Breaking News

Shaikh BigTv

ಎನ್‌ಪಿಎಸ್‌ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಜಾರಿ ಮಾಡಬೇಕೆಂದು ಮನವಿ ಸಲ್ಲಿಕೆ

ನವಲಗುಂದ: ಸರ್ಕಾರಿ ನೌಕರರಿಗೆ ಮಾರಕವಾಗಿರುವ ಎನ್‌ಪಿಎಸ್‌ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಜಾರಿ ಮಾಡಬೇಕೆಂದು ಆಗ್ರಹಿಸಿ ಎನ್‌ಪಿಎಸ್‌ ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಯ ಶಿರಸ್ತೇದಾ‌ರ್ ಕೃಷ್ಣ ಅರೇರ ಅವರಿಗೆ ಮನವಿ ಸಲ್ಲಿಸಿದರು. ಚುನಾವಣೆ ಪೂರ್ವದಲ್ಲಿ ರಾಜಕೀಯ ಪಕ್ಷಗಳು ಒಪಿಎಸ್ ಜಾರಿಗೊಳಿಸುವುದಾಗಿ ಘೋಷಿಸಿದ್ದವು ಸಮಿತಿ ರಚನೆ ಆಗಿದೆಯೇ ಹೊರತು ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ದೂರಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಯಶವಂತಿ ನರಸಪ್ಪನವರ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ವಗ್ಗರ, ಎಸ್.ಎಫ್.ನೀರಲಗಿ, ಎನ್.ವೈ.ಕಳಸಾಪುರ, …

Read More »

ಪಾದಚಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ಸವಾರ

ಕುಂದಗೋಳ : ದ್ವಿಚಕ್ರ ಸವಾರನೋರ್ವ ವಾಹನದ ವೇಗ ನಿಯಂತ್ರಣ ಮಾಡಲಾಗದೆ ರಸ್ತೆ ಬದಿ ನಡೆದುಕೊಂಡು ಹೊರಟಿದ್ದ ಪಾದಚಾರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಗೋಳ ತಾಲೂಕಿನ ಚಾಕಲಬ್ಬಿ ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಲ್ಲಪ್ಪ ಲಕ್ಷ್ಮಣ ಬಾರಕೇರ ಎಂಬುವವರು ರೊಟ್ಟಿಗವಾಡ ಮಾರ್ಗವಾಗಿ ನಲವಡಿ ಕಡೆ ಅತಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದು ನಿಯಂತ್ರಣ ಮಾಡಲಾಗದೆ ರಸ್ತೆ ಬದಿ ನಡೆದುಕೊಂಡು …

Read More »

ನಿಗದಿ ಗ್ರಾಮದ ರೈತರ ಹೊಲದಲ್ಲಿ ಪತ್ತೆಯಾದ ಬೃಹತ್ ಗಾತ್ರದ ಹೆಬ್ಬಾವು

ಧಾರವಾಡ: ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ. ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ. ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ …

Read More »

ಸಾರ್ವಜನಿಕರ ಅಹವಾಲು ಆಲಿಸಿದ ಎನ್. ಎಚ್. ಕೋನರೆಡ್ಡಿ

ಹುಬ್ಬಳ್ಳಿ: ನಗರದ ಮಿನಿ ವಿಧಾನಸೌಧದ 3ನೇ ಮಹಡಿಯಲ್ಲಿರುವ ಜನಸಂಪರ್ಕ ಕಾರ್ಯಾಲಯದಲ್ಲಿ ನವಲಗುಂದ ಮತ ಕ್ಷೇತ್ರದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಅಹವಾಲು ಆಲಿಸಿದರು. ನಂತರ ಬಂದಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣವೇ ಅಧಿಕಾರಿಗಳಿಗೆ ಕರೆ ಮಾಡಿ ರೈತರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Read More »

ಅಪರಾಧಿಗಳಿಗೆ ಹೆಚ್ಚಿನ ಶಿಕ್ಷೆ ಆಗುವಂತೆ ಸಮರ್ಥವಾದ, ಪುರಾವೆ ಸಲ್ಲಿಸಿ:ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ನ್ಯಾಯಾಲಯಗಳಲ್ಲಿ ಕಾಲಮಿತಿಯಲ್ಲಿ ಪ್ರಕರಣಗಳು ಇತ್ಯರ್ಥವಾಗುವಂತೆ ಕ್ರಮವಹಿಸಿ, ಅಪರಾಧಿಗಳಿಗೆ ಹೆಚ್ಚಿನ ಶಿಕ್ಷೆ ಆಗುವಂತೆ ಸಮರ್ಥವಾದ ಮತ್ತು ಪುರಾವೆಗಳನ್ನು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಎಸ್.ಸಿ., ಎಸ್.ಟಿ., ದೌರ್ಜನ್ಯ ತಡೆ ಕಾಯ್ದೆ ಪ್ರಗತಿ ಪರಿಶೀಲನೆ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ …

Read More »

ಮುಡಾ ಹಗರಣದಲ್ಲಿ ಸಿಎಂ ಹಾಗೂ ಅವರ ಪತ್ನಿ ಮೇಲೆ ಎಫ್ ಐ ಆರ್ ಆಗಿದೆ : ಶೆಟ್ಟರ್

ಹುಬ್ಬಳ್ಳಿ: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಅವರಿಂದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಹಂದಿ ಪದ ಬಳಕೆ ಮಾಡಿ ಪತ್ರ ಬರೆದ ವಿಚಾರ, ಕುಮಾರಸ್ವಾಮಿ ಕೇಂದ್ರ ಸಚಿವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಂಪುಟ ದರ್ಜೆ ಖಾತೆ ಸಚಿವರು. ಮುಡಾ ಹಗರಣ ಆರಂಭ ಆದ ನಂತರ ಲೋಕಾಯುಕ್ತ ಪೊಲೀಸರಿಂದ ಎಫ್‌ ಐಆರ್ ಆರಂಭ ಆಗಿದೆ. ಒಬ್ಬ ಉನ್ನತ ಸ್ಥಾನದ ಅಧಿಕಾರದಲ್ಲಿದ್ದವರು ಹೀಗೆ ಮಾತನಾಡುವುದು ಸಮಂಜಸವಲ್ಲವೆಂದು ಹುಬ್ಬಳ್ಳಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಇನ್ನು …

Read More »

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಶೆಟ್ಟರ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಭಂಡತನ ಇದ್ರೆ ಏನು ಮಾಡೋಕಾಗುತ್ತೆ? ಎಂದು ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟನೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಇನ್ನೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೊತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು. ಯಡಿಯೂರಪ್ಪ ಅವರ ಮೇಲೆ ಎಫ್‌ಐಆ‌ರ್ ಆದಾಗ ಏನು ಮಾತಾಡಿದ್ದಾರೆ ಅಂತ …

Read More »

ಜನರ ಸಮಸ್ಯೆಗಳನ್ನು ಆಲಿಸಿದ ಅರವಿಂದ ಬೆಲ್ಲದ

ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ. ತಮಗೆ ಟ್ಯಾಬ್ ವಿತರಣೆ, ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವುದು, ಭತ್ಯೆ ನೀಡುವುದು, ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದರೆ 40 ಲಕ್ಷ ಪರಿಹಾರ ನೀಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ಕೈಗೆ …

Read More »

ಏಕಾಏಕಿ ಅಂಗಡಿಗೆ ಗುದ್ದಿದ ಕ್ಯಾಂಟರ್ ವಾಹನ

ಧಾರವಾಡ: ಕ್ಯಾಂಟರ್ ವಾಹನವೊಂದು ಏಕಾಏಕಿ ಅಂಗಡಿಗೆ ಗುದ್ದಿದ ಘಟನೆ ಧಾರವಾಡದ ಮೃತ್ಯುಂಜಯ ನಗರದ ಡಿಪೊ ಸರ್ಕಲ್ ಬಳಿ ನಡೆದಿದೆ. ಸವದತ್ತಿ ಕಡೆಯಿಂದ ಇಂದು ಬೆಳಗಿನಜಾವ 3 ಗಂಟೆ ಸುಮಾರಿಗೆ ಬಂದ ಕ್ಯಾಂಟರ್ ಏಕಾಏಕಿ ಅಂಗಡಿಗೆ ಗುದ್ದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

Read More »

ಬೀಗ ಹಾಕಿದ ಮನೆಗಳೇ ಟಾರ್ಗೆಟ್ : ಸೆರೆಯಾದ ಕಳ್ಳರು

ಹುಬ್ಬಳ್ಳಿ: ನಗರದಲ್ಲಿ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ, ಮನೆ ಕಳ್ಳತನ ಮಾಡುತ್ತಿದ್ದ ಮನೆಗಳ್ಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಅಶೋಕ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗಂಗಾಧರನಗರದ ನಿವಾಸಿ ರತ್ನವ್ವ ಬಾಳಿಮೇಡ್ (45), ಕುಸುಗಲ್ ನಿವಾಸಿ ಮುತ್ತುಂಸಾಬ್ ಕುಂಬಿ (27) ಗುರುತಿಸಲಾಗಿದೆ. ಇವರಿಂದ 2.50 ಲಕ್ಷ ರೂ ಮೌಲ್ಯದ 50 ಗ್ರಾಂ ತೂಕದ 4 ಬಂಗಾರದ ಬಳೆಗಳು, 50 ಸಾವಿರ ಮೌಲ್ಯದ 10 ಗ್ರಾಂ ತೂಕದ …

Read More »