ವಿಜಯವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಆಂಧ್ರಪ್ರದೇಶಕ್ಕೆ ಆಗಮಿಸಿದರು. ಅವರು ಇಂದು ವಿಜಯವಾಡದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು ಎನ್ಡಿಆರ್ಎಫ್ನ 20 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹೈದರಾಬಾದ್ನ ರಾಷ್ಟ್ರೀಯ ಪೊಲೀಸ್ …
Read More »ರೈತರಿಗೆ ಗುಡ್ ನ್ಯೂಸ್: ಶೇ.50 ರಷ್ಟು ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ
ಕೊಡಗು: ಪ್ರಸಕ್ತ 2024-25 ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ.ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು …
Read More »ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ, ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳಿಂದ ಕೆಂಡಾಮಂಡಲಗೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ’ ಎಂದು ಖಡಕ್ ಸೂಚನೆ ನೀಡಿದ್ದಾರೆ. ಜತೆಗೆ, ‘ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ. ಶತಮಾನಕ್ಕೂ ಹೆಚ್ಚು ಇತಿಹಾಸ ವಿರುವ ಪಕ್ಷ ಕಾಂಗ್ರೆಸ್. ಯಾರೋ ಒಬ್ಬರು ಇಬ್ಬರನ್ನು ಅವಲಂಬಿಸಿ ಪಕ್ಷ ಕಟ್ಟಿಲ್ಲ’ ಎಂದೂ ಎಚ್ಚರಿಸಿದ್ದಾರೆ. …
Read More »ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ 413 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ
ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಬೆಂಗಳೂರು ಮತ್ತು ಪಿಸಿಸಿ, ಕಲಬುರ್ಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಸಂಸ್ಥೆಯು ಗ್ರೂಪ್ ‘ಎ’, ‘ಬಿ’, ಮತ್ತು ‘ಸಿ’ ವೃಂದದಲ್ಲಿ ಖಾಲಿ ಇರುವ 587 ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಮೊದಲ ಹಂತದಲ್ಲಿ ಭರ್ತಿ ಮಾಡಿಕೊಳ್ಳಲು ಪ್ರಸ್ತಾಪಿಸಿರುವ 425 ಹುದ್ದೆಗಳ ಪೈಕಿ 413 ಹುದ್ದೆಗಳನ್ನು …
Read More »ಅಭಿವೃದ್ದಿ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ: ಎಚ್ ಡಿ ಕೆ ಆರೋಪ
ನವದೆಹಲಿ: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನ ವಿಚಾರಕ್ಕೆ ರಾಜ್ಯ ಸರಕಾರ ತಮ್ಮ ಜತೆ ಚರ್ಚೆ ಮಾಡಿಲ್ಲ. ನನ್ನ ತವರು ರಾಜ್ಯ ಎನ್ನುವ ಕಾರಣಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಎಲ್ಲವನ್ನು ಜನರು ಗಮನಿಸುತ್ತಿದ್ದಾರೆ ಎಂದರು. …
Read More »ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಲುವು ಪ್ರಕಟಿಸಿದ್ದಾರೆ. ನಗರದ ಹೊರವಲಯದ ಮೇರಿಹಿಲ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ನಾನು ಹಣಕಾಸು ಸಚಿವನಾಗಿದ್ದಾಗಲೇ ಪ್ರತಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆಯ ತೀರ್ಮಾನ ಮಾಡಿದ್ದೆ. ಆದರೆ, ಇಂದಿಗೂ …
Read More »ಲಿಂಗಾಯತ ಸ್ವತಂತ್ರ ಮಾನ್ಯತೆ ಸಿಕ್ಕಿದ್ದರೆ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು: ಸಚಿವ ಎಂ.ಬಿ.ಪಾಟೀಲ್
ಮೈಸೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಸಿಕ್ಕಿದ್ದರೆ ಸಮುದಾಯದ ಎಲ್ಲ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು. ಸಮುದಾಯದ ಜನಸಂಖ್ಯೆ ಶೇ 17ರಿಂದ 30ರಷ್ಟು ಆಗುತ್ತಿತ್ತು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಇಂದು ಇಲ್ಲಿ ಪ್ರತಿಪಾದಿಸಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಆಯೋಜಿರುವ ಮೂರು ದಿನಗಳ ‘ವೀರಶೈವ ಲಿಂಗಾಯತ ಬಿಸಿನೆಸ್ ಕಾಂಕ್ಲೇವ್’ನಲ್ಲಿ ಮಾತನಾಡಿದರು. ಮೀಸಲಾತಿ ಕಾರಣಕ್ಕಾಗಿ ಲಿಂಗಾಯತ ಉಪ್ಪಾರ, ಕುಂಬಾರ, ಕುರುಬ, ಹಡಪದ, …
Read More »ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರಕಾರದ ಗುರಿಯಾಗಿದೆ. ಸರಕಾರದ ಎಲ್ಲಾ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕಾಗಿರುವುದು ಅಂತಿಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ನಗರದ ಮೇರಿ ಹಿಲ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಚೇರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು. ಸರಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ …
Read More »ಗಿಗಾ ಫ್ಯಾಕ್ಟರಿ ಘಟಕದಲ್ಲಿ ಮೊದಲ ಹಂತದಲ್ಲಿ 300 ಉದ್ಯೋಗಿಗಳಿಗೆ ಉದ್ಯೋಗವಕಾಶ: ಸಚಿವ ಎಂ.ಬಿ.ಪಾಟೀಲ್
ವಿಜಯಪುರ: ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಐಬಿಸಿ ಕಂಪೆನಿ 390 ಕೋಟಿ ವೆಚ್ಚದಲ್ಲಿ ಗಿಗಾ ಫ್ಯಾಕ್ಟರಿ ಘಟಕ ಸ್ಥಾಪಿಸುತ್ತಿದ್ದು, ಇದರಲ್ಲಿ ಕಂಪನಿಯು ಮೊದಲ ಹಂತದಲ್ಲಿ 300 ಉದ್ಯೋಗಿಗಳಿಗೆ ಕೆಲಸ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಹೋಬಳಿಯ ಚನ್ನರಾಯಪಟ್ಟಣ ಸಮೀಪ ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಲೀಥಿಯಂ-ಅಯಾನ್ ಬ್ಯಾಟರಿ ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ(ಐಬಿಸಿ) ಗಿಗಾ ಫ್ಯಾಕ್ಟರಿ ಸ್ಥಳೀಯ …
Read More »ಕೊಪ್ಪಳ: ಗಣರಾಜ್ಯೋತ್ಸವ ದಿನಾಚರಣೆ ಕಟ್ಟುನಿಟ್ಟಾಗಿ ಆಚರಿಸಿ; ಜಿಲ್ಲಾಧಿಕಾರಿ
ಕೊಪ್ಪಳ: ಜನವರಿ 26 ರಂದು ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಗಣರಾಜ್ಯೋತ್ಸವ ದಿನಾಚರಣೆಯ ನಿಮಿತ್ತ ಜ.26 ರ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಅಂದು ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





