Breaking News

Shaikh BigTv

ಪೂರ್ವಭಾವಿ ಸಭೆ ಬಹಿಷ್ಕಾರ ಮಾಡಿದ ಅಧಿಕಾರಿಗಳು

ಕುಂದಗೋಳ : ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣ ವಿಚಾರವಾಗಿ ಪೂರ್ವಭಾವಿ ಸಭೆ ಬಹಿಷ್ಕಾರ ಹಾಕಿದ ಸಮಾಜದ ಬಾಂಧವರನ್ನು ಸಂತೈಸುವ ಕೆಲಸವನ್ನು ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಮಾಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಮಹರ್ಷಿ ವಾಲ್ಮೀಕಿ ಭವನ ನೆನೆಗುದಿಗೆ ಬಿದ್ದಿದೆ, ಜಾಗ ಹಂಚಿಕೆ ವಿಷಯವಾಗಿ ಪಟ್ಟಣ ಪಂಚಾಯಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಬಂಧಪಟ್ಟಂತೆ ಮುಂದಿನ ಕ್ರಮ ತಿಳಿಯುತ್ತಿಲ್ಲ ಎಂದು ಇತ್ತಿಚಿಗೆ ತಾಲೂಕಿನ ಎಸ್.ಸಿ ಮತ್ತು ಎಸ್.ಟಿ ಸಮಾಜ ಬಾಂಧವರು ವಾಲ್ಮೀಕಿ ಜಯಂತಿ …

Read More »

ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಮನವಿ‌ ಸಲ್ಲಿಕೆ

ನವಲಗುಂದ : ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ತಕ್ಷಣ ಅಮಾನತು ಮಾಡಬೇಕು ಎಂದು ಕರ್ನಾಟಕ ರಾಜ್ಯ ಜಾತ್ಯತೀತ ಜನತಾದಳದ ನವಲಗುಂದ ಕಾರ್ಯಕರ್ತರು ಒತ್ತಾಯಿಸಿ, ತಹಶೀಲ್ದಾರ ಸುಧೀರ ಸಾಹುಕಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಅಧ್ಯಕ್ಷ ಶ್ರೀಶೈಲಯ್ಯ ಮೂಲಿಮನಿ, ನಮ್ಮ ನಾಯಕರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಎಂ.ಚಂದ್ರಶೇಖರ ಅವಹೇಳನಕಾರಿ ಪದಬಳಸಿ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದು ಸರಿಯಲ್ಲ. …

Read More »

ರಾಜ್ಯದ ಏಳು ರೈಲ್ವೆ ಯೋಜನೆಗಳೂ 2027 ಕ್ಕೆ ಪೂರ್ಣಗೊಳ್ಳಲಿವೆ : ವಿ.ಸೋಮಣ್ಣ ಭರವಸೆ

ಹುಬ್ಬಳ್ಳಿ: ಧಾರವಾಡ-ಬೆಳಗಾವಿ, ಶಿವಮೊಗ್ಗ- ಶಿಕಾರಿಪುರ ಸೇರಿ ಏಳು ಯೋಜನೆ ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ.ರಾಜ್ಯದ ಏಳು ರೈಲ್ವೆ ಯೋಜನೆಗಳೂ 2027 ಕ್ಕೆ ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ. ನೈರುತ್ಯ ರೈಲ್ವೆ ಕೇಂದ್ರ ಕಛೇರಿಯಲ್ಲಿ ನಡೆಸಿದ ಸಭೆಯ ನಂತರ ಮಾತನಾಡಿದ ಅವರು, ಏಳೂ ಯೋಜನೆ ಜೂನ್ 2027 ಕ್ಕೆ ಪೂರ್ಣಗೊಳಿಸಿ ಉದ್ಘಾಟಿಸುತ್ತೇವೆ. ಧಾರವಾಡ- ಬೆಳಗಾವಿ 73 ಕಿಲೋ ಮೀಟ‌ರ್ ಭೂಸ್ವಾಧೀನ ನಡೆದಿದೆ. ಎರಡು ತಿಂಗಳಲ್ಲಿ …

Read More »

ಬಸ್ಸಿನಲ್ಲಿ ಬಿಟ್ಟು ಹೋದ ಬ್ಯಾಗ್ ಮರಳಿಸಿ ಮಾನವೀಯತೆ ಮೆರೆದ ಚಾಲಕ

ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಪ್ರಮುಖ ದಾಖಲೆಗಳಿದ್ದ ಬ್ಯಾಗನ್ನು, ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಕಂ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಲ್ಯಾಪ್ ಟಾಪ್, ಪೆನ್ ಡ್ರೈವ್, ಹಣ ವನ್ನು ಮರಳಿ ಕೊಟ್ಟಿದ್ದಾರೆ. ತೆಲಂಗಾಣ ರಾಜ್ಯದ ಹೈದರಾಬಾದನಲ್ಲಿರುವ ಏರೊನಾಟಿಕಲ್ ಇಂಜಿನಿಯರಿಂಗ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ವೀರಂ ಮಹಿಧರ ರೆಡ್ಡಿ ಎಂಬುವರು, ಅಕ್ಟೋಬರ್ 2ರಂದು ಬುಧವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ಬೆಳಗಾವಿಗೆ ಪ್ರಯಾಣ ಮಾಡಿದ್ದಾರೆ. ಬೆಳಗಾವಿ …

Read More »

ಹುಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ ಪ್ರಭಾರಿಗಳ ಸಭೆ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಪ್ರಭಾರಿಗಳ ಸಭೆ ನಡೆಸಲು ಇಂದು ಹುಬ್ಬಳ್ಳಿಗೆ ಆಗಮಿಸಿದ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರನ್ನು ಬಿಜೆಪಿ ನಾಯಕರು ಹಾಗೂ ಮೇಯ‌ರ್ ರಾಮಣ್ಣ ಬಡಿಗೇರ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ. ಮಜ್ಜಗಿ, ಪಾಲಿಕೆ ಸದಸ್ಯರಾದ ಬೀರಪ್ಪ. ಕಂಡೇಕರ ಇದ್ದರು.

Read More »

ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗಿ

ಹುಬ್ಬಳ್ಳಿ :ಬೆಂಗೇರಿಯ ಗಾಯತ್ರಿ ದೇವಸ್ಥಾನದ ಆವರಣದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಶ್ರೀ ಗಾಯತ್ರಿ ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಮೂರುಸಾವಿರ ಮಠದ ಪರಮಪೂಜ್ಯರಾದ ಶ್ರೀಮನ್ಮಹಾರಾಜ ಡಾ. ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳ ಗಾಯಿತ್ರಿ ದೇವಸ್ಥಾನದ ಟ್ರಸ್ಟ್ ಕಮೀಟಿ ಅಧ್ಯಕ್ಷರಾದ ಶ್ರೀ ಸದಾಶಿವ ಚೌಶೆಟ್ಟಿ ಇದ್ದರು.

Read More »

ಅಹಿಂದ ನಾಯಕನ ಉಳಿವಿಗಾಗಿ ಆರಂಭಗೊಂಡ ಜಾಥಾ

ಹುಬ್ಬಳ್ಳಿ: ಅಹಿಂದ ನಾಯಕನ ಉಳಿವಿಗಾಗಿ ಹುಬ್ಬಳ್ಳಿಯಿಂದ ಜಾಥಾ ಆರಂಭವಾಗಿದ್ದು, ಜಾಥಾಕ್ಕೆ ಮಾಜಿ ವಿಧಾನ ಪರಿಷತ್‌ ಸದಸ್ಯ ಮೋಹನ್ ಲಿಂಬಿಕಾಯಿ ಚಾಲನೆ ನೀಡಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದೆಂದು, ಹುಬ್ಬಳ್ಳಿಯ ಅಂಬೇಡ್ಕ‌ರ್ ವೃತ್ತದದಿಂದ ಜಾಥಾ ಆರಂಭವಾಗಿದೆ. ನಾಳೆ ಸಾಯಂಕಾಲ ಅಹಿಂದ ಜಾಥಾ ಬೆಂಗಳೂರು ತಲುಪಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದೆಂದು ಒತ್ತಾಯ ಮಾಡಿದರು. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ …

Read More »

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನ

ಧಾರವಾಡ : ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಕ್ಟೋಬರ್ 03 ರಂದು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 30, 2024 ರ ರೋಲ್‌ಗಾಗಿ http://shp.karnataka.gov.in/bcwd ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770004, 8050770005 ಅಥವಾ https://bcwd.Karnataka.gov.in ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ಧಾರವಾಡ : ರಾಜ್ಯದ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರು ಮತ್ತು ಆಟೋರಿಕ್ಷಾ ಚಾಲಕರ ಮೆಟ್ರಿಕ್ ನಂತರದ ಉನ್ನತ ಶಿಕ್ಷಣಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ-ಒಂದು, ಕರ್ನಾಟಕ-ಒಂದು ಮೂಲಕ ಸೇವಾ ಸಿಂಧು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು, ಚಾಲಕರು, ವೃತ್ತಿಪರರು ಸೇವಾ ಸಿಂಧು ವೆಬ್‌ಸೈಟ್, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಅರಣ್ಯ ಒತ್ತುವರಿ ತೆರುವುಗೊಳಿಸಲು ಅರಣ್ಯ ಇಲಾಖೆ ಕಠಿಣ ಕ್ರಮ ವಹಿಸಿದೆ: ವನ್ಯಜೀವಿ ಮಂಡಳಿ ಸದಸ್ಯೆ ವೈಶಾಲಿ ಕುಲಕರ್ಣಿ

ಧಾರವಾಡ : ಅರಣ್ಯ ನಾಶದಿಂದ ಉಂಟಾಗುತ್ತಿರುವ ಪ್ರಾಣಿ ಮತ್ತು ಮಾನವ ಸಂರ್ಘಷವನ್ನು ತಪ್ಪಿಸಲು ತೊಂದರೆಯಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಿಸಬೇಕು. ಮತ್ತು ಅವುಗಳ ಸ್ವಚ್ಛಂದ ಜೀವನವನ್ನು ಉಳಿಸಿ ಬೇಳಸಲು ಎಲ್ಲರೂ ಪ್ರಯತ್ನಿಸಬೇಕೆಂದು ಕರ್ನಾಟಕ ವನ್ಯಜೀವಿ ಮಂಡಳಿಯ ಸದಸ್ಯೆ ವೈಶಾಲಿ ಕುಲಕರ್ಣಿ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಅರಣ್ಯ ಇಲಾಖೆಯ ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ವೃತ್ತದಿಂದ 70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆಯೋಜಿಸಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮದ …

Read More »