Breaking News

BigTv News

ಗ್ರಾಮೀಣ ಭಾಗದ ಸಾರ್ವಜನಿಕರ ಗಮನಕ್ಕೆ: ಗ್ರಾ.ಪಂ.ಗಳಲ್ಲಿ ಜನನ, ಮರಣ ನೋಂದಣಿ ಸೇವೆ ಲಭ್ಯ

ಬೆಂಗಳೂರು : ಗ್ರಾಮೀಣ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮ ಪಂಚಾಯತಿಗಳಲ್ಲಿ ಜನನ, ಮರಣ ನೋಂದಣಿ ಸೇವೆ ಲಭ್ಯ. ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಜನನ, ಮರಣ, ನಿರ್ಜೀವ ಜನನನಗಳನ್ನು ನಿಮ್ಮ ಗ್ರಾಮಪಂಚಾಯಿತಿಯಲ್ಲೇ ನೋಂದಣಿ ಮಾಡಿಸುವುದು ಈಗ ಮತ್ತಷ್ಟು ಸುಲಭವಾಗಿದ್ದು, ಕೆಳಕಂಡ 9 ಸೇವೆಗಳು ಈಗ ಗ್ರಾಮಪಂಚಾಯಿತಿಯಲ್ಲೇ ಲಭ್ಯ. ಜನನ ನೋಂದಣಿ, ಜನನ ಪ್ರಮಾಣ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ …

Read More »

ಬೀದರ್: ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ

ಔರಾದ್: ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು. ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು. ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂ ಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು …

Read More »

ಅಂಬಾಮಠದ ಜಾತ್ರೆ: ಕೆ ಕೆ ಆರ್ ಟಿ ಸಿ ಗೆ ₹16.35 ಲಕ್ಷ ಆದಾಯ

ಸಿಂಧನೂರು: ತಾಲ್ಲೂಕಿನ ಸೋಮಲಾಪುರ ಗ್ರಾಮದ ವ್ಯಾಪ್ತಿಯ ಸುಕ್ಷೇತ್ರ ಅಂಬಾಮಠದ ಸಿದ್ಧಪರ್ವತವಾಸಿ ಅಂಬಾದೇವಿಯ ಜಾತ್ರಾ ಮಹೋತ್ಸವ ಅಂಗವಾಗಿ ಓಡಿಸಲಾದ ಕೆಕೆಆರ್‌ಟಿಸಿ ಬಸ್‌ಗಳ ಸಂಚಾರದಿಂದ ಸಿಂಧನೂರು ಸಾರಿಗೆ ಘಟಕಕ್ಕೆ ₹16.35 ಲಕ್ಷ ಆದಾಯ ಬಂದಿದೆ. ಕಳೆದ ವರ್ಷ ಅಂಬಾಮಠ ಜಾತ್ರೆ ನಿಮಿತ್ತ ಬಸ್‍ಗಳ ಸಂಚಾರದಿಂದ ಸಿಂಧನೂರು ಸಾರಿಗೆ ಘಟಕಕ್ಕೆ ₹ 13.17 ಲಕ್ಷ ಆದಾಯ ಬಂದಿತ್ತು. ಈ ಬಾರಿ ಜಾತ್ರಾ ವಿಶೇಷವಾಗಿ ಸಿಂಧನೂರು ಡಿಪೊದಿಂದ 25, ಬೇರೆ ಡಿಪೊದಿಂದ 15 ಸೇರಿ ಒಟ್ಟು …

Read More »

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು. ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ …

Read More »

ಬೆಂಬಲ ಬೆಲೆಯಡಿ ತೊಗರಿ ಖರೀದಿ ಕೇಂದ್ರ ಆರಂಭ; ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ: ಡಿಸಿ ಫೌಜಿಯಾ ತರನ್ನುಮ್

ಕಲಬುರಗಿ : ಜಿಲ್ಲೆಯಾದ್ಯಂತ ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಆರಂಭವಾಗಿದ್ದು, ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರಗಳನ್ನು ಗುರುತಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ. ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ ಎಫ್.ಎ.ಕ್ಯೂ. ಗುಣಮಟ್ಟದ 3,06,150 ಮೆಟ್ರಿಕ್ ಟನ್ ತೊಗರಿ ಖರೀದಿಗೆ ಸರಕಾರ ಆದೇಶಿಸಿದೆ ಎಂದಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 177 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ …

Read More »

ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆ ಸೌಲಭ್ಯಗಳನ್ನು ಅರ್ಹರಿಗೆ ನೀಡಿ: ಸಚಿವ ಸಂತೋಷ್ ಲಾಡ್

ಕಲಬುರಗಿ: ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ಇಲಾಖೆ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕೆಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಎಸ್.ಲಾಡ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಲ್ಬುರ್ಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲ್ಬುರ್ಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಲಾಖೆಯ …

Read More »

ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಮುಖವಾಗಿ ಜನವರಿ 31ರಂದು ನಿವೃತ್ತರಾಗಲಿರುವ ಹಿರಿಯ ಐಎಎಸ್ ಅಧಿಕಾರಿ ಎಲ್. ಕೆ. ಅತೀಕ್ ಅವರ ಸೇವೆಯನ್ನು ಮುಂದುವರೆಸಲಾಗಿದ್ದು, ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಸಮಯದಲ್ಲಿ ಈ ನೇಮಕ ಬಹಳ ಮಹತ್ವ ಪಡೆದಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ …

Read More »

ಬೆಳಗಾವಿ: ಇಂದು ಗಾಂಧಿ ಭಾರತ ಸಮಾವೇಶ ಹಿನ್ನಲೆ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ 21-01-2025 ಬೆಳಗ್ಗೆ 10.30ಗಂಟೆಗೆ ಮಹತ್ಮಾ …

Read More »

ರಾಜ್ಯಾದ್ಯಂತ 400ಕ್ಕೂ ಅಧಿಕ ತೊಗರಿ ಕೇಂದ್ರಗಳ ಆರಂಭ: ಕ್ವಿಂಟಾಲ್ ಗೆ ಹೆಚ್ಚುವರಿ 450 ಘೋಷಣೆ; ಸಚಿವ ಶಿವಾನಂದ ಪಾಟೀಲ್

ವಿಜಯಪುರ: ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ ಕ್ರಿಂಟಾಲ್‌ಗೆ ಎಂಟು ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು. ಕೇಂದ್ರ ಸರ್ಕಾರದ ನಫೆಡ್‌ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, …

Read More »

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶಿಕ್ಷಣ, ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ.10 ರಷ್ಟು ಮೀಸಲಾತಿ ಜಾರಿ ಕಷ್ಟಕರ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ(ಇಡಬ್ಲ್ಯೂಎಸ್) ಶಿಕ್ಷಣ ಮತ್ತು ಸರಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ.10ರಷ್ಟು ಮೀಸಲಾತಿ ಕರ್ನಾಟಕದಲ್ಲಿ ಜಾರಿಗೊಳಿಸುವುದು ಕಷ್ಟಕರವಾಗಿದ್ದು, ಮೊದಲು ಇದರಲ್ಲಿನ ಅಂಶಗಳು, ಗೊಂದಲಗಳ ಕುರಿತು ಗಂಭೀರ ಚರ್ಚೆ ನಡೆಸಬೇಕಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ್ದ ಬ್ರಾಹ್ಮಣ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇಡಬ್ಲ್ಯೂಎಸ್ ಜಾರಿಗೆ ತಂದರೂ ಅನೇಕ ರಾಜ್ಯಗಳಲ್ಲಿ ಇದನ್ನು ಪರಿಗಣಿಸಿಲ್ಲ. …

Read More »