Breaking News

Shaikh BigTv

ಸೆ. 12 ರಂದು ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ

ಧಾರವಾಡ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸಹಯೋಗದಲ್ಲಿ ಪದ್ಮವಿಭೂಷಣ ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 12, 2024 ರಂದು ಬೆಳಿಗ್ಗೆ 9.30 ಗಂಟೆಗೆ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸದಸ್ಯ ಹಾಗೂ ಖ್ಯಾತ …

Read More »

ಅಪಘಾತ ವಿಮೆ ಜಾರಿಗೆ ತಂದಿರುವ ಸರ್ಕಾರದ ಕ್ರಮ ಸ್ವಾಗತಾರ್ಹ: ಕುಪೇಂದ್ರ ಆಯನೂರು

ಹುಬ್ಬಳ್ಳಿ:ಅಸಂಘಟಿತ ಕಾರ್ಮಿಕರಿಗೆ ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಅಪಘಾತ ವಿಮೆ ಜಾರಿಗೆ ತಂದಿರುವ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ರಾಜ್ಯ ಗೌರವಾಧ್ಯಕ್ಷ ಕುಪೇಂದ್ರ ಆಯನೂರು ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಮ್ಮ ಸಂಘವು ಹೋರಾಟ ಮಾಡುತ್ತಲೇ ಬಂದಿದೆ. ಕಾರ್ಮಿಕ ಸಚಿವ ಸಂತೋಷ ಲಾಡ್ ನಮ್ಮ ಹೋರಾಟಕ್ಕೆ ಸ್ಪಂದಿಸಿದ್ದಾರೆ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

Read More »

ವಕ್ಷ ಬೋರ್ಡ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪರ-ವಿರೋಧ ಶುರುವಾಗಿದೆ: ಮುತಾಲಿಕ್

ಧಾರವಾಡ: ವಕ್ಷ ಬೋರ್ಡ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪರ-ವಿರೋಧ ಎರಡೂ ಶುರುವಾಗಿದೆ. ಇದಕ್ಕೆ ಇಡೀ ದೇಶದಲ್ಲಿ ಮುಸ್ಲಿಂರು ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ವಕ್ಸ್ ಬೋರ್ಡ್ ಕಾಯ್ದೆ ತಿದ್ದುಪಡಿ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ತಿದ್ದುಪಡಿ ಸಂಬಂಧ ಸಂಸತ್ ಸಮಿತಿ ರಚಿಸಿದೆ, ಈ ಸಮಿತಿಗೆ ಮನೆ ಮನೆಯಿಂದ ಪತ್ರ ಕಳುಹಿಸಿ ಎಂದು ಮುಲ್ಲಾ, ಮೌಲ್ವಿಗಳು …

Read More »

ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದಾರೆ: ಸಚಿವ ಸಂತೋಷ ಲಾಡ್

ಧಾರವಾಡ: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿವೆ ಎನ್ನಲಾದ ಹಗರಣಗಳ ಕುರಿತು ತನಿಖೆ ನಡೆಸುವಂತೆ ಸಿಎಂ ಅವರು ಹಗರಣ ಪ್ರಕರಣಗಳ ಸಮನ್ವಯ ಸಮಿತಿ ರಚಿಸಿದ್ದು, ಅದರಲ್ಲಿ ನನ್ನನ್ನೂ ಸದಸ್ಯನನ್ನಾಗಿ ಮಾಡಿದ್ದಾರೆ. ಎರಡು ತಿಂಗಳಲ್ಲಿ ಹಗರಣಗಳ ತನಿಖೆ ನಡೆಸಿ ವರದಿ ನೀಡುವಂತೆ ಸಿಎಂ ತಾಕೀತು ಮಾಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಸಂಪೂರ್ಣ ತನಿಖೆ ಮಾಡಬೇಕು ಎಂದಿದ್ದಾರೆ. ಈ ಸಮಿತಿಯಲ್ಲಿ …

Read More »

ಜನರ ಸಮಸ್ಯೆಗಳನ್ನು ಆಲಿಸಿದ ಸಂತೋಷ ಲಾಡ್

ಧಾರವಾಡ: ನಗರದ ವಿವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಜನರ ಸಮಸ್ಯೆಗಳನ್ನು ಸಚಿವ ಸಂತೋಷ ಲಾಡ್ ಆಲಿಸಿದರು. ಅದರಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆ ಕುರಿತು ಮಾಹಿತಿ ಪಡೆದುಕೊಂಡು ಕೂಡಲೇ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಸಹ ನೀಡಿದರು. ಜನರಿಗೆ ಸಮಸ್ಯೆ ನಿವಾರಣೆಗೆ ಏನು ಪ್ರಯತ್ನ ಮಾಡಬೇಕು. ಅದನ್ನು ಕಾನೂನು ಅನ್ವಯ ಮಾಡಲಾಗುವುದು ಎಂದು ಧೈರ್ಯ ತುಂಬಿದರು.

Read More »

ಟೋಲ್‌ ಡಿವೈಡರ್ ಗೆ ಕಾರು ಡಿಕ್ಕಿ : ಮಗು ಸಾವು

ಹುಬ್ಬಳ್ಳಿ : ಟೋಲ್‌ ಡಿವೈಡರ್ ಗೆ ಕಾರು ಡಿಕ್ಕಿ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನೆಲವಡಿ ಟೋಲ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಹತ್ತಿರ ವೇಗವಾಗಿ ಬಂದು ನಿಯಂತ್ರಣ ಕಳೆದುಕೊಂಡ ಕಾರು, ಟೋಲ್ ನ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಹುಬ್ಬಳ್ಳಿಯಿಂದ ಮುಂಡರಗಿ ಗೆ ಹೊರಟಿದ್ದ ಕಾರು. …

Read More »

ಸ್ಮಾರ್ಟ್ ಸಿಟಿ ಅವಾಂತರ, ಎಎಸ್ ಐ ಸ್ಥಿತಿ ಚಿಂತಾಜನಕ.!!

Featured Video Play Icon

ಹುಬ್ಬಳ್ಳಿಯಲ್ಲಿ ಸಂಚರಿಸುವ ಮೊದಲು ವಿಚಾರಿಸಿ ಮುಂದೆ ಸಾಗಿ!!! ಆರಕ್ಷಕನ ಹೆಲ್ಮೆಟ್ ಒಡೆದು ಮೆದಳಿಗೆ ಪೆಟ್ಟು!! ಕ್ರೇನ್ ಆಪರೇಟರ್ ಎಸ್ಕೇಪ್… ಸ್ಮಾರ್ಟ್ ಸಿಟಿಗೆ ಇನ್ನೇಷ್ಟು ಬಲಿ ಬೇಕು..??

Read More »

ಬಿಜೆಪಿ ಬಗ್ಗೆ ಟೀಕೆ ಮಾಡಿದ ಲಾಡ್

ಹುಬ್ಬಳ್ಳಿ: ಹತ್ತು ವರ್ಷಗಳಲ್ಲಿ ಇವರದ್ದು ಒಂದು ಕಾರ್ಯಕ್ರಮ ಇಲ್ಲ. ಬರೋದು ರಾಜ್ಯ ಸರ್ಕಾರವನ್ನು ಬೈಯ್ಯೋದು. ಮೋದಿ ಸಾಹೇಬರು ಉದ್ಘಾಟನೆ ಮಾಡಿರೋ ಎಲ್ಲ ಬಿಲ್ಡಿಂಗ್ ಸೋರುತ್ತಿವೆ. ರಾಮ ಮಂದಿರವೇ ಸೋರುತ್ತಿದೆ. ಇದರ ಬಗ್ಗೆ ಮಾತನಾಡುತ್ತಾರಾ? ಎಂದು ಸಚಿವ ಸಂತೋಷ ಲಾಡ್ ಟೀಕೆ ಮಾಡಿದ್ದಾರೆ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಫುಡ್ ಸೆಕ್ಯೂರಿಟಿ ಬಿಲ್ ತಂದವರು ಯಾರೂ.? ಮೋದಿ ಅಕ್ಕಿ ಅಕ್ಕಿ ಅಂತಾರೆ ಇದು ಸರಿನಾ? ನೀವು ಇವತ್ತು ಅಕ್ಕಿ ಕೊಡುತ್ತಿದ್ದೀರ. …

Read More »

ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ, ಪಾಲಿಕೆ ಆಯುಕ್ತರು, ಮೇಯ‌ರ್, ಉಪ ಮೇಯರ್ ಭಾಗಿಯಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ …

Read More »

ಜೀವ ಬೆದರಿಕೆ ಕುರಿತು ಪ್ರತಿಕ್ರಿಯಿಸಿದ ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ್

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆ ಮಾಡಲಾಗಿದೆ. ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿನ ಕೊಲೆ, ಅತ್ಯಾಚಾರ, ಪೋಕ್ಸ್‌ …

Read More »