ಧಾರವಾಡ: ಸಾರಿಗೆ ಸಂಸ್ಥೆಯ ಬಸ್ನಲ್ಲೇ ಪ್ರಯಾಣಿಕನೊಬ್ಬನಿಗೆ ಹೃದಯಾಘಾತವಾಗಿದ್ದು, ಚಾಲಕ ಮತ್ತು ನಿರ್ವಾಹಕ ನೇರವಾಗಿ ಆ ಬಸ್ನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ತಂದ ಘಟನೆ ಧಾರವಾಡದಲ್ಲಿ ನಡೆದಿದೆ. ದಾಂಡೇಲಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾನಿಕನೊಬ್ಬನಿಗೆ ಹೃದಯಾಘಾತವಾಗಿದೆ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಈ ಬಸ್ ಹತ್ತಿದ್ದ. ಮಾರ್ಗ ಮಧ್ಯೆ ಆತನಿಗೆ ಹೃದಯಾಘಾತವಾಗಿದೆ. ಇದನ್ನು ನೋಡಿದ ಚಾಲಕ ಮತ್ತು ನಿರ್ವಾಹಕ ತಮ್ಮ ಬಸ್ನ್ನು ನೇರವಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ತೆಗೆದುಕೊಂಡು ಬಂದು …
Read More »ಕುಂದಗೋಳದಲ್ಲಿ ಪ್ರಧಾನಿ ಹುಟ್ಟುಹಬ್ಬ ಆಚರಣೆ
ಕುಂದಗೋಳ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದ ಬಸವೇಶ್ವರ ದೇವರಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಂಗನವಾಡಿ ಮಕ್ಕಳಿಗೆ ಮೋದಿ ಹೆಸರಿನಲ್ಲಿ ಅಂಕಲಿಪಿ ಹಾಗೂ ಸಿಹಿ ವಿತರಿಸುವ ಮೂಲಕ ದೇಶದ ಪ್ರಧಾನಿ ಜನ್ಮದಿನವನ್ನು ಹಳ್ಳಿಯಲ್ಲಿ ವಿಶೇಷವಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.
Read More »ವಿಶ್ವಕರ್ಮರು ರೈತರ ಬೆನ್ನೆಲುಬು : ಕೋನರಡ್ಡಿ
ನವಲಗುಂದ: ವಿಶ್ವಕರ್ಮರು ರೈತರ ಬೆನ್ನೆಲುಬು ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಅವರ ಅವಶ್ಯಕತೆ ಇರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಇಲ್ಲಾ ಆದ್ದರಿಂದ ಸರಕಾರದ ಸೌಲಭ್ಯಗಳನ್ನು ಪಡೆಯಿರಿ ವಿಶ್ವಕರ್ಮರು ಅತಿ ಶ್ರಮಿಕ ಜೀವಿಗಳು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಅವರು ತಹಶೀಲ್ದಾರರ ಕಾರ್ಯಾಲಯದಲ್ಲಿ ನೆಡೆದ ತಾಲೂಕಿನ ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ …
Read More »ಮಹಿಳಾ ಹಾಗೂ ಮಕ್ಕಳ ದೌರ್ಜನ್ಯ ತಡೆಗೆ ವ್ಯಾಪಕ ಜಾಗೃತಿ ಹಮ್ಮಿಕೊಳ್ಳಿ:ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ಬಾಲ್ಯವಿವಾಹ, ಲೈಂಗಿಕ ಶೋಷಣೆ ಹಾಗೂ ಸಾಗಾಟ ತಡೆಗಟ್ಟುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ನಗರ, ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡುತ್ತಾ, ಬಾಲ್ಯವಿವಾಹ ಹಾಗೂ …
Read More »ವಿಶ್ವಕರ್ಮ ಸಮುದಾಯದ ಐತಿಹಾಸಿಕ ಸ್ಮಾರಕಗಳು ಮಂದಿರಗಳಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಮೂಲ್ಯ: ಬಸವರಾಜ ಹೊರಟ್ಟಿ
ಧಾರವಾಡ : ವಿಶ್ವಕರ್ಮರು ವಿಶ್ವದ ಮೊದಲ ಶಿಲ್ಪಿಗಳು. ಅವರ ಕ್ರಿಯಾಶೀಲತೆ, ಸೃಜನಶೀಲತೆ ವಿಶೇಷವಾದದ್ದು. ಆದರೆ ಇಂದಿನ ವಿಜ್ಞಾನ,ತಂತ್ರಜ್ಞಾನಗಳ ಬೆಳವಣಿಗೆಯಿಂದಾಗಿ ಸಮುದಾಯದ ಸೃಜನಶೀಲತೆ, ಕ್ರಿಯಾಶೀಲತೆ ಮರೆಯಾಗುತ್ತಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ಅವರು ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಭಗವಾನ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯ ಅಂಗವಾಗಿ ಭಗವಾನ ಶ್ರೀ ವಿಶ್ವಕರ್ಮ ಅವರ …
Read More »ಬಾಲಮಂದಿರದ ಮಕ್ಕಳನ್ನ ಸಮಾಜದ ಮುಖ್ಯ ವಾಹಿನಿಗೆ ತನ್ನಿ :ಸಂಗಮೇಶ ಬಬಲೇಶ್ವರ
ಧಾರವಾಡ : ಬಾಲಮಂದಿರದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಾಗರೀಕ ಸಮಾಜದಲ್ಲಿರುವ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ, ಆ ಒಂದು ಪ್ರಯತ್ನದ ಭಾಗವಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ರಾಜ್ಯಮಟ್ಟದ ಮಕ್ಕಳ ಕಥಾ ಕಮ್ಮಟವನ್ನು ನಾಡಿನ ಬಾಲ ಮಂದಿರದ ಮಕ್ಕಳಿಗಾಗಿ ಏರ್ಪಡಿಸಿದ್ದೇವೆ. ಐದು ದಿನಗಳ ಕಾಲ ನಿಸರ್ಗದ ಮಡಿಲಲ್ಲಿ ಮಕ್ಕಳ ವ್ಯಕ್ತಿತ್ವ ಅರಳಲಿ ಎನ್ನುವ ಸದಾಶಯದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ, ಇಂಥ ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ದೊರೆತಿದ್ದು …
Read More »ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಿಗೆ ಚಾಲನೆ
ಧಾರವಾಡ : ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆ, 09 ರಂದು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರ ಕ್ರೀಡಾ, ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡಮನಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಸೇವಾಶ್ರಮ ಸಮಿತಿ ಐ.ಕೆ.ಲಕ್ಕುಂಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. …
Read More »ರಸ್ತೆ ಅಭಿವೃದ್ಧಿ ಕಾಮಗಾರಿಕೆಗೆ ಪೂಜೆ
ಅಣ್ಣಿಗೇರಿ: ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮಸ್ಥರ ಬಹುದಿನ ಬೇಡಿಕೆಯಾದ ಮಂಟೂರ – ಬಂಡಿವಾಡ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು ಸಾರ್ವಜನಿಕರು ಈ ರಸ್ತೆಯನ್ನು ಅಭಿವೃದ್ಧಿ ಮಾಡಿಸುವಂತೆ ಶಾಸಕರಾದ ಕೋನರಡ್ಡಿ ಅವರ ಹತ್ತಿರ ಮನವಿ ಮಾಡಿದ್ದು ಸಾರ್ವಜನಿಕರ ಮನವಿಯ ಮೆರೆಗೆ ಇಂದು ಮಂಟೂರ-ಬಂಡಿವಾಡ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಕೋನರಡ್ಡಿ ಅವರು ನೇರವೆರಿಸಿ ಚಾಲನೆ ನೀಡಿದ್ದರು.
Read More »ಕುಮಾರಸ್ವಾಮಿಯವರು ಬೇಕಾದಾಗ ಒಂದೊಂದು ಕಥೆ ಹೇಳ್ತಾರೆ : ಶಾಸಕ ಪ್ರಸಾದ ಅಬ್ಬಯ್ಯ
ಹುಬ್ಬಳ್ಳಿ: ಕುಮಾರಸ್ವಾಮಿಯವರು ಬೇಕಾದಾಗ ಒಂದೊಂದು ಕಥೆ ಹೇಳ್ತಾರೆ. ಕಾಂಗ್ರೆಸ್ ಪಕ್ಷ ಯಾವತ್ತಿಗೂ ಪ್ರಜಾಪ್ರಭುತ್ವ, ಸಂವಿಧಾನ ಉಳಿಸುವ ಕಾರ್ಯವನ್ನು ಮಾಡುತ್ತಿದ್ದರೆ ಅದು ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಬಿಜೆಪಿ ಪಕ್ಷ ಬಂದಿದ್ದೇ ಸಂವಿಧಾನವನ್ನು ಬದಲಿ ಮಾಡಲಿಕ್ಕೆ. ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಬೆಳವಣಿಗೆಗಳನ್ನು ದಿನ ಬೆಳಗಾದ್ರೆ ನಾವು ನೋಡ್ತೀವಿ. ಸಂವಿಧಾನವನ್ನು ಅಸ್ಥಿರ ಗೊಳಿಸುವ ಕಾರ್ಯವನ್ನು ಮಾಡೋದಿದ್ರೆ ಅದು ಕೇವಲ ಬಿಜೆಪಿ ಸರ್ಕಾರ ನಿರ್ಮಾಣ ಮಾಡ್ತಿದೆ. ಕಾಂಗ್ರೆಸ್ …
Read More »ಹುಬ್ಬಳ್ಳಿಯಲ್ಲಿ ಈದ್ ಮಿಲಾದ್ ಹಬ್ಬದ ಅದ್ದೂರಿಯಾಗಿ ಆಚರಣೆ
ಹುಬ್ಬಳ್ಳಿ: ನಗರದ ದುರ್ಗದಬೈಲ್ ದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಮೆರವಣಿಗೆಗೆ ಅಂಜುಮನ್ ಸಂಸ್ಥೆಯ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಇನ್ನೂ ಹುಬ್ಬಳ್ಳಿಯ ಹೃದಯ ಭಾಗದಲ್ಲಿರು ದುರ್ಗದ ಬೈಲ್ ನಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಮೂಲಕ ಹುಬ್ಬಳ್ಳಿಯ ವಿವಿಧ ಬೀದಿಗಳಲ್ಲಿ ಸಂಚರಿಸುವ ಮೂಲಕ ಆಚರಣೆ ಮಾಡಿದರು. ಇದೇ ವೇಳೆ ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





