Breaking News

BigTv News

ಕಲಬುರಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸಂತೋಷ್ ಲಾಡ್

ರಾಯಚೂರು: ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ಇಲಾಖೆ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕೆಂದು ಕಾರ್ಮಿಕ ಇಲಾಖೆಯ ಸಚಿವ ಸಂತೋಷ ಎಸ್. ಲಾಡ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಬುರಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ …

Read More »

ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆಯ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ: ಬಿ.ವೈ.ವಿಜಯೇಂದ್ರ

ಮಾನ್ವಿ: ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆಯ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭರವಸೆ ನೀಡಿದರು. ಪಟ್ಟಣದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ ನೇತೃತ್ವದಲ್ಲಿ ಕೆಎಸ್‌ಎನ್ ಸಾಮಾಜಿಕ ಸೇವಾ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಅಧಿಕಾರದ ಅವಕಾಶ ದೊರೆತರೆ ಈ ಭಾಗದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ, …

Read More »

ಡ್ರೋನ್‌ ಸರ್ವೇಗೆ ಹೊಸದಾಗಿ 10 ಜಿಲ್ಲೆಗಳ ಸೇರ್ಪಡೆಗೆ ಹಣಕಾಸಿನ ನೆರವು ನೀಡಲು ಕೇಂದ್ರ ಸಚಿವರಿಗೆ ಕೃಷ್ಣಬೈರೇಗೌಡ ಮನವಿ

ಬೆಂಗಳೂರು: ಆಧುನೀಕರಣ ಹಾಗೂ ಡಿಜಿಟಿಲೀಕರಣದ ಭಾಗವಾಗಿ ರಾಜ್ಯದ ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ 1,91,791 ಚದರ ಕಿ.ಮೀ. ಭೌಗೋಳಿಕ ಪ್ರದೇಶದ ಡ್ರೋಣ್ ಸಮೀಕ್ಷೆ ಚಾಲ್ತಿಯಲ್ಲಿದೆ. ಡ್ರೋಣ್ ಸರ್ವೇಗೆ ಹೊಸದಾಗಿ 10 ಜಿಲ್ಲೆಗಳ ಸೇರ್ಪಡೆಗೆ ಹಣಕಾಸಿನ ನೆರವು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಂದಾಯ ಸಚಿವ ಕೃಷ್ಣಬೈರೇಗೌಡ ವಿನಂತಿಸಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಶನಿವಾರ ಭೇಟಿಯಾದ ಅವರು …

Read More »

ನಾಳೆ(ಜ.20) ರಂದು ಸಚಿವ ಸಂತೋಷ ಲಾಡ್ ರಾಯಚೂರು ಪ್ರವಾಸ

ರಾಯಚೂರು: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜನವರಿ 20ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 20ರ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. 10.30 ರಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂದಿಸಿದಂತೆ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವವರು. ಸಂಜೆ …

Read More »

ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ: ಶಾಶ್ವತ ಪರಿಹಾರ ಕಂಡುಕೊಳ್ಳಲು ಸಿಎಂಗೆ ಆರ್.ಅಶೋಕ್ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಬಗ್ಗೆ ಉಲ್ಲೇಖಿಸಿ ಮಾತನಾಡಿದ ವಿಪಕ್ಷ ನಾಯಕ ಆರ್​. ಅಶೋಕ, ರಾಜ್ಯಾದ್ಯಂತ ಸಾವಿರಾರು ಬಡ ಕುಟುಂಬಗಳು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಮನೆ-ಮಠ ತೊರೆದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ವರದಿ ಆಗುತ್ತಿದ್ದು, ರಾಜ್ಯ ಸರ್ಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಬಾರದೆ, ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್​ಬಿಐ ನಿಯಮ ಮೀರಿ ಸಾಲಗಳಿಗೆ ವಾರ್ಷಿಕ ಶೇ.25ರಷ್ಟು …

Read More »

ಜಾತಿಗಣತಿ ವರದಿ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಜನಾಂದೋಲನ ನಡೆಸಲಾಗುವುದು: ಅಹಿಂದ ಸಂಘಟನೆ ಎಚ್ಚರಿಕೆ

ಬೆಂಗಳೂರು: ಎಚ್.ಕಾಂತರಾಜ್ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015(ಜಾತಿ ಜನಗಣತಿ)ವರದಿಯನ್ನು ಕರ್ನಾಟಕ ಸರಕಾರ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಜನಾಂದೋಲನ ನಡೆಸಲಾಗುವುದು ಎಂದು ‘ಅಹಿಂದ’ ಚಳುವಳಿ ಸಂಘಟಣೆ ತೀರ್ಮಾನಿಸಿದೆ. ಇಲ್ಲಿನ ಕುಮಾರಕೃಪ ರಸ್ತೆಯಲ್ಲಿರುವ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ‘ಅಹಿಂದ’ ಚಳುವಳಿ ಸಂಘಟಣೆಯ ರಾಜ್ಯ ಮುಖ್ಯ ಸಂಚಾಲಕ ಎಸ್.ಮೂರ್ತಿ ನೇತೃತ್ವದಲ್ಲಿ ನಡೆದ ರಾಜ್ಯವ್ಯಾಪಿ ಜಿಲ್ಲಾ ಘಟಕಗಳ ಕೇಡರ್‍ಗಳ ಸಭೆಯಲ್ಲಿ ಜಾತಿ ಜನಗಣತಿ …

Read More »

ಕೆಪಿಎಸ್‌ಸಿ: ಜ.27 ರಂದು ಸಿಎಸ್ ನೇತೃತ್ವದಲ್ಲಿ ಸಭೆ

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲೂ ಭಾಷಾಂತರ ಗೊಂದಲ ಸೇರಿದಂತೆ ಕೆಪಿಎಸ್‌ಸಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಶನಿವಾರ (ಜ. 18) ಆಯೋಜಿಸಿದ್ದ ಸಭೆಯನ್ನು ಜ.27ಕ್ಕೆ ಮುಂದೂಡಲಾಗಿದೆ. ಸಭೆಯನ್ನು 27ರ ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ವಿಶೇಷಾಧಿಕಾರಿ ತಿಳಿಸಿದ್ದಾರೆ. ಅದರೆ, ಸಭೆ ಮುಂದೂಡಲು ಕಾರಣ ವಿವರಿಸಿಲ್ಲ. ಕೆಪಿಎಸ್‌ಸಿ ಕಾರ್ಯದರ್ಶಿ ರಜೆಯಲ್ಲಿ ತೆರಳಿರುವುದರಿಂದ ಸಭೆ ಮುಂದೂಡಲಾಗಿದೆ …

Read More »

ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ …

Read More »

ರಾಯಚೂರು: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ; ಸಚಿವ ಬೋಸರಾಜು

ರಾಯಚೂರು: ನಗರದಲ್ಲಿ ಹಿಂದುಳಿದ ವರ್ಗದ ಮಹಾನ್ ನಾಯಕರು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಪುತ್ಥಳಿ ಹಾಗೂ ಹಿಂದುಳಿದ ವರ್ಗಕ್ಕೆ ಸಮುದಾಯ ಭವನ ನಿರ್ಮಾಣ ಕುರಿತು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು. ಸಚಿವರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರ ಸಭೆಯಲ್ಲಿ ಅಹವಾಲುಗಳನ್ನು‌ ಸ್ವೀಕರಿಸಿ‌ ಅಭಿಪ್ರಾಯ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಗಳಿಗೆ …

Read More »

ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳ್ತಂಗಡಿಯ ಮಾಚಿನ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ತಾಲೂಕು ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಮಹತ್ವವನ್ನು ಒತ್ತಿ ಹೇಳಿದರು. ಜಿಲ್ಲಾ ಆಸ್ಪತ್ರೆಗಳಂತೆಯೇ ತಾಲ್ಲೂಕು ಆಸ್ಪತ್ರೆಗಳನ್ನು ಸಜ್ಜುಗೊಳಿಸುವ ಮೂಲಕ ಜಿಲ್ಲಾ ಆಸ್ಪತ್ರೆಗಳ ಮೇಲಿನ ಅವಲಂಬನೆಯನ್ನು …

Read More »