ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ವ್ಯಾಪ್ತಿಯ ಎನ್.ಮಹದೇವಪುರ ಗ್ರಾಮದ ಬಾವಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಕನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಚಿಕ್ಕಉಳ್ಳಾರ್ತಿ ಗ್ರಾಮದ ಬೋರಯ್ಯ ಹಾಗೂ ಕಾರಯ್ಯ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೃತ ಸುಮಲತಾಳನ್ನು ಬೋರಯ್ಯ ಅತ್ಯಾಚಾರ ಮಾಡಿ, ಬಳಿಕ ತನ್ನ ಸಹೋದರ ಕಾರಯ್ಯನನ್ನು ಕರೆಸಿಕೊಂಡು ಇಬ್ಬರೂ ಸೇರಿ ಆಕೆಯ ಮುಖಕ್ಕೆ ಹೊಡೆದು ಟವಲ್ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಶವವನ್ನು ಬಾವಿಗೆ …
Read More »ಚಲಿಸುತ್ತಿದ್ದ ಮಾರುತಿ ವ್ಯಾನ್ನಲ್ಲಿ ಆಕಸ್ಮಿಕ ಬೆಂಕಿ, ವಾಹನ ಸಂಪೂರ್ಣ ಭಸ್ಮ
ಹುಣಸೂರು: ಮೈಸೂರು–ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಕೋರ್ಟ್ ಸರ್ಕಲ್ ಸಮೀಪ ಬುಧವಾರ ಮಧ್ಯಾಹ್ನ ಚಲಿಸುತ್ತಿದ್ದ ಮಾರುತಿ ವ್ಯಾನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕೊಡಗು ಜಿಲ್ಲೆಯ ಕುಟ್ಟ ಗ್ರಾಮದ ಮಹಾಲಿಂಗು ಅವರಿಗೆ ಸೇರಿದ ವ್ಯಾನ್ ಇದಾಗಿದ್ದು, ಸರ್ವಿಸ್ ಮಾಡಿಸಲು ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವ್ಯಾನ್ನಲ್ಲಿ ಮಹಾಲಿಂಗು ಒಬ್ಬರೇ ಇದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದ ಸಮೀಪವೇ ಪೆಟ್ರೋಲ್ ಬಂಕ್ ಇದ್ದಿದ್ದರಿಂದ ಆತಂಕ ಉಂಟಾಗಿತ್ತು. …
Read More »ಕೋಳಿ ಅಂಕಕ್ಕೆ ಪೊಲೀಸ್ ದಾಳಿ
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನಲ್ಲಿ ರಬ್ಬರ್ ತೋಟದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳು ಹಾಗೂ 7 ಹುಂಜ ಮತ್ತು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಠಾಣೆ ಪಿಎಸ್ಐ ಕೌಶಿಕ್ ಬಿ.ಸಿ. ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಪಾಂಡಿಬೆಟ್ಟು ಸಮೀಪದ ರಬ್ಬರ್ ತೋಟದಲ್ಲಿ …
Read More »ದೇಗುಲಕ್ಕೆ ಕನ್ನ ಹಾಕಿದ್ದ ಇಬ್ಬರ ಸೆರೆ
ಹನಗೋಡು ತಾಲೂಕಿನ ಹೆಬ್ಬಾಳ ಹಾಗೂ ನೇರಳಕುಪ್ಪೆ ಗ್ರಾಮಗಳ ದೇವಾಲಯಗಳಲ್ಲಿ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೈಸೂರಿನ ಕೆಸರೆ ಬಡಾವಣೆಯ ಮಹಮ್ಮದ್ ಅನಾಸ್ ಅದಿಲ್ ಹಾಗೂ ಡೇನಿಯಲ್ ಬಂಧಿತರು. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ಹೆಬ್ಬಾಳ ಗ್ರಾಮದ ಓಂಕಾರೇಶ್ವರ ದೇವಾಲಯದ ಬೀಗ ಒಡೆದು ಹುಂಡಿಯ ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕದ್ದಿದ್ದರು. ಬಳಿಕ ನೇರಳಕುಪ್ಪೆ ಗ್ರಾಮದ ಮಹಾಲಕ್ಷ್ಮೀ ದೇವಾಲಯದ ಬೀಗ ಒಡೆಯಲು …
Read More »ಹಾವೇರಿ | ಯುವತಿ ಆತ್ಮಹತ್ಯೆ; ಲೈಂಗಿಕ ಕಿರುಕುಳ ಆರೋಪ
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ 20 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿದ ಆರೋಪದಡಿ ದರ್ಶನ್, ಅಕ್ಷಯ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿ.ಎಸ್ಸಿ. ಕೋರ್ಸ್ಗೆ ಪ್ರವೇಶ ಪಡೆಯಲು ಸಿದ್ಧತೆ ನಡೆಸುತ್ತಿದ್ದ ಯುವತಿ, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯುವತಿ ಹಾಗೂ ದರ್ಶನ್ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಈ ವಿಚಾರ ತಿಳಿದ ಹಿರಿಯರು ಬುದ್ಧಿವಾದ ಹೇಳಿದ್ದರು. ಇದೇ ವೇಳೆ ವಿವಾಹಿತ …
Read More »ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ ಬಂಧನ
ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜುಲೈ 25ರಂದು ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಜಮೀನು ವಿವಾದದ ಹಿನ್ನೆಲೆಯಲ್ಲಿ ಬಾರ್ ಮಾಲೀಕ ಹನಮಂತ ಅಥಣಿ ಅವರಿಗೆ ಬೆದರಿಕೆ ಹಾಕಿ ಕೊಲೆ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸ್ಫೋಟಕ ಇಡಲಾಗಿತ್ತು ಎಂದು ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ. ಶಿವಾನಂದ ಜಲ್ಲಿ, ರೇವಣಪ್ಪ ಜಲ್ಲಿ, ಮಹದೇವ ಸಂಗಾಪೂರ ಹಾಗೂ ಮಲ್ಲಿಕಾರ್ಜುನ …
Read More »ಬಾಡಿಗೆಗಿದ್ದ ವಿದ್ಯಾರ್ಥಿನಿಗೆ ಮಾಲೀಕನಿಂದ ಲೈಂಗಿಕ ಕಿರುಕುಳ; 60 ವರ್ಷದ ಕಾಮುಕ ಬಂಧನ
ಬೆಂಗಳೂರು ಶಾಂತಿನಗರದ ಬರ್ಲಿ ಸ್ಟ್ರೀಟ್ನ ಅಪಾರ್ಟ್ಮೆಂಟ್ನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 60 ವರ್ಷದ ಮನೆ ಮಾಲೀಕ ಕಮಲೇಶ್ ಕುಮಾರ್ನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಯುವತಿ ಕಳೆದ ಎರಡೂವರೆ ತಿಂಗಳಿಂದ ಆರೋಪಿಯ ಅಪಾರ್ಟ್ಮೆಂಟ್ನಲ್ಲಿ ಬಾಡಿಗೆಗೆ ವಾಸವಿದ್ದಳು. ಯುವತಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ರಿಪೇರಿ ಕೆಲಸದ ನೆಪದಲ್ಲಿ ಮನೆಗೆ ಬಂದಿದ್ದ ಆರೋಪಿ, ಮೆಹಂದಿ ನೋಡುವ ನೆಪದಲ್ಲಿ ಆಕೆಯ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು …
Read More »ಅಕ್ರಮ ಸಂಬಂಧಕ್ಕೆ ಅಡ್ಡಿ – ಲವರ್ ಜೊತೆ ಸೇರಿ ಗಂಡನನ್ನೇ ನದಿಗೆಸೆದ ಪತ್ನಿ!
ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂದು ಆರೋಪಿಸಿ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ರಘು (36) ಕೊಲೆಯಾದ ವ್ಯಕ್ತಿಯಾಗಿದ್ದು, ಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ ಪ್ರಮುಖ ಆರೋಪಿಗಳಾಗಿದ್ದಾರೆ. ಮೃತದೇಹ ಸಾಗಿಸಲು ಸಹಕರಿಸಿದ ಆರೋಪದಲ್ಲಿ ಉಬೇದುಲ್ಲಾ ಸ್ನೇಹಿತ ಸುರೇಶ್ನನ್ನೂ ಪೊಲೀಸರು ಬಂಧಿಸಿದ್ದಾರೆ. ರಘು ಹಾಗೂ ಶೃತಿ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ರಘುವಿಗೆ ಕುಡಿತದ …
Read More »ರಾಮನಗರ | ನಕಲಿ ಔಷಧ ಜಾಲ ಪತ್ತೆ: ₹6 ಕೋಟಿ ಮೌಲ್ಯದ ಔಷಧ ವಶಕ್ಕೆ
ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಿ.ಕೆ. ತಾಂಡ್ಯಾ ಗ್ರಾಮದ ಫಾರಂ ಹೌಸ್ನಲ್ಲಿ ನಡೆಯುತ್ತಿದ್ದ ನಕಲಿ ಔಷಧ ತಯಾರಿಕೆ ಜಾಲದ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಮಂಡಳಿ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹6 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡು, ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ತೆಲಂಗಾಣ, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಔಷಧಗಳನ್ನು ತರಿಸಿಕೊಂಡು, ₹600 ಮೌಲ್ಯದ ಔಷಧಕ್ಕೆ ₹6 ಸಾವಿರದ ಲೇಬಲ್ …
Read More »ಹನೂರು ಶೂಟೌಟ್ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ; ಕಳ್ಳಬೇಟೆ ಶಿಬಿರ ಸ್ಪೋಟ, ಭಾರಿ ಅನುಮಾನ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಘಟನೆ ಬಳಿಕ ಅರಣ್ಯ ಇಲಾಖೆಯ ಆಂಟಿ ಪೋಚಿಂಗ್ ಕ್ಯಾಂಪ್ಗಳಿಗೆ ದುಷ್ಕರ್ಮಿಗಳು ನುಗ್ಗಿ ಜಿಲೆಟಿನ್ ಬಳಸಿ ಸ್ಫೋಟ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಳ್ಳಮರದ ಹಟ್ಟಿ, ಮತ್ತಿಪುರ, ಬೂದಿಕೆರೆ ಹಾಗೂ ಕಳ್ಳಿದೊಡ್ಡಿ ಕ್ಯಾಂಪ್ಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಶೂಟೌಟ್ಗೆ ಪ್ರತೀಕಾರವಾಗಿ ದಾಳಿ ನಡೆದಿದೆಯೇ, ಅರಣ್ಯದೊಳಗೆ ಸ್ಫೋಟಕಗಳು ಹೇಗೆ ತಲುಪಿದವು ಎಂಬ ಪ್ರಶ್ನೆಗಳು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





