಿವಿಲಾಸ ಸಾಗರ ಜಲಾಶಯವು ಭರ್ತಿಯಾದ ಹಿನ್ನಲೆಯಲ್ಲಿ ಜಲಾಶಯಕ್ಕೆ ಗುರುವಾರ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ನೆರವೇರಿಸಿದ ಅವರು, ನಂತರ ವಿ.ವಿ.ಪುರ ಗ್ರಾಮದ ಶಾಲಾ ಆವರಣದಲ್ಲಿ ಆಯೋಜಿಸಲಾದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜಲಾಶಯ ನಿರ್ಮಾಣ ವೇಳೆ ನಿರ್ಮಿಸಿದ 129 ಕಿ.ಮೀ. ಉದ್ದದ …

Read More »