ಹುಬ್ಬಳ್ಳಿ: ಹಳೇ ಕೋರ್ಟ್ ಸರ್ಕಲ್ ಬಳಿ ಪ್ರೈಓವರ್ ಕಾಮಗಾರಿ ವೇಳೆಯಲ್ಲಿ ನಡೆದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ASI ನಾಭಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಅವರ ಕುಟುಂಬಸ್ಥರು ಸಾರ್ಥಕತೆಯನ್ನು ಮೆರೆದಿದ್ದು ನಾಭಿರಾಜ್ ಅವರ ಕಣ್ಣುಗಳನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ASI ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್ ಶಶಿಕುಮಾರ್ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯವನ್ನು ತುಂಬಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ಆಗಿದ್ದ FIR …
Read More »ಫೈ ಓವರ್ ಕಾಮಗಾರಿ ವೇಳೆ ಪ್ರಕರಣ: ವ್ಯಕ್ತಿ ಸಾವು
ಹುಬ್ಬಳ್ಳಿ: ಫೈ ಓವರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ 3:45ಕ್ಕೆ ಸಾವನ್ನಪ್ಪಿದ್ದಾರೆ. ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ಅವರ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ …
Read More »ಗಣೇಶ ವಿಸರ್ಜನೆ :ಎನ್ ಶಶಿಕುಮಾರ್ ಭೇಟಿ
ಹುಬ್ಬಳ್ಳಿ: ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ IPS ರವರು ಗಣೇಶ ವಿಸರ್ಜನೆ ಕಾಲಕ್ಕೆ ಖುದ್ದು ಭೇಟಿ ನೀಡಿ, ಪೊಲೀಸ್ ಇಲಾಖೆಯಿಂದ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು. ಇದೇ ಸಮಯದಲ್ಲಿ ಸಾರ್ವಜನಿಕರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಸಂವಹನ ನಡೆಸಿದರು. ಗಣೇಶ ವಿಸರ್ಜನೆ ಸಮಯದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
Read More »ಲಕ್ಕಿ ಡ್ರಾ ಸ್ಟೀಮ್ ಕಾರ್ಯಕ್ರಮಕ್ಕೆ ಚಾಲನೆ
ಹುಬ್ಬಳ್ಳಿ : ಖಾಸಗಿ ಹೋಟೆಲ್ ನಲ್ಲಿ ಜೆ. ಕೆ ಸಿಮೆಂಟ್ ಎಲ್. ಟಿಡಿ ವತಿಯಿಂದ ಹಮ್ಮಿಕೊಂಡಿದ್ದ 2nd ಲಕ್ಕಿ ಡ್ರಾ ಸ್ಕಿಮ್ ಕಾರ್ಯಕ್ರಮಕ್ಕೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಚಾಲನೆ ನೀಡಿದರು. ನಂತರ ಲಕ್ಕಿ ಡ್ರಾ ಪಡೆದವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಮೇಶ್ ಪಾಟೀಲ, ಮಹೇಶ್ ಮದನಬಾವಿ, ಪವನ್, ಜಿ. ದೀಪಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Read More »ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ನಾರಾಯಣ ಕಿರೆಸೂರ
ಹುಬ್ಬಳ್ಳಿ: ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲ ಕಾರ್ಯಕರ್ತರು ಅನ್ನೋನ್ಯತೆಯಿಂದ ಇದ್ದೇವೆ. ಪ್ರಹ್ಲಾದ್ ಜೋಶಿ ಹಾಗೂ ಮಹೇಶ್ ಟೆಂಗಿನಕಾಯಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ನಾರಾಯಣ ಕಿರೆಸೂರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಅವಳಿ ನಗರದ ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮರಳಿ ಬಿಜೆಪಿಗೆ ಬಂದಿದ್ದು ಆನೆ ಬಲವನ್ನು ತಂದಿದೆ. ಎಲ್ಲರೂ ಅದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.ಶಾಸಕ ಮಹೇಶ …
Read More »ಪಠ್ಯಕ್ರಮಗಳಲ್ಲಿ ಹಿಂದಿ ಭಾಷೆ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಪ್ರತಿಭಟನೆ
ಧಾರವಾಡ: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕರ್ನಾಟಕದದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಶಾಲಾ ಪಠ್ಯಕ್ರಮಗಳಲ್ಲಿ ಹಿಂದಿ ಭಾಷೆ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂವಿಧಾನದ 343 ರಿಂದ 351ನೇ ವಿಧಿ ರದ್ದುಪಡಿಸಿ ಎಲ್ಲ ಭಾಷೆಗಳಿಗೆ ಒಕ್ಕೂಟದ ದೃಷ್ಟಿಯಿಂದ ಸಮಾನ ಎಂದು ಸಾರಬೇಕು. ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು, ಪತ್ರ ವ್ಯವಹಾರ …
Read More »ಕ್ರೀಡಾಕೂಟ ಉದ್ಘಾಟನೆಯನ್ನು ಮಾಡಿದ ಶಾಸಕ ಕೋನ ರೆಡ್ಡಿ
ಅಣ್ಣಿಗೇರಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನವಲಗುಂದ ತಾಲೂಕ ಶಾಸಕರ ಮಾದರಿ ಕೇಂದ್ರ ಶಾಲೆ, ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ, ಶ್ರೀ ಅಮೃತೇಶ್ವರ ಪದವಿ ಪೂರ್ವ ಕಾಲೇಜು ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನವಲಗುಂದ ವಿಧಾನಸಭಾ ಮತಕ್ಷೇತ್ರ ಅಣ್ಣಿಗೇರಿ ನಗರದ ಶಾಸಕರ ಮಾದರಿ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ನವಲಗುಂದ ತಾಲೂಕಾ ಮಟ್ಟದ ಪ್ರಾಥಮಿಕ & ಪ್ರೌಡ ಶಾಲೆಗಳ ಇಲಾಖಾ 2024-25ರ ಕ್ರೀಡಾಕೂಟ ಉದ್ಘಾಟನೆಯನ್ನು ಶಾಸಕ ಕೋನ ರೆಡ್ಡಿ ಅವರು ನೆರವೇರಿಸಿದರು. …
Read More »ಬಸ್ ನಿಲುಗಡೆಗಾಗಿ ಪ್ರತಿಭಟನೆ
ನವಲಗುಂದ : ತಾಲೂಕಿನ ಕಾಲವಾಡ ಗ್ರಾಮದ ಕ್ರಾಸ್ನಲ್ಲಿ ಬಸ್ ನಿಲುಗಡೆಗಾಗಿ ಆಗ್ರಹಿಸಿ ಕಾಲವಾಡ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಟ್ರ್ಯಾಕ್ಟರ್ಗಳಲ್ಲಿ ನವಲಗುಂದಕ್ಕೆ ಬಂದು ತಹಶೀಲ್ದಾರ್ ಕಾರ್ಯಾಲಯದ ಎದುರಿಗೆ ಕೆಲ ಕಾಲ ಪ್ರತಿಭಟನೆ ನಡೆಸಿದರು. ತಾಲೂಕು ಕೇಂದ್ರದಿಂದ 12ಕಿ. ಮೀ ದೂರದಲ್ಲಿರುವ ಕಾಲವಾಡ ಗ್ರಾಮದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ, ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಗ್ರಾಮದಿಂದ 2 ಕಿ.ಮೀ ದೂರದಲ್ಲಿರುವ ಕಾಲವಾಡ ಕ್ರಾಸ್ನಲ್ಲಿ ಬಸ್ ನಿಲುಗಡೆ ಮಾಡದಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು …
Read More »ಸೆ. 21 ರಿಂದ ರೈತರ ಜಾತ್ರೆ ಪ್ರಾರಂಭ
ಧಾರವಾಡ: ಪ್ರಸಕ್ತ ವರ್ಷ ಕೂಡ ಈ ರೈತರ ಜಾತ್ರೆ ಸೆಪ್ಟೆಂಬರ್ 21 ರಿಂದ ಆರಂಭಗೊಳ್ಳಲಿದೆ. ಸೆ.21 ರಂದು ಬೀಜ ಮೇಳ ಆರಂಭವಾದರೆ ಸೆ.22ಕ್ಕೆ ಕೃಷಿ ಮೇಳಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಈ ಕೃಷಿ ಮೇಳದ ಉದ್ಘಾಟನೆಗೆ ಆಗಮಿಸಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಹೇಳಿದರು. ಪ್ರಸಕ್ತ ವರ್ಷ ಈ ಕೃಷಿ ಮೇಳವನ್ನು ಹವಾಮಾನ ವೈಪರಿತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ …
Read More »ಮಾದಕ ವಸ್ತು ಮಾರಾಟ : ನೈಜೀರಿಯಾ ಮೂಲದ ಪ್ರಜೆ ವಶಕ್ಕೆ
ಧಾರವಾಡ:ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ನಾರ್ಕೋಟಿಕ್ ಕಂಟ್ರೋಲ್ ಬ್ಯುರೋ ಅಧಿಕಾರಿಗಳು ಧಾರವಾಡದಲ್ಲಿ ಆತ ಇದ್ದ ಮನೆಯಲ್ಲಿ ಪರಿಶೀಲನೆ ನಡೆಸಿದರು. ನೈಜೀರಿಯಾ ಮೂಲದ ಈ ವ್ಯಕ್ತಿ ಧಾರವಾಡ ಮಾಳಮಡ್ಡಿ ಬಡಾವಣೆಯೊಂದರಲ್ಲಿ ಹಲವು ವರ್ಷಳಿಂದ ವಾಸವಾಗಿದ್ದ. ಅಲ್ಲಿದ್ದುಕೊಂಡೇ ಹೆಣ್ಣು ಮಕ್ಕಳ ಪರ್ಸ್ ಮಾರಾಟ ಮಾಡುವ ನೆಪದಲ್ಲಿ ಕೊಕೆನ್ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆತನ ಮನೆಯಲ್ಲಿ ಕೊಕೆನ್ ತೂಕ ಮಾಡುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





