ಧಾರವಾಡ: 10 ಜನರ ತಂಡವೊಂದು ಯುವಕನೊಬ್ಬನ ಮೇಲೆ ತಮ್ಮ ಮನೆಯ ಮಹಿಳೆಯ ಜೊತೆ ಫೋನಿನಲ್ಲಿ ಮಾತನಾಡಿದ್ದಾನೆಂದು ಆರೋಪಿಸಿ ಮೂಳೆ ಮುರಿಯುವಂತೆ ಹೊಡೆದ ಘಟನೆ ತಾಲೂಕಿನ ವೆಂಕಟಾಪುರ ಗ್ರಾಮದ ಮಾವಿನ ತೋಪೊಂದರಲ್ಲಿ ನಡೆದಿದೆ. ಇಮಾಮ್ಸಾಬ್ ದೇವರಮನಿ (34) ಎಂಬ ವ್ಯಕ್ತಿಯೇ ಹಲ್ಲೆಗೆ ಒಳಗಾದವನು. ಈತ ವೃತ್ತಿಯಿಂದ ಟಂಟಂ ಚಾಲಕನಾಗಿದ್ದಾನೆ. ಇಮಾಮ್ಸಾಬ್ ತಮ್ಮ ಮನೆಯ ಹೆಣ್ಣು ಮಗಳೊಂದಿಗೆ ಫೋನಿನಲ್ಲಿ ಮಾತನಾಡಿದ್ದಾನೆಂದು ಆರೋಪಿಸಿ ಕೋಟೂರು ಗ್ರಾಮದ ಅಗಸಿಮನಿ ಎಂಬ ಕುಟುಂಬದ ಅಸ್ಲಾಂ, ಇಸಾಕ್, ಶಕೀಲ್, …
Read More »ಶಾಲಾ ಮಕ್ಕಳ್ಳಿಗೆ ಶೂ ಮತ್ತು ಸಾಕ್ಸ್ ಉಚಿತವಾಗಿ ವಿತರಣೆ
ನವಲಗುಂದ: ರಾಜ್ಯ ಸರ್ಕಾರದ ವಿದ್ಯಾ ವಿಕಾಸ ಯೋಜನೆಯಡಿ ನಗರದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ-3ರಲ್ಲಿ ಶಾಲಾ ಮಕ್ಕಳಿಗೆ ಬಾಟಾ ಕಂಪನಿಯ ಶೂ ಮತ್ತು ಸಾಕ್ಸ್ ಉಚಿತವಾಗಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಮುತ್ತಪ್ಪ ಬಿಸನಾಳ, ಮಾಜಿ ಅಧ್ಯಕ್ಷ ಅಡಿವೆಪ್ಪ ಶಿರಸಂಗಿ, ಎಸ್.ಡಿ.ಎಂ.ಸಿ ಸದಸ್ಯರಾದ ಕಾಶೀಮಸಾಬ ಮಚಲಿಬಂದರ, ಬಾಬುಶ್ಯಾ ಮಕಾಂದಾರ, ಮಾಬುಸಾಬ ಯರಗುಪ್ಪಿ, ಮಲ್ಲಿಕಾರ್ಜುನ ಬೆಳವಡಿ, ಮುಖ್ಯ ಶಿಕ್ಷಕ ಎಸ್.ಎಸ್.ಜೋಶಿ, ನಿವೃತ್ತ ಮುಖ್ಯ ಶಿಕ್ಷಕ ಎನ್.ಎನ್. ಹಾಲಿಗೇರಿ, …
Read More »ಪಿಓಪಿ ಗಣಪತಿ ಮಾರಾಟ: ಮೂರ್ತಿಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು
ಹುಬ್ಬಳ್ಳಿ: ಪಿಓಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡಬಾರದೆಂಬ ಕಟ್ಟುನಿಟ್ಟಿನ ಆದೇಶ ಇದ್ದರೂ ಸಹ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪಾಲಿಕೆ ಅಧಿಕಾರಿಗಳು ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ವಾರ್ಡ್ ಸಂಖ್ಯೆ 80ರಲ್ಲಿ ಬರುವ ವೀರಭದ್ರೇಶ್ವರ ದೇವಸ್ಥಾನದ ಹತ್ತಿರ ಗಣೇಶ ಕಾಲೋನಿ ನೇಕಾರನಗರ ಹುಬ್ಬಳ್ಳಿಯಲ್ಲಿ ಪಿಒಪಿ ಗಣಪತಿಗಳು ಇರುವ ಖಚಿತ ಮಾಹಿತಿಯ ಮೇರೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ಹುಬ್ಬಳ್ಳಿ – …
Read More »ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ ಜಾರಿಗೊಳಿಸುವಂತೆ ಪ್ರತಿಭಟನೆ
ಧಾರವಾಡ: ಪ್ರಕೃತಿ ವಿಕೋಪ ತಡೆಗಟ್ಟಲು ಹಾಗೂ ಮಾನವ ಕುಲದ ರಕ್ಷಣೆಗಾಗಿ ”ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ (ಮಾಧವ ಗಾಡೀಳ್) ವರದಿ” ಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಸರಕ್ಕಾಗಿ ಪ್ರತಿಭಟನೆ ನಡೆಸಿದರು. ನಗರದ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಯಿತು.
Read More »ಐತಿಹಾಸಿಕ ಗುಡ್ಡ ನಾಶ ಮಾಡುತ್ತಿರುವವರ ವಿರುದ್ಧ ಕ್ರಮ ಜರಿಗಿದುವಂತೆ ಮನವಿ ಸಲ್ಲಿಕೆ
ನವಲಗುಂದ : ಅಕ್ರಮವಾಗಿ ಪಟ್ಟಣದ ಗುಡ್ಡದ ಮಣ್ಣು ಅಗೆದು ಐತಿಹಾಸಿಕ ಗುಡ್ಡ ನಾಶ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಪುರಸಭೆ ಹಾಗೂ ತಹಸೀಲ್ದಾರ್ಗೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು. ಈ ವೇಳೆ ಮಲ್ಲಿಕಾರ್ಜುನ ಸಂಕನಗೌಡ, ಪವನ ಪಾಟೀಲ, ಜಯಪ್ರಕಾಶ ಬದಾಮಿ, ವಿನಾಯಕ ದಾಡಿಭಾವಿ, ಸೋಮು ವಡ್ಡರ, ಮಲ್ಲಯ್ಯ ಸುಬೇದಾರಮಠ, ಕೃಷ್ಣ ಬೋವಿ
Read More »ಚಿರತೆ ಸೆರೆಗೆ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದ ಹೊರವಲಯದಲ್ಲಿ ರೈತರ ಜಮೀನಿನಲ್ಲಿ ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಬೋನ ಹಾಗೂ ಸಿ ಸಿ ಕ್ಯಾಮೆರಾ ಅಳವಡಿಸಲಾಗಿದೆ. ಮಲಕನಕೊಪ್ಪ ಗ್ರಾಮ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಮೀನಿನಲ್ಲಿ ಮೊನ್ನೆ ಕಟ್ಟಿ ಹಾಕಿದ ನಾಯಿಯನ್ನು ಚಿರತೆಯೊಂದು ತಿಂದು ಹೋದ ಘಟನೆ ನಡೆದಿದ್ದು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜಮೀನಿನ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಶನಿವಾರ ರಾತ್ರಿ ಮತ್ತೆ ಚಿರತೆ …
Read More »ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಖಂಡಿಸಿ ಪ್ರತಿಭಟನೆ
ಧಾರವಾಡ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣ ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ವೈದ್ಯಕೀಯ ಸಿಬ್ಬಂದಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣ ಅಮಾನವೀಯ ಕೃತ್ಯವಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡಬೇಕು, ಅಶ್ಲೀಲ ಸಿನಿಮಾ ಸಾಹಿತ್ಯ ನಿಷೇಧಿಸಿ ಎಂದು ಪ್ರತಿಭಟನಾ ನಿರತ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಆಗ್ರಹಿಸಿದರು.
Read More »ದಲಿತರ ಸಮುದಾಯದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಧಾರವಾಡ: ದಲಿತರ ಸಮುದಾಯದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಎಸ್ಸಿ ಎಸ್ಟಿ ಸಮುದಾಯಗಳ ಆಸ್ತಿಗಳನ್ನು ಕಬಳಿಸುವ ಮೂಲಕ ಅಧಿಕಾರಗಳು ಅನ್ಯಾಯ ಮಾಡುತ್ತಿದ್ದಾರೆ. ಶೋಷಿತ ಸಮುದಾಯ ಜನರ ಮೇಲೆ ಅಧಿಕಾರಿಗಳು ದರ್ಪ ತೋರುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದರು.
Read More »20ಕ್ಕೂ ಹೆಚ್ಚು ಕುರಿಗಳ ಮೇಲೆ ಹರಿದ ಲಾರಿ
ಹುಬ್ಬಳ್ಳಿ :ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಮೇಲೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಹರಿದಿರುವ ಪರಿಣಾಮ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರ ಬಳಿಯಲ್ಲಿ ನಡೆದಿದೆ. ವೇಗವಾಗಿ ಬಂದ ಲಾರಿಯು ಕುರಿಗಳ ಮೇಲೆ ಹರಿದಿದ್ದು, ಲಾರಿಯ ಗಾಲಿಗೆ ಸಿಕ್ಕಿಕೊಂಡು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುರಿಗಳು ಮುಧೋಳ ಮೂಲದ ಕುರಿಗಳು ಎಂದು ಅಂದಾಜಿಸಲಾಗಿದ್ದು, ಖಚಿತ ಮಾಹಿತಿ ನಿರೀಕ್ಷಿಸಲಾಗುತ್ತಿದೆ.ಇನ್ನೂ ಸುಮಾರು ಕುರಿಗಳು ಸಾವನ್ನಪ್ಪಿದ್ದು, ರಸ್ತೆಯಲ್ಲಿ ನೆತ್ತರಿನ ಕೋಡಿಯೇ …
Read More »ಡಿ. ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರ;ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಬಡವರ, ಹಿಂದುಳಿದವರ ನಿಂತು ಸಾಮಾಜಿಕ ಮತ್ತು ಮೂಲಭೂತ ಅವಶ್ಯಕತೆಗಳನ್ನು ಒದಗಿಸಿದವರು, ಇವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ, ಲಕ್ಷಾಂತರ ವಿದ್ಯಾರ್ಥಿ ವಸತಿ ನಿಲಯಗಳನ್ನು ಕಟ್ಟಿಸಿಕೊಟ್ಟವರು ಇವರು, ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಇವರು ತಮ್ಮ ಆಧಿಕಾರದ ಸಂದರ್ಭದಲ್ಲಿ ಸಮಾಜದಲ್ಲಿದ್ದಂತಹ ಎಲ್ಲ ವರ್ಗದವರ ಪರವಾಗಿ ಶ್ರಮಿಸಿದರು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿದರು. ಅವರು ಇಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





