ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಖ್ ಬೋರ್ಡ್ ನ 40 ತಿದ್ದುಪಡಿ ಮಸೂದೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿಂದು ಶ್ರೀರಾಮ ಸೇನಾ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣನ ಸರ್ಕಲ್ ನಲ್ಲಿ ಸಹಿ ಅಭಿಯಾನ ಮಾಡಲಾಯಿತು. ಶ್ರೀರಾಮಸೇನಾ ಕಾರ್ಯಕರ್ತರು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಹಿ ಸಂಗ್ರಹಿಸುವ ಮೂಲಕ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸುವ ಮೂಲಕ ಅಭಿಯಾನ ನಡೆಸಿದರು. ಇನ್ನೂ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಹಾಗೂ ಚೆನ್ನಮ್ಮ ವೃತ್ತದ ಬಳಿಯಲ್ಲಿ ನೂರಾರು …
Read More »ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ : ಕೆ.ಎಸ್ ಈಶ್ವರಪ್ಪ
ಹುಬ್ಬಳ್ಳಿ: ಗೃಹ ಸಚಿವರು ನಾಗಮಂಗಲದಲ್ಲಿ ನಡೆದ ಗಲಾಟೆ ಸಣ್ಣದ್ದು ಎಂಬ ಹೇಳಿಕೆ ಕೊಟ್ಟಿದ್ದಾರೆ. ಆದರೆ ಗೃಹ ಸಚಿವರು ರಾಷ್ಟ್ರದ್ರೋಹಿ ಮುಸ್ಲಿಂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳತ್ತೇವೆ ಎಂಬ ಹೇಳಿಕೆ ಕೊಡಬೇಕಿತ್ತು. ಅದು ಬಿಟ್ಟು ಅಮಾಯಕ ಜನರನ್ನು ಭಯಬೀಳುವಂತೆ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ …
Read More »ಸಿಎಂ ಕುರ್ಚಿ ಕುರಿತು ಟೀಕೆ ಮಾಡಿದ ಕೆ.ಎಸ್ ಈಶ್ವರಪ್ಪ
ಹುಬ್ಬಳ್ಳಿ: ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಲಿಸ್ಟ್ ಬೆಳೆದಿದೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ಬಿಟ್ಟು ಕೊಡೋಲ್ಲ. ಕಾಂಗ್ರೆಸ್ ನಾಯಕರಲ್ಲಿ ಹೊರಗೆ ಬೆಂಬಲ ಬಂದರೆ ಒಳಗೆ ಹಂಬಲಯಿದೆ. ಆರ್. ವಿ ಯಿಂದ ಹಿಡಿದು ಸಿಎಂ ಆಕಾಂಕ್ಷಿಗಳಾಗಿದ್ದಾರೆ. ಕೇಂದ್ರ ನಾಯಕರ ಹೇಳಿಕೆಗೆ ಇಲ್ಲಿ ಬೆಲೆಯಿಲ್ಲದಂತಾಗಿದೆ. ಮುಡಾ-ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರೆಂದು ಕೋರ್ಟ್ ಪ್ರಕಟಿಸಿದಾಗ ರಾಜೀನಾಮೆ ಕೊಡಲೇಬೇಕೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಒತ್ತಾಯಿಸಿದರು. ಬೈಟ್- …
Read More »ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ
ಹುಬ್ಬಳ್ಳಿ: ಕೆ.ಎಸ್ ಈಶ್ವರಪ್ಪ ತವರು ಮನೆಗೆ ಹೋಗದೇ ಇರುವ ಹೆಣ್ಣು ಮಗಳು ಯಾರಾದರೂ ಇದ್ದಾರಾ? ಹಾಗೇಯೇ ಪಕ್ಷದಲ್ಲಿನ ಸಮಸ್ಯೆಗಳು ಸರಿಯಾದ ಮೇಲೆ ಪುನಃ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕುಟುಂಬ ರಾಜಕಾರಣ ನಡೆಯುತ್ತಿದೆ. ಅದನ್ನು ಮೊದಲು ಹೋಗಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕುಟುಂಬ ರಾಜಕಾರಣ ಮಾಡಬಾರದೆಂದು ಹೇಳಿದ್ದಾರೆ. ಆದ್ರೆ ರಾಜ್ಯದ ಬಿಜೆಪಿಯಲ್ಲಿ ಅದೇ …
Read More »ಅಂಗವಿಕಲರ ಕಲ್ಯಾಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಆಹ್ವಾನ
ಧಾರವಾಡ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರು, ಸಂಘಟನೆ ಮತ್ತು ವಿಶೇಷ ಶಾಲೆಗಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಜಿದಾರರು ಅಕ್ಟೋಬರ್ 15, 2024 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2744474 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಐದು ರೂ.ಗೆ ಅನ್ನ ಕೊಡುವ ಇಂದಿರಾ ಕ್ಯಾಂಟೀನ್ ರಾಷ್ಟ್ರಕ್ಕೆ ಮಾದರಿ: ಸಚಿವ ಸಂತೋಷ ಲಾಡ್
ಧಾರವಾಡ :ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್ದಲ್ಲಿ ಇಂದಿರಾ ಕ್ಯಾಂಟೀನ್ ಹೊಸ ದರ …
Read More »ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದವರು ಕಾಂಗ್ರೆಸ್ ನವರು : ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ. ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಅಂಬೇಡ್ಕರ್ ಅವರಿಗೆ ಘೋರ ಅಪಮಾನ ಮಾಡಿದವರು ಕಾಂಗ್ರೆಸ್ ನವರು. ಜಗಜೀವನ ರಾಮ್ ರಿಗೆ ಕಾಂಗ್ರೆಸ್ ನಿಂದ ಅನ್ಯಾಯ, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕೇವಲ ಮತ ಬ್ಯಾಂಕ್ ಆಗಿ ನೋಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಹುಲ್ …
Read More »ಪ್ರೈಓವರ್ ಕಾಮಗಾರಿ ವಿರುದ್ಧ ಪ್ರತಿಭಟನೆ
ಹುಬ್ಬಳ್ಳಿ: ಎಎಸ್ಐ ತೀವ್ರವಾಗಿ ಗಾಯಗೊಂಡಿದ್ದು, ಈ ನಿಟ್ಟಿನಲ್ಲಿ ಸಮತಾ ಸೇನೆಯ ವತಿಯಿಂದ ಪ್ರೈಓವರ್ ಕಾಮಗಾರಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಳೇಯ ಕೋರ್ಟ ವೃತ್ತ ಹುಬ್ಬಳ್ಳಿಯ ಬಳಿ ನಿನ್ನೆ ನಡೆದ ಫೈಒವರ್ ಕಾಮಗಾರಿ ಅವಘಡ ಖಂಡಿಸಿ ಮತ್ತು ಎಎಸ್ಐ ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಉಪನಗರ ಠಾಣೆ ಎಎಸ್ಐ ಅವರು ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದು ಸೂಕ್ತ ಸುರಕ್ಷಾ ಕ್ರಮವಿಲ್ಲದೆ ಸಾರ್ವಜನಿಕರ ಪ್ರಾಣದೊಂದಿಗೆ …
Read More »‘ಪ್ರತ್ಯನುಕರಣೆಯ ನ್ಯೂನತೆಗಳು’ ಪುಸ್ತಕ ಧಾರವಾಡದಲ್ಲಿ ಬಿಡುಗಡೆ
ಧಾರವಾಡ: ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಪುತ್ರ ಕರಣ್ ಲಾಡ್ ಅವರು ತಮ್ಮ 17ನೇ ವಯಸ್ಸಿನಲ್ಲೇ ‘ಎ ಗ್ಲಿಚ್ ಇನ್ ದಿ ಸಿಮ್ಯುಲೇಷನ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈಗ ಈ ಪುಸ್ತಕವನ್ನು ‘ಪ್ರತ್ಯನುಕರಣೆಯ ನ್ಯೂನತೆಗಳು’ ಎಂಬ ಹೆಸರಿನಲ್ಲಿ ಅನುವಾದ ಮಾಡಲಾಗಿದ್ದು, ಅನುವಾದಿತ ಈ ಪುಸ್ತಕವನ್ನು ಧಾರವಾಡದಲ್ಲಿ ಬಿಡುಗಡೆ ಮಾಡಲಾಯಿತು. ಧಾರವಾಡದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಅವರು …
Read More »ಇಡಿ ಹಾಕಿದ ಚಾರ್ಜ್ಶೀಟ್ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ : ಸಂತೋಷ ಲಾಡ್
ಧಾರವಾಡ : ಇಡಿಯನ್ನು ಕೇವಲ ರಾಜಕಾರಣಕ್ಕಾಗಿ ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇಡಿ ಹಾಕಿದ ಚಾರ್ಜ್ಶೀಟ್ನಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಹೇಳಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮದೂ ಸಹ ಎಸ್ಐಟಿ ತನಿಖೆ ನಡೆಯುತ್ತಿದೆ. ಅದರ ವರದಿ ಕೂಡ ಬಂದಿಲ್ಲ. ಇಡಿಯವರು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ಗೆ ಹೋಗುವುದೇ ಇಲ್ಲ. ಸಿಬಿಐನವರು ರೇಪ್ ಕೇಸ್ ಇದ್ದಾಗ ಕೋರ್ಟ್ಗೆ ಹೋಗುವುದೇ ಇಲ್ಲ. ಕೋರ್ಟಿಗೇನೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





