Breaking News

BigTv News

ಸರ್ಕಾರಿ, ಅರೆ ಸರ್ಕಾರಿ ನೇಮಕಾತಿ; ಅಹಿಂದ ನ್ಯಾಯವಾದಿಗಳಿಗೆ ಆದ್ಯತೆ ಸಿಗಲಿ: ಸಚಿವ ಸತೀಶ್ ಜಾರಕಿಹೊಳಿಗೆ ಮನವಿ

ಹುಕ್ಕೇರಿ: ಅಹಿಂದ ಸಮುದಾಯಕ್ಕೆ ಸೇರಿದ ವಕೀಲರು ಆರ್ಥಿಕ ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರನ್ನು ನೇಮಕ ಮಾಡುವಾಗ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಜಿಲ್ಲಾ ಅಹಿಂದ ನ್ಯಾಯವಾದಿಗಳ ಸಂಘದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಹಿಂದುಳಿದ ಅಲ್ಪಸಂಖ್ಯಾತರ ಸಮುದಾಯದ ವಕೀಲರಿಗೆ ಪ್ರತಿ ತಿಂಗಳು ₹10 ಸಾವಿರದಂತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಕೀಲರಿಗೆ ಪ್ರತಿ …

Read More »

ರಾಜ್ಯದಲ್ಲಿ ಪೌರ ನೌಕರರು ಮತ್ತು ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವಲ್ಲಿ ವಿಫಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಪೌರ ನೌಕರರು ಮತ್ತು ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ನ್ಯಾಯಾಲಯ ಹೊರಡಿಸಿರುವ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. 2023ರ ಜೂನ್‌ 19ರಂದು ಹೈಕೋರ್ಟ್‌ನ ಏಕಸದಸ್ಯ ಪೀಠವು ಹೊರಡಿಸಿರುವ ಆದೇಶದ ಅನ್ವಯ ಸೇವೆ ಕಾಯಂಗೊಳಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ …

Read More »

ಪಂಚಮಸಾಲಿ ಮೀಸಲಾತಿಗಾಗಿ ಇನ್ಮೇಲೆ ಈ ಸರ್ಕಾರದ ಮುಂದೆ ಹೋಗುವುದಿಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಇನ್ನು ಮುಂದೆ ಈ ಸರ್ಕಾರದ ಮುಂದೆ ಹೋಗುವುದಿಲ್ಲ. ಮೀಸಲಾತಿ ಕೇಳುವುದೂ ಇಲ್ಲ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಲಿಂಗಾಯತ ಸಮಾಜದವರ ಮೇಲೆ ಯಾರೂ ಕೂಡಾ ಈ ರೀತಿಯ ಹಲ್ಲೆ ಮಾಡಿರಲಿಲ್ಲ. ಹಾಗಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೇಳಲು ಸರ್ಕಾರದ ಮುಂದೆ ಹೋಗುವುದಿಲ್ಲ. ಬದಲಿಗೆ ಜನರ …

Read More »

ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ಇಂದು ವಿಶೇಷ ಸಚಿವ ಸಂಪುಟ ಸಭೆ

ಪ್ರಯಾಗ್ ರಾಜ್: ಉತ್ತರ ಪ್ರದೇಶ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಇಂದು ಪ್ರಯಾಗ್‌ರಾಜ್‌ನಲ್ಲಿ ನಡೆಯಲಿದೆ. ಉತ್ತರ ಪ್ರದೇಶ ಸರ್ಕಾರದ ಎಲ್ಲಾ 54 ಸಚಿವರನ್ನು ಈ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಈ ಸಭೆಯನ್ನು ಮೊದಲು ಕುಂಭ ಮೇಳ ಪ್ರಾಧಿಕಾರದ ಸಭಾಂಗಣದಲ್ಲಿ ನಡೆಸಲು ಯೋಜಿಸಲಾಗಿತ್ತು ಆದರೆ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಮಹಾಕುಂಭಕ್ಕೆ ಭೇಟಿ ನೀಡುವ ಭಕ್ತರು ಮತ್ತು ಯಾತ್ರಾರ್ಥಿಗಳಿಗೆ ಅನಾನುಕೂಲತೆಯನ್ನು ತಪ್ಪಿಸಲು ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ.

Read More »

ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಹೆಚ್ಚಿನ ಬರ ಪರಿಹಾರ ಕೊಡಲ್ಲವೆಂದು ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ

ನವದೆಹಲಿ: ಕರ್ನಾಟಕ ರಾಜ್ಯ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಬರ ಪರಿಹಾರ ನೀಡಲು ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್ ಗೆ ಮಂಗಳವಾರ ಅಫಿಡವಿಟ್ ಸಲ್ಲಿಸಲಾಗಿದೆ. ಇದರಿಂದಾಗಿ ಹೆಚ್ಚಿನ ನೆರವು ನಿರೀಕ್ಷಿಸಿದ್ದ ರಾಜ್ಯಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ 18 ಸಾವಿರ ಕೋಟಿ ರೂಪಾಯಿ ಬರ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದು, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದ ಕಾರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನಂತರದಲ್ಲಿ ಕೇಂದ್ರದಿಂದ 3454 ಕೋಟಿ ರೂಪಾಯಿ ನೀಡಲಾಗಿದ್ದು, ಬಾಕಿ …

Read More »

ಜ.24 ರಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ

ಕೊಪ್ಪಳ: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷ ವಯೋಮಾನದ ಆಸಕ್ತ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ವಾಕ್ ಇನ್ ಸಂದರ್ಶನ ಜನವರಿ 24ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಈ …

Read More »

ಅತ್ಯುತ್ತಮ ಚುನಾವಣಾ ಪದ್ಧತಿ ಅನುಷ್ಠಾನ: ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಿದ ಚುನಾವಣಾ ಆಯೋಗ

ಕಲಬುರಗಿ: ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು, ಜನರಲ್ ಕೆಟಗರಿ ವಿಭಾಗದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರಿಗೆ ಪ್ರಶಸ್ತಿ ಘೋಷಿಸಿದೆ. ಈ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಭಾರತ ಚುನಾವಣಾ ಆಯೋಗವು ಇದೇ ಜನವರಿ 25 ರಂದು ನವದೆಹಲಿಯ ದೆಹಲಿ ಕಂಟೋನ್ಮೆಂಟ್ ಪ್ರದೇಶದ ಮಾಣಿಕಶಾ ಸೆಂಟರ್ …

Read More »

ಬಿಜೆಪಿ: ಯತ್ನಾಳ್, ರಮೇಶ್ ಜಾರಕಿಹೊಳಿಗೆ ಪಕ್ಷದಿಂದ ಉಚ್ಚಾಟನೆಗೆ ನಿರ್ಣಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನೇ ಮುಂದುವರಿಸಬೇಕು ಹಾಗೂ ಅವರ ವಿರುದ್ಧ ಮಾತನಾಡುತ್ತಿರುವವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ವಿಜಯೇಂದ್ರ ಗುಂಪಿನ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಬೆಳಗ್ಗೆ ಸಭೆ ನಡೆಸಿದ ನಾಯಕರು, ವಿಜಯೇಂದ್ರರನ್ನೇ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು, ರಾಜ್ಯಾಧ್ಯಕ್ಷರು, ಪಕ್ಷದ ವಿರುದ್ಧ ಮಾತನಾಡುತ್ತಿರುವವರ ವಿರುದ್ಧ ಇದುವರೆಗೆ ಏಕೆ ಕಠಿಣ ಕ್ರಮ ಜರುಗಿಸಿಲ್ಲ?, ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ …

Read More »

2025ರ ಜನಗಣತಿ ಪರಿಗಣಿಸಿ ಒಳ ಮೀಸಲಾತಿ ಕಲ್ಪಿಸಬೇಕು: ಬೋವಿ ಪರಿಷತ್

ಬೆಂಗಳೂರು: ಕೇಂದ್ರ ಸರ್ಕಾರ ಹೊಸತಾಗಿ 2025ರ ಜನಗಣತಿ ಮಾಡುತ್ತಿದ್ದು, ಈ ಜನಗಣತಿಯ ದತ್ತಾಂಶಗಳನ್ನು ಪರಿಗಣಿಸಿ ಎಲ್ಲ ಸಮುದಾಯಗಳಿಗೆ ನ್ಯಾಯುತವಾಗಿ ಒಳ ಮೀಸಲಾತಿ ನಿರ್ಣಯಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್‌.ಎನ್. ನಾಗಮೋಹನ್‌ದಾಸ್‌ ಅವರಿಗೆ ಭಾರತೀಯ ಬೋವಿ ಜನಾಂಗದ ಪರಿಷತ್‌ (ಒಡಿ ಕಮ್ಯೂನಿಟಿ ಆಫ್‌ ಇಂಡಿಯಾ ಇಂಟರ್‌ನ್ಯಾಷನಲ್‌) ಮನವಿ ಸಲ್ಲಿಸಿದೆ. 2011ರ ಜನಗಣತಿಯಲ್ಲಿರುವ ಜಾತಿ ಸಮುದಾಯಗಳ ದತ್ತಾಂಶಗಳು 14-15 ವರ್ಷಗಳ ಹಿಂದಿನದ್ದು. ಅದರಲ್ಲಿ ಸಾಕಷ್ಟು ಬದಲಾವಣೆ …

Read More »

ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಮಹಾ ಕುಂಭಮೇಳದಲ್ಲಿ ವಿಶೇಷ ಸಚಿವ ಸಂಪುಟ ಸಭೆ

ಪ್ರಯಾಗರಾಜ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬುಧವಾರ(ನಾಳೆ) ಮಹಾ ಕುಂಭಮೇಳದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದು ಬಿಡುಗಡೆಯಾದ ಅಧಿಕೃತ ಪ್ರಕಟಣೆಯ ಪ್ರಕಾರ, ಯೋಗಿ ಸಂಪುಟದ ಎಲ್ಲಾ 54 ಸಚಿವರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಈ ಸಭೆಯಲ್ಲಿ ಹಲವಾರು ಮಹತ್ವದ ಪ್ರಸ್ತಾವನೆಗಳು ಮತ್ತು ಯೋಜನೆಗಳಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ಸಭೆಯ ನಂತರ, ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು …

Read More »