Breaking News

Shaikh BigTv

ಹುಬ್ಬಳ್ಳಿಯಲ್ಲಿ ಸಂಗೊಳ್ಳಿರಾಯಣ್ಣ ರವರ ಜನ್ಮದಿನ ಆಚರಣೆ

ಹುಬ್ಬಳ್ಳಿ: ಇಲ್ಲಿಯ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ್ ರವರು ಹಾಗೂ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ್ ಉಳ್ಳಾಗಡ್ಡಿ ರವರು ಸಂಗೊಳ್ಳಿರಾಯಣ್ಣ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ರವರು ಮಹಾನಗರ ಪಾಲಿಕೆಯ ಸದಸ್ಯರುಗಳು ಹಾಗೂ ಪಾಲಿಕೆಯ ಎಲ್ಲಾ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.

Read More »

ರಾಜನಗರದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ , ಪಾದಪೂಜಾ ಕಾರ್ಯಕ್ರಮ

ಧಾರವಾಡ: ಸೇವಾ ಭಾರತಿ ರಜತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಅಂಗವಾಗಿ ಧಾರವಾಡ ಜಿಲ್ಲೆಯ ರಾಜನಗರದಲ್ಲಿ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಪಾದಪೂಜಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮ ಉದ್ದೇಶಿಸಿ ಸೇವಾ ಭಾರತಿ ಟ್ರಸ್ಟಿಗಳಾದ ಶ್ರೀ ಮಂಜುನಾಥ ಶಿವಪ್ಪ ಮಕ್ಕಳಗೇರಿ ಸ್ವಾತಂತ್ರ ದಿನೋತ್ಸವ ಮತ್ತು ಸೇವಾ ಭಾರತಿ ಪರಿಚಯಿಸುತ್ತಾ 1999 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಅನಾಥ ಮಕ್ಕಳಿಗೆ ಆಶ್ರಯ ತಾಣ, ಬುದ್ಧಿಮಾಂದ್ಯ ಮಕ್ಕಳಿಗೆ ಶಾಲೆ, ಅನಿವಾರ್ಯ ಕಾರಣದಿಂದ ಬಿಟ್ಟು …

Read More »

ಚರಂಡಿಯಲ್ಲಿ ವ್ಯಕ್ತಿ ಶವ ಪತ್ತೆ: ಪರಿಶೀಲನೆ ನಡೆಸಿದ ಹಳೇ ಹುಬ್ಬಳ್ಳಿ ಠಾಣೆ ಪಿಐ..

ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಹಳೇ ಹುಬ್ಬಳ್ಳಿಯ ಆನಂದನಗರ ರಸ್ತೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ… ಚರಂಡಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿದ್ದು, ಚರಂಡಿಯಲ್ಲಿ ಬಿದ್ದು, ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಪೊಲೀಸ್ ತನಿಖೆಯ ನಂತರವೇ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಇನ್ನೂ ಸುದ್ದಿ ತಿಳಿಯುತ್ತಿಂದತಯೇ ಸ್ಥಳಕ್ಕೆ …

Read More »

ಭೀಮ ಘರ್ಜನೆ ಹುಬ್ಬಳ್ಳಿ ಯುವಕರು ನೋಡಬೇಕಾದ ಚಿತ್ರ..

Featured Video Play Icon

ಒಂದೊಳ್ಳೆ ಸಂದೇಶ ಇರುವ ಫಿಲ್ಮ್… ಗಾಂಜಾ ವಿರುದ್ಧ ಸಮರ ಸಾರಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಮತ್ತು ಈ ಫಿಲ್ಮ ಒಂದೊಳ್ಳೆ ಸಂದೇಶ..

Read More »

ಸ್ವಾತಂತ್ರ್ಯ ಸಂಗ್ರಾಮದ ದಾಖಲೆ, ಚಲನಚಿತ್ರ ಪ್ರದರ್ಶನಕ್ಕೆ ಗಣ್ಯರು ಭೇಟಿ

ಧಾರವಾಡ:ನಗರದ ವಿದ್ಯಾವರ್ಧಕ ಸಂಘದಲ್ಲಿ ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಆಯೋಜಿಸಿರುವ ಸ್ವಾತಂತ್ರ್ಯ ಸಂಗ್ರಾಮದ ದಾಖಲೆ ಮತ್ತು ಛಾಯಾಚಿತ್ರಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಸೇರಿದಂತೆ ಇತರ ಅಧಿಕಾರಗಳು ಇಂದು ಭೇಟಿ ನೀಡಿ, ವಿಕ್ಷೀಸಿದರು. ಹಿರಿಯ ಸಹಾಯಕ ನಿರ್ದೇಶಕಿ ಡಾ. ಮಂಜುಳಾ ಯಲಿಗಾರ ಇದ್ದರು.

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿಲಾದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜನ್ಮ ದಿನಾಚರಣೆಯ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ ಅವರು ಪುμÁ್ಪರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ, ಜಿಲ್ಲಾ ಪಂಚಾಯತ ಸಿ.ಇ.ಓ ಸ್ವರೂಪ ಟಿ.ಕೆ, ಹುಬ್ಬಳ್ಳಿ- …

Read More »

ಮುಗದ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಅವರಿಂದ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ

ಧಾರವಾಡ : ಧಾರವಾಡ ತಾಲೂಕಿನ ಮುಗದ ಗ್ರಾಮ ಪಂಚಾಯತಿಯಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದು ಕೊರತೆ ನಿವಾರಣಾ ಸಭೆ ಜರುಗಿತು. ಸಭೆಯಲ್ಲಿ ಅನೇಕ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.ನಂತರ ಅವರು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಗ್ರಾಮಸ್ಥರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ದೀಪಕ ಮಡಿವಾಳರ, ಸಹಾಯಕ ನಿರ್ದೇಶಕರಾದ ಚಂದ್ರು ಪೂಜಾರ, …

Read More »

ಪ್ರಧಾನಮಂತ್ರಿಗಳ ಹೊಸ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

ಧಾರವಾಡ :ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ವಿವಿಧ ಇಲಾಖೆಗಳು ನೀಡುವ ಫಲಾನುಭವಿ ಆಧಾರಿತ ಮತ್ತು ಸಮುದಾಯ ಆಧಾರಿತ ಯೋಜನೆಗಳನ್ನು ಅರ್ಹ ಅಲ್ಪಸಂಖ್ಯಾತರಿಗೆ ತಲುಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯತ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳೊಂದಿಗೆ ಸಭೆ ಜರುಗಿಸಿ, ಅರ್ಹ ಫಲಾನುಭವಿಗಳ ಪಟ್ಟಿ ತಯ್ಯಾರಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ …

Read More »

7ನೇ ವೇತನ ಆಯೋಗ ಜಾರಿ ಮಾಡಿದ ಸರ್ಕಾರಕ್ಕೆ ಅಭಿನಂದನೆ : ಜಿಲ್ಲಾಧ್ಯಕ್ಷ ಎಸ್ ಎಫ್ ಸಿದ್ದನಗೌಡರ

ಧಾರವಾಡ: ಸರಕಾರಿ ನೌಕರರ ಸಂಘದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಧ್ವಜಾರೋಹಣವನ್ನು ನೆರವೇರಿಸಿದರು.ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಎಲ್ಲನೌಕರರ ಭಾಂಧವರಿಗೆ ಮೊದಲಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಭ ಕೋರಿದರು. ರಾಜ್ಯ ಸರ್ಕಾರಿ ನೌಕರರು ದಕ್ಷತೆಯಿಂದ ಸೇವೆಸಲ್ಲಿಸುತ್ತಿರುವ ಕಾರಣದಿಂದಾಗಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಅಭಿವೃಧಿಯಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕ ಸರಕಾರ ಸರಕಾರಿ ನೌಕರರಿಗಾಗಿ 7ನೇ ವೇತನ ಆಯೋಗವನ್ನು ಯಥಾವತ್ತಾಗಿ ಜಾರಿ ಮಾಡಿದ ಮಾನ್ಯ ಮುಖ್ಯ ಮಂತ್ರಿಯವರಿಗೆ ಹಾಗೂ ಉಪ ಮುಖ್ಯ …

Read More »

ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ : ಮಾಬುಸಾಬ ಯರಗುಪ್ಪಿ

ನವಲಗುಂದ: ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರು ಸ್ಮರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ-3ರಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಾವಿರಾರು ಮಹನೀಯರ ಹೋರಾಟದ ಫಲವಾಗಿ ಇಂದು ನಾವು ಎಪ್ಪತ್ತೆಂಟನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದು, ಮಹಾತ್ಮರ ತ್ಯಾಗ ಬಲಿದಾನದಿಂದ ಸಿಕ್ಕಿರುವಂತಹ ಪವಿತ್ರವಾದ …

Read More »