Breaking News

BigTv News

ರಾಜ್ಯ ಸರ್ಕಾರ ಜಾತಿಗಣತಿ ವರದಿ ಬಿಡುಗಡೆಗೊಳಿಸಲು ಅಹಿಂದ ಚಳುವಳಿ ಒತ್ತಾಯ

ಬೆಂಗಳೂರು : ಎಚ್.ಕಾಂತರಾಜ್ ನೇತೃತ್ವದ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಬಿಡುಗಡೆ ಮಾಡಬೇಕು ಎಂದು ‘ಅಹಿಂದ ಚಳವಳಿ’ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಈ ಕುರಿತು ಪ್ರಕಟಣೆ ನೀಡಿದ ಚಳವಳಿ ಮುಖ್ಯ ಸಂಚಾಲಕ ಎಸ್.ಮೂರ್ತಿ, ‘ಜಾತಿ ಗಣತಿ ಸಮೀಕ್ಷಾ ವರದಿ ಬಿಡುಗಡೆ ವಿಳಂಬವಾದರೆ ಅಹಿಂದ ಸಮುದಾಯಗಳಿಗೆ ಅದರಲ್ಲೂ ಹಿಂದುಳಿದ ವರ್ಗಗಳಿಗೆ ಬಾರಿ ಅನ್ಯಾಯ ಮುಂದುವರೆಯುತ್ತದೆ’ ಎಂದು …

Read More »

ಕ್ಯಾಬಿನೆಟ್ ಸಭೆಗೂ ಮುನ್ನವೇ ಜಾತಿಗಣತಿ ವರದಿ ಮಾಹಿತಿ ಸೋರಿಕೆ: ಸಿಎಂ ಸಿದ್ದರಾಮಯ್ಯಗೆ ಶಾಕ್

ಬೆಂಗಳೂರು: ಜಾತಿಗಣತಿ ಸದ್ಯ ರಾಜ್ಯದಲ್ಲಿ ಹಾಟ್‌ ಟಾಪಿಕ್‌ ಆಗಿದೆ. ಈ ಒಂದು ವರದಿಯನ್ನ ರಾಜ್ಯ ಸರ್ಕಾರ ನಾಳೆ ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ. ಆದರೆ ಕ್ಯಾಬಿನೆಟ್‌ ಸಭೆಗೂ ಮುನ್ನವೇ ಜಾತಿ ಗಣತಿ ವರದಿಯ ಮಾಹಿತಿ ಲೀಕ್ ಆಗಿದೆ. ಗುರುವಾರ ಕ್ಯಾಬಿನೆಟ್‌ ಸಭೆಯಲ್ಲಿ ಮಂಡನೆ ಮಾಡಲು ಸಿದ್ದತೆ ನಡೆಸಲಾಗಿತ್ತು. ಆದರೆ ವರದಿ ಜಾರಿಗೂ ಮೊದಲೇ ಮಾಹಿತಿ ಲೀಕ್ ಆಗಿರುವುದು ಆತಂಕ ಸೃಷ್ಟಿಸಿದೆ. ಹಾಗಾದ್ರೆ ಲೀಕ್‌ ಆಗಿರುವ ಜಾತಿ ಗಣತಿ ವರದಿಯಲ್ಲಿರುವ …

Read More »

ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಸಿದ್ಧತೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ಜಿಲ್ಲೆಯ ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು‌ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ನಾಗಮಂಗಲದ ದೇವಲಾಪುರದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ಪಡೆಯಲು‌ ಮಂಡ್ಯ ಜಿಲ್ಲೆಯಿಂದ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯಕ್ಕೆ ತೆರಳಬೇಕಿತ್ತು. ರೈತರು ಹೆಚ್ಚಿರುವ …

Read More »

ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗ 2027ಕ್ಕೆ ಪೂರ್ಣ: ಕೇಂದ್ರ ಸಚಿವ ವಿ.ಸೋಮಣ್ಣ

ಬಾಗಲಕೋಟೆ: ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು 2027ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊ ಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಖಜ್ಜಿಡೋಣಿ ನಿಲ್ದಾಣದ ಬಳಿ ಮಂಗಳ ವಾರ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಾರ್ಗದ ಒಟ್ಟು ಕಾಮಗಾರಿ ವೆಚ್ಚ ₹1650 ಕೋಟಿ ಆಗಲಿದ್ದು ಸದ್ಯ ಶೇ.35ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಪ್ರಸಕ್ತ ಬಜೆಟ್‌ನಲ್ಲಿ …

Read More »

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯ ಮುಚ್ಚಿದ ಲಕೋಟೆಯನ್ನು ನಾಳಿನ ಸಂಪುಟ ಸಭೆಯಲ್ಲಿ ತೆರೆಯುವ ಸಾಧ್ಯತೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015’ರ ದತ್ತಾಂಶಗಳ ಅಧ್ಯಯನ ವರದಿಯ ಮುಚ್ಚಿದ ಲಕೋಟೆಯನ್ನು ತೆರೆಯುವ ಕುರಿತು ರಾಜ್ಯ ಸರ್ಕಾರ ಗುರುವಾರ ನಿರ್ಧರಿಸಲಿದೆ. ಮುಚ್ಚಿದ ಲಕೋಟೆಯನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಡಿಸಲಿದೆ. ಸಭೆಯ16ನೇ ಕಾರ್ಯಸೂಚಿಯಲ್ಲಿ ಈ ವಿವರವನ್ನು‌ ನೀಡಲಾಗಿದೆ. ಆದರೆ, ವರದಿಗೆ ಸಂಬಂಧಿಸಿದ ಇತರ ಯಾವುದೇ ಮಾಹಿತಿಯನ್ನು ಕಾರ್ಯಸೂಚಿಯ ಜೊತೆಗೆ ನೀಡಿಲ್ಲ. ಮುಚ್ಚಿದ ಲಕೋಟೆಯನ್ನು …

Read More »

ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಅನ್ಯಾಯ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದು, ಈ ಪಕ್ಷಪಾತವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು …

Read More »

ರಾಯಚೂರು: ಹಳೆ ಆಶ್ರಯ ಕಾಲನಿಯ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ನಿವಾಸಿಗಳ ಹೋರಾಟ

ರಾಯಚೂರು : ನಗರದ ಚಂದ್ರಬಂಡಾ ರಸ್ತೆಗೆ ಹೊಂದಿಕೊಂಡಿರುವ ಹಳೇ ಆಶ್ರಯ ಕಾಲನಿಯಲ್ಲಿನ ಸರ್ವೆ ನಂ.572, 573 ಹಾಗೂ 574ರಲ್ಲಿನ ವಾಸಿಸುತ್ತಿರುವ ಸುಮಾರು 600 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ನಿವಾಸಿಗಳು ಹೋರಾಟ ನಡೆಸಿದರು. ಈ ಕುರಿತು ಮಹಾನಗರ ಪಾಲಿಕೆ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ ನಿವಾಸಿಗಳು, ಸುಮಾರು 2,500ಕ್ಕೂ ಅಧಿಕ ಜನ ಇಲ್ಲಿ ವಾಸವಾಗಿದ್ದು, ಯಾರಿಗೂ ಹಕ್ಕು ಪತ್ರಗಳಿಲ್ಲ. 1990-91ನೇ ಸಾಲಿನಲ್ಲಿ ನಗರಸಭೆ ಆಶ್ರಯ ಸಮಿತಿಯಿಂದ ಈ ಬಡಾವಣೆಯಲ್ಲಿ 215 ಆಶ್ರಯ …

Read More »

ಬಸವಕಲ್ಯಾಣದಲ್ಲಿನ ಅನುಭವ ಮಂಟಪ ಕಾಮಗಾರಿ ಒಂದು ವರ್ಷದೊಳಗೆ ಪೂರ್ಣ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವಿಶ್ವಗುರು ಬಸವಣ್ಣರ ಕರ್ಮಭೂಮಿ ಬೀದರ್‌ನ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಿ, ಉದ್ಘಾಟನೆ ಮಾಡಲಾಗುವುದು ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ಇಂದು ನಗರದ ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಶ್ರೀ ಗುರು ಸಿದ್ದರಾಮೇಶ್ವರರ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ‘ನೊಳಂಬ ಸ್ಮರಣ ಸಂಚಿಕೆ’ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಗತ್ತಿನಲ್ಲಿ ಅನೇಕ ಕ್ರಾಂತಿಗಳು ನಡೆದಿವೆ. 12ನೆ ಶತಮಾನದಲ್ಲಿ ಶರಣರು ಸರ್ವರಿಗೂ ಸಮಾನತೆ ಕೊಡುವ ನಿಟ್ಟಿನಲ್ಲಿ …

Read More »

ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12 ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ

ಮಡಿಕೇರಿ: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12 ಗ್ರಾಮ ಪಂಚಾತಿಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ನೀಡಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆದೇಶ ಹೊರಡಿಸಿದ್ದು, ಕೊಡಗು ಜಿಲ್ಲೆಯಿಂದ ಏಕೈಕ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ದೊರೆತಿದೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಎ ಹಂಸ ಕೊಟ್ಟಮುಡಿ ಅವರನ್ನು ಭಾರತ, …

Read More »

ಭದ್ರಾ ಮೇಲ್ದಂಡೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಕಾಲುವೆ ನಿರ್ಮಾಣಕ್ಕಾಗಿ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಕಾಲುವೆ ನಿರ್ಮಾಣಕ್ಕಾಗಿ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ ಬಳಿ …

Read More »